Breaking News

Laxminews 24x7

ಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

ರಾಯಚೂರು: ಮಣ್ಣೆತ್ತಿನ ಅಮವಾಸ್ಯೆ  ಹಿನ್ನೆಲೆ ಮಣ್ಣಿನ ಎತ್ತುಗಳ ವ್ಯಾಪಾರ ಜೋರಾಗಿದೆ. ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಸೊಗಡಿನ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮವಾಸ್ಯೆಯನ್ನ ರಾಯಚೂರಿನಲ್ಲಿ  ಜನ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಎತ್ತುಗಳನ್ನ ಮಣ್ಣಿನಿಂದ ತಯಾರಿಸಿ ದೇವರ ಜಗಲಿಯಲ್ಲಿಟ್ಟು ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸುತ್ತಾರೆ. ಈ ಬಾರಿ ಮಣ್ಣೆತ್ತಿನ ವ್ಯಾಪಾರ ಜೋರಾಗಿದ್ದು, ಜೋಡೆತ್ತಿನ ಬೆಲೆ ಕೂಡ ಹೆಚ್ಚಾಗಿದೆ. 80 ರೂ.ಯಿಂದ 100 ರೂ.ವರೆಗೆ ಮಣ್ಣಿನ ಜೋಡೆತ್ತುಗಳ …

Read More »

ಬಿಡದಿ ಟೌನ್‌ಶಿಪ್ ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು: ನಿಖಿಲ್ ಆಗ್ರಹ

ಬೆಂಗಳೂರು: ಬಿಡದಿ ಟೌನ್‌ಶಿಪ್  ಹೋರಾಟಗಾರರ ಮೇಲೆ ಸರ್ಕಾರ ಹಾಕಿರೋ FIR ಕೂಡಲೇ ರದ್ದು ಮಾಡಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಆಗ್ರಹ ಮಾಡಿದ್ದಾರೆ. ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ಬಿಡದಿ ಟೌನ್‌ಶಿಪ್ ನೆಪದಲ್ಲಿ ಅಮಾಯಕ ರೈತರ ಮೇಲೆ FIR ದಾಖಲಿಸಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಯಾವುದೇ ಮಾಹಿತಿ ಇಲ್ಲದೆ ರೈತರ ಭೂಮಿಗೆ ನುಗ್ಗಿ ಜಂಟಿ …

Read More »

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿ

ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ  ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕರ್ನಾಟಕವನ್ನು `ಎಐ-ನೇಟಿವ್’  ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ …

Read More »

ಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ

ನವದೆಹಲಿ: ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರೀಯ ತನಿಖಾ ಸಂಸ್ಥೆ  ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್( ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಜಾರ್ಖಂಡ್ ಹೈಕೋರ್ಟ್ ಮೇವು ಹಗರಣದಲ್ಲಿ ಲಾಲೂ ಅವರ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ …

Read More »

50 ಲಕ್ಷಕ್ಕಾಗಿ ಪತ್ನಿ, ಮಾವನ ಮೇಲೆ ಹಲ್ಲೆಗೆ ಯತ್ನ – PSIಗೆ ಪರಸ್ತ್ರೀ ವ್ಯಾಮೋಹ, ಕಾಮಪುರಾಣ ಬಯಲು

ಬೆಂಗಳೂರು: ಕಾನೂನು ರಕ್ಷಿಸುವವನೇ ರಾಕ್ಷಸನಾಗಿ ಬದಲಾಗಿರುವ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ  ಬೆಳಕಿಗೆ ಬಂದಿದೆ. ಉದ್ಯಮಿಯೊಬ್ಬರಿಗೆ 50 ಲಕ್ಷ ರೂ. ಬೇಡಿಕೆಯಿಟ್ಟು ಲೋಕಾಯುಕ್ತ ಟ್ರ‍್ಯಾಪ್‌ಗೆ ಒಳಗಾಗಿ ಸಸ್ಪೆಂಡ್ ಆಗಿದ್ದ ಪಿಎಸ್‌ಐ ಇದೀಗ ಪತ್ನಿ ಮತ್ತು ಮಾವನ ಮೇಲೆಯೇ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪಿಎಸ್‌ಐ ಬೈರಪ್ಪ ವಿರುದ್ಧ ವಕೀಲೆಯಾಗಿರುವ ಪತ್ನಿ ಗಂಭೀರ ಆರೋಪಗಳನ್ನು ಮಾಡಿದ್ದು, ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿಗೆ ದೂರು ನೀಡಲು ಮುಂದಾಗಿದ್ದಾ ಐದು ವರ್ಷದ …

Read More »

ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆಯಂತೆ ಟೌನ್‌ಶಿಪ್‌ – ಡಿಕೆಶಿ ವಿರುದ್ಧ ಹೆಚ್‌ಡಿಡಿ ಸ್ಫೋಟಕ ಆರೋಪ

ಬೆಂಗಳೂರು: ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆ ಈಡೇರಿಸಲು ಸಿಎಂ ಡಿಕೆ ಶಿವಕುಮಾರ್‌ ಬಿಡದಿ ಟೌನ್‌ಶಿಪ್‌ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು  ಸ್ಫೋಟಕ ಆರೋಪ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್  ಯೋಜನೆಗೆ ಸಂಬಂಧಿಸಿದಂತೆ ರೈತರ ಮೇಲಿನ ದೌರ್ಜನ್ಯ ಹಾಗೂ ಜೆಎಂಸಿ ಸರ್ವೆ ವಿವಾದ ಈಗ ರಾಜಕೀಯವಾಗಿ ಭಾರೀ ಸ್ಫೋಟಗೊಂಡಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ಜೆಪಿ ಭವನದಲ್ಲಿ …

Read More »

ಕಲಾದಗಿಗೆ ಮೋಹನ್ ಭಾಗವತ್ ಭೇಟಿ- ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆ

ಬಾಗಲಕೋಟೆ:ರಾಷ್ಟ್ರೀಯ ಸ್ವಯಂಸೇವಕ ಸಂಘದ  ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಗಡಿಭಾಗದ ಬೆಳಗಾವಿಯಿಂದ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ಮಾರ್ಗಮಧ್ಯೆ ಅವರು ಕಲಾದಗಿಯ ಸಂಘದ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ಮನೆಗೆ ಭೇಟಿ ನೀಡಿ ಗಮನ ಸೆಳೆದರು. ದೇಶದ ಅತ್ಯುನ್ನತ ಝೆಡ್ ಪ್ಲಸ್ (Z+) ಭದ್ರತಾ ಚೌಕಟ್ಟನ್ನು ಹೊಂದಿರುವ ಮೋಹನ್ ಭಾಗವತ್ ಅವರು ಕಲಾದಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಬಿಗಿ ಪೊಲೀಸ್ ಬಂದೋಬಸ್ತ್ …

Read More »

CWMA ಸಭೆ ಬಳಿಕ ನಾಲೆಗಳಿಗೆ ನೀರು; ಈ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ  ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡಬೇಕು ಎಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ  ಹೇಳಿದರು. ರೈತರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಆದರೆ ಜಲಾಶಯಗಳಲ್ಲಿ ನೀರಿನ ಕೊರತೆ ಇರುವ ಕಾರಣ ಕುಡಿಯುವ ನೀರಿಗೂ ಆದ್ಯತೆ ನೀಡಬೇಕಾದ ಪರಿಸ್ಥಿತಿ ಇದೆ ಎಂದರು. ಜಿಲ್ಲೆಯ ಎಲ್ಲಾ ಶಾಸಕರು ಈಗಾಗಲೇ ಮುಖ್ಯಮಂತ್ರಿ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ. …

Read More »

ಮದರಸಾ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಶಾಲೆಗೆ ನುಗ್ಗಿ ದಾಂಧಲೆ

ಬೆಂಗಳೂರು: ಮದರಸಾ ಜಾಗದ ವಿಚಾರಕ್ಕೆ ಶಾಲೆಗೆ ನುಗ್ಗಿ ಪುಂಡರು ದಾಂಧಲೆ ನಡೆಸಿರುವ ಘಟನೆ ಬೆಂಗಳೂರಿನ  ಥಣಿಸಂದ್ರದ  ನಾರಾಯಣಪುರದಲ್ಲಿ ನಡೆದಿದೆ. ಸಾಮರ್ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ನುಗ್ಗಿದ ಕೆಲವರು, ಕಿಟಕಿ ಗಾಜುಗಳನ್ನು ಒಡೆದು ಒಳನುಗ್ಗೋಕೆ ಪ್ರಯತ್ನಿಸಿದ್ದಾರೆ. ಈ ವೇಳೆ ಒಳಗಿದ್ದ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿ ಖಾರದ ಪುಡಿ ಬೆರಸಿದ ನೀರು ಎರಚಿ ಅವರನ್ನು ಹಿಮ್ಮೆಟ್ಟಿಸೋ ಕೆಲಸ ಮಾಡಿದ್ದಾರೆ. ನೋಡು ನೋಡುತ್ತಿದ್ದಂತೆ ಇಡೀ ಕಾಲೇಜು ರಣರಂಗವಾಗಿ ಮಾರ್ಪಟ್ಟಿದೆ. ಮಸೀ ಅಹಮದ್ ಎಂಬುವವರು 1988ರಲ್ಲಿ ಮದರಸಾಗೆ …

Read More »

ತೆಲಂಗಾಣದಲ್ಲಿ 6 ಜನರನ್ನು ಕಗ್ಗೊಲೆ ಮಾಡಿದ್ದ ಪೋಕ್ಸೋ ಆರೋಪಿ ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣದ  ರಂಗಾರೆಡ್ಡಿ ಜಿಲ್ಲೆಯಲ್ಲಿ ಪತ್ನಿ ಮತ್ತು ಮಕ್ಕಳು, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸೇರಿದಂತೆ 6 ಜನರನ್ನು ಹತ್ಯೆ ಮಾಡಿದ್ದ ಪೋಕ್ಸೋ ಆರೋಪಿ  ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜು.10 ರಂದು ಆರೋಪಿ ರಾಜ್‌ಕುಮಾರ್ ತನ್ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಆತನ ಮೇಲೆ ಅತ್ಯಾಚಾರ ಕೇಸ್‌ ದಾಖಲಿಸಿದ್ದ ಅಪ್ರಾಪ್ತೆ ಹಾಗೂ ಆಕೆಯ ಅಜ್ಜಿ ಮತ್ತು ತಾಯಿಯನ್ನು ಕೊಲೆಗೈದಿದ್ದ. ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಆತನ ಪತ್ತೆಗೆ 12 ತಂಡಗಳನ್ನು ಮಾಡಿ …

Read More »