Breaking News

Laxminews 24x7

ಪತಿಗೆ ಬೇರೊಬ್ಬಳ ಜೊತೆ ಅನೈತಿಕ ಸಂಬಂಧ ಆರೋಪ – ಬೇಸತ್ತು ಆತ್ಮಹತ್ಯೆಗೆ ಶರಣಾದ ಪತ್ನಿ

ಹಾವೇರಿ: ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ರಾಣೇಬೆನ್ನೂರು ನಗರದ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ. ಸೀಮಾ ಭಾನು ಕಂಬಳಿ (25) ಆತ್ಮಹತ್ಯೆಗೆ ಶರಣಾದ ಮಹಿಳೆ. ಪತಿ ಅಬ್ರಾರ ಕಂಬಳಿ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಅಲ್ಲದೇ ಪತಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣಿಗಾಗಿ ಮಹಿಳೆಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕಿರುಕುಳ ತಾಳದೆ ಸೀಮಾ 10 …

Read More »

ಮಗು ಬೇಡವೆಂದು 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೆ ಯತ್ನ; ಪತಿ ಅಂದರ್‌

ಬೆಂಗಳೂರು: ಮಗು ಬೇಡವೆಂಬ ಕಾರಣಕ್ಕೆ 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಪತಿಯನ್ನು( ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ  ಹೊರವಲಯದಲ್ಲಿ ನಡೆದಿದೆ. ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮೃತಪಟ್ಟಿದ್ದಾಳೆ ಎಂದು ಭಾವಿಸಿದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಕೆಲ ಗಂಟೆಗಳ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ …

Read More »

ಬಾರ್ ಮೇಲೆಯೇ ಬಿಸಿಎಂ ಹಾಸ್ಟೆಲ್‌ – ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ

ಬೆಂಗಳೂರು: ವಿದ್ಯಾರ್ಥಿಗಳು ನೆಮ್ಮದಿಯಿಂದ ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕಾದ ಹಾಸ್ಟೆಲ್‌ನ ಕೆಳ ಮಹಡಿಯಲ್ಲೇ ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನಲ್ಲಿ ಬೆಳಕಿಗೆ ಬಂದಿದೆ. ಕೆ.ಆರ್ ಪುರಂನ ಅವಲಹಳ್ಳಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೇ ಕಟ್ಟಡದ ನೆಲ ಮಹಡಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಇದ್ದರೆ, ಮೇಲಿನ ಮಹಡಿಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಾಗಿದ್ದಾರೆ. …

Read More »

ಅಂಗಡಿ ದೋಚಿ ಮಾಲೀಕರಿಗೆ ವಿದ್ಯುತ್‌ ಶಾಕ್‌ ಹೊಡೆಸುವ ವಿಚಿತ್ರ ಕಳ್ಳ!

ಕಾರವಾರ: ಕಳ್ಳರು ಸಿಕ್ಕ ವಸ್ತುಗಳನ್ನ ದೋಚಿ ಹೋಗುತ್ತಾರೆ. ಆದರೆ ಉತ್ತರ ಕನ್ನಡ  ಜಿಲ್ಲೆಯ ಅಂಕೋಲ  ತಾಲೂಕಿನ ಕನಕನಹಳ್ಳಿಯಲ್ಲೊಬ್ಬ ಕಳ್ಳ, ತಾನು ಕಳ್ಳತನ ಮಾಡುವ ಅಂಗಡಿಗೆ ವಿದ್ಯುತ್ ಹರಿಸಿ ಮಾಲೀಕರು ಮಳಿಗೆಯ ಬಾಗಿಲು ತೆರೆದರೇ ಶಾಕ್ ಹೊಡೆಯುವಂತೆ ಮಾಡಿ ಹೋಗುತಿದ್ದ ವಿಚಿತ್ರ ಪ್ರಕರಣ ವರದಿಯಾಗಿದೆ. ಕನಕನಹಳ್ಳಿಯ ನಾರಾಯಣ ಸಿದ್ದಿ ಎಂಬಾತನೇ ಈ ಕೃತ್ಯ ಎಸಗುತ್ತಿದ್ದ ಕಳ್ಳ. ಈತ ತಮ್ಮ ಊರಿನ ಅಂಗಡಿಗಳನ್ನೇ ಟಾರ್ಗೆಟ್ ಮಾಡಿ, ಒಂದೇ ಅಂಗಡಿಯಲ್ಲಿ ನಾಲ್ಕೈದು ಬಾರಿ ಕಳ್ಳತನ …

Read More »

ಮಣಿಪಾಲ್‌ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್ – ವಿದ್ಯಾರ್ಥಿ ತಲೆಗೆ ಗಂಭೀರ ಗಾಯ

ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ ಬಸ್  ಕಂದಕಕ್ಕೆ ಉರುಳಿ ಬಿದ್ದು, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದೆ. ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ …

Read More »

ರಾಮ ಮಂದಿರದ ಕಠಿಣ ನಿಯಮಕ್ಕೆ ಬೇಸತ್ತು ದೇಣಿಗೆ ಎಣಿಕೆ ಸಿಬ್ಬಂದಿಯ ಸಾಮೂಹಿಕ ರಾಜೀನಾಮೆ

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅತ್ಯಂತ ಕಠಿಣ ನಿಯಮಗಳಿಗೆ ಬೇಸತ್ತು ಬ್ಯಾಂಕ್‌ನಿಂದ ನಿಯೋಜನೆಗೊಂಡಿದ್ದ 23 ಮಂದಿ ಸಿಬ್ಬಂದಿ ತಮ್ಮ ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ದೇಶ-ವಿದೇಶಗಳ ಭಕ್ತರಿಂದ ಕೋಟ್ಯಂತರ ರೂಪಾಯಿ ದೇಣಿಗೆ ಹರಿದುಬರುತ್ತಿದೆ. ಆದರೆ, ಈ ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಾರಿಗೊಳಿಸಿರುವ ಹೊಸ ಸುರಕ್ಷತಾ ನಿಯಮಗಳು ಈಗ ಭಾರಿ ಸಂಚಲನ ಮೂಡಿಸಿವೆ. …

Read More »

ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ದುರಂತ – 14 ವರ್ಷದ ವಿದ್ಯಾರ್ಥಿನಿ ಸಾವು

ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸೀರೆಯ ಜೋಕಾಲಿ ಆಟವಾಡುತ್ತಿದ್ದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೃತ ಬಾಲಕಿಯನ್ನು ಶುಭ್ರಾ ಯುವರಾಜ್ ರಾವುತ್ ಪಾಟೀಲ್ (14 ವರ್ಷ) ಎಂದು ಗುರುತಿಸಲಾಗಿದೆ. ಈ ದುರ್ಘಟನೆಯಿಂದಾಗಿ ಇಡೀ ಕೊಡನಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಸ್ಥಳಕ್ಕೆ ನಿಪ್ಪಾಣಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿರಶೀಲನೆ ನಡೆಸಿದ್ದು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

10 ರೂ.ಗಾಗಿ ಪೆಟ್ರೋಲ್ ಬಂಕ್‌ನಲ್ಲಿ ಹೊಡೆದಾಟ – ಜಗಳ ಬಿಡಿಸಲು ಬಂದಿದ್ದವನ ಕೊಲೆ, 6 ಜನ ಅರೆಸ್ಟ್

ರಾಯಚೂರು: ತಾಲೂಕಿನ ಹಂಚಿನಾಳ ಕ್ಯಾಂಪ್ ಬಳಿ ಪೆಟ್ರೋಲ್ ಬಂಕ್‌ನಲ್ಲಿ  10 ರೂ.ಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣದ 6 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೊಡೆದಾಟದ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಗಳ ಬಿಡಿಸಲು ಹೋದ ಗಿಲ್ಲೆಸುಗೂರು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೇಘನಾಥ್ (42) ಕೊಲೆಯಾದ ವ್ಯಕ್ತಿ. ಪೆಟ್ರೋಲ್ ಬಂಕ್ ಸಿಬ್ಬಂದಿ ರವಿ, ವೀರೇಶ್, ನರಸಿಂಹ, ಮಾರೆಪ್ಪ, ರಮೇಶ್, ಪ್ರವೀಣ ಬಂಧಿತ ಆರೋಪಿಗಳು ಎನ್ನಲಾಗಿದೆ. …

Read More »

ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಡಿಸೆಂಬರ್‌ನಲ್ಲಿ ನಾನು ಬಾಂಗ್ಲಾದೇಶಕ್ಕೆ ತೆರಳುತ್ತೇನೆ: ಶೇಖ್ ಹಸೀನಾ

ನವದೆಹಲಿ: ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು ಹೆದರುವುದಿಲ್ಲ. ಇದೇ ಮುಂಬರುವ ಡಿಸೆಂಬರ್‌ನಲ್ಲಿ ನಾನು ನನ್ನ ಪಕ್ಷದ ಸಹೋದ್ಯೋಗಿಗಳೊಂದಿಗೆ ತಾಯ್ನಾಡಿಗೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿಸದ್ಯ ತೀವ್ರ ರಾಜಕೀಯ ಬಿಕ್ಕಟ್ಟು ಹಾಗೂ ಅವರ ವಿರುದ್ಧ ಕಾನೂನು ಕ್ರಮಗಳ ತೂಗುಗತ್ತಿ ಇದ್ದಾಗಲೂ ಶೇಖ್ ಹಸೀನಾ ತಾಯ್ನಾಡಿಗೆ ಮರಳುವ ದೃಢ ನಿರ್ಧಾರ ಪ್ರಕಟಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶಕ್ಕೆ ಹೋದರೆ ನನ್ನನ್ನು ಜೈಲಿಗೆ ಹಾಕಬಹುದು …

Read More »

4 ವೋಟರ್ ಐಡಿ ಹೊಂದಿದ್ದ ಆರೋಪ; ನಟ ಪ್ರಕಾಶ್ ರಾಜ್‌ಗೆ ಜಾಮೀನು ಮಂಜೂರು

ಬೆಂಗಳೂರು: ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ನಟನಿಗೆ ಜಾಮೀನು ಮಂಜೂರು ಮಾಡಿದೆ. ನಟ ಪ್ರಕಾಶ್ ರಾಜ್ ವಿರುದ್ಧ ನಾಲ್ಕು ವೋಟರ್ ಐಡಿ ಹೊಂದಿರುವ ಆರೋಪ ಕೇಳಿಬಂದಿತ್ತು. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಟನ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ವಾರಂಟ್ ರೀಕಾಲ್ ಮಾಡಿಸಲು ನಟ ಕೋರ್ಟ್ಗೆ …

Read More »