Breaking News

Laxminews 24x7

ಮಹಾವಿಕಾಸ ಅಘಾಡಿ ಪತನ ಖಚಿತ..?

ನವದೆಹಲಿ, ಜೂ.28- ಶಿವಸೇನೆಯ ಮುಖಂಡರು ಶತಾಯ ಗತಾಯ ಸರ್ಕಾರ ಉಳಿಸಿಕೊಳ್ಳುತ್ತೇವೆ ಎಂದು ಹೇಳುತ್ತಿರುವುದಕ್ಕೆ ವ್ಯತಿರಿಕ್ತವಾಗಿ ರಾಜಕೀಯ ಬೆಳವಣಿಗೆಗಳಾಗುತ್ತಿದ್ದು, ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿಯ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗುವುದು ದಿನೇ ದಿನೇ ಖಚಿತವಾಗುತ್ತಿದೆ.   ಅಸ್ಸಾಂನ ಗುವಾಹಟಿಯಲ್ಲಿ ಠಿಕಾಣಿ ಹೂಡಿರುವ ಶಿವಸೇನೆಯ 39 ಶಾಸಕರು, ಪ್ರಹಾರ್ ಜನಶಕ್ತಿ ಪಕ್ಷದ ಇಬ್ಬರು ಹಾಗೂ ಇತರ 11 ಮಂದಿ ಸೇರಿ 50 ಮಂದಿ ಶಾಸಕರು ಉದ್ದವ್ ಠಾಕ್ರೆ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ …

Read More »

ನನಗೆ ಮೋದಿ ಇನ್ನೂ ಅಡಗಿ ಗ್ಯಾಸ್‌ ಕೊಟ್ಟಿಲ್ಲೆಪ್ಪ: ಹಿಂಡಲಗಾ ಗ್ರಾಮದ ಅಜ್ಜಿ ಬಾಯವ್ವ

ಬೆಳಗಾವಿ: ‘ನನಗೆ ಮೋದಿ ಇನ್ನೂ ಅಡಗಿ ಗ್ಯಾಸ್‌ ಕೊಟ್ಟಿಲ್ಲೆಪ್ಪ. ಇವತ್ತು ಮನೆಗೆ ಮಂತ್ರಿ ಬರಾತಾನ್‌ ಅಂದ್ರು. ಕಟಗಿ ಒಲಿ ಮ್ಯಾಲೆ ಅಡಗಿ ಮಾಡಿ ನೀಡೇನಿ…’ ತಾಲ್ಲೂಕಿನ ಹಿಂಡಲಗಾ ಗ್ರಾಮದ ಅಜ್ಜಿ ಬಾಯವ್ವ ವಸಂತ ಮಾಸ್ತೆ ಅವರ ಮಾತುಗಳಿವು. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ರಾಜ್ಯ ಖಾತೆ ಸಚಿವ ಸೋಮ ಪ್ರಕಾಶ್ ಅವರು ಮಂಗಳವಾರ ಮಧ್ಯಾಹ್ನ, ಪರಿಶಿಷ್ಟ ಜಾತಿಯ ಈ ಅಜ್ಜಿ ಮನೆಯಲ್ಲೇ ಊಟ ಮಾಡಿದರು. 87 ವರ್ಷ ವಯಸ್ಸಿನ ಈ …

Read More »

ನೂಪುರ್ ಶರ್ಮಾ ಬೆಂಬಲಿಗನ ಭೀಕರ ಕೊಲೆ;ಹಿಂದು ಸಂಘಟನೆಗಳಿಂದ ದೇಶಾದ್ಯಂತ ಅಭಿಯಾನ..

ಧಾರವಾಡ: ನೂಪುರ್ ಶರ್ಮಾ ಬೆಂಬಲಿಗ, ಟೈಲರ್ ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ನಾಳೆ ದೇಶಾದ್ಯಂತ ಹಿಂದು ಸಂಘಟನೆಗಳು ಅಭಿಯಾನ ಆರಂಭಿಸಲಿದ್ದಾರೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಷಯ ಬಹಿರಂಗಪಡಿಸಿದ್ದಾರೆ.   ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ಧಾರವಾಡದಲ್ಲಿ ಮಾತನಾಡಿರುವ ಮುತಾಲಿಕ್, ನಾಳೆ ಶ್ರೀರಾಮ ಸೇನೆ, ಯುವ ಬ್ರಿಗೇಡ್, ಹಿಂದೂ ಜನಜಾಗೃತಿ ಸೇರಿ ಇತರೆ ಸಂಘಟನೆಗಳಿಂದ ಅಭಿಯಾನ ಆರಂಭವಾಗಲಿದೆ. ‘ನಾನು ಕನ್ನಯ್ಯ ಲಾಲ್’, ‘ನಾನು ನೂಪುರ್ ಶರ್ಮಾ ಬೆಂಬಲಿಗ’ ಎಂಬ …

Read More »

ತೆರಿಗೆ ವಿನಾಯಿತಿ ರದ್ದು: ದುಬಾರಿಯಾಗಲಿವೆ ಹೋಟೆಲ್ ರೂಮ್, ಆಸ್ಪತ್ರೆ ವಾರ್ಡ್ ಶುಲ್ಕ.

ನವದೆಹಲಿ: ಕೆಲವು ಸರಕುಗಳ ಮೇಲಿನ ತೆರಿಗೆ ವಿನಾಯಿತಿಯನ್ನು ತೆಗೆದು ಹಾಕಬೇಕೆಂಬ ಪ್ರಸ್ತಾವನೆಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಮಂಡಳಿ ಅನುಮೋದನೆ ನೀಡಿದೆ. ಕೆಲ ವಸ್ತುಗಳ ತೆರಿಗೆ ಏರಿಕೆ ಬಗ್ಗೆ ಬುಧವಾರ ನಿರ್ಧಾರವಾಗುವ ಸಾಧ್ಯತೆ ಇದೆ.   ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಚಂಡೀಗಢದಲ್ಲಿ ಮಂಗಳವಾರ ಆರಂಭವಾದ ಮಂಡಳಿಯ 47ನೇ ಸಭೆಯು ಕೆಲವು ಜಿಎಸ್​ಟಿ ದರಗಳಲ್ಲಿ ಬದಲಾವಣೆಗೆ ಒಪ್ಪಿಗೆ ನೀಡಿದೆ. ಚಿನ್ನ ಮತ್ತು ಅಮೂಲ್ಯ ಹರಳುಗಳ ಅಂತಾರಾಜ್ಯ ಸಾಗಾಟಕ್ಕೆ …

Read More »

ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..

 ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್​ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್​​ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ …

Read More »

ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ …

Read More »

ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಚರ್ಚೆ:

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ರಾಷ್ಟ್ರೀಯ ನಾಯಕರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಮುಂಬರುವ ದಿನಗಳಲ್ಲಿ ನಡೆಯುವ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ, 2023ರ ವಿಧಾನಸಭೆ ಚುನಾವಣೆಗಳಿಗೆ ಸರ್ವರೀತಿಯಲ್ಲಿ ಸಜ್ಜಾಗುವಂತೆ ರಾಜ್ಯ ನಾಯಕರಿಗೆ ಕರೆ ನೀಡಲಾಗಿದೆ. ಸಭೆಯಲ್ಲಿ ಪಕ್ಷದ ಪ್ರಮುಖರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ …

Read More »

ಕ್ಲೈಮ್ಯಾಕ್ಸ್​ ಹಂತದತ್ತ ಮಹಾರಾಷ್ಟ್ರ ರಾಜಕೀಯ

ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ತಲುಪಿದ್ದು, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್​​ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತ ಸಾಬೀತು ಮಾಡಲು ಸೂಚನೆ ನೀಡುವಂತೆ ಮನವಿ ಮಾಡಿದ್ದಾಗಿ ವರದಿಯಾಗಿದೆ. ಮಹಾವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟಾಗಿರುವ ಬೆನ್ನಲ್ಲೇ ಇಂದು ಬೆಳಗ್ಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಫಡ್ನವೀಸ್​​, ಗೃಹ ಸಚಿವ ಅಮಿತ್ ಶಾ ಹಾಗೂ …

Read More »

ರೈತ, ಮಣ್ಣು ಹಾಗೂ ಎತ್ತುಗಳ ನಡುವಿನ ಅನನ್ಯ ಸಂಬಂಧವೇ ಮಣ್ಣೆತ್ತಿನ ಅಮವಾಸ್ಯೆ:

ಉತ್ತರ ಕರ್ನಾಟಕ ವಿಶಿಷ್ಟ ಸಂಪ್ರದಾಯಗಳ ಆಚರಣೆಗೆ ಹೆಸರುವಾಸಿ. ಅದರಲ್ಲೂ ರೈತಾಪಿ ವರ್ಗದವರು ಪ್ರಕೃತಿಯಲ್ಲಿ ದೈವತ್ವವನ್ನು ಕಾಣುತ್ತಾರೆ. ತಮ್ಮ ಬದುಕಿಗೆ ಆಸರೆಯಾಗುವ ಎತ್ತುಗಳನ್ನು ಪ್ರೀತಿಯಿಂದ ಪೂಜಿಸಿ ಸಂಭ್ರಮಿಸುವ ಹಬ್ಬವೇ ಮಣ್ಣೆತ್ತಿನ ಅಮವಾಸ್ಯೆ. ಇಂತಹ ವಿಶಿಷ್ಠವಾದ ಹಬ್ಬವೇ ಮಣ್ಣಿನ ಮಕ್ಕಳು ಬಸವನಾಡು ವಿಜಯಪುರದಲ್ಲಿ ಸಂಭ್ರಮದಿಂದ ಆಚರಿಸಿದರು.  .ನಮ್ಮ ದೇಶ ಹಬ್ಬ ಹರಿದಿನಗಳ ನಾಡು. ಇಲ್ಲಿ ಸಂಸ್ಕೃತಿ ಸಂಸ್ಕಾರಗಳಿಗೆ ವಿಶೇಷ ಮಹತ್ವವಿದೆ. ನಾವೆಲ್ಲ ಕಲ್ಲು ಮಣ್ಣಿನಲ್ಲಿ, ಪ್ರಕೃತಿ ಯಲ್ಲಿ ದೈವತ್ವವನ್ನು ಕಾಣುತ್ತೇವೆ. ಮಣ್ಣಿನಿಂದ ಎತ್ತುಗಳನ್ನು …

Read More »

T.C.ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ

ಅಕ್ರಮ ಸಕ್ರಮ ಯೋಜನೆಯಡಿ ಟಿಸಿ ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಲೈನ್ ಮನ್ ಸಂಜೀವ ಶಿವಲಿಂಗಪ್ಪ ಅಂಬಿ ಬಂಧಿತ ಆರೋಪಿ. ರೈತನಿಗೆ ಟಿಸಿ ಕೊಡಲು ಬರೋಬ್ಬರಿ 25 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ. ಮರಗೂರ ಕ್ರಾಸ್ ಬಳಿಯ ಬಸ್ ‌ನಿಲ್ದಾಣದಲ್ಲಿ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ …

Read More »