Breaking News

Laxminews 24x7

ಮಹಿಳೆಯರಿಗಾಗಿ ಗ್ಯಾರಂಟಿ ಮಾತ್ರವಲ್ಲದೇ ಹತ್ತಾರು ಯೋಜನೆ ಜಾರಿ ಮಾಡಲಿದ್ದೇವೆ: ಡಿಕೆಶಿ

ಬೀದರ್: ಗ್ಯಾರಂಟಿ ಮಾತ್ರವಲ್ಲದೆ ಮಹಿಳೆಯರಿಗಾಗಿ ಹತ್ತಾರು ಯೋಜನೆ ಜಾರಿಗೊಳಿಸಲಿದ್ದೇವೆ, ನಿಮ್ಮ ಜೊತೆಗೆ ಡಿಕೆಶಿ ಹಾಗೂ ಸರ್ಕಾರ ಸದಾ ಇರಲಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಬಸವಕಲ್ಯಾಣದಲ್ಲಿ ಆಯೋಜಿಸಲಾಗಿದ್ದ ಅಕ್ಕಪಡೆ ಮಹಿಳಾ ಶಕ್ತಿ ಪ್ರದರ್ಶನ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಮತ್ತು ಡಿಸಿಎಂ ಜಿ.ಪರಮೇಶ್ವರ್  ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ನೂತನ ಲೋಗೋವನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಅಕ್ಕಪಡೆಯಿಂದ ರೋಮಾಂಚನಕಾರಿ …

Read More »

ಮರು SIR ಒಪ್ಪದ ಕೇಂದ್ರ ಚುನಾವಣಾ ಆಯೋಗ – ಫೀಲ್ಡ್ ವೆರಿಫಿಕೇಶನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ  ಗಂಭೀರ ವಿವಾದ ಮತ್ತು ರಾಜಕೀಯ ಆರೋಪಗಳಿಗೆ ಕಾರಣವಾಗಿದ್ದು, ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ತಂಡ ಈ ಗೊಂದಲ ನಿವಾರಿಸಲು ಬೆಂಗಳೂರಿಗೆ ದೌಡಾಯಿಸಿದೆ. ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್ನೇ ತೃತ್ವದ ತಂಡ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ(GBA) ಕೇಂದ್ರ ಕಚೇರಿಯಲ್ಲಿ ರಾಜ್ಯ ಚುನಾವಣಾ ಅಧಿಕಾರಿಗಳು ಮತ್ತು ಜಿಬಿಎ ಆಡಳಿತಾಧಿಕಾರಿಗಳೊಂದಿಗೆ ಇಂದು ಮಹತ್ವದ ಹೈವೋಲ್ಟೇಜ್ ಸಭೆ ನಡೆಸಿದೆ. ವಿರೋಧ ಪಕ್ಷಗಳು ಮಾಡಿರುವ …

Read More »

ಪ್ರೀತಿ ವಿಚಾರದಲ್ಲಿ ಗಲಾಟೆ – ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚಾಕು ಇರಿತ

ಮಂಗಳೂರು: ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ  ಯುವಕನೊಬ್ಬ ಚಾಕು ಇರಿದ ಪ್ರಕರಣ ಬಂಟ್ವಾಳ ತಾಲೂಕಿನ ಇರಾದಲ್ಲಿ ನಡೆದಿದೆ. ಬಂಟ್ವಾಳದ ಮೊಂತಿಮಾರ್ ಪಡ್ಪುವಿನ ವ್ಯಾಪಾರಿ ಜವ್ವರ್ (28) ಚಾಕು ಇರಿದ ಆರೋಪಿ. ಪ್ರೀತಿ ವಿಚಾರದಲ್ಲಿ ಇಬ್ಬರ ನಡುವೆ ಆದ ಗಲಾಟೆಯೇ ಚಾಕು ಇರಿತಕ್ಕೆ ಕಾರಣ ಎನ್ನಲಾಗಿದೆ. ಚಾಕು ಇರಿದು ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಚಾಕು ಇರಿತದಿಂದ ಯುವತಿಯ ಕೈಗೆ ಗಾಯವಾಗಿದೆ. ತೀವ್ರ ರಕ್ತ ಸ್ರಾವವಾಗಿ ಬಸ್ ನಿಲ್ದಾಣದ …

Read More »

ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಹಾಸನ: ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಬೇಲೂರು (Belur) ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು ಹಾಗೂ ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶ ಹೊರಡಿಸಿದ್ದಾರೆ. ಈ ಭಾಗಗಳಲ್ಲಿ ಹೆಚ್ಚು …

Read More »

ಧಾರಾಕಾರ ಮಳೆಗೆ ನಡುಗಿದ ಮಲೆನಾಡು, ಕರಾವಳಿ- ಮಂಗಳವಾರ ಎಲ್ಲೆಲ್ಲಿ ರಜೆ?

ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಮುಂದುವರಿದಿರುವ ಭಾರೀ ಮಳೆ (Heavy Rain) ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ವಿವಿಧ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಶಿರಸಿ, ಸಿದ್ದಾಪುರ, …

Read More »

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡವೇ ಬೇಡ: ಯದುವೀರ್

ಮಡಿಕೇರಿ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ  ಸ್ಪರ್ಧೆ ಆಯೋಜಿಸುವ ವಿಚಾರಕ್ಕೆ ಕೊಡಗು–ಮೈಸೂರು ಸಂಸದ ಯದುವೀರ್ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಕಂಬಳವು ಕೇವಲ ಕ್ರೀಡೆಯಲ್ಲ. ಅದು ಕರಾವಳಿಯ ಧಾರ್ಮಿಕ ನಂಬಿಕೆ ಮತ್ತು ಸಂಪ್ರದಾಯದೊಂದಿಗೆ ಬೆಸೆದುಕೊಂಡಿರುವ ಆಚರಣೆ. ಅದನ್ನು ದಸರಾ ವೇದಿಕೆಗೆ ತರುವುದು ಸೂಕ್ತವಲ್ಲ. ಅದನ್ನು ಬೇರೆಡೆಗೆ ತಂದು ವಾಣಿಜ್ಯೀಕರಣ ಮಾಡುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ದಸರಾ ಸಂದರ್ಭದಲ್ಲಿ ಟಿಕೆಟ್ ವ್ಯವಸ್ಥೆ, ಯುವ …

Read More »

ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ – ಬದುಕಿದ್ದೇ ಪವಾಡ

ಗಾಂಧಿನಗರ: ಸಿಂಹವೊಂದು ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಗರಾಜಿಯಾ ಗ್ರಾಮದಲ್ಲಿ ನಡೆದಿದೆ. ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ಸಿಂಹ ದಾಳಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 46 ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ, ಸಿಂಹದ ಹಿಡಿತದಿಂದ ತಪ್ಪಿಸಿಕೊಳ್ಳಲು ಕಲುಭಾಯಿ ಒದ್ದಾಡುತ್ತಿರುವುದನ್ನು ನೋಡಬಹುದು. ಅವರ ಕಾಲುಗಳನ್ನು ಸಿಂಹ ಬಿಗಿಯಾಗಿ ಹಿಡಿದುಕೊಂಡಿತ್ತು. ಗ್ರಾಮಸ್ಥರು ಸಿಂಹವನ್ನು ಓಡಿಸಲು ಜೋರಾಗಿ ಕಿರುಚಾಡುತ್ತಿರುವುದು ಕೇಳಿಸುತ್ತದೆ. ಕೆಲವರು ಸಿಂಹದ …

Read More »

ಚಿಕ್ಕಬಳ್ಳಾಪುರದಲ್ಲಿ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಭೀಕರ ಅಪಘಾತ – ಚಾಲಕ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ಚಿಕ್ಕಬಳ್ಳಾಪುರ  ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಂಧ್ರಪ್ರದೇಶ  ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ …

Read More »

ಮುಧೋಳ ತಾಲೂಕಿನ ವಿವಿಧ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ

ಬಾಗಲಕೋಟೆ: ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಸಮಗ್ರವಾಗಿ ಪರಿಶೀಲಿಸಿದರು. ಆರಂಭದಲ್ಲಿ ಮಂಟೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಡಿಜಿಟಲ್ ಗ್ರಂಥಾಲಯವನ್ನು ವೀಕ್ಷಿಸಿ, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಹಾಗೂ ಯುವಜನರು ಡಿಜಿಟಲ್ ಗ್ರಂಥಾಲಯದ ಸೌಲಭ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವಂತೆ ಅರಿವು ಮೂಡಿಸಲು ಸೂಚಿಸಿದರು. ನಂತರ ಮಂಟೂರ ಕೆರೆಗೆ …

Read More »

ಮುರಗೋಡ-ಹೊಸಳ್ಳಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಭೂಮಿಪೂಜೆ

ಮುರಗೋಡ: ಗ್ರಾಮಿಣ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳಿಂದ ದೇಶದ ಪ್ರಗತಿ ಸಾಧ್ಯ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಮುರಗೋಡ-ಹೊಸಳ್ಳಿ ವ್ಯಾಪ್ತಿಯ ಹಿರೇಕೊಪ್ಪ, ಚಿಕ್ಕೊಪ್ಪ ಮತ್ತು ಹುಲಿಕೇರಿ ತಾಂಡಾಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು. ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿ …

Read More »