ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ. ಹೈಕಮಾಂಡ್ ಗೊಂದಲ ಪರಿಹಾರ ಮಾಡದೇ ಹೋದ್ರೆ ಪಕ್ಷಕ್ಕೆ ಸಮಸ್ಯೆ ಅಂತ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಎಚ್ಚರಿಕೆ ಕೊಟ್ಟಿದ್ದಾರೆ. ಬೈ ಎಲೆಕ್ಷನ್ ಫಲಿತಾಂಶ ಬಂದ ಮೇಲೆ ಮತ್ತೆ ನಾಯಕತ್ವದ ಚರ್ಚೆ ಆಗುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮಂತಹವರ ಬಳಿ ಇದನ್ನ ಕೇಳೋದು ಅಲ್ಲ. ಸೂಕ್ತ ವ್ಯಕ್ತಿಗಳ ಬಳಿ ಇದನ್ನ ಕೇಳಬೇಕು. ನಾಯಕತ್ವ ಚರ್ಚೆ ಮುಗಿದ ಅಧ್ಯಾಯ ಅಲ್ಲ. ಅದಕ್ಕೆ …
Read More »ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ
ಬೆಂಗಳೂರು: ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಾಂಗ್ರೆಸ್‌ನಿಂದ ಮುಸ್ಲಿಂ ನಾಯಕ ಅಬ್ದುಲ್ ಜಬ್ಬರ್ ಅಮಾನತು ವಿಚಾರವಾಗಿ ಆಕ್ರೋಶ ಹೊರಹಾಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಿದ್ದರು. …
Read More »ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ
ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ಕ್ಷೇತ್ರ ಪುನರ್‌ವಿಂಗಡಣೆಗಾಗಿ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಮಂಡನೆಯಾಗಿದೆ. ಜನಗಣತಿ ಆಧಾರದಡಿ ಕ್ಷೇತ್ರಗಳ ಗಡಿ ನಿರ್ಧರಿಸುವ ಪ್ರಕ್ರಿಯೆ ಇದಾಗಿದೆ. ಜನಸಂಖ್ಯೆ ಮೂಲಕ ಸಮಾನ ಪ್ರತಿನಿಧಿತ್ವ ಒದಗಿಸುವುದು ಇದರ ಉದ್ದೇಶವಾಗಿದೆ. ಸಂವಿಧಾನದ 82 ಹಾಗೂ 170ನೇ ವಿಧಿ ಪ್ರಕಾರ, ಪ್ರತಿ ಜನಗಣತಿಯ ನಂತರ ಈ ಪ್ರಕ್ರಿಯೆ ನಡೆಯಬೇಕು. ಆದ್ರೆ, ಕುಟುಂಬ ನಿಯಂತ್ರಣ ನೀತಿಗೆ ಉತ್ತೇಜನ ಕೊಡೋ ಸಲುವಾಗಿ 2001ರ …
Read More »ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅತ್ಯಾಚಾರಿಗೆ ೩೦ ವರ್ಷ ಶಿಕ್ಷೆ ಪ್ರಕಟ
ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ತಾಲೂಕಿನ ಅರಳಿಕಟ್ಟಿ ಗ್ರಾಮದ ನಿವಾಸಿ ಮಹಾಂತೇಶ ಶಿವಪ್ಪ ಉರ್ಪ ಶಿವಾನಂದ ಗಿರೆಣ್ಣವರ(೨೩) ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಬಾಲಕಿಯು ಮನೆಯಲ್ಲಿ ಒಬ್ಬಳೆ ಇದ್ದಾಗ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿರುವ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ೨೦೨೫ರಲ್ಲಿ ದೂರು ದಾಖಲಾಗಿತ್ತು. …
Read More »ರಸಗೊಬ್ಬರ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಬೆಳಗಾವಿ:ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ಅಲ್ಲಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ರಸಗೊಬ್ಬರ ಬೇಡಿಕೆ ಹೆಚ್ಚಿದ್ದು ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ರಸಗೊಬ್ಬರ ಕುರಿತು ದೂರುಗಳು ಬಂದಾಗ ವೀಚಕ್ಷಣಾ ತಂಡ ತ್ವರಿತವಾಗಿ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮುಂಗಾರು ಹಂಗಾಮಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಮರ್ಪಕ ಪೂರೈಕೆ ಹಾಗೂ ಭೂ ತಾಯಿ …
Read More »ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್
ಬೆಂಗಳೂರು: ಯುವ ಕಾಂಗ್ರೆಸ್ ಬೆಂಗಳೂರು ಉತ್ತರದ ಜಿಲ್ಲಾ ಉಪಾಧ್ಯಕ್ಷೆ ಆಫ್ರೀನ್ ಖಾನ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಆಫ್ರೀನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ್ದರು. ಇಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಅಫ್ರೀನ್ ಖಾನ್ ಅವರನ್ನು ಉಚ್ಚಾಟನೆ ಮಾಡಿ ಆದೇಶ ಪ್ರಕಟಿಸಿದ್ದಾರೆ. ಉಚ್ಚಾಟನೆ ಆದೇಶಕ್ಕೆ ಪ್ರತಿಕ್ರಿಯಿಸಿದ ಆಫ್ರೀನ್ ಖಾನ್, ನಾನು ಏಪ್ರಿಲ್ 4 …
Read More »ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ
ಮೈಸೂರು: ನಮ್ಮ ತಂದೆಯೇ 5 ವರ್ಷ ಸಿಎಂ. ಖುದ್ದು ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಈ ವಿಚಾರವನ್ನ ಸ್ಪಷ್ಟಪಡಿಸಿದ್ದಾರೆ. ಸಿಎಂ ಖುದ್ದಾಗಿ ಹೇಳಿದ ಮೇಲೆ ಮತ್ತೆ ಆ ಬಗ್ಗೆ ಚರ್ಚೆಯೇ ಇಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ತಂದೆಯ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎರಡೂವರೆ ವರ್ಷದಿಂದ ಇದನ್ನೇ ಹೇಳುತ್ತಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ನಮ್ಮ ತಂದೆಯ ಮಾತೇ ನನ್ನ ಮಾತು ಕೂಡ. …
Read More »ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ
ರಾಯಚೂರು: ರೈತನಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆ ಲಿಂಗಸುಗೂರು ತಾಲೂಕಿನ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓಗೆ ರಾಯಚೂರು ಜಿಲ್ಲಾ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. 2017 ರಲ್ಲಿ ಲಿಂಗಸುಗೂರು ತಾಲೂಕಿನ ಗೊರೇಬಾಳ ತಾಂಡಾದ ಚೇತನ ಎಂಬವರಿಂದ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓ ಮಹ್ಮದ ಖಾಜಾ ಸಹಾಯ ಧನದ ಶೇಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ 15 ಸಾವಿರ …
Read More »ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ
ಬೆಂಗಳೂರು: ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಆರ್‌ಆರ್ ನಗರ ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಸಾವಿತ್ರಮ್ಮ (72) ಕೊಲೆಯಾದ ದುರ್ದೈವಿ. ಮಗ ವೆಂಕಟೇಶ್ ವೃದ್ಧ ತಾಯಿಯನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಸ್ಟ್ರೋಕ್ ಹೊಡೆದ ಕಾರಣ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದಿದ್ದ ಮಗ ಕಟ್ಟಡದ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ …
Read More »ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ರಾಜ್ಯ …
Read More »
Laxmi News 24×7