Breaking News

Laxminews 24x7

ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರಿಗೆ 43ನೇ ಸ್ಥಾನ: ಸಾರ್ವಜನಿಕರಿಂದ ಟೀಕೆ

ಬೆಂಗಳೂರು: ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ 2022ರ ಪ್ರಕಾರ 45 ನಗರಗಳ ಪಟ್ಟಿಯಲ್ಲಿ ಸಿಲಿಕಾನ್​​ ಸಿಟಿ 43ನೇ ಸ್ಥಾನ ಪಡೆದುಕೊಂಡಿದೆ. ಈ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ರ‍್ಯಾಂಕಿಂಗ್​ನಲ್ಲಿ 15ರಷ್ಟು ಕುಸಿತ ಕಂಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ವಿವಿಧ ಅಂಕಿ ಅಂಶಗಳನ್ನು ಆಧರಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ 45 ನಗರಗಳಲ್ಲಿ ಬೆಂಗಳೂರು 43ನೇ …

Read More »

ಅಂತ್ಯೋದಯ, ಬಿಪಿಎಲ್ ಕಾರ್ಡ್ ಪಡೆಯಲು ಇರುವ ನಿಯಮ, ಯಾರೆಲ್ಲಾ ಅರ್ಹರು, ಮಾನದಂಡಗಳೇನು..?

ಬೆಂಗಳೂರು: ಹಸಿವು ಮುಕ್ತ ರಾಜ್ಯ ನಿರ್ಮಾಣದಲ್ಲಿ ಅನ್ನಭಾಗ್ಯ ಯೋಜನೆ ಪ್ರಮುಖವಾಗಿದ್ದು, ಮೂರು ಮಾದರಿಯಲ್ಲಿ ರಾಜ್ಯ ಸರ್ಕಾರ ಪಡಿತರ ವಿತರಣಾ ವ್ಯವಸ್ಥೆ ಕಲ್ಪಿಸಿದೆ. ಅಂತ್ಯೋದಯ, ಆದ್ಯತಾ, ಆದ್ಯೇತರ ವರ್ಗಗಳನ್ನಾಗಿ ಪರಿವರ್ತಿಸಿ ಪಡಿತರ ವಿತರಣೆ ಮಾಡುತ್ತಿದೆ. ರಾಜ್ಯದ 1.16 ಕೋಟಿ ಕುಟುಂಬ ಆದ್ಯತಾ ಪಡಿತರ ಚೀಟಿ ಹೊಂದಿದ್ದು, ಆಹಾರ ಇಲಾಖೆಯ ಪಡಿತರ ಸೌಲಭ್ಯ ಪಡೆದುಕೊಳ್ಳುತ್ತಿದೆ. ಇದರಲ್ಲಿಯೂ ನಕಲಿಗಳ ಹಾವಳಿ ವ್ಯಾಪಕವಾಗಿದ್ದು, ಇದರ ತಡೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಅಂತ್ಯೋದಯ …

Read More »

ಅ.28 ರಂದು 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಹಾಗೂ ಗಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. 2022ರ ಆಗಸ್ಟ್​​ನಿಂದ ನವೆಂಬರ್​​ವರೆಗೆ ಅವಧಿ ಮುಕ್ತಾಯವಾಗಲಿರುವ 252 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 187 ಖಾಲಿ ಇರುವ ಗ್ರಾಮ ಪಂಚಾಯತ್​​ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟಿಸಿದೆ. ಅದರಂತೆ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ. ಅ.18 ನಾಮಪತ್ರ ಸಲ್ಲಿಸಲು …

Read More »

ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಅವರನ್ನ ನಾನೂ ಸ್ವಾಗತಿಸುತ್ತೇನೆ ಎಂದ ಲಕ್ಷ್ಮಣ್ ಸವದಿ

ಅಥಣಿ: ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಆಗಮಿಸಿದ್ದು, ಅವರಿಗೆ ನಾನು ಸ್ವಾಗತ ಕೋರುತ್ತೇನೆ, ಅವರು ಕಾಲು ಇಟ್ಟಲೆಲ್ಲ ಬಿಜೆಪಿಯ ಕಮಲ ಅರಳುತ್ತದೆ. ಹಾಗಾಗಿ ನಾನು ಅವರನ್ನ ಸ್ವಾಗತ ಬಯಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಲಕ್ಷ್ಮಣ್ ಸವದಿ ಕೈ ಮುಖಂಡರ ವಿರುದ್ಧ ವ್ಯಂಗ್ಯವಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನವಾಗಿ ಪೊಲೀಸ್ ಠಾಣಾ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸದ್ಯ …

Read More »

ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ

ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು, ಬೈಕ್ ಹಾಗೂ ಲಾರಿ ನಡುವೆ ಭೀಕರ ಸರಣಿ ಅಪಘಾತವಾಗಿದ್ದು, ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಎರಡು ಕಾರು, ಟ್ರಕ್ ಹಾಗೂ 4ಕ್ಕೂ ಹೆಚ್ಚು ಬೈಕ್​ಗಳ ನಡುವೆ ಸರಣಿ ಅಪಘಾತವಾಗಿದೆ. ಇದಕ್ಕೂ ಮೊದಲು ಮೊಲ್ಯಾಸೀಸ್ ತುಂಬಿದ್ದ ಟ್ಯಾಂಕರ್ ನಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮೊಲ್ಯಾಸೀಸ್ ಸೋರಿಕೆಯಾಗಿದೆ. ಈ …

Read More »

200 ವರ್ಷ ಇತಿಹಾಸ ಇರುವ ದೇವನಾಥ ಮಂದಿರ ಕಾಮಗಾರಿ ಶಾಸಕರಿಂದ ಪೂಜೆ

ಅಥಣಿ ಮತಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಟಳ್ಳಿಯವರಿಂದ ಹಲ್ಯಾಳ ಗ್ರಾಮದಲ್ಲಿ ಸುಮಾರು 12ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ದೇವನಾಥ ದೇವಸ್ಥಾನ ಕಾಮಗಾರಿ ಭೂಮಿ ಪೂಜೆ ಹಾಗೂ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಹನುಮಾನ ದೇವಸ್ಥಾನದ ಸಮುದಾಯ ಭವನಗಳ ಕಾಮಗಾರಿ ಪೂಜೆಯನ್ನು ನೆರವೇರಿಸಲಾಯಿತು..   ಈ ಸಂದರ್ಭದಲ್ಲಿ ಶ್ರೀ ಮ. ನಿ ಪ್ರ ಗುರುಸಿದ್ದೆಶ್ವರ ಮಹಾಸ್ವಾಮಿಗಳು …

Read More »

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ರೇ ಅದು ವಿಜಯೇಂದ್ರನಿಂದ

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ರೇ ಅದು ವಿಜಯೇಂದ್ರನಿಂದ ಎಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದರು. ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ ವಾಗ್ದಾಳಿ ನಡೆಸಿ, ವಿಜಯೇಂದ್ರದಿಂದ ಬಿಎಸ್ವೈ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ. ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಎಸ್ವೈ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ. ಪಾಪ ಬಿಎಸ್ವೈ ಅಧಿಕಾರಿ ಕಳೆದುಕೊಂಡ್ರೂ, ಇಲ್ಲದೇ ಹೋದ್ರೇ ಅವರೇ ಸಿಎಂ ಇರ್ತಾ ಇದ್ರೂ, ವಿಜಯೇಂದ್ರ ಯಾವಾಗ …

Read More »

ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್​ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ.

ತುಮಕೂರು: ಸ್ವಗ್ರಾಮಕ್ಕೆ ಮಗುವಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಾಣಂತಿ ಸೇರಿದಂತೆ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ದಾವಣಗೆರೆ ಜಿಲ್ಲೆ ಗೋಪನಾಳ್ ಗ್ರಾಮದ ಮಂಜುನಾಥ್ ಮತ್ತು ಗೌರಮ್ಮ ದಂಪತಿ ತುಮಕೂರು ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ನಾಲ್ಕು ದಿನದ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಗೌರಮ್ಮ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಇಂದು(ಸೋಮವಾರ) ಮುಂಜಾನೆ 4 ಗಂಟೆಯಲ್ಲಿ ಆಸ್ಪತ್ರೆಯಲ್ಲೇ ಮಗು ಮೃತಪಟ್ಟಿದೆ. ಮಗುವಿನ ಶವ ತೆಗೆದುಕೊಂಡು ಹೋಗುವಂತೆ ವೈದ್ಯರು ತಿಳಿಸಿದ್ದಾರೆ. ಆದರೆ, …

Read More »

ಈ ವರ್ಷವೇ ಸುವರ್ಣಸೌಧದಲ್ಲಿ ಚನ್ನಮ್ಮ, ರಾಯಣ್ಣ ಪ್ರತಿಮೆ ಸ್ಥಾಪನೆ: ಬೊಮ್ಮಾಯಿ

  ಬೆಂಗಳೂರು: ‘ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ ಅನುದಾನ ಒದಗಿಸಲಾಗಿದ್ದು, ಇದೇ ವರ್ಷ ಬೆಳಗಾವಿಯ ಸುವರ್ಣಸೌಧದಲ್ಲಿ ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡ ‘ಕಿತ್ತೂರು ಚನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆ’ಗೆ ಚಾಲನೆ ನೀಡಿ, ಮಾತನಾಡಿದರು. ‘ಕಿತ್ತೂರು ಉತ್ಸವ …

Read More »

ಈ ಸಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ 9,823 ಅರ್ಜಿಗಳು

ಉಡುಪಿ : ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 9,823 ಅರ್ಜಿಗಳು ಬಂದಿದ್ದು, ತೆರೆಮರೆಯ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.   ಆದಿ ಉಡುಪಿಯಲ್ಲಿ ₹5 ಕೋಟಿ ವೆಚ್ಚದದಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರ ವೇರಿಸಿ ಮಾತನಾಡಿದ ಅವರು, ‘ಪ್ರಶಸ್ತಿಪುರಸ್ಕೃತರ ಆಯ್ಕೆಗೆ ಸಮಿತಿ ರಚನೆಯಾಗಿದ್ದು, ಮೊದಲ ಸಭೆಯೂ ಮುಗಿದಿದೆ’ ಎಂದರು. ‘ಮಾತಾಡು ಮಾತಾಡು ಕನ್ನಡ’ ಅಭಿಯಾನ ನಡೆಸಲು ಸಿದ್ಧತೆ …

Read More »