Breaking News

Laxminews 24x7

ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ರೇಪ್ – ಮತ್ತು ಬರುವ ಔಷಧಿ ನೀಡಿ ಸರ್ಕಾರಿ ನೌಕರನಿಂದ ದುಷ್ಕೃತ್ಯ

ಬಳ್ಳಾರಿ: ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಡಿ-ಗ್ರೂಪ್ ನೌಕರ ಅತ್ಯಾಚಾರ ಎಸಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಸ್ಪತ್ರೆಯ ಡಿ-ಗ್ರೂಪ್ ನೌಕರ ಅಜಯ್ ಮದಕರಿ (37) ದುಷ್ಕೃತ್ಯ ಎಸಗಿದ್ದಾನೆ. ಈ ಸಂಬಂಧ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ತಾಯಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ. ಚಿಕಿತ್ಸೆಗೆಂದು ಅಪ್ರಾಪ್ತ ಬಾಲಕಿ ತಾಯಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಳು. ಈ …

Read More »

ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್ – ಇಡಿಯಿಂದ ಮೂವರು ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಇಡಿ  ಇದೀಗ ಮೂವರು ಆರೋಪಿಗಳನ್ನು ಬಂಧಿಸಿದೆ. ಶ್ರೀಕಿ @ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು.  ಶುಕ್ರವಾರ (ಮೇ 8) ರಾತ್ರಿ ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇಂದು (ಮೇ 9) ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Read More »

ಬೀದರ್‌ನಲ್ಲಿ ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ದುರ್ಮರಣ

ಬೀದರ್: ಬೀದಿ ನಾಯಿ ದಾಳಿಗೆ  5 ತಿಂಗಳ ಹಸೂಗೂಸು ದುರಂತ ಅಂತ್ಯ ಕಂಡ ಘಟನೆ ಬೀದರ್  ಜಿಲ್ಲೆಯ ಹುಮ್ನಾಬಾದ್  ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. 5 ತಿಂಗಳ ಶಿವಾನಿ ಮೃತ ಕಂದಮ್ಮ. ಸುಧಾ ಹಾಗೂ ಸಿದ್ದಪ್ಪ ದಂಪತಿಗೆ ಸೇರಿದ ಹಸೂಗೂಸು ಸಾವನ್ನಪ್ಪಿದೆ. ಮನೆಯ ಪಡಸಾಲೆಯಲ್ಲಿ ಮಗುವನ್ನ ಮಲಗಿಸಿ ತಾಯಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮನೆಗೆ ನುಗ್ಗಿ ಹಸುಗೂಸನ್ನ ನಾಯಿ ಮನಬಂದಂತೆ ಕಚ್ಚಿ ಬಿಸಾಕಿದೆ. ಅರಜೀವಾವಸ್ಥೆಯಲ್ಲಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಬೀದರ್‌ನ …

Read More »

ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ಯುವಕ. ದಾವಣಗೆರೆ  ಮೂಲದ ಮಹಿಳೆ ಹಾಗೂ ಮೃತ ಯುವಕ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಇನ್‌ಸ್ಟಾಗ್ರಾಮ್ ಮುಖಾಂತರ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದರು. ಮಹಿಳೆಗೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಸದ್ಯ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದಳು. ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಶ್ರೀಗಂಧ …

Read More »

ಪುದುಚೇರಿಯ ಶನೇಶ್ವರ ದೇವಸ್ಥಾನಕ್ಕೆ ಡಿಸಿಎಂ ಭೇಟಿ

ಬೆಂಗಳೂರು: ತಮಿಳುನಾಡು  ಕಾಂಗ್ರೆಸ್ಶಾಸಕರು ಬೆಂಗಳೂರಿಗೆ ಬಂದ ಬಗ್ಗೆ ಹರಡಿರುವ ವದಂತಿಗಳೆಲ್ಲಾ ಸುಳ್ಳು, ಯಾವ ರೆಸಾರ್ಟ್‌ಗೂ ಬಂದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಸ್ಪಷ್ಟನೆ ನೀಡಿದರು. ನೆರೆರಾಜ್ಯ ತಮಿಳುನಾಡಿನ ಕಾಂಗ್ರೆಸ್ ಶಾಸಕರು ಹೈಜಾಕ್ ಭೀತಿಯಿಂದ ಬೆಂಗಳೂರಿನ ರೆಸಾರ್ಟ್‌ಗೆ ಶಿಫ್ಟ್ ಆಗುತ್ತಿದ್ದಾರೆ ಎಂಬ ವದಂತಿಗಳ ಕುರಿತು ಅವರು ಪ್ರತಿಕ್ರಿಯಿಸಿದರು. ಪುದುಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದರು. ಈಗಲ್ಟನ್ ರೆಸಾರ್ಟ್ ರಿಪೇರಿಗಾಗಿ ಮುಚ್ಚಿದೆ ಎಂದು ಕೇಳಿಬರುತ್ತಿರುವ …

Read More »

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

ಕೋಲಾರ: ಕೆರೆಯಲ್ಲಿಈಜಲು ಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ  ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟ ಯುವಕರನ್ನು …

Read More »

ಆಟವಾಡ್ತಿದ್ದ ಪುಟಾಣಿಗಳ ಮೇಲೆ ಬಿದ್ದ ಕಾಂಪೌಂಡ್‌ ಗೇಟ್ – ಸ್ಥಳದಲ್ಲೇ ಮಗು ಸಾವು

ಬೆಂಗಳೂರು: ಮಕ್ಕಳ ಗುಂಪೊಂದು ಆಟವಾಡುತ್ತಿರುವಾಗ ಕಾಂಪೌಂಡ್ ಗೇಟ್ ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಅವಘಡದಲ್ಲಿ ಗೌಸಿಯಾ ಎಂಬ 5 ವರ್ಷದ ಮಗು ಸಾವನ್ನಪ್ಪಿದೆ. ಅಣ್ಣ ಇಮಾಮ್, ತಂಗಿ ಶಕಿಲಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ 3 ವರ್ಷದ ಮಗು ಸುಮಯ್ ಸ್ಥಿತಿ ಗಂಭೀರವಾಗಿದೆ. ಇಮಾಮ್ ರಮೀಜಾ ದಂಪತಿ ಮಗು ಗೌಸಿಯಾ. ಇವರು ಕಳೆದ 5 ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ …

Read More »

ಪರಪ್ಪನ ಅಗ್ರಹಾರ ಜೈಲಿನ ಕೈದಿಗಳಿಗೂ ಬಂತು ಬಯೋಮೆಟ್ರಿಕ್

ಆನೇಕಲ್: ಪರಪ್ಪನ ಅಗ್ರಹಾರ  ಜೈಲಿನಲ್ಲಿ ಕೈದಿಗಳ ಮೇಲೆ ನಿಗಾವಹಿಸಲು ಕಾರಾಗೃಹ ಇಲಾಖೆ 2.25 ಕೋಟಿ ರೂ. ಖರ್ಚು ಮಾಡಿ, ಬಯೋಮೆಟ್ರಿಕ್  ವ್ಯವಸ್ಥೆಯನ್ನು ಅಳವಡಿಸಿದೆ. ಈ ಹಿಂದೆ ಎಐ ಕ್ಯಾಮರಾ  ಬಳಕೆ ಮಾಡಿ ಕೈದಿಗಳ ಮೇಲೆ ನಿಗಾವಹಿಸಿತ್ತು. ಈ ಮೂಲಕ ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ವ್ಯವಸ್ಥೆ ಹಾಗೂ ಡಿಜಿಟಲ್ ಟ್ರ‍್ಯಾಕಿಂಗ್‌ನ್ನು ಜಾರಿಗೊಳಿಸಿತ್ತು. ಇದೀಗ ಒಂದು ಹೆಜ್ಜೆ ಮುಂದೆ ಇಟ್ಟು ಜೈಲಿನಲ್ಲಿ ನಡೆಯುವ ಅಕ್ರಮ ತಡೆಯಲು ಬಯೋಮೆಟ್ರಿಕ್ ಅಳವಡಿಕೆ ಮಾಡಿದೆ. ಇತ್ತೀಚಿಗೆ …

Read More »

ಐದಳ್ಳ, ರಾಮದೇವರಹಳ್ಳಕ್ಕೆ ಈಶ್ವರ ಖಂಡ್ರೆ ಭೇಟಿ – ಒತ್ತುವರಿ ತೆರವು, ಅಕ್ರಮ ಮಂಜೂರಾತಿ ರದ್ದಿಗೆ ಸೂಚನೆ

ಬೆಂಗಳೂರು: ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಅರಣ್ಯ ಪ್ರದೇಶ ಐದಳ್ಳ ಕಾವಲು  ರಾಮದೇವರಹಳ್ಳ ಕಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಲೂರು ಪ್ರವಾಸದಿಂದ ಬೆಂಗಳೂರಿಗೆ ಮರಳುವ ಮಾರ್ಗದಲ್ಲಿ ಈ ಪ್ರದೇಶಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಈ ಪ್ರದೇಶದಲ್ಲಿರುವ ಶ್ರೀಗಂಧ, ತೇಗ, ಬೀಟೆ ಸೇರಿದಂತೆ ಬೆಲೆಬಾಳುವ ಮರಗಳಿಗೆ ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸುವಂತೆ ಮತ್ತು ಗಸ್ತು …

Read More »

ಬೈಕ್ ಅಪಘಾತ ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಗುದ್ದಿದ ಬಿಎಂಟಿಸಿ ಬಸ್

ಬೆಂಗಳೂರು: ಬೈಕ್‌ಗೆ  ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಬಿಎಂಟಿಸಿ ಬಸ್  ಗುದ್ದಿದ ಘಟನೆ ಬೆಂಗಳೂರಿನ  ಬೃಂದಾವನ ಬಸ್ ನಿಲ್ದಾಣದ ಬಳಿ ನಡೆದಿದೆ. ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಘಟಕ 9ಕ್ಕೆ ಸೇರಿದ ಬಿಎಂಟಿಸಿ ಬಸ್ 8ನೇ ಮೈಲಿಯಿಂದ ಹೇರೋಹಳ್ಳಿ ಕ್ರಾಸ್‌ಗೆ ತೆರಳುತ್ತಿದ್ದಾಗ ಏಕಾಏಕಿ ಎದುರಿನಿಂದ ಬೈಕ್ ಬಂದಿದೆ. ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಶಿವ ದೇಗುಲಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ …

Read More »