Breaking News

Laxminews 24x7

ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್

ಬೆಂಗಳೂರು: ಕೆಂಪೇಗೌಡ ಜಯಂತಿ ಆಚರಣೆ ವೇಳೆ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ, ಚಿಕ್ಕಬಳ್ಳಾಪುರ  ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗಾದ ಅವಮಾನವನ್ನು ವಿವರಿಸಿ ಕಣ್ಣೀರು ಹಾಕಿದ್ದಾರೆ. ನಡೆದ ಗಲಾಟೆಯನ್ನು ಸಿದ್ದರಾಮಯ್ಯ ಅವರಿಗೆ ವಿವರಿಸಿದ ಶಾಸಕ ಪ್ರದೀಪ್ ಈಶ್ವರ್  ತೀವ್ರ ಭಾವುಕರಾದರು. ವಿರೋಧ ಪಕ್ಷಗಳಾದ ಜೆಡಿಎಸ್  ಮತ್ತು ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಚಪ್ಪಲಿ ಎಸೆದಿದ್ದಲ್ಲದೆ, ನನ್ನ ಹಾಗೂ ನನ್ನ ಕುಟುಂಬದವರನ್ನು …

Read More »

ಮುಂದಿನ ಮೂರು ವರ್ಷಗಳಲ್ಲಿ 100% ಎಬಿಸಿ ಗುರಿ ಸಾಧಿಸಲು ಕಾರ್ಯಸೂಚಿ ಸಿದ್ಧಪಡಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಶೇ.100 ಎಬಿಸಿ  ಕಾರ್ಯ ಪೂರ್ಣಗೊಳಿಸಲು ಸಮಗ್ರ ಕಾರ್ಯಸೂಚಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಬಿಎ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಹಾಗೂ ನಗರದಲ್ಲಿ ಸಸಿ ನೆಡುವುದಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೀದಿ ನಾಯಿಗಳ ಸಮಸ್ಯೆಯನ್ನು ಕಳೆದ 50 …

Read More »

ಎತ್ತಿನಹೊಳೆಗೆ ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ

ನವದೆಹಲಿ: ಬರ ಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಯೋಜನೆಯ ವೆಚ್ಚದ ಪೈಕಿ 4,708.14 ಕೋಟಿ ರೂ.ಗಳನ್ನು ಜಲ ಜೀವನ್ ಮಿಷನ್ ಅಡಿಯಲ್ಲಿ ಭರಿಸುವಂತೆ ಕೇಂದ್ರ ಸರ್ಕಾರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಈ ಸಂಬಂಧ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಹಾಗೂ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ಅವರು, ನೀರಿನ ಕೊರತೆಯಿರುವ ಕೋಲಾರ, ಚಿಕ್ಕಬಳ್ಳಾಪುರ, …

Read More »

ಬೀದರ್, ಕಲಬುರ್ಗಿ ಕುಡಿಯುವ ನೀರು ಯೋಜನೆ: ಜಲಶಕ್ತಿ ಸಚಿವರಿಗೆ ಖಂಡ್ರೆ ಮನವಿ

ಬೆಂಗಳೂರು: ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಸುಸ್ಥಿರ ಕುಡಿಯುವ ನೀರು ಖಾತ್ರಿಪಡಿಸುವ ಯೋಜನೆ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಚರ್ಚಿಸಿದ್ದಾರೆ. ಕರ್ನಾಟಕದ ಉತ್ತರ ತುದಿಯ ಈ ಎರಡು ಜಿಲ್ಲೆಗಳು ಕುಡಿಯುವ ನೀರಿನ ಕೊರತೆ ಎದುರಿಸುತ್ತಿದ್ದು, ಅಂತರ್ಜಲ ಮಟ್ಟವೂ ಕುಸಿದಿದೆ. ಹೀಗಾಗಿ ಮುಂದಿನ 30 ವರ್ಷಗಳವರೆಗೆ ಶಾಶ್ವತ, ಸುಸ್ಥಿರ ಮತ್ತು ಮೇಲ್ಮೈ ನೀರು ಆಧಾರಿತ …

Read More »

ಕೇತನ್ ಹತ್ಯೆ ಬಳಿಕ ಲೋಹಗಡ ಕೋಟೆಗೆ ಮುಗಿಬಿದ್ದ ಜನ – ಕೊಲೆ ನಡೆದ ಸ್ಥಳಕ್ಕೆ ‘ಸಿಯಾ ಪಾಯಿಂಟ್’ ಹೆಸರು

ಮುಂಬೈ: ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಪ್ರಕರಣದ ಬಳಿಕ ಮಹಾರಾಷ್ಟ್ರದ  ಐತಿಹಾಸಿಕ ಲೋಹಗಡ ಕೋಟೆಗೆ ಪ್ರವಾಸಿಗರ ಸಂಖ್ಯೆ ಏಕಾಏಕಿ ಹೆಚ್ಚಾಗಿದೆ. ಕೇತನ್ ಹತ್ಯೆ ನಡೆದ ಸ್ಥಳವನ್ನು ಇದೀಗ ಹಲವರು ‘ಸಿಯಾ ಪಾಯಿಂಟ್’ ಎಂದು ಕರೆಯುತ್ತಿದ್ದು, ಈ ವೈರಲ್ ಸ್ಥಳವನ್ನು ನೋಡಲು ಸಾಕಷ್ಟು ಜನ ಕೋಟೆಗೆ ಭೇಟಿ ನೀಡುತ್ತಿದ್ದಾರೆ. ಜೂನ್ 18ರಂದು 26 ವರ್ಷದ ಕೇತನ್ ಅಗರ್ವಾಲ್ ಲೋಹಗಡ ಕೋಟೆಯಲ್ಲಿನ ಸುಮಾರು 350 ಅಡಿ ಎತ್ತರದ ಕಣಿವೆಗೆ ತಳ್ಳಲ್ಪಟ್ಟು …

Read More »

ಸೌಥ್ ಕೊಂಕಣ ಎಜ್ಯುಕೇಷನ್ ಸೊಸೈಟಿಯಿಂದ ಪದ್ಮಶ್ರೀ ಪುರಸ್ಕೃತ ‘ಡಾ. ಪ್ರಭಾಕರ ಕೋರೆ’ ಅವರಿಗೆ ಸನ್ಮಾನ

ಕೇವಲ ಸಾಂಪ್ರದಾಯಿಕ ಕ್ಲಾಸ್‌ರೂಮ್ ಬೋಧನೆಗೆ ಸೀಮಿತವಾಗದೆ ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ; ಪದ್ಮಶ್ರೀ ಡಾ. ಪ್ರಭಾಕರ ಕೋರೆ ಬೆಳಗಾವಿಯ ಆರ್‌ಪಿಡಿ ಕಾಲೇಜಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಶಿಕ್ಷಣ ಮತ್ತು ಸಮಾಜ ಸೇವಕ ಪದ್ಮಶ್ರೀ ಡಾ. ಪ್ರಭಾಕರ ಬಸವಪ್ರಭು ಕೋರೆ ಅವರಿಗೆ ದಕ್ಷಿಣ ಕೊಂಕಣ ಶಿಕ್ಷಣ ಸಂಸ್ಥೆಯಿಂದ ಅತ್ಯುನ್ನತ ಗೌರವ ಸಮರ್ಪಣೆ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರು ಕೇವಲ ಸಾಂಪ್ರದಾಯಿಕ ಕ್ಲಾಸ್‌ರೂಮ್ …

Read More »

LIC ಹಣಕ್ಕಾಗಿ ಸ್ವಂತ ತಮ್ಮನನ್ನೇ ಕಾರು ಹತ್ತಿಸಿ, ಕುತ್ತಿಗೆ ಬಿಗಿದು ಕೊಂದ ಪಾಪಿ ಅಣ್ಣ!

​ತುಮಕೂರು: ಹಣದ ಕ್ರೂರ ವ್ಯಾಮೋಹ ಮನುಷ್ಯನನ್ನು ಎಷ್ಟು ಮಟ್ಟಿಗೆ ರಾಕ್ಷಸನನ್ನಾಗಿ ಮಾಡುತ್ತದೆ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ಬೆಚ್ಚಿಬೀಳಿಸುವ ಘಟನೆಯೇ ಸಾಕ್ಷಿ. ವಿಮಾ (LIC) ಹಣಕ್ಕಾಗಿ ಸ್ವಂತ ಕರುಳಿನ ಕುಡಿಯನ್ನೇ ಅತ್ಯಂತ ಅಮಾನುಷವಾಗಿ ಕೊಲೆ ಮಾಡಿ, ಅದನ್ನೊಂದು ಬೈಕ್ ಅಪಘಾತ ಎಂದು ಬಿಂಬಿಸಲು ಹೋಗಿದ್ದ ಪಾಪಿ ಅಣ್ಣ ಹಾಗೂ ಆತನ ಗ್ಯಾಂಗ್ ಈಗ ಪೊಲೀಸರ ಅತಿಥಿಯಾಗಿದೆ! ​ಏನಿದು ಮಾಸ್ಟರ್ ಪ್ಲಾನ್? ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ನಿದ್ರಗಟ್ಟ ಗ್ರಾಮದ …

Read More »

ಕೇವಲ 500 ರೂಪಾಯಿಗಾಗಿ ಆಟೋ ಚಾಲಕನ ಹತ್ಯೆ – ಆರೋಪಿ ಅರೆಸ್ಟ್‌

ಹುಬ್ಬಳ್ಳಿ: 500 ರೂ. ಸಾಲದ ವಿಚಾರಕ್ಕೆ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆಟೋ ಚಾಲಕನಾಗಿದ್ದ ಈರಣ್ಣ ಹುರಕಡ್ಲಿ (45) ಮೇಲೆ ಜೂ.25 ರಂದು ಶಶಿಧರ್ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂ.28ರ ರಾತ್ರಿ ಅವರು ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಈರಣ್ಣ, ಶಶಿಧರ್ ಬಳಿ 500 ರೂ. ಸಾಲ …

Read More »

ಪತಿಯನ್ನು ಕೊಂದು ಹಾರ್ಟ್‌ ಅಟ್ಯಾಕ್‌ ಕಥೆ ಕಟ್ಟಿದ ಶಿಕ್ಷಕಿ ಅಂದರ್‌

ಮೈಸೂರು: ಪತಿಯನ್ನು ಸೀರೆಯಿಂದ ಕತ್ತು ಬಿಗಿದು ಕೊಲೆ ಮಾಡಿ, ಹೃದಯಾಘಾತ ಎಂದು ಬಿಂಬಿಸಲು ಪತ್ನಿ ಯತ್ನಿಸಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ. ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹುಡ್ಕೊ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 50 ವರ್ಷದ ನಿತ್ಯಾನಂದ ಮೃತಪಟ್ಟ ವ್ಯಕ್ತಿ. ಅವರು ಮಹೀಂದ್ರಾ ಶೋ ರೂಂನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಸುಶೀಲ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ದಂಪತಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಪ್ರಾಥಮಿಕ …

Read More »

ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನ  ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಟಾಟಾ ಪವರ್ ಕಂಪನಿಯು ಕರ್ನಾಟಕದಲ್ಲಿ ವಿದ್ಯುತ್ ಸರಬರಾಜು (ವಿತರಣೆ) ಮಾಡಲು …

Read More »