Breaking News

Laxminews 24x7

ಪರಿಷತ್‌ ಚುನಾವಣೆಗೆ ʻಆಪರೇಷನ್‌ ಹಸ್ತʼದ ಭೀತಿ – ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್?

ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದೆ. ಈ ಹಿನ್ನೆಲೆ ಕುದುರೆ ವ್ಯಾಪಾರದ ಭೀತಿ ಹೆಚ್ಚಾಗಿದ್ದು, ವಿಪಕ್ಷಗಳು ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ರೆಸಾರ್ಟ್‌ ರಾಜಕಾರಣಕ್ಕೆ ಮುಂದಾಗುತ್ತಿವೆ. ಜೂನ್‌ 18 ರಂದು ಪರಿಷತ್‌ ಚುನಾವಣೆ ಇರುವ ಕಾರಣ ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ಜೆಡಿಎಸ್‌  ಪ್ಲ್ಯಾನ್‌ ಮಾಡಿದೆ. ಜೂನ್‌ 16 ರಂದೇ ಶಾಸಕರನ್ನ ರೆಸಾರ್ಟ್ ಅಥವಾ ಹೋಟೆಲ್‌ಗಳಿಗೆ ಶಿಫ್ಟ್‌ ಮಾಡಲು ತೀರ್ಮಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದ್ಯ ಕಾಂಗ್ರೆಸ್‌ನ 5ನೇ …

Read More »

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರ – ಫೋಟೋಶೂಟ್‌ಗೆ ಮುಗಿಬಿದ್ದ ಸೆಲೆಬ್ರಿಟಿ, ಜನರು

ಮಂಡ್ಯ: ಕೆಆರ್‌ಎಸ್ ಡ್ಯಾಂ  ಹಿನ್ನೀರಿನಲ್ಲಿ ವರ್ಷಗಳ ಕಾಲ ಮುಳುಗಿದ್ದ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನ ಮತ್ತೆ ಬೆಳಕಿಗೆ ಬಂದಿದೆ. ಡ್ಯಾಂ ನೀರಿನ ಮಟ್ಟ ಕುಸಿದ ಪರಿಣಾಮ ಕಾಣಿಸಿಕೊಂಡಿರುವ ಈ ದೇವಸ್ಥಾನ ಇದೀಗ ಪ್ರವಾಸಿಗರು ಹಾಗೂ ಫೋಟೋಶೂಟ್ ಪ್ರಿಯರ ಪ್ರಮುಖ ಆಕರ್ಷಣೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಳ್ಳದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಆತಂಕ …

Read More »

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ

ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ  ಇನ್ನೂ ಬೆಂಗಳೂರು ಅಭಿವೃದ್ಧಿ  ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ. ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ  ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ ಮಾಡಿ ರಿಸಲ್ಟ್ ಕೊಡಬೇಕು. …

Read More »

ಮತ್ತೆ ಸದ್ದು ಮಾಡಿದ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ – ಏರ್‌ಪೋರ್ಟ್ ರಸ್ತೆಯಲ್ಲಿ ಪುಂಡಾಟದ ವಿಡಿಯೋ ವೈರಲ್

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಲ್ಯಾಂಬೋರ್ಗಿನಿ ಕಾರು ಮತ್ತೊಮ್ಮೆ ಸುದ್ದಿಯಲ್ಲಿದೆ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ಡ್ರಿಫ್ಟಿಂಗ್ ಮಾಡುವ ಮೂಲಕ, ಸೈಲೆನ್ಸರ್‌ನಿಂದ ಬೆಂಕಿ ಉಗುಳುತ್ತಾ ಕರ್ಕಶ ಶಬ್ದ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರಿನ ವಿಡಿಯೋ ಇದೀಗ ಪೊಲೀಸರ ಗಮನ ಸೆಳೆದಿದೆ. ವೈರಲ್ ವಿಡಿಯೋ ಆಧರಿಸಿ ಘಟನೆ ಯಾವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂಬುದನ್ನು ಪೊಲೀಸರು …

Read More »

ಡಿವೈಡರ್‌ಗೆ ಬೈಕ್ ಡಿಕ್ಕಿ – ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ಡಿವೈಡರ್‌ಗೆ ಬೈಕ್  ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ. ಅತುಲ್, ಗೌರಿಶಂಕರ್ ಮೃತ ನರ್ಸಿಂಗ್ ವಿದ್ಯಾರ್ಥಿಗಳು. ನಸುಕಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಘಟನಾ …

Read More »

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಯುವತಿ ದುರ್ಮರಣ

ಬೆಂಗಳೂರು: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ  ನಡೆದಿದೆ. ಹೊಸಕೋಟೆ  ಸಮೀಪದ ದೊಡ್ಡ ಹುಲ್ಲೂರು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೆಂಜ್ ಕಾರು  ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. …

Read More »

ಚಪ್ಪಲಿಯಿಂದ ಹಲ್ಲೆ ಮಾಡಿದ್ರೆ ಹೇಗೆ ಕೆಲಸ ಮಾಡಬೇಕು? – ಬಿಟಿಡಿಎ ಸಿಬ್ಬಂದಿ

ಬಾಗಲಕೋಟೆ: ರೈತನ ಭೂ ಪರಿಹಾರ  ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆದರೆ ಅವರು ಎದೆ ಮೇಲೆ ಕೈ ಹಾಕಿ ಬಟ್ಟೆ ಹಿಡಿದು ಎಳೆದಾಡಿ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ರೀತಿ ಹಲ್ಲೆ ಮಾಡಿದರೆ ನಾವು ಹೇಗೆ ಸರ್ಕಾರಿ ಕೆಲಸ ಮಾಡಬೇಕು? ನಮಗೆ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ರೈತನಿಂದ ಹಲ್ಲೆಗೊಳಗಾದ ಬಿಟಿಡಿಎ ಹಿರಿಯ ಸಹಾಯಕ ಹಾಗೂ ಟೈಪಿಸ್ಟ್ ನೀಲಕಂಠ ಅಂಕದ ಆತಂಕ ವ್ಯಕ್ತಪಡಿಸಿದ್ದಾರೆ. ಮುಳುಗಡೆ ಭೂಮಿಗೆ ಕಳೆದ ನಾಲ್ಕು ವರ್ಷಗಳಿಂದ ಸೂಕ್ತ …

Read More »

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ : ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯವನ್ನು ರದ್ದುಪಡಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯಗೊಳಿಸಿದ್ದರಿಂದ ಅಗತ್ಯ ಪ್ರಮಾಣದ ಗೊಬ್ಬರ ಪಡೆಯಲು ತೊಂದರೆಯಾಗುತ್ತಿದೆ. ಈ ನಿಯಮ ರದ್ದುಪಡಿಸಿ ಸುಲಭವಾಗಿ ರಸಗೊಬ್ಬರ ದೊರಕಿಸಿಕೊಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿರುವ ಉಚಿತ …

Read More »

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​

ಚಿಕ್ಕಮಗಳೂರು: ಯುವತಿಯೋರ್ವಳ ಫೋಟೋವನ್ನು ಪೇಸ್​​ಬುಕ್​ನಿಂದ ಪಡೆದು ಅದನ್ನು ಬಳಸಿ ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿ ಹಣಕ್ಕೆ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ದುಡ್ಡಿಗಾಗಿ ಪೀಡಿಸಿದ್ದರು. ಹಣ ನೀಡದಿದ್ದರೆ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನೊಂದ ಯುವತಿಯ ಕಡೆಯವರು ಲಕ್ಕವಳ್ಳಿ ಪೊಲೀಸರಿಗೆ ನೀಡಿದ್ದ ದೂರಿನ ಅಧಾರದಲ್ಲಿ ಬೆಂಗಳೂರಿನಲ್ಲಿ ಕೆಲಸ …

Read More »

ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದೋಕುಳಿ – ಗ್ಯಾಂಗ್‌ವಾರ್‌ಗೆ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಕಳೆದ ಒಂದೆರಡು ವರ್ಷಗಳಿಂದ ತಣ್ಣಗಿದ್ದ ಮಲೆನಾಡು ಶಿವಮೊಗ್ಗದಲ್ಲಿ ರೌಡಿಗಳ ಗ್ಯಾಂಗ್‌ವಾರ್ ಮತ್ತೆ ಮುನ್ನೆಲೆಗೆ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್  ಒಬ್ಬನನ್ನು ಎದುರಾಳಿ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ. ಹಾಡಹಗಲೇ ನಡೆದ ಈ ಗ್ಯಾಂಗ್‌ವಾರ್‌ನಿಂದ ಶಿವಮೊಗ್ಗದ ಜನತೆ ಬೆಚ್ಚಿಬಿದ್ದಿದೆ. ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದೋಕುಳಿ ಹರಿದಿದೆ. ಗ್ಯಾಂಗ್‌ವಾರ್‌ಗೆ ರೌಡಿಶೀಟರ್ ಬಲಿಯಾಗಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್‌ನ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್, ಇಸ್ಪಿಟ್ ಗ್ಯಾಂಬ್ಲರ್ ನರಸಿಂಹ ಹತ್ಯೆಯಾಗಿದ್ದಾನೆ. ಗೋವಿಂದಾಪುರ …

Read More »