ಶಿವಮೊಗ್ಗ: ತಾಳಗುಪ್ಪ- ಬೆಂಗಳೂರು ಸೂಪರ್ ಫಾಸ್ಟ್ ರೈಲಿನ ಇಂಜಿನ್ ಹಾಗೂ ಬೋಗಿಗಳ ನಡುವೆ ಸಂಪರ್ಕ ತಪ್ಪಿದ್ದು ತಡವಾಗಿ ಸಂಚರಿಸಿದೆ. ರೈಲು ಇಂದು ಬೆಳಗ್ಗೆ 7.15 ಕ್ಕೆ ಶಿವಮೊಗ್ಗ ನಿಲ್ದಾಣ ಬಿಟ್ಟಿತ್ತು. ಭದ್ರಾವತಿಗೆ ಬೆಳಗ್ಗೆ 7:40 ರ ಸುಮಾರಿಗೆ ತಲುಪಬೇಕಿತ್ತು. ಭದ್ರಾವತಿ ಪಟ್ಟಣ ಸಮೀಪದ ಬಿಳಕಿ ಕ್ರಾಸ್ ಬಳಿ ನಿಧಾನವಾಗಿ ಚಲಿಸುತ್ತಾ ನಿಂತು ಬಿಟ್ಟಿದೆ. ಪ್ರಯಾಣಿಕರು ಏನಾಯಿತು ಎಂದು ನೋಡುವಷ್ಟರಲ್ಲಿ ಇಂಜಿನ್ ಹಾಗೂ ಬೋಗಿಗಳ ನಡುವಿನ ಸಂಪರ್ಕ ತಪ್ಪಿದ್ದು ಗೋಚರಿಸಿದೆ. ಇದನ್ನರಿತ ಲೋಕೊ …
Read More »ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಗೆ ಯುವಕನೋರ್ವ ಬಲಿಯಾಗಿದ್ದಾನೆ.
ಮಂಡ್ಯ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೆಟ್ಟಿಂಗ್ ವಿಚಾರದಲ್ಲಿ ಹಣಕ್ಕಾಗಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಚಿಕ್ಕರಸಿನಕೆರೆ ಗ್ರಾಮದ ನಿವಾಸಿ ಪುನೀತ್ (25) ಕೊಲೆಯಾದ ದುರ್ದೈವಿಯಾಗಿದ್ದು, ಈತ ಎಳನೀರು ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಐಪಿಎಲ್ ಬೆಟ್ಟಿಂಗ್ ಹಣ ಪಡೆಯಲೆಂದು ಬುಧವಾರ ಪುನೀತ್ ತನ್ನ ಕೆಲ ಸ್ನೇಹಿತರೊಂದಿಗೆ ಹುಲಿಗೆರೆಪುರ ಗ್ರಾಮಕ್ಕೆ ತೆರಳಿದ್ದ. ಆದರೆ, ಈ ಸಂದರ್ಭದಲ್ಲಿ ಸೌಮ್ಯ ಬಾರ್ …
Read More »ಬಳಸಿದ ಬಟ್ಟೆಗಳ ಮರುಬಳಕೆ ಪ್ರಯತ್ನ: ಮಂಗಳೂರಿನಲ್ಲಿ ವಿಶೇಷ ಅಭಿಯಾನ
ಮಂಗಳೂರು: ಸಾಮಾನ್ಯವಾಗಿ ಎಲ್ಲರ ಮನೆಗಳಲ್ಲೂ ಬಳಕೆಯಾಗುವ ಬಟ್ಟೆಗಳೊಂದಿಗೆ ಬಳಕೆಯಾಗದ ಬಟ್ಟೆಗಳೂ ಇರುತ್ತವೆ. ಆದರೆ ಇಂತಹ ಬೇಡದ ಬಟ್ಟೆಗಳು ಕೊನೆಗೆ ಮಣ್ಣು, ಹೊಳೆ, ಸಮುದ್ರ ಸೇರಿ ಪರಿಸರ ನಾಶಕ್ಕೆ ಕಾರಣವಾಗುತ್ತದೆ. ಆದರೆ ಮಂಗಳೂರಿನ ಪರಿಸರಾಸಕ್ತ ಜೀತ್ ಮಿಲನ್ ರೋಚ್, ಲೂಯಿ ಪಿಂಟೊ ಹಾಗೂ ತಂಡ ಇಂತಹ ಮರುಬಳಕೆಯಾಗುವ ಬಟ್ಟೆಗಳನ್ನು ಸಂಗ್ರಹಿಸಿ ಅಗತ್ಯವುಳ್ಳವರಿಗೆ ಉಚಿತವಾಗಿ ನೀಡುವ ಕಾರ್ಯವನ್ನು ಸದ್ದಿಲ್ಲದೆ ಮಾಡುತ್ತಿದ್ದಾರೆ. ಈ ಮೂಲಕ ಪರಿಸರ ಉಳಿಸುವತ್ತ ದೂರದೃಷ್ಟಿತ್ವ ಇರಿಸಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಈ …
Read More »ಮೂರ್ನಾಲ್ಕು ತಿಂಗಳಿಂದ ಸಿಗದ ಸಂಬಳ: ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಸಿಡಿದೆದ್ದ ಆಶಾ ಕಾರ್ಯಕರ್ತೆಯರು
ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿಂದ ಸಂಬಳ ನೀಡದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಒಟ್ಟು 42 ಸಾವಿರ ಆಶಾ ಕಾರ್ಯಕರ್ತೆಯರು ಇದ್ದಾರೆ. ಬಿರು ಬಿಸಲು, ಕೊರೆವ ಚಳಿ ಲೆಕ್ಕಿಸದೆ ಇವರು ಕೆಲಸ ಮಾಡುತ್ತಾರೆ. ಆದರೆ ಸುಮಾರು 3-4 ತಿಂಗಳಿಂದ ಸಂಬಳವಿಲ್ಲದೆ ಪರದಾಡುವಂತಾಗಿದೆ ಎಂದು ಎಐಟಿಯುಸಿ (ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್) ತೀವ್ರ ಬೇಸರ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರ ನೀಡುವ ಗೌರವ ಧನ …
Read More »ವಿಜಯಪುರದಲ್ಲಿ ಹಿಟ್ & ರನ್ ಪ್ರಕರಣ: ಅತ್ತೆ-ಅಳಿಯ ಸಾವು, ಇಬ್ಬರು ಮಕ್ಕಳಿಗೆ ಗಾಯ
ವಿಜಯಪುರ: ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪರಾಧ ಘಟನೆಗಳು ನಡೆದಿವೆ. ಒಂದು ಪ್ರಕರಣದಲ್ಲಿ ಟಿಪ್ಪರ್ ಚಾಲಕನ ಅತಿವೇಗದ ಚಾಲನೆಗೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ವೇಳೆ, ಮಕ್ಕಳಿಬ್ಬರು ಗಾಯಗೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಬೇಸಗೆ ರಜೆಗೆಂದು ಮನೆಗೆ ಬಂದಿದ್ದ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುದ್ದಿಯ ವಿವರ ಇಲ್ಲಿದೆ. ಅಪಘಾತದಲ್ಲಿ ಅತ್ತೆ-ಅಳಿಯ ಸಾವು: ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ಗುರುವಾರ …
Read More »ಧಾರವಾಡದಲ್ಲಿ ರಾತ್ರೋರಾತ್ರಿ ಡಬಲ್ ಮರ್ಡರ್: ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ
ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ನಗರದ ಕಮಲಾಪುರ ಹೊರವಲಯದಲ್ಲಿ ಕಳೆದ ರಾತ್ರಿ ನಡೆದಿದೆ. ಮಹಮ್ಮದ್ ಕುಡಚಿ ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಇವರ ಕುಡಚಿ ಮನೆ ಎದುರು ಘಟನೆ ನಡೆದಿದೆ. ರಾತ್ರಿ 10 ರಿಂದ 11 ಗಂಟೆಯ ಸುಮಾರಿಗೆ ಮನೆ ಎದುರು ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಸ್ಥಳಕ್ಕೆ ಧಾವಿಸಿ ಬಂದು ಏಕಾಏಕಿ ದಾಳಿ ಮಾಡಿ ಪರಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. …
Read More »A.I.C.C. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದ ಬೆಳಗಾವಿ ಶಾಸಕರು
ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿತು. ನವದೆಹಲಿಯ ಖರ್ಗೆ ನಿವಾಸಕ್ಕೆ ತೆರಳಿದ ಸಚಿವ ಸತೀಶ್ ಜಾರಕಿಹೊಳಿ, ಶಾಸಕರುಗಳಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ಮಹೇಂದ್ರ ತಮಣ್ಣವರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಚಿಕ್ಕೋಡಿ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಖರ್ಗೆ …
Read More »ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ.
ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ …
Read More »ಜಾತ್ರೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕ ಹೃದಯಾಘಾತದಿಂದ ಸಾವು.!
ಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುತ್ಯಾಲಮ್ಮ ಜಾತ್ರೆಯಲ್ಲಿ ಏರ್ ಬಲೂನ್ ಜಂಪಿಂಗ್ ಆಟವಾಡುತ್ತಿದ್ದ ಬಾಲಕ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕ ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಮಂಜುನಾಥ್ ಎಂಬುವರ ಪುತ್ರ 9 ವರ್ಷದ ಶ್ರೇಯಸ್ ಎಂದು ತಿಳಿದುಬಂದಿದೆ. ಶ್ರೇಯಸ್ ತನ್ನ ತಾಯಿ ಜೊತೆಗೆ ಜಾತ್ರೆಗೆ ಹೋಗಿದ್ದನು ಎನ್ನಲಾಗಿದೆ. ಜಾತ್ರೆಯಲ್ಲಿ ಮಕ್ಕಳ ಮನೋರಂಜನೆಗಾಗಿ ಹಾಕಲಾಗಿರುವ ವಿವಿಧ ಆಟಗಳಲ್ಲಿ ತೊಡಗಿದ್ದ. ಏರ್ ಬಲೂನ್ ಜಂಪಿಂಗ್ ಮಾಡುತ್ತಿದ್ದಾಗ ಶ್ರೇಯಸ್ಗೆ ಹೃದಯಾಘಾತವಾಗಿದೆ. ನಿತ್ರಾಣಗೊಂಡು …
Read More »ಸಿಬಿಐ ನೂತನ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ
ನವದೆಹಲಿ: ಕೇಂದ್ರೀಯ ತನಿಖಾ ದಳದ ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಮೇ 14ರಂದು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅಧಿಕಾರಾವಧಿ ಇಂದಿಗೆ ಮುಕ್ತಾಯವಾಗಿದೆ.
Read More »
Laxmi News 24×7