Home / Laxminews 24x7 (page 2820)

Laxminews 24x7

250 ರೂ.ಗೆ 1 ಡೋಸ್‌ – ಮಾರ್ಚ್‌ನಲ್ಲಿ ಮೆಡಿಕಲ್‌ ಸ್ಟೋರ್‌ನಲ್ಲಿ ಲಭ್ಯ?

ನವದೆಹಲಿ: ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್‌ ಲಸಿಕೆ ಖರೀದಿ ವಿಚಾರವಾಗಿ ಶೀಘ್ರವೇ ಪುಣೆಯ ಸೀರಂ ಮತ್ತು ಭಾರತ ಸರ್ಕಾರದ ನಡುವೆ ಒಪ್ಪಂದ ನಡೆಯುವ ಸಾಧ್ಯತೆಯಿದೆ.ವಿಶ್ವದ ಅತಿದೊಡ್ಡ ಲಸಿಕೆ ತಯಾರಿಕಾ ಸಂಸ್ಥೆ ಸೀರಂ 1 ಡೋಸ್‌ಗೆ 250 ರೂ. ದರ ನಿಗದಿ ಪಡಿಸಿದ್ದು ಒಪ್ಪಂದದ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಪ್ರಕಟಿಸಿದೆಈ ಕುರಿತು ಮಾತನಾಡಿದ ಸಂಸ್ಥೆ ಸಿಇಒ ಅದರ್ ಪೂನಾವಾಲಾ, …

Read More »

ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ

ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಬೊಳಶ್ಯಾನಟ್ಟಿ ಗ್ರಾಮದ ಶಂಕರ  ಕೊಂಕಣಿ ಮೃತ ವ್ಯಕ್ತಿ. ಸಮೀಪದ ಏಕಸ್ ಕಂಪನಿ ಸಮೀಪದಲ್ಲಿ ಘಟನೆ ನಡೆದಿದ್ದು, ಬೆಳಗಾವಿಯಿಂದ ಸಂಕೇಶ್ವರ ಕಡೆಗೆ ಹೊರಟ್ಟಿದ್ದ  ಕಾರ್ ಡಿಕ್ಕಿ ಹೊಡೆದಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು

  ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.      

Read More »

ಆಟವಾಡಲು ಹೋದ ಇಬ್ಬರು ಬಾಲಕರು ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ

ಬೆಳಗಾವಿ: ಸಂಬಂಧಿಕರ ಜಮೀನಿನಲ್ಲಿ ಆಟವಾಡಲು ಹೋದ ಇಬ್ಬರು ಬಾಲಕರು ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಬೆಕ್ಕಿನಕೇರಿಯಲ್ಲಿ ನಡೆದಿದೆ. ಮೃತ ಬಾಲಕರನ್ನು ಲೋಕೇಶ ವಿಠಲ (10) ಹಾಗೂ ನಿಕೀಲ (7) ಎಂದು ಗುರುತಿಸಲಾಗಿದೆ. ಬಾಳು ಮಲ್ಲಪ್ಪ ಗಾವಡೆ ಎಂಬುವವರ ಜಮೀನೊಂದರಲ್ಲಿ ಆಟವಾಡಲೆಂದು ಮೂವರು ಬಾಲಕರು ಹೋಗಿದ್ದಾರೆ. ಈ ವೇಳೆಮೀನು, ಏಡಿ ಹಿಡಿಯಲೆಂದು ಬಾವಿಯತ್ತ ಸಾಗಿದ ಇಬ್ಬರು ಬಾಲಕರು, ಏಕಾಏಕಿ ಬಾವಿಗೆ ಬಿದ್ದಿದ್ದಾರೆ. ಇನ್ನೋರ್ವ ಬಾಲಕ ರಕ್ಷಣೆಗಾಗಿ ಕೋಗಿದ್ದಾನೆ. ಗ್ರಾಮಸ್ಥರು ಬಂದು …

Read More »

ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.

ಚಾಮರಾಜನಗರ: ಮೂರು ದಿನಗಳ ಕಾಲ ಮಲೆ ಮಾದಪ್ಪ ತನ್ನ ಭಕ್ತರಿಗೆ ದರ್ಶನ ಕೊಡಲ್ಲ.ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನ ಭಕ್ತರಿಗೆ ದೇವರ ದರ್ಶನ ಸಿಗಲ್ಲ. ಕೊನೆಯ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಬರುವ ಸಾಧ್ಯತೆ ಇದೆ. ಕೊರೊನಾ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಡಿ.12 ರಿಂದ ಡಿ.14 ರ ವರೆಗೆ ಮಾದಪ್ಪನ ದರ್ಶನ ಭಕ್ತರಿಗಿಲ್ಲ ಸಿಗಲ್ಲ. …

Read More »

ಮೌಂಟ್ ಎವರೆಸ್ಟ್ ಎತ್ತರ ಮತ್ತಷ್ಟು ಹೆಚ್ಚಿದೆ ಎಂದ ನೇಪಾಳ ಹಾಗೂ ಚೀನಾ

ನವದೆಹಲಿ: ವಿಶ್ವದ ಅತೀ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಎತ್ತರ ಮತ್ತಷ್ಟು ಹೆಚ್ಚಿದೆ ಎಂದು ನೇಪಾಳ ಹಾಗೂ ಚೀನಾ ಹೇಳಿವೆ.ಹೊಸ ಅಧ್ಯಯನದ ಪ್ರಕಾರ ಮೌಂಟ್ ಎವರೆಸ್ಟ್ ಎತ್ತರ 8,848.86 ಮೀಟರ್ ಎಂದು ನೇಪಾಳ ಮತ್ತು ಚೀನಾ ಜಂಟಿಯಾಗಿ ಘೋಷಣೆ ಮಾಡಿವೆ. ಈ ಮೂಲಕ ಮೌಂಟ್ ಎವರೆಸ್ಟ್ ಮತ್ತಷ್ಟು ಎತ್ತರ ಬೆಳೆದಿದೆ. 1954ಕ್ಕೆ ಹೋಲಿಸಿದರೆ ಮೌಂಟ್ ಎವರೆಸ್ಟ್ ಎತ್ತರ 86 ಸೆಂಟಿಮೀಟರ್ ಹೆಚ್ಚಿದೆ ಎಂದು ತಿಳಿಸಿದೆ. 2015ರಲ್ಲಿ ಸಂಭವಿಸಿದ ಭೂಕಂಪ ಸೇರಿದಂತೆ …

Read More »

ಬೆಳಗ್ಗೆ ಬಂದ್‍ಗೆ ಸಪೋರ್ಟ್, ಮಧ್ಯಾಹ್ನ ಬಿಲ್‍ಗೆ ಬೆಂಬಲ- ಮೇಲ್ಮನೆಯಲ್ಲಿ ಭೂಸುಧಾರಣೆ ಮಸೂದೆ ಪಾಸ್

ಬೆಂಗಳೂರು: ಭಾರತ್ ಬಂದ್ ನಡುವೆಯೇ ವಿವಾದಾತ್ಮಕ ಭೂಸುಧಾರಣಾ ತಿದ್ದುಪಡಿ ವಿಧೇಯಕ ಮೇಲ್ಮನೆಯಲ್ಲಿ ಪಾಸ್ ಆಗಿದೆ. ಸದನದ ಹೊರಗೆ ರೈತರ ಹೋರಾಟವನ್ನು ಬೆಂಬಲಿಸಿದ್ದ ಜೆಡಿಎಸ್, ಪರಿಷತ್‍ನಲ್ಲಿ ಮಾತ್ರ ವಿಧೇಯಕವನ್ನು ಇದ್ದಕ್ಕಿದ್ದಂತೆ ಬೆಂಬಲಿಸಿ ಅಚ್ಚರಿ ಮೂಡಿಸಿತು. ಮರಿತಿಬ್ಬೇಗೌಡ ಹೊರತುಪಡಿಸಿ ಉಳಿದೆಲ್ಲಾ ಜೆಡಿಎಸ್ ಸದಸ್ಯರು ವಿಧೇಯಕದ ಪರವಾಗಿ ಎದ್ದು ನಿಂತು ಬೆಂಬಲ ಸೂಚಿಸಿದರು. ಇದನ್ನು ಬಿಜೆಪಿ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ವಿಧೇಯಕದ ಪರ 37 ಮತ ಬಿದ್ದರೆ, ವಿರುದ್ಧ 21 ಮತ ಬಿದ್ದವು. …

Read More »

ಬ್ರಿಡ್ಜ್ ಕಂ ಬ್ಯಾರೇಜ್ ದಾಟುತ್ತಿದ್ದ ವೇಳೆತಾಯಿ ಮತ್ತು ಮಗ ಬೈಕ್ ಸಮೇತ ನೀರಿಗೆ

ಹಾವೇರಿ: ಧರ್ಮಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ದಾಟುತ್ತಿದ್ದ ವೇಳೆ ತಾಯಿ ಮತ್ತು ಮಗ ಬೈಕ್ ಸಮೇತ ನೀರಿಗೆ ಬಿದ್ದಿದ್ದು, ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಮೃತರನ್ನು ಬಸವರಾಜ್ ಕುಂದೂರ(22) ಮತ್ತು ತಾಯಿ ಚನ್ನವ್ವ ಕುಂದೂರ(45) ಎಂದು ಗುರುತಿಸಲಾಗಿದೆ. ಕಂಚಿನೆಗಳೂರು ಗ್ರಾಮದಿಂದ ಕಾಡಶೆಟ್ಟಿಹಳ್ಳಿ ಗ್ರಾಮದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ …

Read More »

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಶುರು

ಉಡುಪಿ: ಸೂರ್ಯಾಸ್ತ ಆಗುತ್ತಿದ್ದಂತೆ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಶುರುವಾಗಿದೆ. ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಸಂಜೆಯೇ ಮಳೆ ಆರಂಭ ಆಗಿತ್ತು. ಸಾಗರ ತೀರದ ತಾಲೂಕುಗಳಲ್ಲಿ ಎರಡು ಗಂಟೆ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದ ಸಾಲಿನ ತಾಲೂಕುಗಳಾದ ಉಡುಪಿ, ಕಾಪು, ಕುಂದಾಪುರದಲ್ಲಿ ಜೋರು ವರ್ಷಧಾರೆಯಾಗಿದೆ. ಬೈಂದೂರು ತಾಲೂಕಿನ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಪಶ್ಚಿಮ ಘಟ್ಟದ ತಪ್ಪಲಲ್ಲಿ ಗಾಳಿ ಸಹಿತ ಮಳೆಯಾಗಿದೆ. ಇಂದು ದಿನಪೂರ್ತಿ ಉಷ್ಟಾಂಶ ಹೆಚ್ಚಾಗಿತ್ತುಉಡುಪಿ ಜಿಲ್ಲೆಯಲ್ಲಿ ದಿಢೀರ್ ಮಳೆಯಾಗಿದ್ದರಿಂದ ಪೇಟೆಯೊಳಗೆ …

Read More »

ಪೊಲೀಸರ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ,ಶಾಲು ಬಾರು ಕೋಲು ತೆಗೆಯಿರಿ ಎಂದು ಪೊಲೀಸ್ ಸಿಬ್ಬಂದಿ

ಬೆಂಗಳೂರು: ಕೃಷಿಕಾಯ್ದೆ ವಿರೋಧಿಸಿ ಇಂದು ವಿಧಾನಸೌಧ ಮುತ್ತಿಗೆ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‍ಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.ಶಾಲು ತೆಗೆಯಿರಿ, ಬಾರು ಕೋಲು ತೆಗೆಯಿರಿ ಎಂದು ಪೊಲೀಸ್ ಸಿಬ್ಬಂದಿ ವಾರ್ನ್ ಮಾಡಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದ ನಡೆದಿದ್ದು, ಪೊಲೀಸ್ ಸಿಬ್ಬಂದಿ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಶಾಲು ತೆಗೆಯಿರಿ, ಅಂತ ಹೇಳೋಕೆ ಅವನು …

Read More »