Breaking News

Laxminews 24x7

ಕಲ್ಯಾಣ ಮಂಟಪದಲ್ಲಿ ಎಸ್‌ಐಆರ್ – ಮುಖ್ಯ ಚುನಾವಣಾಧಿಕಾರಿಯಿಂದ ಬಿಎಲ್‌ಒಗಳಿಗೆ ನೋಟಿಸ್ ಜಾರಿ

ರಾಮನಗರ: ಕಲ್ಯಾಣ ಮಂಟಪವೊಂದರಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಪ್ರಕ್ರಿಯೆ ನಡೆಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ತನಿಖೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ಅ ವರು ರಾಮನಗರ  ಜಿಲ್ಲಾಧಿಕಾರಿ ಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು, ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ರಾಮನಗರ ಡಿಸಿಗೆ ನಿರ್ದೇಶನ …

Read More »

ಹನಿಮೂನ್ ಹಂತಕಿ ಸೋನಮ್‌ಗೆ ಬಿಗ್ ರಿಲೀಫ್ – ಬೇಲ್ ರದ್ದಿಗೆ ಸುಪ್ರೀಂ ನಕಾರ

ನವದೆಹಲಿ: ಹನಿಮೂನ್‌ಗೆ ಹೋದಾಗ ಪತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಹಂತಕಿ ಸೋನಮ್ ರಘುವಂಶಿಗೆ ನೀಡಿದ್ದ ಜಾಮೀನು ರದ್ದಿಗೆ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಮೇಘಾಲಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಶೀಲ್ ನಾಗು ಅವರಿದ್ದ ಪೀಠವು, ಸೋನಂಗೆ ನೀಡಿದ ಜಾಮೀನು ಆದೇಶಕ್ಕೆ ತಡೆ ನೀಡುವ ಬಗ್ಗೆ ಒಲವು ತೋರಿಸಿತ್ತು. ಆದರೆ ಆರೋಪಿ ಈಗಾಗಲೇ …

Read More »

ಅಮರನಾಥ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರ; ಐದು ಸಂಕಲ್ಪ ಪಾಲಿಸುವಂತೆ ಕರೆ

ನವದೆಹಲಿ: ಅಮರನಾಥ ಯಾತ್ರೆ  ಆರಂಭವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  ದೇಶದಾದ್ಯಂತ ಶಿವಭಕ್ತರಿಗೆ ವಿಶೇಷ ಪತ್ರ ಬರೆದು ಶುಭಾಶಯ ಕೋರಿದ್ದಾರೆ. ಭಗವಾನ್ ಅಮರನಾಥರ ಕೃಪೆಯಿಂದ ಪ್ರತಿಯೊಬ್ಬ ಯಾತ್ರಿಕರ ಪಯಣ ಸುರಕ್ಷಿತ, ಸುಖಕರ ಹಾಗೂ ಮಂಗಳಕರವಾಗಿರಲಿ ಎಂದು ಹಾರೈಸಿದ್ದಾರೆ. ಅಮರನಾಥ ಯಾತ್ರೆ ಕೇವಲ ಧಾರ್ಮಿಕ ಪ್ರವಾಸವಲ್ಲ, ಅದು ಭಕ್ತಿ. ಆತ್ಮಸಾಕ್ಷಾತ್ಕಾರ ಹಾಗೂ ರಾಷ್ಟ್ರೀಯ ಏಕತೆಯ ಸಂಕೇತವಾಗಿದೆ ಎಂದು ಪ್ರಧಾನಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಯಾತ್ರೆಯ ಯಶಸ್ವಿ ಆಯೋಜನೆಗಾಗಿ ಶ್ರಮಿಸುತ್ತಿರುವ ಭದ್ರತಾ ಪಡೆಗಳು, …

Read More »

ಮಸೀದಿಗಳಲ್ಲಿ SIR ಮಾಡಿ ಅಕ್ರಮ ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು: ಕರಂದ್ಲಾಜೆ

ಬೆಂಗಳೂರು: ಮಸೀದಿ ಹಾಗೂ ಸಮುದಾಯ ಭವನಗಳಲ್ಲಿ ನಿಯಮ ಬಾಹಿರವಾಗಿ ಎಸ್‌ಐಆರ್ Aಪ್ರಕ್ರಿಯೆ ನಡೆಯುತ್ತಿದೆ 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರಸಕ್ರಮಕ್ಕೆ ಕಾಂಗ್ರೆಸ್‌ ಸರ್ಕಾರ ಸಂಚು ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳೇ ನಿಮ್ಮ ಮೂಗಿನ ನೇರದಲ್ಲೇ ಅಧಿಕಾರಿಗಳು ಅಕ್ರಮ ಮತದಾರರನ್ನು ಪಟ್ಟಿಗೆ ಸೇರಿಸುತ್ತಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಬಾಂಗ್ಲಾದೇಶಿಯರನ್ನು ಓಡಿಸಿದ ಮೇಲೆ …

Read More »

40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ಐತಿಹಾಸಿಕ ಭೇಟಿ – ಮುಂದಿನ ವಾರ ನ್ಯೂಜಿಲೆಂಡ್‌ಗೆ ಮೋದಿ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ನ್ಯೂಜಿಲೆಂಡ್‌ಗೆ  ತಮ್ಮ ಮೊದಲ ಅಧಿಕೃತ ದ್ವಿಪಕ್ಷೀಯ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ ಆಗಿರುವುದರಿಂದ ಈ ಪ್ರವಾಸಕ್ಕೆ ವಿಶೇಷ ಮಹತ್ವ ಲಭಿಸಿದೆ. ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್  ಈ ಭೇಟಿ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಭಾರತ-ನ್ಯೂಜಿಲೆಂಡ್ ಸಂಬಂಧದಲ್ಲಿ ಇದು ಐತಿಹಾಸಿಕ ಘಟ್ಟವಾಗಲಿದೆ. ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ, …

Read More »

ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – ʻದಾಸʼನಿಗೆ 1 ವರ್ಷ ಜೈಲೇ ಗತಿ

ನವದೆಹಲಿ: ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಪ್ರಮುಖ ಆರೋಪಿ ನಟ ದರ್ಶನ್ ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಇದರಿಂದ ʻದಾಸʼ ಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ. ಹೌದು. 1 ವರ್ಷದ ವರೆಗೆ ಜಾಮೀನು  ಕೋರಿ ಅರ್ಜಿ ಸಲ್ಲಿಸದಂತೆ ಸೂಚಿಸಿದ್ದ ಸುಪ್ರೀಂ ಆದೇಶ ತಿದ್ದುಪಡಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ. ಖುದ್ದು ಸುಪ್ರೀಂ ಕೋರ್ಟ್‌ನ ರಿಜಿಸ್ಟರ್‌ ಅವರೇ ಅರ್ಜಿಯನ್ನ ತಿರಸ್ಕರಿಸಿದ್ದಾರೆ. ತುರ್ತು ಪರಿಸ್ಥಿತಿಗಳಲ್ಲಿ …

Read More »

ರಾಮನಗರದ ಚೌಟ್ರಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆ – ಹೆಚ್‌ಡಿಕೆಯಿಂದ ವಿಡಿಯೋ ಸಾಕ್ಷಿ ಬಿಡುಗಡೆ

ಬೆಂಗಳೂರು: ರಾಮನಗರದಲ್ಲಿ ಚೌಟ್ರಿಯಲ್ಲಿ ಕುಳಿತು ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಗಂಭೀರ ಆರೋಪ ಮಾಡಿದ್ದಾರೆ. ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಅಕ್ರಮಗಳ ಕುರಿತು ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಗೃಹ ಸಚಿವರಿಗೆ ದೂರು ನೀಡುವುದಾಗಿ ತಿಳಿಸಿದರು. ರಾಮನಗರದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಲೋಪವಾಗುತ್ತಿದೆ. ನಿಯಮಗಳ ಪ್ರಕಾರ ಬಿಎಲ್‌ಒ ಗಳು …

Read More »

ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ

ಬೆಂಗಳೂರು: ಎಲ್ ನಿನೋ  ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ …

Read More »

ಚೌಟ್ರಿಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ – ಹೆಚ್‌ಡಿಕೆ ವಿಡಿಯೋ ರಿಲೀಸ್‌ ಬೆನ್ನಲ್ಲೇ ಡಿಕೆಶಿ ವಾರ್ನಿಂಗ್‌

ಬೆಂಗಳೂರು: ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಅವರು ಬಿಎಲ್‌ಓಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರು  ಕಲ್ಯಾಣ ಮಂಟಪಗಳಲ್ಲಿ ಸಿಬ್ಬಂದಿ SIR ಫಾರಂ ತುಂಬುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ. ಬಿಎಲ್ಓಗಳೇ ಅರ್ಜಿಗಳನ್ನ ಹಂಚಬೇಕು, ಅವರೇ ಮನೆಗೆ ಹೋಗಿ ಅರ್ಜಿ ಕೊಡಬೇಕು, ಅಲ್ಲಿಯೇ ತುಂಬಬೇಕು …

Read More »

ಬರ ಪರಿಸ್ಥಿತಿ ಗಂಭೀರವಾಗ್ತಿದೆ, ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ – ರೈತರಿಗೆ ಡಿಕೆಶಿ ಮನವಿ

ಬೆಂಗಳೂರು: ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗ್ತಿದೆ ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬಾರದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ , ಘಟ್ಟಪ್ರಭಾ, ಮಲಪ್ರಭಾ, ನಾರಾಯಣಪುರ, ವಾಣಿವಿಲಾಸ ಅಣೆಕಟ್ಟೆಗಳ ಒಳಹರಿವಿನ ಪ್ರಮಾಣ ಶೂನ್ಯವಾಗಿದೆ ಎಂದು ತಿಳಿಸಿದರು. ಕಾವೇರಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ …

Read More »