Breaking News

Laxminews 24x7

2 ಕೋಟಿ ವಿಮೆಗಾಗಿ ಗಂಡನನ್ನು ಕೊಂದ ಮಗಳು ಅರೆಸ್ಟ್ – ಊರಲ್ಲಿ ತಲೆ ಎತ್ತಲಾಗದೆ ತಾಯಿ ಆತ್ಮಹತ್ಯೆ

ಬೆಳಗಾವಿ: 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಆಘಾತಕಾರಿ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಮಗಳ ಕೃತ್ಯದಿಂದ ಜರ್ಜರಿತರಾಗಿದ್ದ ಆಕೆಯ ತಾಯಿ ನೇಣಿಗೆ ಶರಣಾಗಿದ್ದಾರೆ. ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ತಾಯಿ ಮಹಾದೇವಿ ಬದಾಮಿ (57) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಸುಮಾ ಮತ್ತು ಆಕೆಯ ಪ್ರಿಯಕರ …

Read More »

ಸಂತೋಷದ ಬದುಕಿಗೆ ಯೋಗ ದಾರಿ : ವೀರಣ್ಣ ಚರಂತಿಮಠ

ಬಾಗಲಕೋಟೆ : ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ ಅದು ನಮ್ಮ ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನವನ್ನು ಸಾಧಿಸುವ ಜೀವನ ವಿಧಾನವಾಗಿದೆ. ಇಂದಿನ ವೇಗದ ಜೀವನದಲ್ಲಿ ಯೋಗವು ಒತ್ತಡವನ್ನು ಕಡಿಮೆ ಮಾಡಿ, ಆರೋಗ್ಯಕರ ಹಾಗೂ ಸಂತೋಷದ ಬದುಕಿಗೆ ದಾರಿ ತೋರಿಸುತ್ತದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ ಹೇಳಿದರು. ನಗರದ ಬಿವಿವಿ ಸಂಘದ ಮೈದಾನದಲ್ಲಿ ವಿವಿಧ ಮಹಾವಿದ್ಯಾಲಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹನ್ನೆರಡನೇಯ ಯೋಗದಿನದಲ್ಲಿ ಪಾಲ್ಗೊಂಡು ಮಾತನಾಡಿ ಅವರು …

Read More »

ಮನೆಯಲ್ಲಿ ಮಲಗಿದ್ದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ  ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರವೀಣ್ (29) ಕೊಲೆಯಾದ ಯುವಕ. ಈತ ಟ್ರ್ಯಾಕ್ಟರ್‌ ಬಾಡಿಗೆ ಹಾಗೂ ಇತರೆ ಕೆಲಸಗಳನ್ನು ಮಾಡಿಕೊಂಡಿದ್ದ. ಎಂದಿನಂತೆ ಗುರುವಾರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದಾಗ ಆತನನ್ನು ಹತ್ಯೆ ಮಾಡಲಾಗಿದೆ. ಕೆಲಸಕ್ಕೆ ಬರುವಂತೆ ಹಿಂದಿನ ದಿನ ಕೆಲವು ಯುವಕರಿಗೆ ಪ್ರವೀಣ್ ತಿಳಿಸಿದ್ದ. ಇಂದು ಬೆಳಗ್ಗೆ ಯುವಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಈ …

Read More »

ಪರಿಹಾರ ವಿಚಾರಕ್ಕೆ ಗಲಾಟೆ – ರೈತರ ಶರ್ಟ್ ಹಿಡಿದು ಎಳೆದೊಯ್ದು PSI ದರ್ಪ

ಕೊಪ್ಪಳ: ಪರಿಹಾರ ಹಣದ ವಿಚಾರವಾಗಿ ನಡೆದ ಗಲಾಟೆ ವೇಳೆ ರೈತರ ಶರ್ಟ್ ಕಾಲರ್ ಹಿಡಿದು ಪಿಎಸ್‌ಐ ದರ್ಪ ತೋರಿಸಿರುವ ಘಟನೆ ಯಲಬುರ್ಗಾ  ತಾಲೂಕಿನಲ್ಲಿ ಗುತ್ತೂರ ಗ್ರಾಮದಲ್ಲಿ ನಡೆದಿದೆ. ಬೇವೂರ ಪೊಲೀಸ್ ಠಾಣೆಯ ಪಿಎಸ್‌ಐ ಗುರುರಾಜ್ ರೈತರಾದ ಪ್ರಕಾಶ್, ಶ್ರೀಕಾಂತ್ ಹಾಗೂ ವಿಜಯರೆಡ್ಡಿ ಮೇಲೆ ದರ್ಪ ತೋರಿದ್ದಾನೆ. ಶುಕ್ರವಾರ (ಜೂ.19) 10 ಎಕರೆ ಜಮೀನಿನಲ್ಲಿ ಹೈ-ಟೆನ್ಶನ್ ವಿದ್ಯುತ್‌ನ ನಾಲ್ಕು ಕಂಬ ಅಳವಡಿಸಲು ರೈತರು 1.20 ಕೋಟಿ ರೂ. ಪರಿಹಾರ ಕೇಳಿದ್ದರು. ಆದರೆ …

Read More »

ಬಿ.ವಿ.ವಿ ಸಂಘದ ಬಿಮ್ಸ್ ವಿದ್ಯಾರ್ಥಿನಿಗೆ 1.10 ಲಕ್ಷ ರೂಗಳ ಸಹಾಯಧನ

ಬಾಗಲಕೋಟೆ: ಬಿ.ವಿ.ವಿ ಸಂಘದ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ ಸ್ಟಡೀಜ್ (ಬಿಮ್ಸ್)ನಲ್ಲಿ 2005-07ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾಭ್ಯಾಸ ಮುಗಿಸಿ ದುಬೈನಲ್ಲಿರುವ ನೆಟವರ್ಕ್ ಇಂಟರನ್ಯಾಷನಲ್ ಎಲ್.ಎಲ್.ಸಿ ಸಂಸ್ಥೆಯ ಗುಪ್ರ್ ಅಕ್ವೈರಿಂಗ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ದುರ್ಗಾ ಪ್ರವೀಣಾ ವಂಕಾ ರವರು ಮಹಿಳಾ ಸಬಲೀಕರಣ ಹಾಗೂ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ, ಬಾಗಲಕೋಟೆ ನಗರದ ಪ್ರತಿಷ್ಠಿತ ಎಂ.ಬಿ.ಎ ಮಹಾವಿದ್ಯಾಲಯವಾದ ಬಿ.ವಿ.ವಿ ಸಂಘದ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ ಸ್ಟಡೀಜ್ (ಬಿಮ್ಸ್)ನಲ್ಲಿ ವ್ಯಾಸಾಂಗ ಮಾಡುತ್ತಿರುವ ಪ್ರತಿಭಾವಂತ …

Read More »

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ

ಬೆಂಗಳೂರು: ಭಾನುವಾರ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್  ಪದಗ್ರಹಣ ಮಾಡಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಪ್ಯಾಲೆಸ್ ಗ್ರೌಂಡ್‌ನಲ್ಲಿ ಸಮಾರಂಭ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೇರಿದಂತೆ ಎಐಸಿಸಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಿರ್ಗಮಿತ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ಹಸ್ತಾಂತರ ಮಾಡುವ ಮೂಲಕ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಅಂದಾಜು 1 ಲಕ್ಷ …

Read More »

ವಿಧಾನಸೌಧದ ಮುಂಭಾಗ ಗಣ್ಯರಿಂದ ಯೋಗ

ಬೆಂಗಳೂರು: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ  ಹಿನ್ನೆಲೆ ವಿಧಾನಸೌಧದ  ಮುಂಭಾಗದ ಗ್ರ್ಯಾಂಡ್‌ ಸ್ಟೆಪ್ಸ್‌ನಲ್ಲಿ ರಾಜ್ಯ ಆಯುಷ್ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಗಣ್ಯರು, ಸೆಲೆಬ್ರಿಟಿಗಳು ಹಾಗೂ ಯೋಗಪಟುಗಳು ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಾವಿರಾರು ಯೋಗಾಸಕ್ತರು ಭಾಗವಹಿಸಿದರು. ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಆರೋಗ್ಯ ಸಚಿವ ಯು.ಟಿ. ಖಾದರ್ ಸೇರಿದಂತೆ …

Read More »

ಯೋಗವು ಕೇವಲ ದೈಹಿಕ ಕಸರತ್ತಲ್ಲ, ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿ: ಮೋದಿ

ಕೋಲ್ಕತ್ತಾ: ಯೋಗವು ಕೇವಲ ದೈಹಿಕ ಕಸರತ್ತಲ್ಲ ಅಥವಾ ಇದು ಯಾವುದೇ ನಿರ್ದಿಷ್ಟ ವಯೋಮಾನದವರಿಗೆ ಸೀಮಿತವಾಗಿಲ್ಲ. ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದರು. ಕೋಲ್ಕತ್ತಾದಐತಿಹಾಸಿಕ ‘ರೆಡ್ ರೋಡ್‌’ನಲ್ಲಿ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ) ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೂನ್ 21 ಭೂಮಿಯ ಮೇಲಿನ ಸುದೀರ್ಘ ದಿನವಾಗಿದೆ. ಆದರೆ ಈಗ ಯೋಗದ ಕಾರಣದಿಂದಾಗಿ ಇದು ವಿಶ್ವದ ಅತಿ ಹೆಚ್ಚು ಜನ ಭಾಗವಹಿಸುವ …

Read More »

ಭೀಕರ ರಸ್ತೆ ಅಪಘಾತ; ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ 2 ಲಾರಿಗಳು

ಬೆಳಗಾವಿ: ಲಾರಿಗೆ ಹಾಲಿನ ಟ್ಯಾಂಕರ್  ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲೇ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣದ ಬಳಿ ನಡೆದಿದೆ. ಪುಣೆ ಬೆಂಗಳೂರು ಹೆದ್ದಾರಿ ಮೇಲೆ ಸಾಗುತ್ತಿದ್ದ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದೆ. ಗೋವಿನ ಜೋಳದ ಮೂಟೆ ಹೊತ್ತು ಸಾಗುತ್ತಿದ್ದ ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎರಡೂ ಲಾರಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ಅದೃಷ್ಟವಶಾತ್ …

Read More »

ನಾಳೆ NEET-UG ಮರುಪರೀಕ್ಷೆ, ಇಂದು ಮೆಗಾ ಮಾಕ್‌ಡ್ರಿಲ್‌ – 15,000 ಅರೆಸೈನಿಕ ಸಿಬ್ಬಂದಿ ಪತ್ರಿಕೆ ರವಾನೆ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶಾದ್ಯಂತ ಸಂಚಲನ ಮೂಡಿಸಿದ್ದ ನೀಟ್‌-ಯುಜಿ ಮರುಪರೀಕ್ಷೆ  ನಾಳೆ (ಜೂ.21) ದೇಶದ 551 ನಗರಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ ಇಂದು (ಶನಿವಾರ) ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ರಾಷ್ಟ್ರವ್ಯಾಪಿ ಮಾಕ್‌ ಡ್ರಿಲ್‌ ನಡೆಸಲಿದೆ. ನೀಟ್‌ ಪರೀಕ್ಷೆಗೆ ಇದುವರೆಗೂ ನೋಡಿರದ ರೀತಿಯ ಭದ್ರತಾ ವ್ಯವಸ್ಥೆಯನ್ನು ಎನ್‌ಟಿಎ ನಿಯೋಜಿಸಿದ್ದು, ಈ ಸಂಬಂಧ ಇಂದು ಅಣುಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ಪೂರ್ಣ ಪ್ರಮಾಣದ ಅಭ್ಯಾಸ ನಡೆಯಲಿದೆ. …

Read More »