Breaking News

Laxminews 24x7

ವಯನಾಡಿನಲ್ಲಿ ಮೇಘಸ್ಫೋಟ – ಇಬ್ಬರು ಕಾರ್ಮಿಕರು ಜೀವಂತ ಸಮಾಧಿ; 30 ಮಂದಿ ಮಿಸ್ಸಿಂಗ್‌

ತಿರುವನಂತಪುರಂ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ …

Read More »

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ – ರಾಜ್ಯಕ್ಕೆ 1 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ದಾಖಲು

ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ 6 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ  ಪರಿಣಾಮ ಕರ್ನಾಟಕಕ್ಕೆ ಒಟ್ಟು 98 ಸಾವಿರದಿಂದ 1 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ದಾಖಲಾಗಿದ್ದು, ಕಳೆದ ಒಂದೇ ರಾತ್ರಿ ಕೃಷ್ಣಾ ನದಿಗೆ 28 ಸಾವಿರ ಕ್ಯೂಸೆಕ್ ನೀರು ಹೆಚ್ಚುವರಿಯಾಗಿ ಹರಿದು ಬಂದಿದೆ. ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ, ಘಟಪ್ರಭಾ, ಮಲಪ್ರಭಾ ಹಾಗೂ ಮಾರ್ಕಂಡೇಯ …

Read More »

ಅನೈತಿಕ ಸಂಬಂಧಕ್ಕೆ ಅಡ್ಡಿ – ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಂದ ನರ್ಸ್

ಹೈದರಾಬಾದ್: ಪ್ರಿಯಕರನೊಂದಿಗಿನ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಟಾಯ್ಲೆಟ್ ಕ್ಲೀನರ್  ಇಂಜೆಕ್ಟ್ ಮಾಡಿ ನರ್ಸ್ ಆಗಿರುವ ಪತ್ನಿಯೇ  ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ನಿಜಾಮಾಬಾದ್  ಜಿಲ್ಲೆಯ ನ್ಯಾಲ್ಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಶಾಂತ್ (35) ಹತ್ಯೆಯಾದ ಪತಿ. ಪ್ರಶಾಂತ್ ಇತ್ತೀಚೆಗಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದ. ಈ ವೇಳೆ ಪತ್ನಿ ಸಂಧ್ಯಾ ಮತ್ತು ಆಕೆಯ ಪ್ರಿಯಕರ ಅನಿಲ್ ನಡುವಿನ ಸಂಬಂಧಕ್ಕೆ ಆತ ಅಡ್ಡಿಯಾಗಿದ್ದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು …

Read More »

ಮಲೆನಾಡಲ್ಲಿ ಮಳೆಯಬ್ಬರ – ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ  ಜೀವಕಳೆ ಪಡೆದುಕೊಂಡಿದೆ. ಕಳೆದ 4 ದಿನದಿಂದ ಶಿವಮೊಗ್ಗದಲ್ಲಿ  ವ್ಯಾಪಕವಾಗಿ ಮಳೆಯಾಗುತ್ತಿದೆ. ಇದರ ಜೊತೆಗೆ ಶರಾವತಿ ಕಣಿವೆ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿಯೂ ನೀರು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಜೋಗ ಜಲಪಾತದ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದಾರೆ.

Read More »

ಹಿರಣ್ಯಕೇಶಿ ನದಿಗೆ ಒಳಹರಿವು ಹೆಚ್ಚಳ; ಧುಪದಾಳ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿನ ಮಳೆಯ ಕೊರತೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಬೆಳಗ್ಗೆ ಘಟಪ್ರಭಾ ಸಮೀಪದ ಧುಪದಾಳ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟ, ಒಳಹರಿವು ಹಾಗೂ ನೀರು ನಿರ್ವಹಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, ಮುಂಗಾರು ವಿಳಂಬದಿಂದ ರೈತರು ಹಾಗೂ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕ ಈಗ ದೂರವಾಗತೊಡಗಿದೆ. ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿರುವ ಪರಿಣಾಮ …

Read More »

ಹಾವೇರಿಯಲ್ಲಿ ಮೋಡ ಬಿತ್ತನೆಗೆ ಚಾಲನೆ – ಅಗತ್ಯವಿದ್ದರೆ ರಾಜ್ಯದೆಲ್ಲೆಡೆ ವಿಸ್ತರಿಸಲು ಚಿಂತನೆ: ಸತೀಶ್ ಜಾರಕಿಹೊಳಿ

ಹಾವೇರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಹೆಚ್.ಕೆ. ಪಾಟೀಲ್, ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆ ತೀವ್ರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಮೋಡ ಬಿತ್ತನೆ ಕಾರ್ಯಕ್ರಮವನ್ನು ಆರಂಭಿಸಬೇಕು ಎಂದು …

Read More »

ಪತ್ನಿ ಮನೆಗೆ ಬರಲಿಲ್ಲವೆಂದು ಡಬಲ್‌ ಮರ್ಡರ್‌; ಕೊಲೆ ಬಳಿಕ ಪೊಲೀಸರಿಗೆ ಶರಣಾದ ಗಂಡ

ಚಿಕ್ಕಬಳ್ಳಾಪುರ: ಚಿಂತಾಮಣಿ  ನಗರದ ಜೆಜೆ ಕಾಲೋನಿಯಲ್ಲಿ ನಡೆದಿದ್ದ ಅಕ್ಕ-ತಂಗಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಹೊರಬಿದ್ದಿದೆ. ಪತ್ನಿ ತವರು ಮನೆಯಿಂದ ಮತ್ತೆ ಮನೆಗೆ ಬರಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಪತಿ ಏಜಾಜ್, ಪತ್ನಿ ಶಮಾ ಹಾಗೂ ಆಕೆಯ ತಂಗಿ ರೇಷ್ಮಾಳನ್ನು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಶಮಾ ಮತ್ತು ಏಜಾಜ್‌ಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಕಳೆದ …

Read More »

ಮಹಾ’ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆ – ಹಲವೆಡೆ ಭೂಕುಸಿತ, ಮುಂಬೈ-ಪುಣೆ ರೈಲ್ವೆ ಸಂಚಾರ ಸ್ಥಗಿತ

ಮುಂಬೈ: ಮಹಾರಾಷ್ಟ್ರದಲ್ಲಿ  ಭೀಕರ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಪ್ರತಿಷ್ಠಿತ ಏರಿಯಾಗಳೆಲ್ಲಾ ಜಲಾವೃತವಾಗಿದೆ. ಮಂಖುರ್ಡ್ ಪ್ರದೇಶದಲ್ಲಿ ಭಾರಿ ಮಳೆಯ ನಡುವೆ ಛಾವಣಿಯ ಒಂದು ಭಾಗ ಕುಸಿದು 6 ಜನರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಗೆ ಗಾಯವಾಗಿದೆ. ಭೂಕುಸಿತದಿಂದಾಗಿ ಪುಣೆಯ  ಮಾವಲ್ ಗ್ರಾಮದಲ್ಲಿ ಹಲವು ಮನೆ ಮುಚ್ಚಿಹೋಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 23ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮೇ ತಿಂಗಳಲ್ಲಿ ಲೋಕಾರ್ಪಣೆಗೊಂಡಿದ್ದ ಪುಣೆ-ಮುಂಬೈ ಎಕ್ಸ್ಪ್ರೆಸ್‌ವೇ ಖೋಪೋಲಿ-ಕುಸ್ಗಾಂವ್ ಸಮೀಪದ `ಮಿಸ್ಸಿಂಗ್ ಲಿಂಕ್’ ಟನಲ್ 2ರ …

Read More »

SIR ಕರ್ತವ್ಯ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು

ಶಿವಮೊಗ್ಗ: ಎಸ್‌ಐಆರ್‌  ಕಾರ್ಯಚರಣೆ ವೇಳೆ ಮತ್ತೋರ್ವ ಬಿಎಲ್‌ಒ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತ BLO. ಮಂಜುಳಾ ಅವರು ಅರಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್‌ಐಆರ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಇಂದು (ಜು.6) ಮಧ್ಯಾಹ್ನ ಏಕಾಏಕಿ ಕುಸಿದು …

Read More »

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 80 ಸಾವಿರ ರೂ. ಹಣ ಕಳ್ಳತನವಾಗಿತ್ತು. ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ಎಷ್ಟೇ ಹುಡುಕಾಟ ನಡೆಸಿದರೂ ಹಣ …

Read More »