Breaking News

Laxminews 24x7

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ; ಸ್ವಪಕ್ಷ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ರವಿಕುಮಾರ್ ಗಣಿಗ

ಬೆಂಗಳೂರು: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಇದೀಗ ಸ್ವಪಕ್ಷದ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ಮಂಡ್ಯದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ  ಸರ್ಕಾರದ ನಡೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ರವಿಕುಮಾರ್ ಗಣಿಗ, ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮ ರಾಜ್ಯದ ರೈತರಿಗೆ ಬೆಳೆಗಳಿಗೆ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾದರೆ ಸಮಸ್ಯೆ ಮತ್ತಷ್ಟು …

Read More »

ಬೆಂಗಳೂರಿನಲ್ಲಿ 911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ – ಗೃಹ ಇಲಾಖೆ ಅಂಕಿಅಂಶ ಬಿಡುಗಡೆ

ಬೆಂಗಳೂರು: ನಗರದಲ್ಲಿ ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು ಸರ್ಕಾರ ಒಪ್ಪಿಕೊಂಡಿದೆ. ವಿಧಾನ ಪರಿಷತ್ ‌ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಗೋಪಿನಾಥ್ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಇಲಾಖೆ ಸಚಿವರು ಉತ್ತರ ನೀಡಿದ್ದಾರೆ. ಅಕ್ರಮ ವಲಸಿಗ ನುಸುಳುಕೋರರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಸ್ಪೋಟಕ ಮಾಹಿತಿಯನ್ನು ನೀಡಿದೆ. ಬೆಂಗಳೂರಿನಲ್ಲಿ ವೀಸಾ, ಪಾಸ್‌ಪೋರ್ಟ್ ಅವಧಿ ಇರುವ ವಿದೇಶಿಗರು 5304 ಜನ ಇದ್ದಾರೆ. ವೀಸಾ, ಪಾಸ್‌ಪೋರ್ಟ್ ಅವಧಿ ಮೀರಿದ್ದರೂ ಅಕ್ರಮವಾಗಿ 446 ವಿದೇಶಿಗರು ಇದ್ದಾರೆ. …

Read More »

ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌

ಚಿಕ್ಕಮಗಳೂರು: ರೀಲ್ಸ್‌ಗಾಗಿ  3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌  ಕೊಂಡೋಯ್ದು ಪ್ರವಾಸಿಗರು ಹುಚ್ಚಾಟ ಮೆರೆದ ಘಟನೆ ಮೂಡಿಗೆರೆ  ತಾಲೂಕಿನ ರಾಣಿಝರಿಯಲ್ಲಿ ನಡೆದಿದೆ. ಅಪಾಯಕಾರಿ ಸ್ಥಳಕ್ಕೆ ಕೊಂಡೊಯ್ದ ಥಾರ್‌ ವಾಹನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೀಜ್‌ ಮಾಡಿದ್ದಾರೆ. ಬೆಂಗಳೂರು ಮೂಲದ ಪ್ರವಾಸಿಗರು ಥಾರ್‌ ಜೀಪ್‌ನಲ್ಲಿ ರಾಣಿಝರಿಗೆ ಭೇಟಿ ನೀಡಿದ್ದರು. ಈ ವೇಳೆ ರೀಲ್ಸ್‌ಗಾಗಿ ಅಪಾಯಕಾರಿ ಬೆಟ್ಟದ ತುದಿಗೆ ಥಾರ್‌ನ್ನು ಕೊಂಡೊಯ್ದಿದ್ದರು. ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಅಧಿಕಾರಿಗಳು ಥಾರ್‌ನ್ನು …

Read More »

ತೆರೆದ ಚರಂಡಿಗೆ ಬಿದ್ದ 8 ವರ್ಷದ ಬಾಲಕ; ಮಗನ ಸಾವಿನ ಸುದ್ದಿ ಕೇಳಿ ತಾಯಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ

ಲಕ್ನೋ: ಉತ್ತರ ಪ್ರದೇಶದ ರಾಮ್‌ಪುರದಲ್ಲಿ ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ತೆರೆದ ಚರಂಡಿಗೆ ಬಿದ್ದು 8 ವರ್ಷದ ಬಾಲಕ  ಮೃತಪಟ್ಟಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದು ತಾಯಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಘಟನೆ ನಡೆದಿದೆ. ರಾಮ್‌ಪುರದ ಕೊತ್ವಾಲಿ ಸಿವಿಲ್ ಲೈನ್ಸ್ ವ್ಯಾಪ್ತಿಯ ಅಜಿತ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಜಮೀರ್ ಅಹ್ಮದ್ ಅವರ ಮಗ ಅಮನ್ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ. ಶಾಲೆ ಮುಗಿಸಿ ತನ್ನ ಅಣ್ಣನೊಂದಿಗೆ ಮನೆಗೆ …

Read More »

ಷೇರು ಮಾರುಕಟ್ಟೆಯಲ್ಲಿ ಲಾಸ್; ಮಕ್ಕಳಿಬ್ಬರ ಸಹಿತ ದಂಪತಿ ಮಿಸ್ಸಿಂಗ್

ದಾವಣಗೆರೆ: ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಪೋಷಕರಿಗೆ ಹೇಳಿ ಮನೆಯಿಂದ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕುಟುಂಬದ ನಾಲ್ವರು ಸದಸ್ಯರ ಮೊಬೈಲ್‌ಗಳು ಸ್ವಿಚ್‌ಆಫ್ ಆಗಿರುವುದು ಆತಂಕ ಮತ್ತಷ್ಟು ಹೆಚ್ಚಿಸಿದೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ವಾಸವಾಗಿದ್ದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ನಾಪತ್ತೆಯಾದವರು. ಮೂಲತಃ ದಾವಣಗೆರೆ ತಾಲೂಕಿನ …

Read More »

SBI ಗ್ರಾಹಕರಿಗೆ ಶಾಕ್ – ಅ.1 ರಿಂದ 4ಕ್ಕಿಂತ ಹೆಚ್ಚು ಬಾರಿ ಕ್ಯಾಶ್ ವಿತ್‌ಡ್ರಾ ಮಾಡಿದ್ರೆ 15 ರೂ. ಶುಲ್ಕ

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (SBI) ತನ್ನ ಮೂಲ ಉಳಿತಾಯ ಬ್ಯಾಂಕ್ ಠೇವಣಿ  ಖಾತೆಗಳಿಗೆ ಅನ್ವಯವಾಗುವ ನಗದು ಹಿಂಪಡೆಯುವ (ಕ್ಯಾಶ್ ವಿತ್‌ಡ್ರಾ) ಶುಲ್ಕದಲ್ಲಿ ಪರಿಷ್ಕರಣೆ ಮಾಡಿದೆ. ಈ ಪರಿಷ್ಕೃತ ಶುಲ್ಕವು ಅಕ್ಟೋಬರ್ 1 ರಿಂದಲೇ ಜಾರಿಗೆ ಬರಲಿದೆ. ಈ ಬಗ್ಗೆ ಭಾರತೀಯ ಸ್ಟೇಟ್‌ ಬ್ಯಾಂಕ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ATM ಗಳಲ್ಲಿ ತಿಂಗಳಿಗೆ 4 ಬಾರಿ ಮಾತ್ರ ನಗದು ಹಿಂಪಡೆಯುವ ವ್ಯವಹಾರಗಳು ಉಚಿತವಾಗಿರಲಿವೆ. 4ಕ್ಕಿಂತ ಹೆಚ್ಚು …

Read More »

ಕೂಲಿಕಾರರಿಗೆ ವಿಬಿ-ಜಿ ರಾಮ್‌ಜಿ ಕೆಲಸ ಖಾತ್ರಿ

ಬೆಳಗಾವಿ :ಉದ್ಯೋಗದ ಬೇಡಿಕೆ ಸಲ್ಲಿಸುವ ಕೂಲಿಕಾರರಿಗೆ ವಿಳಂಬ ಮಾಡದೆ ಕೆಲಸ ಕಲ್ಪಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷೃ ಆಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸುಚಿಸಿದರು. ಬೆಳಗಾವಿ ತಾಲೂಕಿನ ನೀಲಜಿ, ಹೊನಗಾ ಗ್ರಾಪಂ ವ್ಯಾಪ್ತಿಯಲ್ಲಿ  ವಿಕ್ಷಿತ್ ಭಾರತ್ ಗ್ಯಾರಂಟಿಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ( ವಿಬಿ-ಜಿ ರಾಮ್‌ಜಿ) ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ,ಕೂಲಿಕಾರರ ಹಾಜರಾತಿ,  ಕಾಯಕ ಬಂಧುಗಳ ಮೊಬೈಲ್‌ನಲ್ಲಿ ಎನ್‌ಎಂಎಂಎಸ್ ಹಾಜರಾತಿ …

Read More »

ಗುಂಡಿ ಮುಕ್ತ ಬೆಳಗಾವಿಗೆ ಶಾಸಕ ಅಸೀಫ್ ಸೇಠ್ ಕರೆ

ಬೆಳಗಾವಿ: ಬೆಳಗಾವಿ ಉತ್ತರ ಮತ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ಶಾಸಕ ಆಸಿಫ್ (ರಾಜು) ಸೇಠ್ ಅವರು “Pothole-Free Belagavi” ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಆಸಿಫ್ (ರಾಜು) ಸೇಠ್ ಅವರು, ಕ್ಷೇತ್ರದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಹಾಗೂ ಸುರಕ್ಷತಾ ಸಮಸ್ಯೆಗಳ ಕುರಿತು ನಿವಾಸಿಗಳು ನಿರಂತರವಾಗಿ ತಮ್ಮ ಗಮನಕ್ಕೆ ತರುತ್ತಿದ್ದಾರೆ …

Read More »

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: 49 ಲೀಟರ್ ಕಳ್ಳಭಟ್ಟಿ ಸರಾಯಿ ವಶ, ಆರೋಪಿ ಬಂಧನ

ಬೆಳಗಾವಿ: ಅಬಕಾರಿ ಇಲಾಖೆಯ ಉನ್ನತಾಧಿಕಾರಿಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಭಾರಿ ಪ್ರಮಾಣದ ಕಳ್ಳಭಟ್ಟಿ ಸರಾಯಿಯನ್ನು ವಶಪಡಿಸಿಕೊಂಡು ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆಗಸ್ಟ್ 18, 2026 ರಂದು ಡಾ. ವೈ. ಮಂಜುನಾಥ (ಅಬಕಾರಿ ಅಪರ ಆಯುಕ್ತರು, ಅಪರಾಧ, ಬೆಳಗಾವಿ), ಎಫ್. ಎಚ್. ಚಲವಾದಿ (ಅಬಕಾರಿ ಜಂಟಿ ಆಯುಕ್ತರು, ಜಾರಿ ಮತ್ತು ತನಿಖೆ) ಅವರ ಮಾರ್ಗದರ್ಶನದಲ್ಲಿ ಹಾಗೂ ಸ್ವಪ್ನ ಆರ್. ಎಸ್. …

Read More »

ಹಿಂಡಲಗಾ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ಹಣಕ್ಕಾಗಿ ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯ ಬೆತ್ತಲೆ ವಿಡಿಯೋ ಕಾಲ್

ಬೆಳಗಾವಿ ಹಿಂಡಲಗಾ ಜೈಲಿನ ಹೊಸ ಕರ್ಮಕಾಂಡ ಬಯಲಾಗಿದೆ. ಜೈಲಿನಲ್ಲಿ ಅಧಿಕಾರಿಗಳೇ ಹಣಕ್ಕಾಗಿ ವಿವಿಧ ವಾಮಮಾರ್ಗಗಳ ಮೂಲಕ ಕೈದಿಗಳ ಜೀವ ಹಿಂಡುತ್ತಿದ್ದಾರೆ. ಜೈಲಿನ ಅಧಿಕಾರಿಗಳೇ ಹಣಕ್ಕಾಗಿ ಕೈದಿಗಳಿಗೆ ಮೊಬೈಲ್, ನಿಷೇಧಿತ ವಸ್ತುಗಳನ್ನು ತಂದು ಮಾರಾಟ ಮಾಡುತ್ತಾರೆ ಎಂದು ಯುವಕನೊಬ್ಬ ವಿಡಿಯೋ ಮೊಲಕ ಮಾಹಿತಿ ನೀಡಿದ್ದಾನೆ. ತುಮಕೂರು ಮೂಲದ ಸಾಯಿಕುಮಾರ್ ಎಂಬ ಯುವಕ 2024ರಲ್ಲಿ ಹಿಂಡಲಗಾ ಜೈಲಿನಲ್ಲಿ ಕೈದಿಯಾಗಿದ್ದ ಸಂದರ್ಭದಲ್ಲಿ ಅಲ್ಲಿ ನಡೆಯುತ್ತಿದ್ದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಹಿಂದಲಗಾ ಜೈಲಿನಲ್ಲಿ ವೇಶ್ಯಾವಾಟಿಕೆ …

Read More »