ಬೆಳಗಾವಿ : ಕಂದಾಯ ಇಲಾಖೆಯ ಸಾರ್ವಜನಿಕ ಸೇವೆಗಳು ಅರ್ಹ ನಾಗರಿಕರಿಗೆ ಯಾವುದೇ ವಿಳಂಬವಿಲ್ಲದೆ, ಸಕಾಲದಲ್ಲಿ ತಲುಪಬೇಕು. ಕಚೇರಿಯಲ್ಲಿರುವ ಕಡತಗಳನ್ನು ಅನಗತ್ಯವಾಗಿ ಬಾಕಿ ಉಳಿಸಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಹೇಳಿದರು. ಜಿಲ್ಲಾಡಳಿತ ವತಿಯಿಂದ ಬುಧವಾರ (ಜುಲೈ.೦೧) ಬೆಳಗಾವಿ ಸುವರ್ಣ ವಿಧಾನಸೌಧ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪತ್ರಿಕಾ ದಿನಾಚರಣೆ, ಕಂದಾಯ ದಿನಾಚರಣೆ, ವೈದ್ಯರ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ …
Read More »ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಆಚರಣೆ
ಬಾಗಲಕೋಟೆ,: ಪತ್ರಿಕೋದ್ಯಮವೆಂದರೆ ಕೇವಲ ಒಂದು ವೃತ್ತಿಯಲ್ಲ, ಅದು ಸಮಾಜದತ್ತ ಇರುವ ಪವಿತ್ರ ಜವಾಬ್ದಾರಿಯಾಗಿದೆ. ಸತ್ಯವನ್ನು ಹುಡುಕುವ ಧೈರ್ಯ, ಜನರ ಧ್ವನಿಯಾಗುವ ಬದ್ಧತೆ ಹಾಗೂ ಇತಿಹಾಸವನ್ನು ದಾಖಲಿಸುವ ಹೊಣೆಗಾರಿಕೆಯೇ ಪತ್ರಿಕೋದ್ಯಮದ ನಿಜವಾದ ಮೌಲ್ಯಗಳಾಗಿವೆ ಎಂದು ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಗನ್ನಾಥ ಚವ್ಹಾಣ ಹೇಳಿದರು. ನಗರದ ಬಿ.ವಿ.ವಿ. ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ ಆಶ್ರಯದಲ್ಲಿ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ಪತ್ರಿಕಾ …
Read More »ಹಸು, ಕರುಗಳ ವಧೆ ನಿಷೇಧಿಸಿ ಹೈಕೋರ್ಟ್ ಆದೇಶ – ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ತ.ನಾಡು ಸರ್ಕಾರ
ನವದೆಹಲಿ: ಬಕ್ರೀದ್ ಸೇರಿದಂತೆ ಇತರೆ ಬೇರೆ ಯಾವುದೇ ದಿನ ಹಸು ಮತ್ತು ಕರುಗಳ ವಧೆಯನ್ನು ಮಾಡಬಾರದು ಎಂದು ಮದ್ರಾಸ್ ಹೈಕೋರ್ಟ್‌ನ ನೀಡಿದ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ತಮಿಳುನಾಡು ಸರ್ಕಾರದ ಪಶುಸಂಗೋಪನೆ, ಹಾಲು ಉತ್ಪಾದನೆ, ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೂಲಕ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ತಮಿಳುನಾಡು ಸರ್ಕಾರವು ಹೈಕೋರ್ಟ್ ತನ್ನ ಮೂಲ ಅರ್ಜಿಯ ವ್ಯಾಪ್ತಿಯನ್ನು ಮೀರಿ ಆದೇಶ ಹೊರಡಿಸಿದೆ …
Read More »ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ ಬರೋಬ್ಬರಿ 10 ರೂ. ಇಳಿಕೆ
ಬೆಂಗಳೂರು: ನಿರಂತರ ಎಲ್‌ಪಿಜಿ (LPG) ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ ಚಾಲಕರಿಗೆ ಕೊನೆಗೂ ದೊಡ್ಡ ನಿರಾಳ ಸಿಕ್ಕಿದೆ. ಪ್ರಮುಖ ಇಂಧನ ವಿತರಕ ಸಂಸ್ಥೆಯಾದ ಟೋಟಲ್ ಗ್ಯಾಸ್ತನ್ನ ಬಂಕ್‌ಗಳಲ್ಲಿ ಆಟೋ ಎಲ್‌ಪಿಜಿ ದರವನ್ನು (Auto LPG Price) ಪ್ರತಿ ಲೀಟರ್‌ಗೆ ಭರ್ಜರಿ 10 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಪೂರೈಕೆ ಏರುಪೇರಾಗಿತ್ತು. ಇದರ …
Read More »ಪ್ರಿಯತಮೆ ಹಿಂದೂ… ನಾನು ಮುಸ್ಲಿಂ ಆಗಿ ಹುಟ್ಟಿದ್ದೇ ತಪ್ಪಾ? – ಸಂಜೀತ್ ಆಲಿ ಡೆತ್ ನೋಟ್
ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇನಲ್ಲಿ ಯುವತಿ ಸಾಯಿ ಸುರಭಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸಾಕ್ಷ್ಯವೊಂದು ಲಭ್ಯವಾಗಿದೆ. ಘಟನಾ ಸ್ಥಳದಲ್ಲಿ ಯುವಕ ಸಂಜೀತ್ ಆಲಿ ಬರೆದಿದ್ದಾನೆ ಎನ್ನಲಾದ ಭಾವನಾತ್ಮಕ ಡೆತ್ ನೋಟ್ ಪತ್ತೆಯಾಗಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಡೆತ್ ನೋಟ್‌ನಲ್ಲಿ ಏನಿದೆ? ಹೋಂ ಸ್ಟೇನ ಚೇರ್ ಮೇಲಿದ್ದ ಡೈರಿಯಲ್ಲಿ ಸಂಜೀತ್ ಆಲಿ ಬರೆದಿದ್ದಾನೆ ಎನ್ನಲಾದ ಸಾಲುಗಳು ಪತ್ತೆಯಾಗಿವೆ. ಅದರಲ್ಲಿ, ಪ್ರಿಯತಮೆ ಹಿಂದೂ. ನಾನು …
Read More »ಕಾರಹುಣ್ಣಿಮೆ ಮುಂಗಾರು ಹಬ್ಬ: ಭಾರದ ಕಲ್ಲು ಎಳೆದು ಎತ್ತುಗಳ ಶಕ್ತಿ ಪ್ರದರ್ಶನ
ರಾಯಚೂರು: ಕಾರಹುಣ್ಣಿಮೆ ಹಿನ್ನೆಲೆ ರಾಯಚೂರು ಜಿಲ್ಲೆಯ ಹಲವೆಡೆ ಮುಂಗಾರು ಸಾಂಸ್ಕೃತಿಕ ಹಬ್ಬವನ್ನ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಯಚೂರು ತಾಲೂಕಿನ ಆಶಾಪೂರ ಗ್ರಾಮದಲ್ಲಿ ಎತ್ತುಗಳಿಗೆ ಭಾರದ ಕಲ್ಲು ಎಳೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ರಾಯಚೂರಿನ ಮಂಗಳವಾರಪೇಟೆ ಹಿರೇಮಠದ ಪೀಠಾಧಿಪತಿ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮಿ ಮುಂಗಾರು ಹಬ್ಬಕ್ಕೆ ಚಾಲನೆ ನೀಡಿದರು. ಹೊರಜಿಲ್ಲೆಗಳಿಂದ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 15 ಜೋಡಿ ಎತ್ತುಗಳು ಒಂದು ಟನ್ ಕಲ್ಲನ್ನ ಎಳೆದು ತಮ್ಮ ಸಾಮರ್ಥ್ಯ ಪ್ರದರ್ಶಿಸಿದವು. ಗ್ರಾಮದಲ್ಲಿ ಸತತ …
Read More »ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಿ: ವೈಷ್ಣವ್, ಸೋಮಣ್ಣಗೆ ಎಂ ಬಿ ಪಾಟೀಲ್ ಪತ್ರ
ಬೆಂಗಳೂರು:ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ರೈಲ್ವೆ ಸಂಪರ್ಕ ಬಲವರ್ಧನೆಗಾಗಿ ಕೋಚ್ ಡಿಪೋ ಸ್ಥಾಪಿಸಬೇಕು ಮತ್ತು ರೈಲು ನಿಲ್ದಾಣದಲ್ಲಿ ಇನ್ನೊಂದು ಆಗಮನ ಮತ್ತು ನಿರ್ಗಮನ ದ್ವಾರವನ್ನು ಅಭಿವೃದ್ಧಿ ಪಡಿಸಬೇಕೆಂದು ಕೋರಿ ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣನವರ ಜೊತೆ ಚರ್ಚಿಸಲಾಗಿದೆ. ಈ ಸಂಬಂಧವಾಗಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೂ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ …
Read More »ಡಿಕೆಶಿ ಕನಸಿನ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್‌ಗೆ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರೋಧ
ತುಮಕೂರು: ಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಕೂಸು ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್‌ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರೋಧ ವ್ತಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ಎಕ್ಸ್‌ಪ್ರೆಸ್ ಕೆನಾಲ್ ನಿರ್ಮಾಣವೂ ಒಂದು ಕಾರಣ ಆಗಿತ್ತು. ಈಗ ನಮ್ಮ ವಿರೋಧ ಮೀರಿ ಮತ್ತೆ ಎಕ್ಸ್‌ಪ್ರೆಸ್ ಕೆನಾಲ್ ಆರಂಭಿಸಿದರೆ ಪಕ್ಷದಲ್ಲಿ ಇರಬೇಕೋ ಬೇಡವೋ ಅನ್ನೋದನ್ನು ಯೋಚನೆ ಮಾಡಬೇಕಿದೆ ಎಂದು ಎಕ್ಸ್‌ಪ್ರೆಸ್ …
Read More »ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಶ್ವಾಸಕೋಶಗಳು, ಹೃದಯವೇ ನಾಪತ್ತೆ!
ನವದೆಹಲಿ: ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಹೃದಯ, ಶ್ವಾಸಕೋಶಗಳೇ ನಾಪತ್ತೆಯಾಗಿರುವ ಶಾಕಿಂಗ್ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. 33 ವರ್ಷದ ರಾಕೇಶ್ ಚೌಹಾಣ್ ಹೃದಯಾಘಾತದಿಂದ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಭಾರತೀಯ ನಾವಿಕನ ಮೃತದೇಹವನ್ನು ದಕ್ಷಿಣ ಅಮೆರಿಕದಿಂದ ಭಾರತಕ್ಕೆ ತರಲಾಯಿತು. ಆದರೀಗ, ರಾಕೇಶ್ ಸಾವಿನ ಸುತ್ತ ನಿಗೂಢತೆ ತೀವ್ರಗೊಂಡಿದೆ. ರಾಕೇಶ್ ಚೌಹಾಣ್ ಅವರ ಮೆದುಳು, ಹೃದಯ ಮತ್ತು ಶ್ವಾಸಕೋಶಗಳು ಸೇರಿದಂತೆ ದೇಶದ ಹಲವಾರು …
Read More »ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ಫುಟ್‌ಪಾತ್ ಅತಿಕ್ರಮಣದಾರರಿಗೆ ಕೃಷ್ಣಬೈರೇಗೌಡ ಎಚ್ಚರಿಕೆ
ಬೆಂಗಳೂರು: ಪಾದಚಾರಿಮಾರ್ಗಗಳಲ್ಲಿ ಮುಕ್ತವಾಗಿ ಓಡಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಅದರನ್ವಯ ನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡಹೇಳಿದ್ದಾರೆ. ವ್ಯಾಪಾರಿಗಳು ತಮ್ಮ ಸ್ವಂತ ಜಾಗದಲ್ಲಿ ವ್ಯಾಪಾರ ಮಾಡಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ವ್ಯಾಪಾರ ಮಾಡುವುದು ಕಾನೂನುಬಾಹಿರ. ಅಂಗಡಿಯವರು ಒತ್ತುವರಿ ಮಾಡಿದ್ದರೆ ತಕ್ಷಣವೇ …
Read More »
Laxmi News 24×7