ವಯನಾಡು: ಕೇರಳದ ವಯನಾಡಿನಲ್ಲಿ ಭೂಕುಸಿತ ಸಂತ್ರಸ್ತ ಪ್ರದೇಶದಲ್ಲಿ ಅವಳಿ ಸುರಂಗ ನಿರ್ಮಿಸುತ್ತಿರುವ ದಿಲೀಪ್ ಬಿಲ್ಡ್ ಕಾನ್‌ಗೆ ಕರ್ನಾಟಕದ ನಂಟಿದೆ. ಜೊತೆಗೆ ಕರ್ನಾಟಕದಲ್ಲಿ ಈ ಸಂಸ್ಥೆ ಕೈಗೊಂಡ ಹಲವು ಯೋಜನೆಗಳು ಕೂಡಾ ವಿವಾದಕ್ಕೆ ತುತ್ತಾಗಿದ್ದವು. ಅಲ್ಲದೆ ಕೆಲವೊಂದು ಕೆಲಸಗಳಿಗೆ ಈ ಸಂಸ್ಥೆಗೆ ನಿರ್ಬಂಧ ಕೂಡಾ ಹೇರಲಾಗಿತ್ತು. ನಂಟು: ಮೈಸೂರು – ಬೆಂಗಳೂರು ನಡುವಿನ 117 ಕಿ.ಮೀ ಮಾರ್ಗದ ಎಕ್ಸ್‌ಪ್ರೆಸ್ ವೇ ಅನ್ನು 8,480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು ಇದೇ ದಿಲೀಪ್ …
Read More »ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರು – ಮುಂದಿನ 3 ದಿನ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ
ಬೆಂಗಳೂರು: ಬರಗಾಲದಿಂದ ಬಸವಳಿದ್ದ ಕರ್ನಾಟಕದಲ್ಲಿ ಈಗ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿ ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಲತಾ ಮಾಹಿತಿ ನೀಡಿದ್ದು, ಕರಾವಳಿ ಜಿಲ್ಲೆಗಳು, ಹಾಸನ, ಶಿವಮೊಗ್ಗ, ಮಡಿಕೇರಿ ಮತ್ತು ಬೆಳಗಾವಿ ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಈ ಭಾಗಗಳಿಗೆ ಇನ್ನೂ 2 …
Read More »ಕೊಡಗಿನಲ್ಲಿ ಬಿರುಸು ಪಡೆದ ಮಳೆ – ಒಂದೇ ದಿನ ಹಾರಂಗಿ ಜಲಾಶಯಕ್ಕೆ ಹರಿದು ಬಂತು 1.5 ಟಿಎಂಸಿ ನೀರು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಒಂದೇ ದಿನದಲ್ಲಿ ಸುಮಾರು 1.5 ಟಿಎಂಸಿ ನೀರು (17,361 ಕ್ಯೂಸೆಕ್) ಸಂಗ್ರಹವಾಗಿರುವುದು ಜಲಾಶಯದ ನೀರಿನ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಿದೆ. ಮಡಿಕೇರಿ , ಗಾಳಿಬೀಡು ಹಾಗೂ ಕಾಲೂರು ಭಾಗಗಳಲ್ಲಿ ಕಳೆದ 24 ಗಂಟೆಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಇಂದು ಕೂಡ …
Read More »ಉಡುಪಿಯಲ್ಲಿ ಮುಂಗಾರು ಅಬ್ಬರ – ಹಿರಿಯಡ್ಕ ಬಳಿಯ ಬಜೆ ಡ್ಯಾಂ ಭರ್ತಿ
ಉಡುಪಿ: ಒಂದು ತಿಂಗಳ ಕಾಲ ಮಳೆಯ ಕೊರತೆಯಿಂದ ಕಂಗೆಟ್ಟಿದ್ದ ಉಡುಪಿ ಜಿಲ್ಲೆಯಲ್ಲಿ ಈಗ ಮುಂಗಾರು ಮತ್ತೆ ಚುರುಕುಗೊಂಡಿದೆ. ಜಿಲ್ಲೆಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ, ಸಾಧಾರಣ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯ ಪರಿಣಾಮ ಸ್ವರ್ಣ ಸೇರಿದಂತೆ ಜಿಲ್ಲೆಯ ಜೀವನದಿಗಳು, ಜಲಾಶಯಗಳು ತುಂಬಿ ಹರಿಯುತ್ತಿದ್ದು, ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಆದರೆ ಗಾಳಿ ಮತ್ತು ಭಾರೀ ಮಳೆಯ ಎಚ್ಚರಿಕೆಯೂ ಇರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕೆ …
Read More »ಲಾರಿ, ಕ್ರೂಸರ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ 6 ಮಂದಿ ದುರ್ಮರಣ
ಕಾರವಾರ: ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ. ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕ್ರೂಸರ್‌ನಲ್ಲಿ ಇದ್ದ ಧಾರವಾಡದ ಬಸವರಾಜ್, ಮಂಜುನಾಥ್ ಚುಲ್ಲಕ್ಕಿ, ಅಭಿಷೇಕ್ ಮಲ್ಲೇಶ್ ಮಡಬಾವಿ, ಅಕ್ಷಯ್ ಮಲ್ಲಣ್ಣನವರ್ ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಗುರುತು ಪತ್ತೆಯಾಗಬೇಕಿದೆ. …
Read More »7 ಜಿಲ್ಲೆಯ 10 ಅಧಿಕಾರಿಗಳಿಗೆ ಸೇರಿದ 54 ಕಡೆ ಲೋಕಾ ದಾಳಿ – ಭ್ರಷ್ಟರ ಬಣ್ಣ ಬಯಲು
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಮುಕ್ತಾಯವಾಗಿದ್ದು, ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಆಸ್ತಿ, ಚಿನ್ನ, ನಗದು ಪತ್ತೆಯಾಗಿದೆ. 7 ಜಿಲ್ಲೆಯ 10 ಅಧಿಕಾರಿಗಳಿಗೆ ಸೇರಿದಂತೆ 54 ಕಡೆ ನಡೆದಿದ್ದ ದಾಳಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಪತ್ತೆಯಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. 1. ನರೇಂದ್ರ ಕುಮಾರ್ ಎಂ, ಸಹಾಯಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ವಿಭಾಗ-1, ಕೆ.ಆರ್. ಸರ್ಕಲ್, ಬೆಂಗಳೂರು ಒಟ್ಟು ಆಸ್ತಿ: 8.51 ಕೋಟಿ ರೂ. …
Read More »ಜು.10ರಿಂದ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟಿರುವ ಅನಾಥ ವಾಹನಗಳ ತೆರವು
ಬೆಂಗಳೂರು: ಜು.10ರಿಂದ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟಿರುವ ಅನಾಥ ವಾಹನಗಳ ತೆರವು ಹಾಗೂ ಹರಾಜು ಕಾರ್ಯ ಆರಂಭಿಸಲು ಜಿಬಿಎ ಸಜ್ಜಾಗಿದೆ. ರಸ್ತೆಗಳು, ತೆರೆದ ಪ್ರದೇಶಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ದಿನಗಳಿಂದ ಅನಾಥವಾಗಿ ಬಿಡಲಾದ ವಾಹನಗಳನ್ನು 5 ನಗರ ಪಾಲಿಕೆಗಳಲ್ಲಿ ಗುರುತಿಸಿ ಸಂಚಾರಿ ಪೊಲೀಸರು ಹಾಗೂ ಜಿಬಿಎ ಜಂಟಿಯಾಗಿ ತೆರವು ಕಾರ್ಯ ನಡೆಸಲಿದೆ. ಮೊದಲು ಗುರುತಿಸಲಾದ ಅನಾಥ ವಾಹನಗಳಿಗೆ 7 ದಿನಗಳ ಕಾಲಾವಕಾಶ ನೀಡಿ, ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅಂಟಿಸಲಾಗುವುದು. …
Read More »ಚಲಿಸುತ್ತಿದ್ದ ರೈಲಿನಲ್ಲಿ ಯಶಸ್ವಿ ಹೆರಿಗೆ – ತಾಯಿ, ಮಗುವಿನ ಪ್ರಾಣ ಉಳಿಸಿದ ಮೂವರು ಆಯುರ್ವೇದ ವೈದ್ಯೆಯರು
ಹಾಸನ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಮೂವರು ಆಯುರ್ವೇದ ವೈದ್ಯರು ಹೆರಿಗೆ ಮಾಡಿಸಿರುವ ಅಪರೂಪದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ನಗರದ ತಣ್ಣೀರುಹಳ್ಳದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಮಾನಸರೋಗ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿನಿಯರಾದ ಡಾ. ರಶ್ಮಿ ಬಿಳಗಿ, ಡಾ. ಲತಾಶ್ರೀ.ಎನ್. ಹಾಗೂ ಡಾ. ಶಾಹಿನ್.ಎಂ.ರವರು ರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಭಾಗವಹಿಸಲು ಹಾಸನದಿಂದ ವಾರಣಾಸಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ರೈಲಿನಲ್ಲಿ ಗರ್ಭಿಣಿ ಮಹಿಳೆ ಪ್ರಯಾಣಿಸುತ್ತಿದ್ದು, ಹೆರಿಗೆ ನೋವು …
Read More »ಚನ್ನಪಟ್ಟಣ ತಹಶೀಲ್ದಾರ್‌ಗೆ ಅಸಹಜ ಲೈಂಗಿಕ ಕಿರುಕುಳ, ವಿವಸ್ತ್ರಗೊಳಿಸಿ ಕೊಲೆ ಯತ್ನ – 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದವ ಅರೆಸ್ಟ್
ರಾಮನಗರ: ತಹಶೀಲ್ದಾರ್ ಅವರಿಗೆ ಸರ್ಕಾರಿ ನಿವಾಸದಲ್ಲೇ ಅಸಹಜ ಲೈಂಗಿಕ ಕಿರುಕುಳ ನೀಡಿ, ವಿವಸ್ತ್ರಗೊಳಿಸಿ ವಿಡಿಯೋ ಮಾಡಿ 10 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆ ಚನ್ನಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರಿಗೆ ಕಿರುಕುಳ ನೀಡಿದ್ದು, ಆರೋಪಿಯನ್ನು ಮೈಸೂರು ಮೂಲದ ಅನುಶ್ ಎಂದು ಗುರುತಿಸಲಾಗಿದೆ. ಆರೋಪಿ ಅನುಶ್ ಫೇಸ್‌ಬುಕ್ ಮೂಲಕ ತಹಶೀಲ್ದಾರ್ ಗಿರೀಶ್‌ಗೆ ಪರಿಚಯವಾಗಿದ್ದ. ಜೂನ್ 28ರಂದು ರಾತ್ರಿ ಅನುಶ್ ತನ್ನ ಸ್ನೇಹಿತರಾದ ಶೋಭರಾಜನ್ …
Read More »ಕೃಷ್ಣಾ ನದಿಗೆ 1.40 ಲಕ್ಷ ಕ್ಯೂಸೆಕ್ ನೀರಿನ ಹರಿವು; ಕುಡಚಿ-ಉಗಾರ ಸೇತುವೆ ಮುಳುಗಡೆ ಹಂತಕ್ಕೆ
ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕೃಷ್ಣಾ ನದಿಗೆ ನೀರಿನ ಒಳಹರಿವು ಹೆಚ್ಚುತ್ತಿದ್ದು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ-ಉಗಾರಖುರ್ದ್ ಸಂಪರ್ಕಿಸುವ ಸೇತುವೆ ಮುಳುಗಡೆ ಹಂತಕ್ಕೆ ತಲುಪಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರವನ್ನು ಸಂಪರ್ಕಿಸುವ ಪ್ರಮುಖ ಸೇತುವೆಯಾಗಿರುವ ಕುಡಚಿ ಸೇತುವೆ ಮೇಲೆ ಈಗಾಗಲೇ ಸುಮಾರು ಒಂದು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ನಿತ್ಯ ನೂರಾರು ಬಸ್ ಹಾಗೂ ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿದರೆ ವಾಹನಗಳ ಓಡಾಟ …
Read More »
Laxmi News 24×7