Breaking News
Home / Laxminews 24x7 (page 23)

Laxminews 24x7

ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಬಿಜೆಪಿ ನೀಡಿದ್ದ ಜಾಹೀರಾತು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್‌ ಬೆಂಗಳೂರಿನ ಹೈಗ್ರೊಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು, ಕಾಂಗ್ರೆಸ್ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಜಾಹಿರಾತು ಮೂಲಕ ಬಿಜೆಪಿ ಆರೋಪ …

Read More »

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್‌ಐಆರ್‌ ಸಾಧ್ಯತೆ

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಪ್ರಕರಣ ಕಾವೇರುತ್ತಿರುವ ಹಿನ್ನೆಲೆ ಯಲ್ಲಿ ವೀಡಿಯೋದಲ್ಲಿ ಕಾಣಿಸಿಕೊಂಡಿರುವ ಸಂತ್ರಸ್ತೆಯರ ಪತ್ತೆಗೆ ಎಸ್‌ಐಟಿ ಮುಂದಾಗಿದೆ. ಎಸ್‌ಐಟಿ ಅಧಿಕಾರಿಗಳು 8 ಸಂತ್ರಸ್ತೆಯರನ್ನು ಸಂಪರ್ಕಿಸಿ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.ಈ ಪೈಕಿ ಮೂವರು ಸಂತ್ರಸ್ತೆಯರು ತಮಗಾದ ಅನ್ಯಾಯದ ವಿರುದ್ಧ ದೂರು ನೀಡುವ ಚಿಂತನೆಯಲ್ಲಿದ್ದಾರೆ. ಆದರೆ ಇನ್ನೂ ದೂರು ನೀಡಿಲ್ಲ. ಕೆಲವು ಸಂತ್ರಸ್ತೆಯರಿಂದ ಗೌಪ್ಯವಾಗಿ ಹೇಳಿಕೆ ದಾಖಲಿಸಲು ಎಸ್‌ಐಟಿ ಮುಂದಾಗಿದ್ದು, ಇನ್ನಷ್ಟು ಎಫ್‌ಐಆರ್‌ ದಾಖಲಾಗುವ ಸಾಧ್ಯತೆಗಳಿವೆ.   ವೀಡಿಯೋದಲ್ಲಿ …

Read More »

‘SIT’ ಮುಂದೆ ಶರಣಾಗಲಿದ್ದಾರೆ ‘ಪ್ರಜ್ವಲ್ ರೇವಣ್ಣ’!

‘SIT’ ಮುಂದೆ ಶರಣಾಗಲಿದ್ದಾರೆ ‘ಪ್ರಜ್ವಲ್ ರೇವಣ್ಣ’! ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಂದೆ ಎಚ್.ಡಿ.ರೇವಣ್ಣ ಮತ್ತು ಅವರ ವಕೀಲರು ಲೈಂಗಿಕ ದೌರ್ಜನ್ಯದ ವಿಡಿಯೋ ತುಣುಕುಗಳ ತನಿಖೆಗಾಗಿ ಕರ್ನಾಟಕ ಪೊಲೀಸರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಶರಣಾಗುವಂತೆ ಪ್ರಜ್ವಲ್ ಗೆ ಸಲಹೆ ನೀಡಿದ್ದರು ಎಂದು ವರದಿಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ತಂಡದ ಮುಂದೆ ಶರಣಾಗಲು ಪ್ರಜ್ವಲ್ ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ ಎಂದು …

Read More »

ನೀಟ್ ಪರೀಕ್ಷೆಯಲ್ಲೂ ಔಟ್ ಆಫ್ ಸಿಲಬಸ್ ಪ್ರಶ್ನೆಗಳು: ವಿದ್ಯಾರ್ಥಿಗಳಲ್ಲಿ ಗೊಂದಲ

ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗೆ ಭಾನುವಾರ ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ -ನೀಟ್ ಯಶಸ್ವಿಯಾಗಿ ನಡೆದಿದೆ. ಆದರೆ, ಪಠ್ಯಕ್ರಮ ಹೊರತಾದ ಪ್ರಶ್ನೆ ಕೇಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸಿಇಟಿಯಂತೆ ನೀಟ್ ಪರೀಕ್ಷೆಯಲ್ಲಿಯೂ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ.ಭೌತಶಾಸ್ತ್ರದಲ್ಲಿ ಒಂದು ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಲಾಗಿದೆ. ಮತ್ತೊಂದು ಪ್ರಶ್ನೆಯನ್ನು ತಪ್ಪಾಗಿ ಕೇಳಲಾಗಿದೆ ಎಂದು ಹೇಳಲಾಗಿದೆ.   ಭೌತಶಾಸ್ತ್ರ ವಿಷಯದಲ್ಲಿ ರೇಡಿಯೋ ಆಕ್ಟಿವಿಟಿ ಸಿಲೆಬಸ್ …

Read More »

ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಲಬುರಗಿ: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ (Dr.Nagareddy Patil) ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು. ನಾಗರೆಡ್ಡಿ ಅವರ ಪುತ್ರ ಶಿವಶರಣರೆಡ್ಡಿ ಪಾಟೀಲ್‌ ಸದ್ಯ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ನಾಗರೆಡ್ಡಿ ಅವರು ಸಹೋದರ ಮತ್ತು ಸಹೋದರಿಯರು, ಮಕ್ಕಳು, ಸೊಸೆಯಂದಿರು, …

Read More »

ಮೂರು ತಿಂಗಳಿನಿಂದ ಸಿಗದ ವೇತನ: ರಾಜ್ಯಾದ್ಯಂತ ಇಂದು ರಾತ್ರಿಯಿಂದ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರ../

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ ಸೇವೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ನೀಡದೆ ಬಾಕಿ ಉಳಿಸಿಕೊಳ್ಳಲಾಗಿದೆ.ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ ಕೇವಲ 13,000 ರೂ. ನೀಡಿದೆ.   …

Read More »

ಚುನಾವಣೆ ಅಧಿಕಾರಿಗಳ ಹಾಗೂ ಪೊಲೀಸರ ವಿರುದ್ಧ ಮಠಾಧೀಶರ ಹೋರಾಟ: ಕ್ಷಮೆಯಾಚನೆ ಮಾಡಿದ ಖಾಕಿ

ಹುಬ್ಬಳ್ಳಿ: ಅವರೆಲ್ಲರೂ ನಾಡಿನ ವಿವಿಧ ಮಠಗಳ ಮಠಾಧೀಶರು. ಮತದಾನದ ಜಾಗೃತಿ ಕುರಿತು ಸಭೆ ನಡೆಸುವ ಸಂದರ್ಭದಲ್ಲಿ ನಡೆದ ಅದೊಂದು ಗಲಾಟೆ ಪಾಲಿಕೆಯ ಆವರಣವನ್ನೇ ಗದ್ದಲದ ಗೂಡನ್ನಾಗಿ ಮಾಡಿತು. ಪೊಲೀಸರ ಹಾಗೂ ಚುನಾವಣೆ ಅಧಿಕಾರಿಗಳ ವಿರುದ್ಧ ಮಠಾಧೀಶರು, ಆಕ್ರೋಶಗೊಂಡು ಹೋರಾಟ ನಡೆಸಿದ್ದಾರೆ. ಚುನಾವಣಾಧಿಕಾರಿಗಳ ಪರವಾನಗಿ ಇಲ್ಲದೇ ಸಭೆ ನಡೆಸುವಂತಿಲ್ಲ. ಸಭೆ ಮೊಟಕುಗೊಳಿಸಿ ಎಂದು ಚುನಾವಣಾಧಿಕಾರಿ, ಪೊಲೀಸ್ ಅಧಿಕಾರಿಗಳು ತಡೆಯೊಡ್ಡಿದ್ದರಿಂದ ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀ ಸೇರಿದಂತೆ ನಾಡಿನ ನೂರಾರು ಸ್ವಾಮಿಗಳು …

Read More »

ಕಾಂಗ್ರೆಸ್‌- ಬಿಜೆಪಿ ಕಾರ್ಯಕರ್ತರ ಜಟಾಪಟಿ

ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಶಹಾಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ. ವಿಷಯ ತಿಳಿದು ಠಾಣೆಗೆ ತೆರಳಿದ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಕಾಂಗ್ರೆಸ್‌ ಕಾರ್ಯಕರ್ತರ ಪರ ನಿಂತರು.ಕೆಲವೇ ನಿಮಿಷಗಳಲ್ಲಿ ಶಾಸಕ ಅಭಯ ಪಾಟೀಲ ಕೂಡ ಠಾಣೆಗೆ ಬಂದು, ಬಿಜೆಪಿ ಕಾರ್ಯಕರ್ತರ ಪರ ವಾದಕ್ಕೆ ನಿಂತರು.   ಅಭಯ …

Read More »

ಪ್ರಜ್ವಲ್‌ ಬಳಿಕ ಹೆಚ್‌ ಡಿ ರೇವಣ್ಣ ಅಮಾನತು ಫಿಕ್ಸ್? ರಾತ್ರೋರಾತ್ರಿ ಕುಮಾರಸ್ವಾಮಿ ಮಹತ್ವದ ಸಭೆ

ಬೆಂಗಳೂರು, ಮೇ 05: ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಸದ್ಯ ಜರ್ಮನಿಯಲ್ಲಿದ್ದು, ಎಸ್‌ ಐಟಿ ತನಿಖೆ ಶುರು ಮಾಡಿದೆ. ಈಗಾಗಲೇ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರನ್ನ ಬಂಧಿಸಿದ್ದು, ದಳಪತಿಗಳಿಗೆ ದೊಡ್ಡ ತಲೆನೋವಾಗಿದೆ. ಹೌದು, ದಿನದಿಂದ ದಿನಕ್ಕೆ ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ತನ್ನ ಅಸ್ತಿತ್ವವನ್ನ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ದಳಪತಿಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ …

Read More »

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

ಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಅವರು ಅಲ್ಪ ಸಂಖ್ಯಾತರನ್ನು ಮುಗಿಸುತ್ತಾರೆ. ಫಸ್ಟ್ ಟೈಂ ಕ್ಯಾನ್ಸರ್ ಬಂದರೆ ಉಳಿಯುತ್ತಾರೆ, ಎರಡನೇ ಬಾರಿ ಬಂದರೂ ಉಳಿಯುತ್ತಾರೆ, ಆದರೆ ಮೂರನೇ ಬಾರಿ ಬಂದರೆ ನಮ್ಮನ್ನೆಲ್ಲರನ್ನೂ ತಗೊಂಡು ಹೋಗುತ್ತೆ ಎಂದು ಸಚಿವ ಜಮೀರ್ ಅಹ್ಮದ್‌ (Zameer Ahmed Khan) ಆರೋಪಿಸಿದ್ದಾರೆ. ಬಾಗಲಕೋಟೆ ನಗರದಲ್ಲಿ ನಡೆದ ಅಲ್ಪ ಸಂಖ್ಯಾತರ …

Read More »