Breaking News

Laxminews 24x7

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.*

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಾಗನೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ…

ಬಾಗಲಕೋಟೆ : ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ… ರಾಜ್ಯ ಸರ್ಕಾರ ಎಸ್ಸಿಎಸ್‌ಪಿ ಮತ್ತು ಟಿ ಎಸ್ ಪಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. …. ಎಂದು ಆರೋಪಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಬಿಜೆಪಿ ಜಿಲ್ಲಾ ಕಚೇರಿಯಿಂದ ಡಿಸಿ ಕಚೇರಿ ವರೆಗೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಲಾಯಿತು. ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಮೋಸ ಮಾಡುತ್ತಿದೆ 2023-24 …

Read More »

ಬೆಂಗಳೂರು ನಗರ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ

ಬೆಂಗಳೂರು ನಗರ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ* *ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ 100ಕೋಟಿ ಅನುದಾನಕ್ಕೆ ಮನವಿ ಸಲ್ಲಿಕೆ* ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು . ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ …

Read More »

ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಕಲ್ಪಿಸುವ ಹೊಸ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹಾಗೂ ಚಟುವಟಿಕೆಯ ಮೂಲಕ ಕಲಿಕೆಗೆ ಅನುವು ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು. ಇಂದು ಜವಾಹರ್‌ಲಾಲ್‌ ನೆಹರು …

Read More »

ಬದ್ಧತೆ ಹಾಗೂ ಶಿಸ್ತಿನಿಂದ ಕಲಿತರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಮಕ್ಕಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

ಬೆಂಗಳೂರು : “ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು.ಆರ್. ರಾವ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಅವರು ಶುಕ್ರವಾರ ಮಾತನಾಡಿದರು. “ಇಲ್ಲಿ ನೀವೆಲ್ಲರೂ ಅನೇಕ ವಿಜ್ಞಾನಿಗಳನ್ನು ನೋಡಿದ್ದೀರಿ. …

Read More »

ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ, ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ: ಸಚಿವ ಕೆ.ಜೆ.ಜಾರ್ಜ್*

– *⁠ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುವುದು ಆರ್ಥಿಕ ಪ್ರಗತಿಯ ಸಂಕೇತ* – *19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ ನಿರೀಕ್ಷೆ: ಅದಕ್ಕೆ ತಕ್ಕಂತೆ ಪೂರೈಸಲು ಕ್ರಮ* – *ಐಪಿ ಸೆಟ್ ಗಳಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್* ಬೆಂಗಳೂರು : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ …

Read More »

ಹೂಡಿಕೆದಾರರ ಸಮಾವೇಶ: ಒಡಂಬಡಿಕೆಗಳ ತ್ವರಿತ ಅನುಷ್ಠಾನಕ್ಕೆ ಸಚಿವರ ಸೂಚನೆ*

ಬೆಂಗಳೂರು: ಇತ್ತೀಚೆಗೆ ನಡೆಸಲಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಗುರುವ ಹೂಡಿಕೆ ಒಡಂಬಡಿಕೆಗಳ ಪರುಣಾಮಕಾರಿ ಅನುಷ್ಠಾನಕ್ಕೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟು ನಿರ್ದೇಶನ ನೀಡಿದ್ದಾರೆ. ಈ ಸಂಬಂಧವಾಗಿ ಶುಕ್ರವಾರ ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಐಎಡಿಬಿ, ಉದ್ಯೋಗ ಮಿತ್ರ, ಭುಸ್ವಾಧೀನ ವಿಭಾಗ ಮತ್ತು ಇನ್ವೆಸ್ಟ್ ಕರ್ನಾಟಕ ಫೋರಂನ ಉನ್ನತ ಅಧಿಕಾರಿಗಳ ಜತೆ ಇಲ್ಲಿನ ಖನಿಜ ಭವನದಲ್ಲಿ …

Read More »

ಯುರೋಪಿಯನ್‌ ಒಕ್ಕೂಟದ ಉನ್ನತ ನಿಯೋಗದ ಜತೆ ಹೆಚ್‌.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ

ಯುರೋಪಿಯನ್‌ ಒಕ್ಕೂಟದ ಉನ್ನತ ನಿಯೋಗದ ಜತೆ ಹೆಚ್‌.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ *ಭಾರತೀಯ ಉಕ್ಕು ಮತ್ತು EV ವಲಯಗಳಲ್ಲಿ ಯುರೋಪ್‌ ಒಕ್ಕೂಟದ ಹೂಡಿಕೆಗೆ ಕೇಂದ್ರ ಸಚಿವರ ಆಹ್ವಾನ* *ಗ್ರೀನ್‌ ಸ್ಟೀಲ್ ಕ್ಷೇತ್ರದ ವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು* *ಸುಧಾರಿತ ತಂತ್ರಜ್ಞಾನದಲ್ಲಿ ಸಹಕಾರ ಅತ್ಯಗತ್ಯ ಎಂದು ಒತ್ತಿ ಹೇಳಿದ ಸಚಿವರು* ನವದೆಹಲಿ: ಎಲೆಕ್ಟಿಕ್‌ ವಾಹನ ಹಾಗೂ ಉಕ್ಕು ಕ್ಷೇತ್ರದಲ್ಲಿ ಹೂಡಿಕೆ ಹಾಗೂ ಸುಧಾರಿತ ತಂತ್ರಜ್ಞಾನ ಆಳವಡಿಕೆ ಹಾಗೂ ವಾಯು …

Read More »

ಆರೋಪಿಗೆ ಪೊಲೀಸರು ವಾಟ್ಸ್​​ಆ್ಯಪ್​ನಲ್ಲಿ ಜಾರಿ ಮಾಡಿದ್ದ ನೋಟಿಸ್​ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಇತರರ ಗುರುತಿನ ಕಳವು ಮಾಡಿ ವಂಚಿಸಿದ್ದ ಆರೋಪ ಹೊತ್ತಿರುವ ವಿದ್ಯಾರ್ಥಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ವಾಟ್ಸ್​​ಆ್ಯಪ್ ಮೂಲಕ ಜಾರಿ ಮಾಡಿದ್ದ ನೋಟಿಸ್​ ಅನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ವಿದ್ಯಾರ್ಥಿ ಪವನ್​ ಕುಮಾರ್​ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್​.ಕೃಷ್ಣಕುಮಾರ್​ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 (ಬಿಎನ್ಎಸ್ಎಸ್) ಅಥವಾ ಹಿಂದಿನ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ವಾಟ್ಸ್​​ಆ್ಯಪ್​ಗಳ ಮೂಲಕ …

Read More »

ಯಡಿಯೂರಪ್ಪನವರು ಸುಳ್ಳು ಆರೋಪಗಳಿಂದ ಮುಕ್ತರಾಗುವ ದಿನಗಳು ಸಮೀಪ:ಬಿ‌.ವೈ.ರಾಘವೇಂದ್ರ

ಶಿವಮೊಗ್ಗ: “ಯಡಿಯೂರಪ್ಪನವರಿಗೆ ಜೀವನಪೂರ್ತಿ ಹೋರಾಟ ಮಾಡುವ ಅನಿವಾರ್ಯತೆ ಅಧಿಕಾರಿದಲ್ಲಿದ್ದಾಗ ಮತ್ತು ಅಧಿಕಾರಿದಲಿಲ್ಲದಿದ್ದಾಗಲೂ ಇದೆ. ಈಗ ಪೋಕ್ಸೋ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಅವರು ಎಲ್ಲ ಸುಳ್ಳು ಆರೋಪಗಳಿಂದ ಮುಕ್ತವಾಗಿ ಹೊರಬರುವ ದಿನಗಳು ಹತ್ತಿರ ಇದೆ” ಎಂದು ಸಂಸದ ಬಿ‌.ವೈ.ರಾಘವೇಂದ್ರ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಿದೆ. ಅಧಿಕಾರಿಗಳು ಕಣ್ಣೀರು ಹಾಕುತ್ತಿದ್ದಾರೆ. ನಾವು ಖಾಲಿ ಕೈಯಲ್ಲಿ ಜಿಲ್ಲೆಗೆ ಬಂದಿಲ್ಲ. ಇಂಥವರಿಗೆ ಇಂತಿಷ್ಟು ಹಣ ಕೊಟ್ಟು …

Read More »