ಕೊಪ್ಪಳ: ಗವಿಸಿದ್ದೇಶ್ವರ ಸ್ವಾಮೀಜಿಗಳು ಈ ಬಾರಿ ಮೈಸೂರು ದಸರಾ ಉದ್ಘಾಟಿಸುತ್ತಿರುವ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಅವರು ಗವಿಮಠಕ್ಕೆ ಭೇಟಿ ನೀಡಿದ್ದಾರೆ. ಗವಿಸಿದ್ದೇಶ್ವರ ಶ್ರೀಗಳ ಮೌನವೃತದ ನಡುವೆಯೂ ಸಚಿವರು ಕೊಪ್ಪಳ ಗವಿಮಠಕ್ಕೆ ಭೇಟಿ ನೀಡಿ, ಶ್ರೀಗಳ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗವಿಸಿದ್ದೇಶ್ವರ ಸ್ವಾಮೀಜಿಗಳು ದಸರಾ ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ. ಮುಖ್ಯಮಂತ್ರಿಗಳು ಶ್ರೀಗಳ ಜೊತೆ ಮಾತನಾಡಿ, ಈ ವರ್ಷದ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಗವಿಮಠದ …
Read More »ಡೆಮು ರೈಲು ಡಿಕ್ಕಿ – 8 ಎಮ್ಮೆಗಳು ದುರ್ಮರಣ
ಬಳ್ಳಾರಿ: ವೇಗವಾಗಿ ಬಂದ ಡೆಮು ರೈಲೊಂದು ಹಳಿಗೆ ಅಡ್ಡ ಬಂದ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಎಂಟು ಎಮ್ಮೆಗಳು ಛಿದ್ರ ಛಿದ್ರವಾಗಿ ಸಾವನ್ನಪ್ಪಿರುವ ಧಾರುಣ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮೀಪ ನಡೆದಿದೆ. ಮರಿಯಮ್ಮನಹಳ್ಳಿ ಪಟ್ಟಣದ ನಿವಾಸಿ ಕಾಳಪ್ಪ ಎಂಬುವವರು ಎಂದಿನಂತೆ ತಮ್ಮ ಎಮ್ಮೆಗಳನ್ನು ಮೇಯಿಸಲು ಕರೆದೊಯ್ದಿದ್ದರು. ಈ ವೇಳೆ ರೈಲ್ವೆ ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಡೆಮು ಎಂಜಿನ್ ರೈಲು ಅಪ್ಪಳಿಸಿದೆ. ಡಿಕ್ಕಿಯ …
Read More »ಜನತೆಗೆ ಬೆಲೆ ಏರಿಕೆಯ ಬಿಸಿ: ನಂದಿನಿ ಹಾಲಿನ ದರ ಲೀಟರ್‌ಗೆ 4 ರಿಂದ 5 ರೂ. ಹೆಚ್ಚಳ?
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದ್ದು, ನಂದಿನಿ ಹಾಲಿನ ದರ ಏರಿಕೆ ಬಹುತೇಕ ನಿಶ್ಚಿತವಾಗಿದೆ. ಪ್ರತಿ ಲೀಟರ್ ಹಾಲಿನ ಬೆಲೆ 4 ರಿಂದ 5 ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ. ಬೆಂಗಳೂರಿನ ಕರ್ನಾಟಕ ಹಾಲು ಮಹಾಮಂಡಳ ಕಚೇರಿಯಲ್ಲಿ ಇಂದು ಮಹತ್ವದ ಸರ್ವಸದಸ್ಯರ ಸಭೆ ಜರುಗಿತು. ಸಭೆಯಲ್ಲಿ ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳ ಪ್ರಮುಖರು ಭಾಗವಹಿಸಿದ್ದು, ಹೈನುಗಾರರ ಹಿತದೃಷ್ಟಿಯಿಂದ ಪ್ರತಿ ಲೀಟರ್ ಹಾಲಿಗೆ ಕನಿಷ್ಠ …
Read More »ಜಿಲ್ಲಾ ಮಟ್ಟದ ದಸರಾ ಕಬಡ್ಡಿ ಗೆದ್ದ ಮಹಾವಿದ್ಯಾಲಯದ ಮಹಿಳಾ ತಂಡ
ಬಾಗಲಕೋಟೆ, 26: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಮಹಿಳೆಯರ ಕಬಡ್ಡಿ ಕ್ರೀಡಾಕೂಟದಲ್ಲಿ ಬಸವೇಶ್ವರ ಕಲಾ ಮಹಾವಿದ್ಯಾಲಯದ ಮಹಿಳಾ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಂದು ತಂಡದಂತೆ ಒಟ್ಟು 10 ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ರೋಚಕವಾಗಿ ನಡೆದ ಅಂತಿಮ ಪಂದ್ಯದಲ್ಲಿ ಬೀಳಗಿ ತಾಲೂಕಿನ ತೊಳಮಟ್ಟಿ ಗ್ರಾಮದ ತಂಡವನ್ನು 28-12 ಅಂತರದಿಂದ ಸೋಲಿಸುವ ಮೂಲಕ ಬಸವೇಶ್ವರ ಕಲಾ ಮಹಾವಿದ್ಯಾಲಯದ …
Read More »ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ – ಮಂತ್ರಾಲಯದಲ್ಲಿ ನದಿ ತೀರಕ್ಕೆ ತೆರಳದಂತೆ ಸೂಚನೆ
ರಾಯಚೂರು: ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಪರಿಣಾಮ ಮಂತ್ರಾಲಯದಲ್ಲಿ ನದಿ ತೀರಕ್ಕೆ ತೆರಳದಂತೆ ಮಠದ ಆಡಳಿತ ಮಂಡಳಿ ಭಕ್ತರಿಗೆ ಸೂಚನೆ ನೀಡಲಾಗಿದೆ. ತುಂಗಭದ್ರಾ ಜಲಾಶಯದಿಂದ ನದಿಗೆ 2,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಜೊತೆಗೆ ಮಳೆ ಬರುತ್ತಿರುವುದರಿಂದ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಮಂತ್ರಾಲಯದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಭದ್ರತೆಗಾಗಿ ಶ್ರೀರಾಘವೇಂದ್ರ ಸ್ವಾಮಿಗಳ ಮಠದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮಠದ ಆಡಳಿತ ಮಂಡಳಿ ಹಾಗೂ ಮಂತ್ರಾಲಯ ಪೊಲೀಸರಿಂದ …
Read More »650 ವರ್ಷಗಳ ಹಿಂದಿನ ಶಿವಲಿಂಗ ಪತ್ತೆ; ಕಾಡುಪಾಲಾಗಿದ್ದ ಮಹದೇವ ದೇಗುಲ ಪುನರುಜ್ಜೀವನಕ್ಕೆ ಗ್ರಾಮಸ್ಥರ ಸಂಕಲ್ಪ
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಹೊರವಲಯದ ಐಮಂಗಲ ಗ್ರಾಮದಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ. ಸುಮಾರು 650 ವರ್ಷಗಳ ಹಿಂದಿನ ಮಹದೇವ ದೇವಾಲಯ ಇಲ್ಲಿ ಇತ್ತು ಎಂಬ ನಂಬಿಕೆ ಗ್ರಾಮಸ್ಥರಲ್ಲಿ ಮೂಡಿದ್ದು, ಕಾಡುಪಾಲಾಗಿದ್ದ ದೇವಾಲಯವನ್ನು ಪುನರುಜ್ಜೀವನಗೊಳಿಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಐಮಂಗಲ ಗ್ರಾಮದಿಂದ ಚೆಂಬೆಬೆಳ್ಳೂರು ರಸ್ತೆಯಲ್ಲಿ ಸುಮಾರು 3 ಕಿಲೋಮೀಟರ್ ದೂರದಲ್ಲಿರುವ ಕಾಡಿನ ಪ್ರದೇಶದಲ್ಲಿ ಶಿವಲಿಂಗ, ಬಸವ ಮೂರ್ತಿ, ಗರ್ಭಗುಡಿಯ ಕುರುಹು, ತೀರ್ಥಕುಂಡ ಸೇರಿದಂತೆ ಹಲವು ಅವಶೇಷಗಳು ಪತ್ತೆಯಾಗಿವೆ. ಚಳಿ, ಮಳೆ, ಗಾಳಿ, …
Read More »ತಾಯಿಯ ಸಾವಿನಲ್ಲೂ ಸಾರ್ಥಕತೆ ಮೆರೆದ ಮಕ್ಕಳು; 7-8 ಜನರ ಬಾಳಿಗೆ ಬೆಳಕಾದ ಕುಸುಮಾ!
ಆನೇಕಲ್: ತಾಯಿಯ ಸಾವಿನ ನೋವಿನ ನಡುವೆಯೂ ಇಬ್ಬರು ಪುಟ್ಟ ಮಕ್ಕಳು ಹಾಗೂ ಪತಿ ಕೈಗೊಂಡ ಮಹತ್ವದ ನಿರ್ಧಾರ ಹಲವರ ಬದುಕಿಗೆ ಹೊಸ ಆಶಾಕಿರಣವಾಗಿದೆ. ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬ ಸಾರ್ಥಕತೆ ಮೆರೆದಿದೆ. ಜಿಗಣಿ ಸಮೀಪದ ಹಾರಗದ್ದೆಯ ದ್ಯಾವಸಂದ್ರ ಗ್ರಾಮದ ನಿವಾಸಿ ಕುಸುಮಾ (39) ಅಂಗಾಂಗ ದಾನ ಮಾಡಿದ ಮಹಿಳೆ. ಖಾಸಗಿ ಕಂಪನಿಯೊಂದನ್ನ ನಡೆಸುತ್ತಿದ್ದ ಕುಸುಮಾ ಅವರ ಪತಿ ಜಯಶಂಕರ್. ದಂಪತಿಗೆ ಓರ್ವ ಹೆಣ್ಣು ಹಾಗೂ …
Read More »ಸರ್ಕಾರದಿಂದ ಬಾರದ ಕೋಟ್ಯಂತರ ರೂಪಾಯಿ ಅನುದಾನ – ಪತ್ರ ಬರೆದು ಕೆಆರ್‌ಐಡಿಎಲ್ ಎಇಇ ನಾಪತ್ತೆ!
ಗದಗ: ರಾಜ್ಯ ಸರ್ಕಾರದ ಅನುದಾನ ಬಾರದಕ್ಕೆ ಪತ್ರ ಬರೆದು KRIDL ಎಇಇ (ಸಹಾಯಕ ಕಾರ್ಯಪಾಲಕ ಎಂಜಿನಿಯರ್) ಅಧಿಕಾರಿ ನಾಪತ್ತೆಯಾದ ಘಟನೆ ಗದಗನಲ್ಲಿ ನಡೆದಿದೆ. ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗದೇ ಉಂಟಾದ ಆರ್ಥಿಕ ಸಂಕಷ್ಟವೇ ಅಧಿಕಾರಿಯ ನಾಪತ್ತೆಗೆ ಕಾರಣ ಎನ್ನುವ ಪ್ರಶ್ನೆ ಇದೀಗ ಕಾಡುತ್ತಿದೆ. ಬೆಂಗಳೂರಿನ ಕೆಆರ್‌ಐಡಿಎಲ್‌ನ ಇಇ ಅವರಿಗೆ ಪತ್ರ ಬರೆದು ಫರ್ವೀಜ್ ನಾಪತ್ತೆಯಾಗಿದ್ದಾರೆ. ಪತ್ರದಲ್ಲಿ ಅನುದಾನ ಬಿಡುಗಡೆಯಾಗದಿರುವ ಕುರಿತು ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಕಾರಣ ತಾವು …
Read More »ಒಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಚ್.ಹೊಸಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನಸಾಮಾನ್ಯರು ಹಾಗೂ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ ಒಂದು ತಿಂಗಳಿಂದ ಹೆಚ್.ಹೊಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷವಾಗಿ ನಿರಂತರ ಭಯದ ವಾತಾವರಣ ಸೃಷ್ಟಿಸಿತ್ತು. ಈ ಚಿರತೆಯು ಈವರೆಗೆ ಒಟ್ಟು 8 ಮೇಕೆಗಳು, 2 ನಾಯಿಗಳು, 1 ಹಸುವಿನ ಕರು ಹಾಗೂ 1 ಎಮ್ಮೆ ಕರುವನ್ನು ಬೇಟೆಯಾಡಿ ತಿಂದಿತ್ತು. …
Read More »ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವ ತಿರಸ್ಕರಿಸಿದ ಟ್ರಂಪ್ – ಮಧ್ಯಂತರ ಚುನಾವಣೆ ಬಳಿಕ ಮತ್ತೆ ಬಾಂಬ್ ದಾಳಿ?
ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ನೀಡಿದ್ದ 7 ದಿನಗಳ ಕದನ ವಿರಾಮ ಪ್ರಸ್ತಾವವನ್ನ ತಿರಸ್ಕರಿಸಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕದ ಮಧ್ಯಂತರ ಚುನಾವಣೆಗಳ ಬಳಿಕ ಇರಾನ್ ಮೇಲೆ ಅಮೆರಿಕದ ಬಾಂಬ್ ದಾಳಿ ಮತ್ತೆ ಆರಂಭವಾಗಲಿದೆ. ಈ ಬಗ್ಗೆ ಟ್ರಂಪ್ ತಮ್ಮ ಸಹಾಯಕರಿಗೆ ತಿಳಿಸಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ತನ್ನ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವುಗೊಳಿಸಿದರೆ, ಹಾರ್ಮುಜ್ ಜಲಸಂಧಿಯನ್ನ ಮತ್ತೆ …
Read More »
Laxmi News 24×7