ಬೆಂಗಳೂರು: ಹಿರಿಯೂರು ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಬೇಕು ಅಂತಿದೆ. ನಾನು ಹಿರಿಯೂರು ಉಪಚುನಾವಣೆಗೆ ನಿಲ್ಲೋದಿಲ್ಲ. ಉಪಚುನಾವಣೆಗೆ ನಿಲ್ಲೋದೇ ನನ್ನ ಕೆಲಸ ಅಲ್ಲ. ಕೇಂದ್ರದಲ್ಲಿ ಮಂತ್ರಿ ಆಗಿದ್ದೇನೆ. ಆ ಕೆಲಸ ಮಾಡಿಕೊಂಡು ಹೋಗ್ತಿನಿ.ನಾವು-ಬಿಜೆಪಿ ಒಟ್ಟಾಗಿ ಹೋಗ್ತೀವಿ. ಈಗಾಗಲೇ ಬಿಜೆಪಿ ಹೈಕಮಾಂಡ್ ಬಳಿ ರಿಕ್ವೆಸ್ಟ್ ಮಾಡಿದ್ದೇನೆ. ರಾಜ್ಯದಲ್ಲಿ ಇರುವ ಈ ಕೆಟ್ಟ …
Read More »ಭಾರೀ ಮಳೆಗೆ ಕೋಝಿಕ್ಕೋಡ್ ರೈಲು ನಿಲ್ದಾಣದ 137 ವರ್ಷ ಹಳೆಯ ಗಡಿಯಾರ ಗೋಪುರ ಕುಸಿತ
ತಿರುವನಂತಪುರಂ: ಐತಿಹಾಸಿಕ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಗುರುವಾರ ನವೀಕರಣ ಕಾರ್ಯ ನಡೆಯುತ್ತಿರುವಾಗ ಶತಮಾನಗಳಷ್ಟು ಹಳೆಯದಾದ ಗಡಿಯಾರ ಗೋಪುರ ಕುಸಿದು ಬಿದ್ದಿದ್ದು, ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೋಝಿಕ್ಕೋಡ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿರುವ 137 ವರ್ಷದ ಹಳೆಯ ಗಡಿಯಾರ ಗೋಪುರದ ಇಂದು ಬೆಳಗ್ಗೆ 11:10 ಗಂಟೆಗೆ ಕುಸಿದಿದೆ. ಪರಿಣಾಮ ಹಲವು ರೈಲು ಸೇವೆಗಳ ವೇಳಾಪಟ್ಟಿ ಬದಲಾಗಿದೆ. ಹಳೆಯ ರಚನೆಯು, ನಿಲ್ದಾಣದ ನವೀಕರಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿ ಕಾರ್ಯ …
Read More »ಬೆಳಗಾವಿ – ರಾಯಚೂರ ಚತುಷ್ಪಥ ರಸ್ತೆಯ ಕಾಮಗಾರಿಗಾಗಿ ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಡಿ ಬರುವ ಗ್ರಾಮಗಳಿಗೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿದ ಸಂಸದ ಶೆಟ್ಟರ
ಬೆಳಗಾವಿ (ಶೆಗಣಮಟ್ಟಿ)- ಹುನಗುಂದ-ರಾಯಚೂರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಚತುಷ್ಪಥ ರಸ್ತೆಯ ಕಾಮಗಾರಿಗನುಗುಣವಾಗಿ, ಈ ಮಾರ್ಗದಲ್ಲಿ ಸಂಪರ್ಕ ರಸ್ತೆ ನಿರ್ಮಾಣದ ಕೊರತೆಯಿಂದಾಗಿ ರೈತರು ಹಾಗೂ ಸಾರ್ವಜನಿಕರು ದಿನನಿತ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಯಲು ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳು ಶ್ರೀ ಜಗದೀಶ ಶೆಟ್ಟರ, ಇವರು ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಡಿ ಇರುವ ಮರಿಕಟ್ಟಿ ಕ್ರಾಸ್, ನಾಗನೂರ, ಮತ್ತು ಸವದತ್ತಿ ತಾಲೂಕಿನ ಇಂಚಲ್, ಮರಕುಂಬಿ ಗ್ರಾಮಗಳಿಗೆ …
Read More »ಪಂಡರಪುರ ದಿಂಡಿ ಪಾದಯಾತ್ರೆಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಆಷಾಢ ಏಕಾದಶಿ ಅಂಗವಾಗಿ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಗುರುವಾರ ಆಯೋಜಿಸಲಾದ ಶ್ರೀ ವಿಠ್ಠಲ–ರುಕ್ಮಾಯಿ ಪಂಡರಪುರ ದಿಂಡಿ ಪಾದಯಾತ್ರೆಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿ, ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ಶುಭಾಶಯ ಕೋರಿದರು. ಶ್ರೀ ವಿಠ್ಠಲ ಮತ್ತು ರುಕ್ಮಾಯಿ ದೇವಿಯ ಭಜನೆ, ನಾಮಸ್ಮರಣೆ ಹಾಗೂ ಭಕ್ತಿಗೀತೆಗಳ ನಡುವೆ ಆರಂಭವಾದ ಪಾದಯಾತ್ರೆಯಲ್ಲಿ ಭಕ್ತರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಸಂಪ್ರದಾಯಬದ್ಧ ವೇಷಭೂಷಣ ಧರಿಸಿದ್ದ …
Read More »ಸುವರ್ಣ ವಿಧಾನಸೌಧದಲ್ಲಿ ವಿಶೇಷ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಳಗಾವಿ: ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ, ರಾಜ್ಯದ ಅಭಿವೃದ್ಧಿ, ಜನರ ಸುಖ-ಸಮೃದ್ಧಿ ಹಾಗೂ ಉತ್ತಮ ಆಡಳಿತಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ಭಾಗವಹಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ, ರೈತರ ನೆಮ್ಮದಿ, ಉತ್ತಮ ಮಳೆ, …
Read More »ರಾಜ್ಯಕ್ಕೆ ಬರಬೇಕಿದ್ದ ಕನಿಷ್ಠ ಬೆಂಬಲ ಬೆಲೆ ಯೋಜನೆಯ (MSP) ಅನುದಾನ ಬಿಡುಗಡೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರವರಿಗೆ ಬೇಟಿ ಮಾಡಿದ :-ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ
ಮೊದಲ ಹಂತವಾಗಿ 190 ಕೋಟಿ ರೂಗಳ ಬಿಡುಗಡೆ, ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಆಹಾರ ಸಚಿವ ಮುನಿಯಪ್ಪ ನವದೆಹಲಿ:ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ, ಕರ್ನಾಟಕದ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಗೆ ಸಂಬಂಧಿಸಿದ ಬಾಕಿ ಮರುಪಾವತಿ …
Read More »ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ: ಧಾರವಾಡದಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ನೂತನ ರೈಲ್ವೆ ಮಾರ್ಗ ಯೋಜನೆಗೆ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರೈತ ಮುಖಂಡರು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ರೈತರಿಗೆ ಬೆಂಬಲ ಸೂಚಿಸಿದರು. ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಯೋಗ್ಯ ಹಾಗೂ ನ್ಯಾಯಯುತವಾದ ಪರಿಹಾರವನ್ನು ನಿಗದಿಪಡಿಸಬೇಕು ಎಂದು ಈ …
Read More »ತಾಡಪತ್ರಿ ಕೆಳಗೆ ವಾಸಿಸುತ್ತಿದ್ದ ಸಹೋದರಿಯರಿಗೆ ಅನಿಲ ಬೆನಕೆ ಸಹಾಯ
ಬೆಳಗಾವಿ: ಹಲವು ದಿನಗಳಿಂದ ಪ್ಲಾಸ್ಟಿಕ್ ತಾಡಪತ್ರಿಗಳ ಅಡಿಯಲ್ಲಿ ವಾಸಿಸುತ್ತಿದ್ದ ಇಬ್ಬರು ವೃದ್ಧ ಸಹೋದರಿಯರಿಗೆ ಮಾಜಿ ಶಾಸಕ ಅನಿಲ್ ಬೆನಕೆ ಅವರ ನೇತೃತ್ವದಲ್ಲಿ ಪುನರ್ವಸತಿ ಕಲ್ಪಿಸಲಾಯಿತು. ಕ್ಯಾಂಪ್ ಪ್ರದೇಶದ ಮಹಿಳಾ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಬೊಗಾರ ವೇಸ್ ಪ್ರದೇಶದಲ್ಲಿ ಹಲವು ದಿನಗಳಿಂದ ಪ್ಲಾಸ್ಟಿಕ್ ತಾಡಪತ್ರಿಗಳ ಅಡಿಯಲ್ಲಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ವಾಸಿಸುತ್ತಿದ್ದ ಇಬ್ಬರು ವೃದ್ಧ ಸಹೋದರಿಯರನ್ನು ಸುರಕ್ಷಿತ ಸ್ಥಳಕ್ಕೆ ಪುನರ್ವಸತಿ ಮಾಡಲಾಯಿತು. ನಿರಂತರ ಮಳೆಯಿಂದಾಗಿ ಅವರ ಜೀವನವು ಹೆಚ್ಚು ಕಷ್ಟಕರವಾಗಿತ್ತು. ಈ …
Read More »ಬೆಳಗಾವಿಯ ಕಲ್ಲೋಳದ ದತ್ತ ಮಂದಿರ ಜಲಾವೃತ
ಬೆಳಗಾವಿ: ಕರ್ನಾಟಕದ ಗಡಿ ಭಾಗದ ಕೃಷ್ಣಾ ನದಿ ತಿರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ದತ್ತ ಮಂದಿರವು ಸಂಪೂರ್ಣವಾಗಿ ಜಲಾವೃತಗೊಂಡು ಭಕ್ತರಿಗೆ ನಿಷೇದ ಹೆರಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೊಂಕಣ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಸದ್ ಕೃಷ್ಣಾ ನದಿಗೆ ಬರೋಬ್ಬರಿ 1 ಲಕ್ಷ 35 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು …
Read More »ಗಡಿ ಕನ್ನಡಿಗರ ಸಮಸ್ಯೆ ಸಿಎಂ ಗಮಕ್ಕೆ ತರಲು ಮಹತ್ವದ ಸಭೆ ನಡೆಸಿದ ಕನ್ನಡ ಸಂಘಟನೆಗಳು
ಬೆಳಗಾವಿ: ಗುರುವಾರ ಬೆಳಗಾವಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತರಬೇಕಾದ ಗಡಿ ಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಬುಧವಾರ ಮುಂಜಾನೆ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿದ್ದ ಕನ್ನಡ ಸಂಘಟನೆಗಳು ಸುದೀರ್ಘವಾಗಿ ಚರ್ಚಿಸಿದವು. ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ನಡೆದ ಚರ್ಚೆಗಳು, ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ ನೂರು ದಿನಗಳಿಂದಲೂ ನಡೆದಿರುವ …
Read More »
Laxmi News 24×7