Breaking News

Laxminews 24x7

ಬೆಳಗಾವಿ: ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ. ಇವರ ವಿರುದ್ಧ 132 ಪ್ರಕರಣಗಳಿವೆ ಎಂದು ಬೆಳಗಾವಿ ಎಸ್​​ಪಿ ಡಾ.ಸಂಜೀವ್ ಪಾಟೀಲ ಮಾಹಿತಿ ನೀಡಿದರು.

  ಬೆಳಗಾವಿ: ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ. ಇವರ ವಿರುದ್ಧ 132 ಪ್ರಕರಣಗಳಿವೆ ಎಂದು ಬೆಳಗಾವಿ ಎಸ್​​ಪಿ ಡಾ.ಸಂಜೀವ್ ಪಾಟೀಲ ಮಾಹಿತಿ ನೀಡಿದರು.         ಬೆಳಗಾವಿ ಜಿಲ್ಲೆಯ ಅಥಣಿ ಉಪವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಉಗಾರ ಬಿ.ಕೆ.ಗ್ರಾಮದ ಮಹಾದೇವ ಕಾಂಬಳೆ, ಕೋಹಳಿ ಗ್ರಾಮದ ರವಿ ಶಿಂಗೆ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ, …

Read More »

1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಚಾಲನೆ

    ಯಮಕನಮರಡಿ: ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜಿ ಮಾಡಿಕೊಳ್ಳದೇ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಹೆಬ್ಬಾಳ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಉಳ್ಳಾಗಡಿ ಖಾನಾಪುರದಿಂದ ರಾಷ್ಟ್ರೀಯ ಹೆದ್ದಾರಿ NH 4 ವರೆಗಿನ 1 ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.   ಇದೇ …

Read More »

ಬಂಡೇಮಠ ಶ್ರೀಗಳ ಆತ್ಮಹತ್ಯೆ ಕೇಸ್- ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್

ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ (BandeMutt Basavalinga Swamji) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಯಾಗಿರುವ ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್ ನೀಡಲಾಗಿದೆ.   ಡೆತ್‍ನೋಟ್‍ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಉಲ್ಲೇಖ ಆಗಿದ್ದರಿಂದ ಮಾಗಡಿ ಪೋಲಿಸರು (Magadi Police) ನೋಟಿಸ್ ನೀಡಿದ್ದಾರೆ. ಸಚ್ಚಿದಾನಂದ ಮೂರ್ತಿಯಿಂದಲೂ ಅಪಪ್ರಚಾರ ಎಂದು ಬಸವಲಿಂಗ ಶ್ರೀಗಳು ಬರೆದಿದ್ದರು. ಹೆಸರು ಪ್ರಸ್ತಾಪ ಹಿನ್ನಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ …

Read More »

ನೂರು ಕ್ಷೇತ್ರಗಳಿಗೆ ಜೆಡಿಎಸ್‌ ಇಂದು ಅಭ್ಯರ್ಥಿಗಳ ಘೋಷಣೆ ?

ಗಡಿ ಜಿಲ್ಲೆಯ ಕುರುಡು ಮಲೆಯ ಗಣಪತಿಗೆ ಮಂಗಳವಾರ (ನ.1) ಬೆಳಿಗ್ಗೆ 9 ಗಂಟೆಗೆ ಪೂಜೆ ಸಲ್ಲಿಸಿ ಜೆಡಿಎಸ್‌ನ ಮಹತ್ವಾಕಾಂಕ್ಷೆಯ ‘ಪಂಚರತ್ನ’ ರಥಯಾತ್ರೆ ಹಾಗೂ ಚುನಾ ವಣಾ ಪ್ರಚಾರಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಅಧಿಕೃತ ಚಾಲನೆ ನೀಡಲಿದ್ದಾರೆ.     ವಿಧಾನಸಭೆ ಚುನಾವಣೆ ಘೋಷಣೆಗೆ ಮುನ್ನವೇ ಪಕ್ಷದ 100 ಅಭ್ಯರ್ಥಿಗಳ ಪಟ್ಟಿಯನ್ನೂ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.   ಮಧ್ಯಾಹ್ನ 2.30ಕ್ಕೆ ಮುಳಬಾಗಿಲು ನಗರದ …

Read More »

S.C.ಗೆ ಶೇ 17, S.T ಶೇ 7 ಮೀಸಲಾತಿ: ಇಂದಿನಿಂದ ಜಾರಿ

ಕ್ಷಣ ಮತ್ತು ಉದ್ಯೋಗ ದಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ)ಶೇ 17, ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಶೇ 7 ಮೀಸಲಾತಿಯನ್ನು ರಾಜ್ಯೋತ್ಸವ ದಿನವಾದ ಮಂಗಳವಾರದಿಂದಲೇ (ನ.1) ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿ ಮಾಡಿ ಸೋಮವಾರ ಅಧಿಸೂಚನೆ ಹೊರಡಿಸಿದೆ.     ಆದರೆ, ಹೆಚ್ಚಳಗೊಳಿಸಿದ ಮೀಸ ಲಾತಿಯನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈ ಅಧಿಸೂಚನೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ.‌ ಹೀಗಾಗಿ, ಅಧಿಸೂಚನೆ ಜಾರಿಗೊಳಿಸುವ ಬಗ್ಗೆ ಗೊಂದಲವಿದೆ ಎಂದು ಹೆಸರು ಬಹಿರಂಗ ಪಡಿಸಲು ಬಯಸದ …

Read More »

ಹಂಪಿಯ ಸ್ಮಾರಕಗಳಧ್ವನಿ-ಬೆಳಕಿನಲ್ಲಿ ಮಿಂದೇಳಲಿವೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ

ಹೊಸಪೇಟೆ (ವಿಜಯನಗರ): ವಿಶ್ವಪ್ರಸಿದ್ಧ ಹಂಪಿಯ ಸ್ಮಾರಕಗಳು ಮಂಗಳವಾರದಿಂದ (ನ.1) ಧ್ವನಿ-ಬೆಳಕಿನಲ್ಲಿ ಮಿಂದೇಳಲಿವೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಹಂಪಿ ಬೈ ನೈಟ್‌ಗೆ ಪುನಃ ಚಾಲನೆ ಕೊಡಲಾಗುತ್ತಿದೆ. ಇದಕ್ಕಾಗಿ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರವು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ.   ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಹಂಪಿ ಬೈ ನೈಟ್‌ಗೆ ಪುನಃ ಚಾಲನೆ ಕೊಡಲಾಗುತ್ತಿದೆ. ಇದಕ್ಕಾಗಿ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರವು ಎಲ್ಲ ರೀತಿಯ …

Read More »

ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರದಾನ

ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಮತ್ತು ಸಹಸ್ರಾರು ಅಭಿಮಾನಿಗಳ ಹರ್ಷೋದ್ಗಾರಗಳ ಮಧ್ಯೆಯೇ, ನಾಡಿನ ಜನರ ಮನಗೆದ್ದ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ ಸಂಜೆ ನಡೆದ ಸಮಾರಂಭದಲ್ಲಿ, ಪುನೀತ್‌ ಅವರನ್ನು ಕಳೆದುಕೊಂಡು ಆಗಸವೇ ಅಳುತ್ತಿದೆ ಯೇನೋ ಎಂಬಂತೆ ಭೋರ್ಗರೆದು ಸುರಿಯುತ್ತಿದ್ದ ವರ್ಷಧಾರೆಯ ನಡುವೆಯೇ ಛತ್ರಿಯ ಆಸರೆಯಲ್ಲಿ ಸಮಾರಂಭ ನಡೆಯಿತು. ತಂದೆ ಡಾ. ರಾಜ್‌ಕುಮಾರ್‌ ಅವರಿಗೆ 30 ವರ್ಷಗಳ ಹಿಂದೆ …

Read More »

ಒಬಿಸಿ ಅನುದಾನಕ್ಕೆ ಬಿಜೆಪಿ ಕತ್ತರಿ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳಿಗೆ ಆದಷ್ಟು ಅನ್ಯಾಯ ಬೇರೆ ಯಾವುದೇ ಸರ್ಕಾರದ ಕಾಲದಲ್ಲೂ ಆಗಿಲ್ಲ. ಈ ವರ್ಗಗಳಿಗೆ ಸೇರಿದ 11ಕ್ಕೂ ಹೆಚ್ಚು ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿಮೆ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.   ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ, ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಜಗಜೀವನ್‌ರಾಂ ಅಭಿವೃದ್ಧಿ ನಿಗಮಗಳಿಗೆ ಅನುದಾನ ಕಡಿಮೆ ಮಾಡಲಾಗಿದೆ. ಇದು ಹಿಂದುಳಿದವರ ಮೇಲೆ …

Read More »

ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗದ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್‌..!

ವಿಜಯಪುರ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನೋವಿದೆ. ಅದನ್ನ ಪಕ್ಷದ ಹಿರಿಯರು ಸರಿಪಡಿಸುತ್ತಾರೆ. ಒಂದು ಕಾಲದಲ್ಲಿ ರೆಡ್ಡಿ ಅವರಿಂದ ಬಿಜೆಪಿಗೆ ಅನಕೂಲಮಾಡಿಕೊಂಡು ಸಿಎಂ ಆಗಿದ್ದಾರೆ. ಯಾರು ರೆಡ್ಡಿ ಅವರ ಅನಕೂಲದಿಂದ ಸಿಎಂ ಆಗಿದ್ದಾರೋ ಅವರು ಜನಾರ್ದನ ರೆಡ್ಡಿ ಸಹಾಯಕ್ಕೆ ಹೋಗಬೇಕಿದೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ. ವಿಜಯಪುರ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಹಾಗೂ …

Read More »

ಎಲ್ಲ ರಂಗಗಳಲ್ಲಿ ಕನ್ನಡ ಕಡ್ಡಾಯ: C.M.ಬೊಮ್ಮಾಯಿ

ಬೆಂಗಳೂರು: ‘ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯಗೊಳಿಸಲು ಕಾನೂನು ರಚನೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಡಿಸೆಂಬರ್‌ನಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಲು ಕಾನೂನು ರಚನೆ ಮಾಡುವ ಮಸೂದೆ ಮಂಡಿಸಿ, ಅನುಮೋದನೆ ಪಡೆದುಕೊಳ್ಳಲಾಗುವುದು’ ಎಂದರು. ‘ಕನ್ನಡ ಭಾಷೆಗೆ ಕಾನೂನಿನ ಕವಚ ನೀಡುತ್ತಿರುವ ಮೊದಲ ಸರ್ಕಾರ ನಮ್ಮದು. …

Read More »