Breaking News

Laxminews 24x7

ನಿರುದ್ಯೋಗ ಬಿಕ್ಕಟ್ಟು ಬಗೆಹರಿಸಿ ಮೋದಿಜೀ ಎಂದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿರುವ ನಿರುದ್ಯೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುತ್ತಾರೆ. ಈ ಬಾರಿಯೂ ಇದೇ ವಿಚಾರಕ್ಕೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಹೇಟ್-ಇನ್-ಇಂಡಿಯಾ ಮತ್ತು ಮೇಕ್-ಇನ್-ಇಂಡಿಯಾ ಒಟ್ಟಿಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.   ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ ಅಪಾಯಕಾರಿ ನಿರುದ್ಯೋಗದ ಬಿಕ್ಕಟ್ಟನ್ನು ಪರಿಹರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. “”ಭಾರತದಿಂದ …

Read More »

ಪೈಲೆಟ್‍ನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು ಸಚಿವರು

ಬೆಂಗಳೂರು,ಏ.28- ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಸಚಿವರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಎಂ.ಟಿ.ಬಿ.ನಾಗರಾಜ್ ಮತ್ತು ಮುರುಗೇಶ್ ನಿರಾಣಿ ಅವರು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಬೇಕಿದ್ದ ಉದ್ಯಮಿಯಾಗು -ಉದ್ಯೋಗ ನೀಡು ಮತ್ತು ಕೈಗಾರಿಕಾ …

Read More »

ರಮ್ಮಿ ಜೂಜಾಟಕ್ಕೆ ಮಾಡಿದ ಸಾಲ ತೀರಿಸಲು ವಿಫಲಳಾಗಿ ನೇಣಿಗೆ ಶರಣು-ಯುವತಿಯ ಸಾವಿನ ರಹಸ್ಯ ಬಯಲು

ಕೋಯಿಕ್ಕೋಡ್: ಕೇರಳದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ ಬಿಜಿಶಾ ಸಾವಿನ ರಹಸ್ಯವನ್ನು ಕೊನೆಗೂ ಪೊಲೀಸರು ಬೇಧಿಸಿದ್ದು, ಆನ್‌ಲೈನ್ ಗೇಮಿಂಗ್‌ನಲ್ಲಿ ಕೋಟ್ಯಾಂತರ ರೂ. ವ್ಯವಹಾರ ಮಾಡಿ ಸಾಲ ತೀರಿಸಲು ಸಾಧ್ಯವಾಗದಿರುವುದೇ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ. ಚೆಲಾಯಿಲ್ ಮೂಲದ ಬಿಜಿಶಾ ಶವ ಕಳೆದ ಡಿಸೆಂಬರ್‌ನಲ್ಲಿ ನೇಣಿ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಆಕೆಯ ಆತ್ಮಹತ್ಯೆಗೆ ಕಾರಣ ಏನೆಂದು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಆದರೆ ತದನಂತರ ಆಕೆಯ ಬ್ಯಾಂಕ್ ವ್ಯವಹಾರಗಳನ್ನು ಗಮನಿಸಿದಾಗ ತನ್ನ …

Read More »

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು …

Read More »

ಹುಬ್ಬಳ್ಳಿ ಗಲಭೆ ಕೇಸ್ : ಮತ್ತೆ 8 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ.   ಗಲಭೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ನೀಡಿರುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.   ಪೊಲೀಸ್ ವಶದಲ್ಲಿದ್ದ ಗಲಭೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ವಸೀಂ ಪಠಾಣ್‍ನನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು …

Read More »

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಕಿಚ್ಚನ ಬೆನ್ನಿಗೆ ನಿಂತ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಆದರೆ ಇದೀಗ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಪರ ನಿಂತಿದ್ದಾರೆ. ಚಿತ್ರನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ‌ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ.‌ ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಗೌರವಿಸಬೇಕು. …

Read More »

ಸಿಎಂ ಬೊಮ್ಮಾಯಿ ಪ್ರಯಾಣಿಸಬೇಕಿದ್ದ ವಿಮಾನಕ್ಕೆ ಪೈಲೆಟ್‌ ಗೈರು!

ಬೆಂಗಳೂರು: ಪೈಲೆಟ್‌ ಅನುಪಸ್ಥಿತಿಯಿಂದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿದ ಬೆಳವಣಿಗೆ ಬುಧವಾರ ನಡೆದಿದೆ. ಇದನ್ನು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. “ಮಧ್ಯಾಹ್ನ ಮಂಗಳೂರಿಗೆ ತೆರಳಬೇಕಿತ್ತು. ಆದರೆ, ಪೈಲೆಟ್‌ ಒಬ್ಬರು ಬಾರದ ಕಾರಣ ವಿಮಾನ ಮೇಲೇರಲಿಲ್ಲ’ ಎಂದು ಮೂಡುಬಿದಿರೆ ಕಾರ್ಯಕ್ರಮದಲ್ಲಿ ಸಿಎಂ ಹೇಳಿದರು. ಆದರೆ ಅಧಿಕಾರಿಗಳ ಮೂಲದ ಪ್ರಕಾರ ತಾಂತ್ರಿಕ ಸಮಸ್ಯೆ ಉಂಟಾಗಿದ್ದರಿಂದ ವಿಮಾನ ಮೇಲೇರದೆ ಸಿಎಂ ನಂತರ ಪ್ರತ್ಯೇಕ ಹೆಲಿಕ್ಯಾಪ್ಟರ್‌ ಮೂಲಕ ಮೂಡುಬಿದಿರೆಗೆ ತೆರಳುವಂತಾಯಿತು ಎನ್ನಲಾಗಿದೆ.

Read More »

ಗೆಳೆಯನ ಪತ್ನಿ ಜೊತೆ ಅನೈತಿಕ ಸಂಬಂಧ; ಪಾರ್ಟಿ ಮಾಡಿ ತಲೆ ಮೇಲೆ ಕಲ್ಲೆತ್ತಿ ಹಾಕಿ ಬರ್ಬರ ಕೊಲೆ

ಆರೋಪಿ ತಿರುಪತಿ ಪತ್ನಿ ಜೊತೆ ಮೃತ ತಿರುಪತಿ ಅನೈತಿಕ ಸಂಬಂಧ ಹೊಂದಿದ್ದ. ಪತ್ನಿ ಜೊತೆಗಿನ ಅನೈತಿಕ ಸಂಬಂಧ ಬಿಡುವಂತೆ ಆರೋಪಿ ತಿರುಪತಿ ಬೇಡಿಕೊಂಡಿದ್ದ. ಇಡೀ ಊರಿಗೆ ವಿಷಯ ಗೊತ್ತಾಗುತ್ತಿದೆ ತನ್ನ ಪತ್ನಿ ಸಹವಾಸ ಬಿಡುವಂತೆ ಮನವಿ ಮಾಡಿದ್ದ.ರಾಯಚೂರು: ಗೆಳೆಯನ ಪತ್ನಿ ಮೇಲೆ ಕಣ್ಣು ಹಾಕಿದ ವ್ಯಕ್ತಿ ಅನಾಥ ಹೆಣವಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಬಣಕಲ್ನಲ್ಲಿ ನಡೆದಿದೆ. ಗೆಳೆಯ ಕೈಕಾಲು ಬಿದ್ದರೂ ಅನೈತಿಕ ಸಂಬಂಧ ಬಿಡದ ಹಿನ್ನೆಲೆ ಕೊನೆಗೆ …

Read More »

ನಾಳೆ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು,ಏ.28- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎಲ್ಲಾ ಹೈಕೋರ್ಟ್‍ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಮುಖ್ಯಮಂತ್ರಿಗಳ ಸಭೆ ಶನಿವಾರ ನಡೆಯಲಿದ್ದು, ನಾಳೆ ದೆಹಲಿಗೆ ತೆರಳುವು ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಎಲ್ಲ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ತಮಗೂ ಕೂಡ ಆಹ್ವಾನ ಬಂದಿರುವುದರಿಂದ ಈ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುವುದಾಗಿ ತಿಳಿಸಿದರು. ದೆಹಲಿಗೆ ತೆರಳಿದ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ …

Read More »

ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 1 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 1 ರವರರೆಗೂ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಬೆಳಗಾವಿ,ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ.

Read More »