Breaking News

Laxminews 24x7

62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ

 ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಆಂತರಿಕ ನೇಮಕಾತಿ ಹೊಂದಿರುವ 62 ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ …

Read More »

ಸರ್ಕಾರಿ ಅನುದಾನ ₹50 ಲಕ್ಷ ಬಿಡುಗಡೆಗೆ ಕ್ರಮ: ಚನ್ನರಾಜ ಹಟ್ಟಿಹೊಳಿ ಭರವಸೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಮರಗಾಯಿ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ವೇಗ ನೀಡುವ ಉದ್ದೇಶದಿಂದ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುಟುಂಬದ ವತಿಯಿಂದ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಲಾಯಿತು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಮುತಗಾ ಗ್ರಾಮಕ್ಕೆ ಭೇಟಿ ನೀಡಿ ದೇವಸ್ಥಾನದ …

Read More »

ಅನ್ಯ ರಾಜ್ಯದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರಾಜ್ಯದ ಜನರಿಗೆ ಅನ್ಯಾಯ: ಬಿಜೆಪಿ

ಬೆಳಗಾವಿ: ಅನ್ಯ ರಾಜ್ಯ, ವಿದೇಶಿಗರಿಗೆ ಕರ್ನಾಟಕ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ನೀಡಲು ಹೋರಡಿಸಿರುವ ಅಧಿಸೂಚನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಬಿಜೆಪಿ ಪಕ್ಷ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದೆ. ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ, ಬಾಂಗ್ಲಾದೇಶ ಮಾತ್ರವಲ್ಲದೇ ಪಶ್ಚಿಮ ಬಂಗಾಳದಿಂದ ಲಕ್ಷಾಂತರ ಮಂದಿ ಕರ್ನಾಟಕಕ್ಕೆ ಬಂದಿದ್ದಾರೆಂಬ ಮಾಹಿತಿ ಇದೆ. ರಾಜ್ಯ ಸರ್ಕಾರವು ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ನೀಡುವುದರಿಂದ  ಕರ್ನಾಟದ …

Read More »

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

ಬೆಂಗಳೂರು: ಕೆಪಿಎಸ್‌ಸಿ  ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತು ಮಾಡಿ ರಾಜ್ಯಪಾಲರು  ಆದೇಶ ಹೊರಡಿಸಿದ್ದಾರೆ. ಅಮಾನತು ಮಾಡಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್  ಅವರು, ಶಿವಶಂಕರಪ್ಪ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಅಗತ್ಯ ತನಿಖೆಗಾಗಿ ಭಾರತದ ಸಂವಿಧಾನದ 317(1)ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. ಜೊತೆಗೆ ತನಿಖೆ ಕುರಿತು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಆಯೋಗದ ಅಧ್ಯಕ್ಷ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಶಿವಶಂಕರಪ್ಪ ಅವರನ್ನು …

Read More »

ಲೈಗಿಂಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ – ಹೆಚ್.ಡಿ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್

ನವದೆಹಲಿ: ಮನೆಕೆಲಸದ ಮಹಿಳೆ ದಾಖಲಿಸಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಬಳಿಕ ರಾಜ್ಯ ಸರ್ಕಾರದ ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಿದೆ. ವಿಚಾರಣೆಯ ಸಂದರ್ಭದಲ್ಲಿ, ಕೆಳಗಿರುವ ನ್ಯಾಯಾಲಯಗಳು …

Read More »

ವಿದೇಶಾಂಗ ನೀತಿ ಟ್ರಂಪ್‌ಗೆ ಅಡವಿಟ್ಟ ಮೋದಿ: ಪ್ರಿಯಾಂಕ್‌ ಟೀಕೆ

ಬೆಂಗಳೂರು: ನಮ್ಮ ದೇಶದ ವಿದೇಶಾಂಗ ನೀತಿಯನ್ನು ಪ್ರಧಾನಿ ಮೋದಿ ( ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಅವರಿಗೆ ಅಡವಿಟ್ಟು ಬಂದಿದ್ದಾರೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ( ಕಿಡಿಕಾರಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಹಾರ್ಮುಜ್ ಜಲಸಂಧಿ ವಿಚಾರವಾಗಿ ಮತ್ತೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಕುರಿತು ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ನಮ್ಮ ದೇಶದಲ್ಲಿ ವಿದೇಶಾಂಗ ಸಚಿವರು ಇದ್ದಾರೋ …

Read More »

ಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರು

ದಾವಣಗೆರೆ: ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ  ಪೋಕ್ಸೋ ಪ್ರಕರಣದಲ್ಲಿ ( POCSO case) ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಠದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು, ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಪ್ರಕರಣ ದಾಖಲಾಗುವ ಮುನ್ನವೇ …

Read More »

ಬಿಡದಿ ಟೌನ್‌ಶಿಪ್‌ ಜಟಾಪಟಿ – ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು!

ರಾಮನಗರ: ಬಿಡದಿ ಟೌನ್​ಶಿಪ್​​  ವಿಚಾರದಲ್ಲಿ ಗದ್ದಲ – ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು ಒತ್ತುವರಿ ವಿರುದ್ಧ ತಿರುಗಿಬಿದ್ದಿದ್ದಾರೆ. ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಯಾವುದೇ ಕಾರಣಕ್ಕೂ ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಒತ್ತಾಯಿಸಿದ್ದಾರೆ. ಬಲವಂತವಾಗಿ ಸರ್ವೇ ಕಾರ್ಯ ನಡೆಸಿದ್ರೆ ಅಧಿಕಾರಿಗಳಿಗೆ ಪೊರಕೆ ಏಟು …

Read More »

ಶಿವಮೊಗ್ಗದ ಮುಪ್ಪಾನೆ – ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಮುಪ್ಪಾನೆ ಮತ್ತು ಹಲ್ಕೆ ನಡುವಿನ ಲಾಂಚ್  (ಜಲಸಾರಿಗೆ ಬೋಟ್‌) ಸೇವೆ ಪುನಾರಂಭಗೊಂಡಿದೆ. ಮಳೆ ಕೊರತೆಯಿಂದ ಲಿಂಗನಮಕ್ಕಿ ಡ್ಯಾಂ ಹಿನ್ನೀರು ಕನಿಷ್ಠ ಮಟ್ಟಕ್ಕೆ ಇಳಿದಿತ್ತು. ಇದರಿಂದ ನೀರಿನ ಆಳದಲ್ಲಿನ ಮರದ ಕಾಂಡಗಳು ಲಾಂಚ್‌ ತಳಭಾಗಕ್ಕೆ ತಗಲುವ ಸಾಧ್ಯತೆ ಇತ್ತು. ವಾಹನ ಇಳಿಸುವ ಪ್ಲಾಟ್‌ಫಾರ್ಮ್ ಜಾಗದಲ್ಲೂ ಲಾಂಚ್ ಕೆಳಭಾಗ ನೆಲಕ್ಕೆ ತಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಜನರ ಸುರಕ್ಷತೆಯ …

Read More »

ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯ

ಬೆಳಗಾವಿ: ನೇಪಾಳದಲ್ಲಿ  ಹೋಟೆಲ್‌ ಕೆಲಸಕ್ಕೆ ತೆರಳಿದ್ದ ಬೆಳಗಾವಿ ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್‌ಮೇಟ್‌ ಆತನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸಾಯಿಲ್ ಶವವನ್ನು ಭಾರತ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪೊಲೀಸರ ಮೂಲಕ ಈ ಬಗ್ಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ …

Read More »