Home / Laxminews 24x7 (page 1902)

Laxminews 24x7

ವಿಜಯೇಂದ್ರ ಸಹಪಾಠಿ ಸೇರಿ ಹಲವರ ಮನೆಗಳಲ್ಲಿ ಶೋಧ: ಅಪಾರ ದಾಖಲೆಗಳ ವಶ

ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಭ್ರಷ್ಟಾಚಾರ, ತೆರಿಗೆ ವಂಚನೆ ಮತ್ತು ಅಕ್ರಮ ಹಣದ ವಹಿವಾಟು ಕುರಿತು ಶುಕ್ರವಾರವೂ ಶೋಧ ಮುಂದುವರಿಸಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಸಚಿವಾಲಯ ಸಿಬ್ಬಂದಿಯಾಗಿದ್ದ ಆಯನೂರು ಉಮೇಶ್‌ ನಿವಾಸದಿಂದ ಜಲ ಸಂಪನ್ಮೂಲ ಇಲಾಖೆಯ ಅಧೀನದ ನೀರಾವರಿ ನಿಗಮಗಳ ಕಾಮಗಾರಿಗಳ ಟೆಂಡರ್‌ಗಳಿಗೆ ಸಂಬಂಧಿಸಿದ ಅಪಾರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಉಮೇಶ್‌, ದೀರ್ಘಕಾಲದಿಂದ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ನಿಯೋಜನೆ …

Read More »

ಭ್ರಷ್ಟಾಚಾರ ಆರೋಪ ಕೇಸ್​ಗೆ ಟ್ವಿಸ್ಟ್ ; ತನಿಖೆ ಚುರುಕುಗೊಳಿಸಿದ ACB

ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಾಸಕ ಪರಣ್ಣ ಮುನವಳ್ಳಿ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಕಾನೂನು ಕುಣಿಕೆ ಸದ್ದಿಲ್ಲದೇ ಸಿದ್ಧವಾಗುತ್ತಿದೆ. ರಾಜ್ಯದಾದ್ಯಂತ ಎಸಿಬಿ ಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ನ್ಯೂಸ್ ಫಸ್ಟ್ ಕೂಡಾ ತನಿಖೆಗೆ ಸಹಕರಿಸುತ್ತಿದ್ದು ಪೂರಕ ದಾಖಲೆಗಳನ್ನು ಎಸಿಬಿ ನೀಡಿದೆ. ಶಶಿಕಲಾ ಜೊಲ್ಲೆ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿಯ ಎಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ರಾಜ್ಯದ ನಾಲ್ಕು ಕಡೆ ಸಚಿವೆ ಶಶಿಕಲಾ ಜೊಲ್ಲೆ …

Read More »

ವಿದ್ಯುದ್ದೀಪದ ಬೆಳಕಿನಲ್ಲಿ ಜಗಮಗಿಸುತ್ತಿರುವ ಮೈಸೂರು

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಮಾಡಿರುವ ದಸರಾ ದೀಪಾಲಂಕಾರದಲ್ಲಿ ಮೈಸೂರು ನಗರ ಮಿಂದೇಳುತ್ತಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ನಿರ್ಮಿಸಿರುವ ಹಸಿರುಚಪ್ಪರದ ಮಂಟಪ ಕಣ್ಮನ ಸೆಳೆಯುತ್ತಿದೆ.ಇಡೀ ನಗರ ವಿದ್ಯುದ್ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದ್ದು ಇಂದ್ರನ ಅಮರಾವತಿಯೇ ಧರೆಗೆ ಇಳಿದು ಬಂದಂತೆ ಭಾಸವಾಗುತ್ತಿದೆ. ಈ ಸುಂದರ ದೃಶ್ಯಗಳನ್ನು ನೋಡಲು ಜನ ರಾತ್ರಿಯಾಗುತ್ತಿದ್ದಂತೆಯೇ ಮುಗಿ ಬೀಳುತ್ತಿದ್ದಾರೆ. ಕಳೆದ ವರ್ಷದ ದಸರಾದಲ್ಲಿ 50ಕಿ.ಮೀ. ವ್ಯಾಪ್ತಿಯಲ್ಲಿದ್ದ ದೀಪಾಲಂಕಾರವನ್ನು ಈ ಬಾರಿ 106 ಕಿ.ಮೀ.ಗೆ …

Read More »

ಮನಗೂಳಿ ಅವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ: ಡಿ.ಕೆ.ಶಿವಕುಮಾರ್

ಸಿಂದಗಿ, ಅ.8: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಇಂದಿನಿಂದ ಆರಂಭವಾಗಿದೆ. ಮಾಜಿ ಸಚಿವ ಎಂ.ಸಿ.ಮನಗೂಳಿ ಅವರನ್ನು ಭಗವಂತ ಕರೆಸಿಕೊಂಡ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ. ನಾವೆಲ್ಲ ಸೇರಿ ಮನಗೂಳಿ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಶುಕ್ರವಾರ ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಸಿ.ಮನಗೂಳಿ ಅವರು ಕೊನೆಯುಸಿರು ಎಳೆಯುವುದಕ್ಕೂ 15 ದಿನಗಳ ಮುನ್ನ …

Read More »

ರಾಜಕೀಯ ನಿವೃತ್ತಿಯ ಸುಳಿವು ಕೊಟ್ಟ ಹೆಚ್ಡಿಕೆ

ಬಿಡದಿ : ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ …

Read More »

8 ಜಿಲ್ಲೆಗಳಲ್ಲಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳನ್ನು PPP ಮಾದರಿಯಲ್ಲಿ ಸ್ಥಾಪಿಸಲು ಕ್ರಮ: ಬೊಮ್ಮಾಯಿ

ಚಾಮರಾಜನಗರ: ರಾಜ್ಯದ ಎಂಟು ಜಿಲ್ಲೆಗಳಿಗೆ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳನ್ನು ಒಂದೂವರೆ ವರ್ಷಗಳಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಥಾಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವತಿಯಿಂದ ಆಯೋಜಿಸಿರುವ 450 ಹಾಸಿಗೆಯ ಬೋಧನಾ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬುಡಕಟ್ಟು ಜನಾಂಗದವರು ಹೆಚ್ಚಾಗಿ ವಾಸಿಸುವ ಚಾಮರಾಜನಗರ ಜಿಲ್ಲೆಯು ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದರೂ, ಹಿಂದುಳಿದ ಜಿಲ್ಲೆ ಎಂದು ಪರಿಗಣಿಸ್ಪಟ್ಟಿದೆ. ಜಿಲ್ಲೆ ದೇವಸ್ಥಾನಗಳ ತವರೂರು …

Read More »

ಡಿಗ್ರಿ ಕಾಲೇಜಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್

ಬೆಳಗಾವಿ: ಕಳೆದ ಮೂರು ವರ್ಷಗಳ ಹಿಂದೆ ಖಾನಾಪೂರ ತಾಲೂಕಿಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು, ಗದಗಿಗೆ ಸ್ಥಳಾಂತರಗೊಂಡಿತ್ತು. ಅದನ್ನು ಮತ್ತೆ ಖಾನಾಪೂರ ತಾಲೂಕಿಗೆ ತಂದು ವಿದ್ಯಾರ್ಥಿಗಳಿಗೆ ಸಮರ್ಪಣೆ ಮಾಡುವುದರಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಯಶಸ್ವಿ ಆಗಿದ್ದಾರೆ. ಈ ಹಿಂದೆ ಖಾನಾಪುರ ತಾಲೂಕಿಗೆ ಮಂಜೂರಾಗಿದ್ದ ಸರ್ಕಾರಿ ಡಿಗ್ರಿ ಕಾಲೇಜು ಗದಗ್‍ಗೆ ಸ್ಥಳಾಂತರಗೊಂಡಿತ್ತು. ಅದನ್ನು ಮಾಜಿ ಸಚಿವ ಎಚ್.ಕೆ ಪಾಟೀಲ್ ಸಹಾಯದಿಂದ ಮತ್ತೆ ಖಾನಾಪುರ ತಾಲೂಕಿಗೆ ತರುವಲ್ಲಿ ಡಾ. ಅಂಜಲಿ ನಿಂಬಾಳ್ಕರ್ ಯಶಸ್ವಿಯಾಗಿದ್ದಾರೆ. ಈ …

Read More »

ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಹುಡುಗ ನಾಪತ್ತೆ

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಹುಡುಗನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದ ಬಳಿ ನಡೆದಿದೆ. ಕಮಲದಿನ್ನಿ ಗ್ರಾಮದ ಉದಯ ಪರಶುರಾಮ ಹಾದಿಮನಿ(17) ನದಿಯಲ್ಲಿ ನಾಪತ್ತೆಯಾವನು. ಈತ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಪರಶುರಾಮನಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದರು. ಗುರುವಾರ ರಾತ್ರಿ ಕತ್ತಲು ಇರುವುದರಿಂದ …

Read More »

ಐಟಿ ದಾಳಿಗೂ ಯಡಿಯೂರಪ್ಪರಿಗೂ ಸಂಬಂಧವಿಲ್ಲ : ರೇಣುಕಾಚಾರ್ಯ

ಬೆಂಗಳೂರು : ಐಟಿ ದಾಳಿಗೂ ಯಡಿಯೂರಪ್ಪ ಅವರಿಗೂ ಸಂಬಂಧವಿಲ್ಲ,ಸತ್ಯಾಂಶ ಹೊರಬರುತ್ತದೆ ಅಂತ ಅವರೇ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಶುಕ್ರವಾರ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತ ಉಮೇಶ್ ನಿವಾಸದ ಮೇಲೆ ಐಟಿ ದಾಳಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದರು. ಯಡಿಯೂರಪ್ಪ ಅವರನ್ನು ಹದ್ದುಬಸ್ತಿನಲ್ಲಿ ಇಡುವುದಕ್ಕೆ ಆಗುವುದಿಲ್ಲ. ಯಡಿಯೂರಪ್ಪ ಅವರನ್ನು ಬಿಜೆಪಿ ಸೈಡ್ ಲೈನ್ ಮಾಡಿಲ್ಲ ಎಂದರು. ಆರೆಸೆಸ್ ಕುರಿತು ಸಿದ್ದರಾಮಯ್ಯ, ಎಚ್. …

Read More »

ಖರ್ಗೆಯವರನ್ನೇ ಸಿಎಂ ಮಾಡಲು ಸೂಚಿಸಿದ್ದೆ, ಆದರೆ. : ಕಾಂಗ್ರೆಸ್ ನಾಯಕರಿಗೆ ದೇವೇಗೌಡ ಚಾಟಿ

ಬೆಂಗಳೂರು: ‘ವಿಧಿಯಾಟದಿಂದ ಚುನಾವಣೆ ಬಳಿಕ ಅತಂತ್ರ ಪರಿಸ್ಥಿತಿ ನಿರ್ಮಾಣವಾಯಿತು. ಕಾಂಗ್ರೆಸ್ ನಾಯಕರು ನಮ್ಮ ಮನೆಗೆ ಬಂದರು. ನಾನು ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಹೇಳಿದೆ. ಆದರೆ ಗುಲಾಮ್ ನಬಿ ಅಝಾದ್ ಅವರು ಕುಮಾರಸ್ವಾಮಿ ಅವರೇ ಸಿಎಂ ಆಗಬೇಕು ಅಂತ ಒತ್ತಾಯ ಮಾಡಿದರು’ ಇದು ಮಾಜಿ ಮುಖ್ಯಮಂತ್ರಿ ಎಚ್ ಡಿ ದೇವೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿದ ಮಾತುಗಳು. ‘ಬಜೆಟ್ ನಲ್ಲಿ ಸಾಲ ಮನ್ನಾ ಮಾಡಲು ಹಣ ಮೀಸಲಿಡುವ ಬಗ್ಗೆ ಸಾಕಷ್ಟು …

Read More »