Breaking News

Laxminews 24x7

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು: ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಐಪಿಎಲ್ ಟಿ-20 (IPL T-20) ಕ್ರಿಕೆಟ್ ಪಂದ್ಯ ನಡೆಯುವ ಹಿನ್ನೆಲೆ ಆ ದಿನದಂದು ಮೆಟ್ರೋ  ಸೇವೆಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್  ತಿಳಿಸಿದೆ. ಪಂದ್ಯದ ದಿನದಂದು, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ವೈಟ್ ಫೀಲ್ಡ್ನಿಂದ (ಕಾಡುಗೋಡಿ) ರಾತ್ರಿ 12:30ಕ್ಕೆ ಮತ್ತು ಚಲ್ಲಘಟ್ಟ ದಿಂದ ರಾತ್ರಿ 12:45ಕ್ಕೆ, ರೇಷ್ಮೆ …

Read More »

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

ಬೆಂಗಳೂರು: ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್  ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ  ವಿಚಾರಣೆ ವೇಳೆ ನಾನು ಕಾರು ಓಡಿಸಿಯೇ ಇಲ್ಲ ಎಂದಿದ್ದರು. ಅಲ್ಲದೆ ರಿಕ್ಕಿ ರೈ ಡ್ರೈವರ್ ಕಾರು ಓಡಿಸಿದ್ದು ನಾನು ಎಂದು ಹೇಳಿಕೆ ಕೊಟ್ಟಿದ್ದ. ಆದರೆ ಪೊಲೀಸರು ಕಾರಿನ ಬಗ್ಗೆ ಪ್ರಶ್ನೆ ಮಾಡಿದಾಗ ಚಾಲಕನ ಹೇಳಿಕೆಗಳಲ್ಲಿ ಸಂದೇಹ ಬಂದಿದೆ. ಲ್ಯಾಂಬೋರ್ಗಿನಿ ಕಾರಿಗೆ  ಎಷ್ಟು ಗೇರ್ ಇದೆ. ಕಾರು ಸ್ಟಾರ್ಟ್ ಮಾಡುವುದು …

Read More »

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

ದಾವಣಗೆರೆ: ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಹಣವನ್ನ ವಶಕ್ಕೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿಗನೂರ, ಮಾಗಾನಹಳ್ಳಿ ಹಾಗೂ ಭೂಮಿಕಾ ನಗರ ಚೆಕ್ ಪೋಸ್ಟ್‌ಗಳಲ್ಲಿ ಹಣ ಜಪ್ತಿ ಮಾಡಲಾಗಿದೆ. ದಾವಣಗೆರೆ ನಗರದ ಭೂಮಿಕಾ ನಗರ ಚೆಕ್‌ಪೋಸ್ಟ್‌ನಲ್ಲಿ ಜಯನಗರದ ಪವನಕುಮಾರ ಅವರು 4 ಲಕ್ಷ ರೂ., ಕಾರಿಗನೂರ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಕಾರಿಗನೂರಿನ …

Read More »

ಕಾಲ್ತುಳಿತ ದುರಂತ – ಮೃತ 11 ಅಭಿಮಾನಿಗಳ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಮಾರಕ ನಿರ್ಮಾಣ

ಬೆಂಗಳೂರು: ಐಪಿಎಲ್  ಪಂದ್ಯಕ್ಕೆ ಕೇವಲ ಮೂರೇ ದಿನ ಬಾಕಿಯಿರುವ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗಣಹೋಮ ನೆರವೇರಿಸಲಾಯ್ತು. ಕಳೆದ ವರ್ಷ ನಡೆದ 11 ಆರ್‌ಸಿಬಿ ಅಭಿಮಾನಿಗಳ  ದಾರುಣ ಸಾವು ಎಂದಿಗೂ ಮರೆಯೋಕೆ ಸಾಧ್ಯವಿಲ್ಲ. ಮುಂದೆ ಇಂತಹ ಯಾವುದೇ ಅವಘಡ ಆಗದೇ ಇರಲಿ ಎಂದು ಮೃತ್ಯುಂಜಯ ಹೋಮ, ಗಣಪತಿ ಹೋಮ, ಲಕ್ಷ್ಮಿ ಹೋಮ ನೆರವೇರಿಸಲಾಯ್ತು. ಪೂಜೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್  ಸೇರಿ ಹಲವರು ಭಾಗವಹಿಸಿದ್ರು. ಕ್ರೀಡಾಂಗಣದ ಗೇಟ್‌ಗಳಿಗೆ ಬೂದಗುಂಬಳಕಾಯಿ ಒಡೆದು ದೃಷ್ಟಿ …

Read More »

ಅಂಕಲಗಿ ಘಟಕ ಹೋಮ್‌ಗಾರ್ಡಗೆ ಮುಖ್ಯಮಂತ್ರಿಗಳ ಸೇವಾ ಪದಕ ಶಾಸಕರಿಂದ ಸತ್ಕಾರ

ಗೋಕಾಕ: ತಾಲೂಕಿನ ಅಂಕಲಗಿ ಘಟಕ ಹೋಮ್‌ಗಾರ್ಡ ಆಗಿರುವ ಹೊಳೆಪ್ಪಾ ಬಸವಣ್ಣಿ ನೇಸರಗಿ ಅವರಿಗೆ ೨೦೨೫ರ ಮುಖ್ಯಮಂತ್ರಿಗಳ ಸೇವಾ ಪದಕ ದೊರೆತಿರುವುದಕ್ಕಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ನಗರದ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಹೊಳೆಪ್ಪಾ ನೇಸರಗಿ ಅವರ ಸಮರ್ಪಣಾ ಮನೋಭಾವವನ್ನು ಗುರುತಿಸುವುದು ಮತ್ತು ಪ್ರೋತ್ಸಾಹಿಸುವುದು. ದೀರ್ಘಕಾಲದ ಸೇವೆ ಬಂದೋಬಸ್ತ್ ಕರ್ತವ್ಯ, ತುರ್ತು ಸಂದರ್ಭಗಳಲ್ಲಿ ಅಗ್ನಿ ಸುರಕ್ಷತೆ, ಮತ್ತು ಶೌರ್ಯ ಪ್ರದರ್ಶಿಸಿದ ಕಾರಣ ಸಿಎಂ ಪದಕ ಲಭಿಸಿದ್ದು ಇಂಥಹ ಸಿಬ್ಬಂದಿಗಳಿಗೆ …

Read More »

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಗ್ಯದಲ್ಲಿ ಹೆಚ್ಚಿನ ವ್ಯತ್ಯಾಸವೇನು ಆಗಿಲ್ಲ. ಆತಂಕ ಪಡುವ ಅಗತ್ಯ ಇಲ್ಲ. ಹವಾಮಾನದ ಬದಲಾವಣೆಯಿಂದ ಅಸ್ವಸ್ಥರಾಗಿದ್ದು, ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ಇಟ್ಟಿದ್ದಾರೆ ಎನ್ನಲಾಗಿದೆ. ಮಗ ರಾಹುಲ್ ಗಾಂಧಿ ಹಾಗೂ ಮಗಳು ಪ್ರಿಯಾಂಕಾ ಗಾಂಧಿ ತಾಯಿಯ ಆರೋಗ್ಯ ಕಾಳಜಿ ವಹಿಸಿದ್ದಾರೆ. ಈ ಹಿಂದೆಯೂ …

Read More »

ಪ್ಯಾನ್‌ಗೆ ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್: ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. …

Read More »

ಪೆಟ್ರೊಲ್ ಬಂಕ್ ನಲ್ಲಿ ಮಾರಾಮಾರಿ: ಬಿಸಿ ಮುಟ್ಟಿಸಿದ ಪೊಲೀಸರು

ಬೆಳಗಾವಿಯಲ್ಲಿ ಪೆಟ್ರೋಲ್, ಡೀಸಲ್ ಕೊರತೆ ಉಂಟಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿ ಸುದ್ದಿ ಹರಡಾಡಿದ ಪರಿಣಾಮ ಎಲ್ಲಾ ಬಂಕ್ ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ವಾಹನ ಸವಾರರು ಮುಗಿಬಿದಿದ್ದರು. ಈ ವೇಳೆ ಹೋಡೆದಾಡಿಕೊಂಡ ಯುವಕರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಗಾವಿ ನಗರದ ರಾಮದೇವ ಹೋಟೆಲ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಮುಂದೆ ಪೆಟ್ರೋಲ್ ಬಂಕ್‌ಗಳ ಬಳಿ ಇಂತಹ …

Read More »

ಮಹಿಳೆಗೆ ನರಕಯಾತನೆ : 12 ವರ್ಷ ಬಳಿಕ ವೈದ್ಯನ ಕರಾಳ ಮುಖ ಬಯಲು ಮಾಡಿದ ಪತ್ನಿ

ಮೈಸೂರು: ಪ್ರೀತಿಯ ನಾಟಕವಾಡಿ, ಆತ್ಮತ್ಯೆಯ ಬೆದರಿಕೆ ಹಾಕಿ, ಅಮಾಯಕ ಹೆಣ್ಮಕ್ಕಳ ಬದುಕನ್ನು ನರಕವಾಗಿಸ್ತಿದ್ದ ಕಾಮುಕ ವೈದ್ಯನ ಕರಾಳ ಮುಖವನ್ನು ಪತ್ನಿಯೇ ಬಟಾಬಯಲು ಮಾಡಿದ್ದಾರೆ. ಡಾ. ವಿನಯ್ ಕುಮಾರ್ ಎಸ್. ವಿರುದ್ಧ ಪತ್ನಿ ಯಶೋಧಾ (ಹೆಸರು ಬದಲಾಯಿಸಲಾಗಿದೆ) ಗಂಭೀರ ಆರೋಪಗಳನ್ನ ಮಾಡಿದ್ದಾರೆ. ಕಳೆದ 12 ವರ್ಷಗಳಿಂದ ನೆನಪಿನ ಶಕ್ತಿಯೇ ಇಲ್ಲದೆ ‘ಜೀವಂತ ಶವ’ವಾಗಿ ಬದುಕಿದ್ದ ಸೀನಿಯರ್ ವೈದ್ಯೆ ಡಾ. ನಾಗಶ್ರೀ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಬೆನ್ನಲ್ಲೇ ಈ ‘ಸೈಕೋ’ ವೈದ್ಯನ ಒಂದೊಂದೇ ಕ್ರೂರ …

Read More »

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಆರ್‌ಸಿಬಿ ತಂಡದ ಜೊತೆ ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ರನ್‌ ಮಿಷಿನ್‌ ವಿರಾಟ್‌ ಕೊಹ್ಲಿ ಸೇರಿ ಮೂರು ಆಟಗಾರರ ಭಾವಚಿತ್ರ ಬಳಸಲು 1 ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಬರೋಬ್ಬರಿ 4.80 ಕೋಟಿ ರೂ. ಕೆಎಂಎಫ್‌ ವೆಚ್ಚ ಮಾಡಿದೆ. ಆರ್‌ಸಿಬಿಗೆ ಕನ್ನಡಿಗರ ಹೆಮ್ಮೆಯ ನಂದಿನಿ  ಬ್ರ್ಯಾಂಡ್‌ ಅಧಿಕೃತ ಡೈರಿ ಪಾರ್ಟ್ನರ್ ಆಗಿದೆ. ಅತಿ ಹೆಚ್ಚಿನ ಫ್ಯಾನ್ಸ್ ಗಳನ್ನ ಹೊಂದಿರುವ ಆರ್‌ಸಿಬಿ ತಂಡಕ್ಕೆ ಹೆಮ್ಮೆಯ ನಂದಿನಿ …

Read More »