Breaking News

Laxminews 24x7

ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಮೈಸೂರು: ನಾನೂ ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ಹೋಗಿದ್ದೆ. ಅಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಆಗಿಲ್ಲ, ಇದೆಲ್ಲ ಮಾಧ್ಯಮದವರ ಸೃಷ್ಟಿ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ಹೋಗಿದ್ದೆ. ಅಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ. ಎಲ್ಲರೂ ಊಟಕ್ಕೆ ಮಾತ್ರ ಸೇರಿದ್ದೆವು. ಇನ್ನು, ನವೆಂಬರ್‌ ಕ್ರಾಂತಿ ಎಂಬುದು ಮಾಧ್ಯಮದವರ ಸೃಷ್ಟಿ ಎಂದು ಹೇಳಿದರು. ಸಚಿವ ಪ್ರಿಯಾಂಕ್​ …

Read More »

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸದ್ಯ ಹಾಲಿ – ಮಾಜಿ ಶಾಸಕರ ದಂಡೇ ದುಂಬಾಲು ಬಿದ್ದಿದೆ.

ಬೆಳಗಾವಿ : ಅದೊಂದು ಕಾಲ ಇತ್ತು, ಜಿಲ್ಲೆಯ ಪ್ರಭಾವಿ ನಾಯಕರ ಶಿಷ್ಯರು, ಆಪ್ತರು, ದ್ವಿತೀಯ ಸಾಲಿನ ನಾಯಕರು ಮತ್ತು ಕಾರ್ಯಕರ್ತರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆ ಆಗುತ್ತಿದ್ದರು. ಆದರೆ, ಸದ್ಯ ಹಾಲಿ – ಮಾಜಿ ಶಾಸಕರ ದಂಡೇ ಅಧಿಕಾರಕ್ಕಾಗಿ ದುಂಬಾಲು ಬಿದ್ದಿದೆ. ಅದರಲ್ಲೂ ಪ್ರಭಾವಿ ಕುಟುಂಬಗಳೂ ಪೈಪೋಟಿಗೆ ಬಿದ್ದಿದ್ದು,  ವಿಸ್ತೃತ ವರದಿ ಇಲ್ಲಿದೆ. ಮಾಜಿ ಇದ್ದವರು ಹಾಲಿ ಆಗಲು ಇದು ಸಹಕಾರಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(ಡಿಸಿಸಿ) ಜಿಲ್ಲಾ ರಾಜಕಾರಣದ …

Read More »

ವಿಜಯಪುರಕಲಿಯುಗ ಕುಡುಕ ಖ್ಯಾತಿಯ ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ

ವಿಜಯಪುರಕಲಿಯುಗ ಕುಡುಕ ಖ್ಯಾತಿಯ ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ* ಹಿರಿಯ ರಂಗಭೂಮಿ ಕಲಾವಿದ ಹಾಗೂ ಹಾಸ್ಯ ನಟ ರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದವರಾದ ಇವರು, ರಂಗಭೂಮಿಯಲ್ಲಿ ಹೆಸರು ಮಾಡಿದ ನಂತರ ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಅನೇಕ ಚಿತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ಇನ್ನೂ ರಾಜು ತಾಳಿಕೋಟೆ ನಿಧನರಾಗಿದ್ದಾರೆ ವೃತ್ತಿ ರಂಗಭೂಮಿ ಚಲನಚಿತ್ರ ಹಾಗೂ …

Read More »

ಕಾಗವಾಡದ ಶಿರುಗುಪ್ಪಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಗಂಗಾಮಕ್ಕೆ ಚಾಲನೆ.

——————————– ಕಾಗವಾಡ ತಾಲೂಕಿನ ಶಿರುಗುಪ್ಪಿ ಸಕ್ಕರೆ ಕಾರ್ಖಾನೆ 13ನೆ ಕಬ್ಬು ನುರಿಸುವ ಹಂಗಾಮಕ್ಕೆ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು, ಮಾಜಿ ಶಾಸಕ ಕಲ್ಲಪ್ಪಣ್ಣಾ ಮಗ್ಗೆನವರ ಇವರ ಹಸ್ತ ಯಿಂದ ಚಾಲನೆ ನೀಡಲಾಯಿತು. ಸೋಮವಾರ ರಂದು ಬೆಳಗ್ಗೆ ಸಕ್ಕರೆ ಕಾರ್ಖಾನೆಯ 13ನೇ ಕಬ್ಬು ನೂರುಸುವ ಹಂಗಾಮದ ಬಾಯ್ಲರ್ ಪೂಜೆ ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಇವರ ಸಾನಿಧ್ಯದಲ್ಲಿ ಪೂಜೆ ನೆರವೇರಿತು. ಸ್ವಾಮೀಜಿ ಆಶೀರ್ವದಿಸುತ್ತಿರುವಾಗ ಸಿರುಗುಪ್ಪಿ ಸಕ್ಕರೆ ಕಾರ್ಖಾನೆ, ಮಾಲೀಕರು ಕಳೆದ 12 …

Read More »

ಬೆಳಗಾವಿ ಡೆಕ್ಕನ್ ಮೆಡಿಕಲ್ ಸೇಂಟರ್ ಆಸ್ಪತ್ರೆಯ ರಜತ ಮಹೋತ್ಸವ

ಬೆಳಗಾವಿ ಡೆಕ್ಕನ್ ಮೆಡಿಕಲ್ ಸೇಂಟರ್ ಆಸ್ಪತ್ರೆಯ ರಜತ ಮಹೋತ್ಸವ 100 ಬೆಡ್ಡುಗಳಿಂದ 1000 ಬೆಡ್ಡಿನ ಆಸ್ಪತ್ರೆಯಾಗಿ ಇನ್ನಷ್ಟು ಉತ್ತಮ ಸೇವೆಯನ್ನು ನೀಡಲಿ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ ಡೆಕ್ಕನ್ ಮೆಡಿಕಲ್ ಸೇಂಟರ್ ಆಸ್ಪತ್ರೆಯ ರಜತ ಮಹೋತ್ಸವ 100 ಬೆಡ್ಡುಗಳಿಂದ 1000 ಬೆಡ್ಡಿನ ಆಸ್ಪತ್ರೆಯಾಗಲಿ ಜನರಿಗೆ ಇನ್ನಷ್ಟು ಉತ್ತಮ ಸೇವೆಯನ್ನು ನೀಡಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವೈದ್ಯಕೀಯ ಸೇವೆಗಳನ್ನು ಉನ್ನತಿಕರಿಸುವುದೇ ರಾಜ್ಯ ಸರ್ಕಾರದ ಗುರಿಯಾಗಿದೆ. ರಜತ ಮಹೋತ್ಸವವನ್ನು …

Read More »

ಬೆಳಗಾವಿಯ ಕಿಂಗ್‌ಮೇಕರ್ ಸಾಹುಕಾರ್ ಕುಟುಂಬ — ಮತ್ತೊಮ್ಮೆ ಸಾಬೀತು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ “ಯಾರು ಕಿಂಗ್?” ಎಂಬ ಪ್ರಶ್ನೆಗೆ ಮತ್ತೆ ಒಂದೇ ಉತ್ತರ ಸಿಕ್ಕಿದೆ — ಜಾರಕಿಹೊಳಿ ಕುಟುಂಬವೇ ಕಿಂಗ್‌ಮೇಕರ್! ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಪ್ಯಾನೆಲ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿ, ತಮ್ಮ ಪ್ರಭಾವವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಅಣ್ಣಾಸಾಹೇಬ್ ಜೊಲ್ಲೆ, ಹಾಗೂ ಲಖನ ಜಾರಕಿಹೊಳಿ ಅವರ ತಂತ್ರಜ್ಞಾನದ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಜಾರಕಿಹೊಳಿ ಶಕ್ತಿ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಕದನ: 9 ಮಂದಿ ಅವಿರೋಧ ಆಯ್ಕೆ, 7 ಕ್ಷೇತ್ರಗಳಲ್ಲಿ ಚುನಾವಣೆ!

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಈ ವೇಳೆ ಕೆಲವರು ನಾಮಪತ್ರ ಹಿಂಪಡೆಯುವ ಮೂಲಕ ಒಟ್ಟು 9 ಅಭ್ಯರ್ಥಿಗಳ ಅವಿರೋಧ ಆಯ್ಕೆ ಸ್ಪಷ್ಟವಾಗಿದೆ. ಇನ್ನುಳಿದಂತೆ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚಿಕ್ಕೋಡಿ ತಾಲೂಕಿನಿಂದ ಗಣೇಶ ಹುಕ್ಕೇರಿ, ಗೋಕಾಕ್​ನಲ್ಲಿ ಅಮರನಾಥ್ ಜಾರಕಿಹೊಳಿ, ಸವದತ್ತಿಯಲ್ಲಿ ವಿರೂಪಾಕ್ಷ ಮಾಮನಿ, ಯರಗಟ್ಟಿಯಿಂದ ವಿಶ್ವಾಸ ವೈದ್ಯ ಹಾಗೂ ಗೋಕಾಕ್​ನಿಂದ ಅಮರನಾಥ್ ಜಾರಕಿಹೊಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಈ ನಾಲ್ವರ ಅವಿರೋಧ ಆಯ್ಕೆ …

Read More »

ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!

ಬೆಂಗಳೂರು/ಮಂಗಳೂರು, (ಅಕ್ಟೋಬರ್ 13): ಗಡಿಪಾರು ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್  (Karnataka High Court) ಪುರಸ್ಕರಿಸಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಪೂರ್ಣಗೊಳಸಿದ್ದು, ಆದೇಶ ಕಾಯ್ದಿರಿಸಿದೆ. ಆದ್ರೆ, ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ. ಗಡಿಪಾರು ಜಾರಿಗೊಳಿಸದಂತೆ ಮಹತ್ವದ ಸೂಚನೆ ನೀಡಿದೆ. …

Read More »

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ವಿರುದ್ದ ಗಂಭೀರ ವಂಚನೆ ತನಿಖಾ ವಿಭಾಗದ ಕಚೇರಿಯಿಂದ (ಎಸ್‌ಎಫ್ಐಒ) ನಡೆಯುತ್ತಿರುವ ತನಿಖೆ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ, ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ನಿರ್ದೇಶಕಿ ವೀಣಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು …

Read More »