ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು. ಒಂದು ವೇಳೆ …
Read More »ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು
ಕೋಲಾರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಅರಹಳ್ಳಿ ಕೆರೆಯಲ್ಲಿ ನಡೆದಿದೆ. ಮೃತರನ್ನು ಕೋಲಾರ ನಗರದ ನಿಸಾರ್ ನಗರದ ಮೊಹಮದಿ (25) ಹಾಗೂ ಬೆಂಗಳೂರಿನ ಸಲ್ಮಾ (26) ಎಂದು ಗುರುತಿಸಲಾಗಿದೆ. ಮಕ್ಕಳೊಂದಿಗೆ ಕೆರೆಗೆ ಬಟ್ಟೆ ತೊಳೆಯಲು ಮಹಿಳೆಯರು ಬಂದಿದ್ದರು. ಈ ವೇಳೆ ಆಟವಾಡುತ್ತಾ ಮಕ್ಕಳು ನೀರಿನಲ್ಲಿ ಮುಳುಗುವ ಹಂತದಲ್ಲಿದ್ದರು. ತಕ್ಷಣ ನೀರಿಗಿಳಿದ ಮೊಹಮದಿ ಮಕ್ಕಳನ್ನು ರಕ್ಷಿಸಿದ್ದಾಳೆ. ಮಕ್ಕಳನ್ನು ರಕ್ಷಿಸಿದ ಬಳಿಕ ಆಕೆ …
Read More »ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್ ಸ್ಪಷ್ಟನೆ
ನವದೆಹಲಿ: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿರುವ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಇರಾನ್ ಯಾವುದೇ ಶುಲ್ಕವನ್ನು ವಿಧಿಸಿಲ್ಲ ಎಂದು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಭಾರತೀಯ ಹಡಗುಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ, ಈ ಬಗ್ಗೆ ನೀವು ಭಾರತ ಸರ್ಕಾರವನ್ನೇ ವಿಚಾರಿಸಬಹುದು ಎಂದು ಹೇಳುವ ಮೂಲಕ ಈ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಟೋಲ್ ಪಾವತಿಸುವ ಹಡಗುಗಳನ್ನು …
Read More »ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ
ನವದೆಹಲಿ: ರಾಜ್ಯದಲ್ಲಿ ಸಿಎಂ ಕುರ್ಚಿ ತಿಕ್ಕಾಟದ ಮಧ್ಯೆ ಶಾಸಕರ ಮಿನಿಸ್ಟರ್ ಪಟ್ಟದಾಸೆ ಜೋರಾಗಿದೆ. ಹಿರಿಯ ಶಾಸಕರ ದಂಡು ಸಚಿವ ಸಂಪುಟ ಪುನರ್ ರಚನೆ ಆಗಬೇಕು ಎಂದು ಪಟ್ಟು ಹಿಡಿದು ದೆಹಲಿಯಲ್ಲಿ ಠಿಕಾಣಿ ಹೂಡಿದೆ. ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿ ಹಲವು ಶಾಸಕರು ಈಗಾಗಲೇ ದೆಹಲಿಯಲ್ಲಿದ್ದು, ಇನ್ನೂ ಆರೇಳು ಶಾಸಕರು ದೆಹಲಿಗೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿಯಾಗಿದ್ದಾರೆ. 3 ದಿನ ದೆಹಲಿಯಲ್ಲೇ ಉಳಿದು, ರಾಹುಲ್ ಗಾಂಧಿ, ಕೆ.ಸಿ …
Read More »ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
ಮುಂಬೈ: ಸಂಗೀತ ಲೋಕದ ದಿಗ್ಗಜ ಹಾಗೂ ಐಕಾನಿಕ್ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸರ್ಕಾರಿ ಗೌರವದೊಂದಿಗೆ ನಡೆಯಿತು. ಆಶಾ ಭೋಸ್ಲೆ ಪುತ್ರ ಆನಂದ್ ಭೋಸ್ಲೆ, ಸಹೋದರ-ಸಹೋದರಿ ಉಷಾ ಮಂಗೇಶ್ಕರ್ ಮತ್ತು ಹೃದಯನಾಥ್ ಮಂಗೇಶ್ಕರ್ ಸೇರಿದಂತೆ ಕುಟುಂಬದ ಸದಸ್ಯರು ಅಂತಿಮ ವಿಧಿಗಳ ವೇಳೆ ಹಾಜರಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ …
Read More »ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ
ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ …
Read More »ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಪ್ರಿಯಕರನ ಜೊತೆ ಮದುವೆಯಾದ ಖತರ್ನಾಕ್ ಪತ್ನಿ
ಹಾಸನ: ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಇದೀಗ ಪ್ರಿಯಕರನ ಜೊತೆ ಪತ್ನಿ ಮದುವೆಯಾಗಿರುವ ಘಟನೆ ಹಾಸನ ತಾಲ್ಲೂಕಿನ ಮುಕುಂದೂರು ಗ್ರಾಮದಲ್ಲಿ ನಡೆದಿದೆ. ಪತಿಯನ್ನು ಮುಕುಂದೂರು ಗ್ರಾಮದ ಪ್ರಕಾಶ್ ಹಾಗೂ ಪತ್ನಿಯನ್ನು ಅರಕಲಗೂಡು ತಾಲ್ಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾ ಎಂದು ಗುರುತಿಸಲಾಗಿದ್ದು, ಪ್ರಿಯಕನ ಜೊತೆ ಮದುವೆಯಾದ ಗೃಹಿಣಿ ಎಂದು ತಿಳಿದುಬಂದಿದೆ. ಕಳೆದ ಎಂಟು ವರ್ಷಗಳ ಹಿಂದೆ ಅಂದರೆ 2017ರ ಮಾ.30ರಂದು ಪ್ರಕಾಶ್ ಅವರು ಸ್ವಂತ ಅತ್ತೆ ಮಗಳಾದ ಹರ್ಷಿತಾಳನ್ನು ಮದುವೆಯಾಗಿದ್ದರು. …
Read More »ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ
ಬಾಗಲಕೋಟೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಕೇಸ್‌ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಮಹಿಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ವಿಡಿಯೋ ಹೇಳಿಕೆಯೊಂದನ್ನು ರಿಲೀಸ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಇದೀಗ ಈ ಸಂಬಂಧ ಸಂತ್ರಸ್ತ ಮಹಿಳೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನಾನು ಶ್ರೀಗಳ ವಿರುದ್ಧ ದೂರು ನೀಡಿಲ್ಲ. ನನ್ನ ಮತ್ತು ಸ್ವಾಮೀಜಿ ಮೇಲಿರುವ ಆರೋಪಗಳೆಲ್ಲವೂ ಸುಳ್ಳು. ನನ್ನ ಹೆಸರಿನಲ್ಲಿ ಯಾರೋ …
Read More »ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ
ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಕೆಲ ಅಭ್ಯರ್ಥಿಗಳು ಪರೀಕ್ಷೆ-1ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು …
Read More »SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (525 ಅಂಕ ನೀಡುವ ನಿಯಮ ಬದಲಾವಣೆ ಮಾಡಿರುವ ವಿಚಾರದಲ್ಲಿ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ. ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 7 ದಿನ ಅವಕಾಶ ನೀಡಲಾಗಿದ್ದು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಅಧಿಸೂಚನೆಯಲ್ಲಿ 525 ಅಂಕಗಳ ಅನುಷ್ಠಾನ ಹೇಗೆ ನಡೆಯಲಿದೆ ಎಂಬುದನ್ನು ತಿಳಿಸಲಾಗಿದೆ. ಅದರಂತೆ ತೃತೀಯ ಭಾಷೆ ವಿಷಯದಲ್ಲಿ ಅಂಕಗಳ ಬದಲಾಗಿ ಗ್ರೇಡ್ ಸಿಸ್ಟಮ್ ವಿವರಿಸಲಾಗಿದೆ. ಈ ಮೊದಲು 625 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ …
Read More »
Laxmi News 24×7