Home / Laxminews 24x7 (page 1942)

Laxminews 24x7

ವೈದ್ಯರ ಬದಲಿಗೆ ನರ್ಸ್​​​​ಗಳಿಂದ ಗರ್ಭಿಣಿ ಹೆರಿಗೆ; ನವಜಾತ ಗಂಡು ಮಗು ಸಾವು

ಬೆಂಗಳೂರು: ಗರ್ಭಿಣಿಗೆ ಡಾಕ್ಟರ್ ಬದಲು ನರ್ಸ್​ಗಳು ಹೆರಿಗೆ ಮಾಡಿಸಿದ್ದರಿಂದ ನವಜಾತ ಗಂಡು ಮಗು ಸಾವನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವಿರುದ್ಧ ಹೀಗೊಂದು ಆರೋಪ ಖುದ್ದು ಮಗು ಕಳೆದುಕೊಂಡ ತಾಯಿ ಪವಿತ್ರ ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. ಪಲ್ಲವಿ, ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚೆಕಪ್ ಮಾಡಿಸುತ್ತಿದ್ದರು. ಇನ್ನು ನಿನ್ನೆ ರಾತ್ರಿ 10.30ಕ್ಕೆ ಪವಿತ್ರಗೆ ಹೆರಿಗೆ ನೋವು ಕಾಣಿಸಿಕೊಂಡ ಈ ಹಿನ್ನೆಲೆ ಆಕೆಯನ್ನ ಆಸ್ಪತ್ರೆಗೆ …

Read More »

ಮನಸ್ಸಿದ್ದರೆ ವಯಸ್ಸಿನ ಹಂಗೇಕೆ? ಬಾಳ ಇಳಿ ಸಂಜೆಯಲ್ಲಿ ಜತೆಯಾದರು- ಮಗನೇ ಮಾಡಿಸಿದ ಅಪ್ಪನ ಮದುವೆ

ಸಾಂಗ್ಲಿ (ಮಹಾರಾಷ್ಟ್ರ): ಮದುವೆ ಎನ್ನುವುದು ಎಲ್ಲರಿಗೂ ದೇಹ ಸುಖವೇ ಆಗಬೇಕೆಂದಿಲ್ಲ. ಬಾಳಿನ ಇಳಿ ಸಂಜೆಯಲ್ಲಿ ಬದುಕಿಗೆ ಆಧಾರವಾಗಿ ಇರಲು ಸಾಧ್ಯವಾಗುವುದು ಗಂಡ-ಹೆಂಡತಿ ಎಂಬ ಜೋಡಿ ಇದ್ದಾಗಲೇ. ಆದರೆ ಪತಿ- ಪತ್ನಿ ತೀರಿ ಹೋದಾಗ ಅಥವಾ ವಿಚ್ಛೇದನ ಪಡೆದಾಗ ಮತ್ತೊಮ್ಮೆ ಮದುವೆಯಾಗುವವರಿಗೆ ಸ್ವಲ್ಪ ವಯಸ್ಸಾಗಿದ್ದರೆ ಎಷ್ಟೋ ಮಂದಿ ಅಂಥವರನ್ನು ವಿಚಿತ್ರ ದೃಷ್ಟಿಯಿಂದ ನೋಡುವುದು ಇಂದಿಗೂ ಉಂಟು. ಆದರೆ ಇವನ್ನೆಲ್ಲಾ ಮೀರಿ ಖುದ್ದು ಮಗನೇ ಮುಂದೆ ನಿಂತು 79 ವರ್ಷ ವಯಸ್ಸಿನ ತಮ್ಮ …

Read More »

ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು

ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.   ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್‍ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್‍ಗೆ …

Read More »

ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ …

Read More »

ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬರ್ತ್​​ ಡೇ ಪಾರ್ಟಿ, ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ

ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್​​ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್​​ವೇರ್ ಎಂಜಿನಿಯರ್​ ರೋಹಿತ್ (24) ಮೃತಪಟ್ಟ ಯುವಕ. ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಅಕ್ಸೆಂಚರ್ ಸಾಫ್ಟ್​​ವೇರ್​ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್​​ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ …

Read More »

ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ .ಮೈಸೂರಿನ ನಂಜನಗೂಡು ಮೂಲದ ಯುವತಿಗೆ ಮಂಗಳೂರು ಮೂಲದ ಮಹಮ್ಮದ್ ಆಜ್ವಾನ್ ಎಂಬಾತ ಲವ್ ಸೆಕ್ಸ್ ದೋಖಾ ಮಾಡಿರುವ ಆರೋಪ ಕೇಳಿ ಬಂದಿದ್ದು ಆರೋಪಿಯನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯಲಾಗಿದೆ . ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ ಮಾಡಿದ್ದಾನೆ ಅಲ್ಲದೇ ಯುವತಿಯ …

Read More »

ನರೇಗಾ ಕೆಲಸದ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ

ಸಿಂಧನೂರು: ನರೇಗಾ ಯೋಜನೆಯಡಿ ಲಭ್ಯವಾದ 5 ಲಕ್ಷ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡ ಸಿಸಿ‌ ರಸ್ತೆ ಕಾಮಗಾರಿ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆಗೆ ಸಂಬಂಧಿಸಿ ಪೊಲೀಸರು ಶುಕ್ರವಾರ 10 ಜನರನ್ನು ಬಂಧಿಸಿದ್ದಾರೆ. ಕುನ್ನಟಗಿ ಗ್ರಾಮದ ಕಾಂತರೆಡ್ಡಿ ಎನ್ನುವವರು ನರೇಗಾ ಕೆಲಸ ಕೈಗೆತ್ತಿಕೊಂಡಿದ್ದರು. ಇದೇ ಕೆಲಸದಲ್ಲಿ ಪಾಲುದಾರಿಕೆ ಕೊಡದ ಹಿನ್ನೆಲೆಯಲ್ಲಿ ಹಲವರು ಬಂದು ತಮ್ಮ ಹಲ್ಲೆ ನಡೆಸಿದ್ದಾರೆಂದು ದೂರಿದ್ದರಿಂದ 10 ಕ್ಕೂ ಹಚ್ಚು ಜನರ ವಿರುದ್ಧ ಪ್ರಕರ‌ಣ ದಾಖಲಾಗಿತ್ತು. ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು‌ ಪಟಾಕಿ …

Read More »

ನಕಲಿ ಸಹಿ ಮಾಡಿ ಭೂಮಿ ನೋಂದಣಿ ಆರೋಪ; ಗ್ರೇಡ್ 2 ತಹಶೀಲ್ದಾರ್ ಅರೆಸ್ಟ್

ಚಿಕ್ಕೋಡಿ: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರಿಗೆ ಜಮೀನು ನೊಂದಾಯಿಸಿದ್ದ ಆರೋಪದ ಮೇಲೆ ಚಿಕ್ಕೋಡಿ ಗ್ರೇಡ್ 2 ತಹಶೀಲ್ದಾರ್ ಅವರನ್ನು ಅರೆಸ್ಟ್‌ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿ‌ ತಹಶೀಲ್ದಾರರ ಕಚೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರುಣ್ ಶ್ರೀಖಂಡೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಗ್ರೇಡ್ 2 ತಹಶೀಲ್ದಾರರ ಶ್ರೀಖಂಡೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದ ಮಾರುತಿ ಕರಿಗಾರ ಎಂಬುವರಿಗೆ ಸೇರಿದ್ದ ರಿ.ನಂ 436/5ಮತ್ತು …

Read More »

ರಾಷ್ಟ್ರೀಯ ಶಿಕ್ಷಣ ನೀತಿ; ಕಾಂಗ್ರೆಸ್ ವಿರುದ್ಧ ಡಾ.ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ಪಕ್ಷ ದ್ವಂದ್ವ ನೀತಿ ಅನುಸರಿಸುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಬೆಂಗಳೂರಿನಲ್ಲಿಂದು ಬಿಜೆಪಿ ಕೇಂದ್ರ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಹಿಂದಿನ ಕಾಂಗ್ರೆಸ್ ಸರಕಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರಹಾರ ನಡೆಸಿದರು. ರಾಷ್ಟ್ರೀಯ …

Read More »

ಅಕ್ರಮ ಬಡಾವಣೆ: ಸಚಿವರ ಭಿನ್ನ ನಿಲುವು

ಬೆಂಗಳೂರು: ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಅಕ್ರಮ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರೆ, ನಗರ ಸ್ಥಳೀಯ ಸಂಸ್ಥೆಗಳ ಅಕ್ರಮ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತದೆ ಎಂದು ಎಂಟಿಬಿ ನಾಗರಾಜ್‌ ಹೇಳಿದರು. ಇಬ್ಬರು ಸಚಿವರ ಹೇಳಿಕೆಗಳು ಸದಸ್ಯರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ‘ಈ ಎರಡು ಇಲಾಖೆಗಳು ಸರ್ಕಾರದ ಒಳಗೆ ಇವೆಯೋ ಇಲ್ಲವೇ. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ’ ಎಂದು ಸದಸ್ಯರು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ …

Read More »