Breaking News

Laxminews 24x7

ಕರ್ನಾಟಕ ಬರ – ಜಿಲ್ಲೆಗಳಿಗೆ ಭೇಟಿ, ಕೇಂದ್ರ ತಂಡದಲ್ಲಿ ಯಾರಿದ್ದಾರೆ?

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಖಾರಿಫ್ ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಮಟ್ಟದ ಅಧಿಕಾರಿಗಳ ತಂಡವು ಅಕ್ಟೋಬರ್ 6 ರವರೆಗೆ ಜಿಲ್ಲೆಗಳಿಗೆ ಭೇಟಿ ನೀಡಲಿವೆ ​ಅಧಿಕಾರಿಗಳ ಈ ತಂಡವನ್ನು ಒಟ್ಟು ಮೂರು ವಿಭಾಗಗಳಾಗಿ, ತಂಡ 1, ತಂಡ 2 ಮತ್ತು ತಂಡ 3 ಎಂದು ವಿಂಗಡಿಸಲಾಗಿದ್ದು, ಈ ತಂಡಗಳು ಬರ ಪೀಡಿತ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಅವಲೋಕಿಸಲಿವೆ. …

Read More »

ಇಂದು ಒಂದೇ ದಿನ 5 ಚಿನ್ನ – ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದ ಭಾರತ

ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್  ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಅಸಾಧಾರಣ ಪ್ರದರ್ಶನ ಮುಂದುವರಿಸಿದ್ದಾರೆ. ಇಂದು ಒಂದೇ ದಿನ 5 ಚಿನ್ನದ ಪದಕಗಳನ್ನು ಬೇಟೆಯಾಡಿದ ಭಾರತ  ಪದಕ ಪಟ್ಟಿಯಲ್ಲಿ ಬಲಿಷ್ಠ ಉಜ್ಬೇಕಿಸ್ತಾನವನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಪುರುಷರ ಹಾಕಿ  ವಿಭಾಗದಲ್ಲಿ ಭಾರತದ ಪುರುಷರ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿತು. ಈ ಮಹತ್ವದ ಗೆಲುವಿನೊಂದಿಗೆ ಭಾರತವು ಪದಕ ಪಟ್ಟಿಯಲ್ಲಿ 5ನೇ ಸ್ಥಾನದಿಂದ …

Read More »

ಪ್ರೆಟ್ರೋಲ್ ಬಂಕ್‌ನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ದುರ್ಮರಣ

ಬೀದರ್: ಪ್ರೆಟ್ರೋಲ್ ಬಂಕ್‌ನಲ್ಲಿ  ವಿದ್ಯುತ್ ಸ್ಪರ್ಶಿಸಿ ಯುವಕ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಸವಕಲ್ಯಾಣ ನಗರದ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿಯ ಅಧ್ಯಕ್ಷ ಅನಿಲ್ ರಗಟೆ ಎಂಬುವವರಿಗೆ ಸೇರಿದ ಬಂಕ್ ಇದಾಗಿದ್ದು, ವಿದ್ಯುತ್ ಸ್ಪರ್ಶಿಸಿ ಮಂಠಾಳ ಗ್ರಾಮದ ಅಮಿತ್ (19) ಮೃತಪಟ್ಟಿದ್ದಾನೆ. ಪೆಟ್ರೋಲ್ ಬಂಕ್‌ನ ಕಟ್ಟಡದ ಮೇಲಿದ್ದ ಸೋಲಾರ್ ತೊಳೆಯುವಾಗ ದುರ್ಘಟನೆ ಸಂಭವಿಸಿದೆ. ಬಂಕ್‌ನಲ್ಲಿ ಪೆಟ್ರೋಲ್, ಡಿಸೇಲ್ ತುಂಬಿಸಲು ಅಂತ …

Read More »

ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌, ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ವಸ್ತುಸ್ಥಿತಿ ಅರಿಯಲು ಕೇಂದ್ರದ ಬರ ಅಧ್ಯಯನ ತಂಡ  ಭೇಟಿ ನೀಡಿ ಪರಿಶೀಲನೆ ನಡೆಸಿತು. ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯ ಡಾ.ನವೀನ್ ಕುಮಾರ್ ಜೈನ್ ನೇತೃತ್ವದ ಅಧಿಕಾರಿಗಳ ತಂಡ, ಪ್ರಮುಖ ಜಲಾಶಯವಾದ ಕೆಆರ್‌ಎಸ್ ಡ್ಯಾಂ  ಸೇರಿದಂತೆ ಜಿಲ್ಲೆಯ ಹಲವೆಡೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳ ನೈಜ ಸ್ಥಿತಿಯ ಮಾಹಿತಿ ಕಲೆಹಾಕಿತು. ಮೊದಲಿಗೆ ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಭೇಟಿ ನೀಡಿದ ಕೇಂದ್ರ ತಂಡ, ಜಲಾಶಯದ …

Read More »

ಮಗನ ಸಾವಿನಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಹೊಳೆನರಸೀಪುರದ  ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ  ಮೃತಪಟ್ಟ ಪುತ್ರನ ಅಂಗಾಂಗ ದಾನ  ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಗ್ರಾಮದ ರವಿ (31) ಮೂರು ತಿಂಗಳ ಹಿಂದೆ ಪಾರಸನಹಳ್ಳಿ ಗ್ರಾಮದ ಬಳಿ ನಡೆದ ಹಿಟ್‌ & ರನ್‌ನಲ್ಲಿ ಗಂಭಿರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅ.2 ರಂದು ಸಾವನ್ನಪ್ಪಿದ್ದರು. ಮಗನ ಸಾವಿನ ಬಳಿಕ ಪೋಷಕರು ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಮಗನ …

Read More »

ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

ಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ. ಕೊನೆಯ ರೈಲು ಹೊರಡುವ ಸಮಯ ವಿಸ್ತರಣೆಯಾಗಿದೆ. ವೈಟ್‌ಫೀಲ್ಡ್ ಹಾಗೂ ಚಲ್ಲಘಟ್ಟ ನಿಲ್ದಾಣದಿಂದ ರಾತ್ರಿ 12ಕ್ಕೆ ಕೊನೆ ಮೆಟ್ರೋ ರೈಲು ಹೊರಡಲಿದೆ. ಮಾದವಾರ ನಿಲ್ದಾಣದಿಂದ ರಾತ್ರಿ 12:15ಕ್ಕೆ ಕೊನೆ ಮೆಟ್ರೋ ಸಂಚಾರ ಮಾಡಲಿದೆ. ರೇಷ್ಮೆ ಸಂಸ್ಥೆ ನಿಲ್ದಾಣದಿಂದ ರಾತ್ರಿ 12:20ಕ್ಕೆ ಕೊನೆ ಮೆಟ್ರೋ ಹೊರಡಲಿದೆ. ಯೆಲ್ಲೋ ಮಾರ್ಗ ಆರ್.ವಿ ರಸ್ತೆ ನಿಲ್ದಾಣದಿಂದ ರಾತ್ರಿ 12:15ಕ್ಕೆ ಸಂಚರಿಸಲಿದೆ. ಬೊಮ್ಮನಹಳ್ಳಿ ನಿಲ್ದಾಣದಿಂದ ರಾತ್ರಿ …

Read More »

ಧಮ್ ಇದ್ರೆ ಅಜ್ಜಯ್ಯನ ಮೇಲೆ ಆಣೆ ಮಾಡಿ – ಚಲುವರಾಯಸ್ವಾಮಿಗೆ ಸುರೇಶ್ ಗೌಡ ಚಾಲೆಂಜ್

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ  ಆಣೆ-ಪ್ರಮಾಣ ರಾಜಕೀಯ ಶುರುವಾಗಿದೆ. ನಾಗಮಂಗಲದ  ಬಗರ್‌ಹುಕುಂ ಭೂಮಿ ( ಮಂಜೂರಾತಿ ರದ್ದು ಪ್ರಕರಣ ಈಗ ಕೈ-ದಳ ನಾಯಕರ ನಡುವಿನ ಸಮರಕ್ಕೆ ನಾಂದಿ ಹಾಡಿದೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಸುರೇಶ್ ಗೌಡ, ಧಮ್ ಇದ್ರೆ ಅಜ್ಜಯ್ಯನ ಮೇಲೆ ಆಣೆ ಮಾಡುವಂತೆ ಬಹಿರಂಗ ಸವಾಲು ಹಾಕಿದ್ದಾರೆ. ಅಲ್ಲದೇ ರೈತರಿಂದ ಒಂದು ರೂಪಾಯಿ ಲಂಚ ಪಡೆದಿರುವುದು ಸಾಬೀತಾದರೆ ಕತ್ತು ಕೊಯ್ದುಕೊಂಡು ಆತ್ಮಹತ್ಯೆ …

Read More »

ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ; ಪ್ರಧಾನಿ ಮೋದಿಗೆ ಪತ್ರ ಬರೆದ ಖರ್ಗೆ

ನವದೆಹಲಿ: ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ  ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಸೆಪ್ಟೆಂಬರ್‌ವರೆಗೆ 58% ಮಳೆ ಕೊರತೆಯಾಗಿದೆ. ವ್ಯಾಪಕ ಬೆಳೆ ಹಾನಿಯಾಗಿ ಲಕ್ಷಾಂತರ ರೈತ ಕುಟುಂಬಗಳು ಸಂಕಷ್ಟದಲ್ಲಿವೆ. ಕರ್ನಾಟಕಕ್ಕೆ 3,705.30 ಕೋಟಿ ರೂ. NDRF- SDRF ನೆರವು ಬಿಡುಗಡೆ ಮಾಡಿ ಎಂದು ಪ್ರಧಾನಿಗೆ ಖರ್ಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರದಿಂದ 18,748.23 ಕೋಟಿ ರೂ. ನಷ್ಟ …

Read More »

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್‌ಗೆ 1 ಕೋಟಿ ರೂ. ಘೋಷಣೆ

ನವದೆಹಲಿ: ತನ್ನ ಜೀವದ ಹಂಗು ತೊರೆದು ಫ್ಲೈದುಬೈ ವಿಮಾನದಲ್ಲಿ 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ‘ಮ್ಯಾನ್‌ಕೈಂಡ್‌ ಫಾರ್ಮಾ’  ಕಂಪನಿಯು 1 ಕೋಟಿ ರೂ. ಘೋಷಣೆ ಮಾಡಿದೆ. ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಸಾಹಸವನ್ನು ಇಡೀ ವಿಶ್ವವೇ ಕೊಂಡಾಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶಾದ್ಯಂತದ ನಾಗರಿಕರು ಪ್ರಶಂಸೆ ಹಾಗೂ ಶುಭ ಹಾರೈಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆಯೇ ಕಂಪನಿಯು ಸ್ಮಿತ್‌ ಮಚ್ಚಾರ್‌ಗೆ 1 ಕೋಟಿ ಘೋಷಿಸಿದೆ. ದುಬೈ-ಟೆಲ್ ಅವಿವ್ …

Read More »

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಹಾಕಿ ದಿಗ್ಗಜ ಪರ್ಗತ್ ಸಿಂಗ್ ನೇಮಕ

ಚಂಡೀಗಢ: ಮಾಜಿ ಒಲಿಂಪಿಯನ್ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಜಲಂಧರ್ ಕಂಟೋನ್ಮೆಂಟ್ ಶಾಸಕ ಪರ್ಗತ್ ಸಿಂಗ್  ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ  ಅಧ್ಯಕ್ಷರಾಗಿ ಕಾಂಗ್ರೆಸ್ ನೇಮಕ ಮಾಡಿದೆ. ಅಮರಿಂದರ್ ಸಿಂಗ್ ರಾಜಾ ವಾರಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ನೇಮಕಾತಿ ನಡೆದಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಈ ಮಹತ್ವದ ನಾಯಕತ್ವ ಬದಲಾವಣೆ ನಡೆದಿದೆ. ಪರ್ಗತ್ ಸಿಂಗ್ ಅವರ …

Read More »