Home / Laxminews 24x7 (page 1907)

Laxminews 24x7

ಕಾರು ಪಲ್ಟಿ : ಮಹಿಳೆಯರಿಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ

ಹಳಿಯಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗಳಾಗಿರುವ ದುರ್ಘಟನೆ ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಭಾಗವತಿ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮೃತರು ಕೊಲ್ಲಾಪುರದ ರಮಾನಂದ ನಗರದ ಮೀನಾ ಗಣೇಶ ಪಿಳೈ(55) ಮತ್ತು ರಾಜಮ್ಮ ಪಿಳೈ(35) ಎನ್ನುವವರಾಗಿದ್ದು, ಗಣೇಶ ಪಿಳೈ, ಸರಸ್ವತಿ ಪಿಳೈ ಮತ್ತು ರಾಧಾಕೃಷ್ಣ ಪಿಳೈ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ …

Read More »

ದಸರಾ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ

ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ನಾಳೆಯಿಂದ ಅ.15ರವರೆಗೆ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ದೊರೆಯಲಿದೆ. ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ. ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6.30 ರಿಂದ ರಾತ್ರಿ 9.30 ಗಂಟೆಯವರೆಗೆ ಬೆಳಗಿಸಲಾಗುತ್ತದೆ. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ ರಸ್ತೆಗಳಲ್ಲಿ ಜನ ದಟ್ಟಣೆ, ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ದೀಪಾಲಂಕಾರವನ್ನು ವೀಕ್ಷಿಸುವ ಜನರು ವಿದ್ಯುತ್ ದೀಪಗಳನ್ನು …

Read More »

ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರತೆಯಾಗಿದ್ದು ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆ

ರಾಯಚೂರು: ರಾಜ್ಯಕ್ಕೆ ಶೇ 45 ರಷ್ಟು ವಿದ್ಯುತ್ ನೀಡುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರತೆಯಾಗಿದ್ದು ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆ ಇದೆ. ಕಲ್ಲಿದ್ದಲು ಕೊರತೆಯ ಕರಿನೆರಳು ಆರ್ಟಿಪಿಎಸ್ ವಿದ್ಯುತ್ ಉತ್ಪಾದನೆ ಮೇಲೆ ಬಿದ್ದಿದೆ. ಎಂಟು ಘಟಕಗಳಿಂದ ಉಷ್ಣ ವಿದ್ಯುತ್ ಉತ್ಪಾದನೆ 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದೆ. ಕಲ್ಲಿದ್ದಲು ಕೊರತೆಯಿಂದ ಈಗಾಗಲೇ ನಾಲ್ಕು ಘಟಕಗಳು ಉತ್ಪಾದನೆ ನಿಲ್ಲಿಸಿವೆ. ಕೇವಲ 4 ಘಟಕಗಳಿಂದ 480 …

Read More »

ಕಾಲೇಜು ಫೀಸ್​​ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ದಕ್ಷಿಣ ಕನ್ನಡ: ಕಾಲೇಜು ಫೀಸ್ ಕಟ್ಟುವ ವಿಚಾರಕ್ಕೆ ನೊಂದು ನಿನ್ನೆ ಆತ್ಮಹತ್ಯೆಗೆ ಯತ್ನಿಸಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಇಂದು ಮೃತಪಟ್ಟಿದ್ದಾಳೆ. ಕೇರಳದ ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ಮಂಗಳೂರಿನ ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ನಿನ್ನೆ ಸಂಜೆ ಹಾಸ್ಟೆಲ್​​ನ ಬಾತ್ ರೂಂ ನಲ್ಲಿ ಅತ್ಮಹತ್ಯೆಗೆ ಯತ್ನಿಸಿದ್ದಳು. ಅದನ್ನು ಗಮನಿಸಿದ ಹಾಸ್ಟೆಲ್​​ ಸಹ ವಿದ್ಯಾರ್ಥಿನಿಯರು ಗಂಭೀರ ಪರಿಸ್ಥಿತಿಯಲ್ಲಿದ್ದ ನೀನಾಳನ್ನು …

Read More »

ನಾಡಹಬ್ಬದ ಸಂಭ್ರಮ.. ಸಾಂಸ್ಕೃತಿಕ ನಗರಿಯಲ್ಲಿ ಮೇಳೈಸಿದ ದಸರಾ ದರ್ಬಾರ್​

ಮೈಸೂರು: ವಿಶ್ವವಿಖ್ಯಾತ 411ನೇ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ಸಿಗಲಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸೇರಿದಂತೆ ಗಣ್ಯರು ಆ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ದಸರಾ ಸಂಬ್ರಮದಲ್ಲಿರುವ ಅರಮನೆ ನಗರಿ ಮೈಸೂರು ಮಧುವಣಗಿತ್ತಿಯಂತೆ …

Read More »

ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರನ್ನ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಆಗ್ರಹಿಸಿ,ಕಳೆದ 72 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಯು ಇಂದು ತೀವ್ರ ಸ್ವರೂಪಕ್ಕೆ ಪಡೆದುಕೊಂಡ ಘಟನೆ ಬಾಗಲಕೋಟ ಜಿಲ್ಲೆಯ ಮುದೋಳ ಪಟ್ಟಣದಲ್ಲಿ ಜರುಗಿದೆ ,ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಇದನ್ನು ತಡೆಯಲು ಪೊಲೀಸ್ ಬಿಗಿ ಭದ್ರತಾ ಏರ್ಪಡಿಸಿದ್ದ ರಿಂದ ಕೆಲ ಸಮಯ ಗೊಂದಲಮಯ ವಾತಾವರಣ ಉಂಟಾಗಿತು. ಸಚಿವ ಕಾರಜೋಳ ಮನೆಗೆ ಮುತ್ತಿಗೆ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ವೈದ್ಯರ ಮುಷ್ಕರ : `OPD’ ಸೇವೆ ವ್ಯತ್ಯಯ

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಆಸ್ಪತ್ರೆಗಳ ಸ್ಥಾನಿಕ ವೈದ್ಯರು (Doctor) ಇಂದು ಹೊರ ರೋಗಿ ಸೇವೆ (OPD) ಬಹಿಷ್ಕರಿಸಿ ಮುಷ್ಕರ (Strike) ನಡೆಸಲಿದ್ದಾರೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸ್ಥಾನಿಕ ವೈದ್ಯರು ಹಾಗೂ ಇಂಟರ್ನಿ ವೈದ್ಯರು ಮುಷ್ಕರ (Strike) ನಡೆಸಲಿದ್ದು, ಇದರಿಂದ ಸರ್ಕಾರಿ ಆಸ್ಪತ್ರೆಗಳ ಹೊರರೋಗಿಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಕೊರೊನಾ ಅಪಾಯ ಭತ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ …

Read More »

ರಸ್ತೆ ಗುಂಡಿಗಳ ಬಗ್ಗೆ ವರದಿ ತಯಾರಿಸಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ:ಬೊಮ್ಮಾಯಿ

ಮೈಸೂರು: ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳ ಬಗ್ಗೆ ವರದಿ ತಯಾರಿಸಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು. ರಸ್ತೆ ಗುಣಮಟ್ಟದ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಕಳಪೆ ಕಾಮಗಾರಿಯಿಂದ ಗುಂಡಿಗಳು ಬಿದ್ದಿದ್ದರೆ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಬೊಮ್ಮಾಯಿ ಎಚ್ಚರಿಸಿದರು. ಯಾವ ಅವಧಿಯಲ್ಲಿ ರಸ್ತೆ ಆಗಿದೆ? ರಸ್ತೆಗಳನ್ನು ನಿರ್ಮಿಸುವಾಗ ಗುಣಮಟ್ಟ ಕಾಪಾಡಲಾಗಿದೆಯೇ ಎಂಬ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ‌. ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ …

Read More »

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ 7 ಜನರು ಮೃತ, 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ ಐವರು ಮೃತಪಟ್ಟ ವಿಷಾದಕರ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸಂಭವಿಸಿದೆ. 7 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗಂಗವ್ವ ಭೀಮಪ್ಪ(80), ಸತ್ಯವ್ವ ಅರ್ಜುನ್‌(45), ಕಾಶವ್ವ(8), ಪೂಜಾ ಅರ್ಜುನ್‌(8), ಸವಿತಾ ಭೀಮಪ್ಪ(28) ಮೃತರು. ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಸ್ಥಳದಲ್ಲೇ ಐವರು, ಆಸ್ಪತ್ರೆಗೆ ಸಾಗಿಸುವಾಗ …

Read More »

ಮಹಾಮಳೆಗೆ ಕುಸಿದುಬಿದ್ದ ಮನೆ.. ಒಂದೇ ಕುಟುಂಬದ 7 ಮಂದಿ ಸಾವು

ಬೆಳಗಾವಿ: ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಬಿದ್ದು ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವಿನ ಕದ ತಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ …

Read More »