Home / Laxminews 24x7 (page 2830)

Laxminews 24x7

ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರೋಷನ್ ಬೇಗ್ ತನಿಖೆಗೆ ಸಹಕರಿಸಿದ್ದಾರೆ. ಅವರ ವಿರುದ್ಧದ ತನಿಖೆಯೂ ಮುಕ್ತಾಯವಾಗಿದೆ. ಹಾಗಾಗಿ ಬೇಗ್ ಗೆ ಜಾಮೀನು ನೀಡುವಂತೆ ಅವರ ಪರ ವಕೀಲರು ವಾದ ಮಂಡಿಸಿದ್ದರು. ಅಂತಿಮವಾಗಿ ಸಿಬಿಐ ವಿಶೇಷ ನ್ಯಾಯಾಲಯ ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

Read More »

ಕನ್ನಡಪರ ಹೋರಾಟಗಾರರಿಗೆ ತೇಜಸ್ವಿ ಸೂರ್ಯ ಪರೋಕ್ಷವಾಗಿ ಟಾಂಗ್

ಬೆಳಗಾವಿ: ಯಾರನ್ನು ಕೂಡ ವಿರೋಧ ಮಾಡಿ ಕನ್ನಡ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಕನ್ನಡಪರ ಹೋರಾಟಗಾರರಿಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿದ ತೇಜಸ್ವಿ ಸೂರ್ಯ ಬಂದ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಕರ್ನಾಟಕ ಬಂದ್ ಗೆ ಕರೆ ನೀಡಿರುವುದು ಸರಿಯಲ್ಲ. ಕರ್ನಾಟಕದಲ್ಲಿ ಕನ್ನಡ ಮಾತನಾಡುವ ಮರಾಠಿಗರಿದ್ದಾರೆ ಅಂತ ಬಹಳಷ್ಟು ಜನರಿಗೆ ಗೊತ್ತಿಲ್ಲ. ಆರು …

Read More »

ಬಂದ್ ವೇಳೆ ಕುಡುಕನ ರಂಪಾಟಕ್ಕೆ ಪೊಲೀಸರು ಸುಸ್ತು

ಗದಗ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಇಂದು ಬೀದಿಗಿಳಿದಿವೆ. ಈ ಮಧ್ಯೆ ಕುಡುಕನೋರ್ವ ರಂಪಾಟ ಮಾಡಿದ್ದು, ಪೊಲೀಸರೇ ಸುಸ್ತಾದ ಘಟನೆ ಗದಗ್ ನಲ್ಲಿ ನಡೆದಿದೆ. ಹೌದು. ಸರ್ಕಾರದ ವಿರುದ್ಧ ಗದಗ ನಗರದ ಚೆನ್ನಮ್ಮ ಸರ್ಕಲ್ ಬಳಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಕುಡುಕ ರಾದ್ಧಾಂತ ಮಾಡಿದ್ದಾನೆ. ಕುಡುಕನ ರಗಳೆಗೆ ಪೊಲೀಸರು ಹಾಗೂ ಪ್ರತಿಭಟನೆಕಾರರು ಸುಸ್ತಾಗಿದ್ದಾರೆ. ಪ್ರತಿಭಟನೆಯಲ್ಲಿ ಕುಡುಕನ ರಂಪಾಟ ಪೊಲೀಸರಿಗೆ ಪ್ರಾಣ …

Read More »

ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕನ್ನಡ ಪರ ಸಂಘಟನೆ ಗಳು,ಎಲ್ಲಾ ಕನ್ನಡಿಗರನ್ನು ವಶಕ್ಕೆ ಪಡೆದ ಪೊಲೀಸ್

ಮರಾಠಾ ಅಭಿವೃದ್ಧಿ ಖಂಡಿಸಿ ಬಂದಗೆ ಘೋಷಣೆ ಮಾಡಿದ್ದರ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿ ಪ್ರತಿಭಟನೆ ನಡೆಸಿದರು. ಇವತ್ತಿನ ದಿನದಲ್ಲಿ ರಾಜ್ಯ ಕಾರಕರಣಿ ಸಭೆ ಇದ್ದು ಬೆಳಗಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಗಮಿಸಿದ್ದು ಮುಖ್ಯಮಂತ್ರಿಗಳಿಗೆ ಬಿಸಿ ಮುಟ್ಟಿಸುವ ಉದ್ದೇಶಿದಿಂದ ಬೆಳಗಾವಿಯಲ್ಲಿ ಸಂಘಟನೆಗಳಿಂದ ಪ್ರತಿಭಟನೆ. ವಿಜಾಪುರ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ …

Read More »

10 ತಿಂಗಳಲ್ಲಿ ಒಂದು ದಶಕದಲ್ಲಿ ಆದಷ್ಟು ಡ್ರಗ್ ವಶ ಆಗಿದೆ:

ಬಸವರಾಜ್ ಬೊಮ್ಮಾಯಿ ಹೇಳಿದ್ದು,ಕರ್ನಾಟಕ ಬಂದ್ ವಿಚಾರ. ನಿರೀಕ್ಷೆಯಂತೆ ಬಂದ್ ಕರೆಗೆ ಜನ ಸಹಕಾರ ಕೊಟ್ಟಿಲ್ಲ. ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಯಲ್ಲಿ ಯಥಾಸ್ಥಿತಿ ಇದೆ. ಜನಜೀವನ, ಬಸ್ ಸಂಚಾರ ಎಂದಿನಂತೆ‌ ಇದೆ. ಒತ್ತಾಯ ಪೂರ್ವಕ ಬಂದ್ ಪ್ರಕರಣಗಳಲ್ಲಿ ಅನೇಕ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದ ಜನರಿಗೆ ಧನ್ಯವಾನ ಅರ್ಪಣೆ ಮಾಡುತ್ತೇನೆ ಎಂದು ಬೊಮ್ಮಾಯಿ ಹೇಳಿದರು. ಪೊಲೀಸ, ಕೆಎಸ್ಆರ್ ಟಿ ಸಿ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುವೆ, ಹೈಕೋರ್ಟ್ ಸಹ ಬಂದ್ ಮಾಡದಂತೆ ಸೂಚನೆ …

Read More »

ಅಪ್ರಾಪ್ತ ಬಾಲಕಿ ಅಪಹರಣ, ಕೊಲೆ ಕೇಸ್: ಹಾರುಗೇರಿ ಪೊಲೀಸರಿಂದ ಮೂವರ ಬಂಧನ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಕೊಲೆ ಮಾಡಿದ ಆರೋಪದ ಅಪ್ರಾಪ್ತ ಬಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಳ್ಳಿ (24), ಕಿರಣ ಕೆಂಚಪ್ಪ ಜಗದಾಳ (24) ಹಾಗೂ ಅಪ್ರಾಪ್ತ ಬಾಲಕ ಬಂಧಿತರು. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ 2019ರ ನವೆಂಬರ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪರಣದ ಕುರಿತು ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಬಾಲಕಿಯೊಂದಿಗೆ ಸಲುಗೆ ಹೊಂದಿದ್ದ ಮಾಹಿತಿ ಪಡೆದುಕೊಂಡು ಆದರ್ಶ ಪಾರ್ಥನಳ್ಳಿ …

Read More »

ಟಿಆರ್‌ಎಸ್‌, ಓವೈಸಿಯ ಕೋಟೆ ಛಿದ್ರ – ಹೈದರಾಬಾದ್‌ನಲ್ಲಿ ಬಿಜೆಪಿ ಮುನ್ನಡೆ

ಹೈದರಾಬಾದ್‌: ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ (ಜಿಎಚ್‌ಎಂಸಿ) ಚುನಾವಣೆಯಲ್ಲಿ ಸಿಎಂ ಚಂದ್ರಶೇಖರ್‌ ರಾವ್‌ ಮತ್ತು ಅಸಾದುದ್ದೀನ್ ಒವೈಸಿಯ ಕೋಟೆಯನ್ನು ಛಿದ್ರಗೊಳಿಸಿ ಬಿಜೆಪಿ ಮೊದಲ ಬಾರಿಗೆ ಎರಡಂಕಿಯನ್ನು ದಾಟಿ  ಮುನ್ನಡೆಯುತ್ತಿದೆ. ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಒಟ್ಟು 150 ಸ್ಥಾನಗಳ ಪೈಕಿ ಟಿಆರ್‌ಎಸ್‌ 71ರಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 40, ಎಐಎಂಎಂ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್‌ 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.ವಿಶೇಷ ಏನೆಂದರೆ 2016ರ …

Read More »

ಲಿಕ್ಕರ್ ಮಳಿಗೆಗಳು ಮತ್ತು ಬಾರ್‍ಗಳು ಮುಚ್ಚಿದ್ದರಿಂದ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆ

ಬೆಂಗಳೂರು, – ರಾಜ್ಯದಲ್ಲಿ ಕೋವಿಡ್-19 ಲಾಕ್‍ಡೌನ್ ಸಂದರ್ಭ ದಲ್ಲಿ ಎಲ್ಲ ಲಿಕ್ಕರ್ ಮಳಿಗೆಗಳು ಮತ್ತು ಬಾರ್‍ಗಳು ಮುಚ್ಚಿದ್ದರಿಂದ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆಯಾಗಿತ್ತು. ಆದರೆ, ಲಾಕ್‍ಡೌನ್ ತೆರವುಗೊಂಡ ಬಳಿಕ ಅಬಕಾರಿ ಇಲಾಖೆ ತನ್ನ ಆದಾಯ ಹೆಚ್ಚಿಸಿಕೊಂಡಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಅತ್ಯಲ್ಪ ಆದಾಯ ಕುಸಿತ ಅನುಭವಿಸಿದೆ. 2019ರ ಏಪ್ರಿಲ್-ನವೆಂಬರ್ ಅವಧಿಯಲ್ಲಿ ರಾಜ್ಯ ಅಬಕಾರಿ ಇಲಾಖೆಯು 14,390.39 ಕೋಟಿ ರೂ. ಆದಾಯ ಪಡೆದಿದ್ದರೆ, ಈ ವರ್ಷ 13,778.30 ಕೋಟಿ ರೂ. …

Read More »

ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದ ಕಿಚ್ಚ ಸುದೀಪ್

ಬೆಂಗಳೂರು: ಮಂಡ್ಯದ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಿಚ್ಚ, ಈ ಪ್ರಕರಣದಲ್ಲಿ ಬಾಲಕಿಗೆ ನ್ಯಾಯ ಸಿಗುತ್ತದೆ ಮತ್ತು ತಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಈ ರೀತಿ ಮಾಡುವವರಿಗೆ ತೀವ್ರ ತರಹದ ಸಂದೇಶ ರವಾನೆಯಾಗಲಿದೆ ಎಂದು ಭಾವಿಸಿದ್ದೇನೆ. ಈ ಮೂಲಕ ಮುಂದೆ ಈ …

Read More »

ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ

ಹಾವೇರಿ: ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಮೃತರನ್ನು ಕೆ.ಎನ್.ಹನುಮಂತಪ್ಪ ನಿಂಗಪ್ಪ (60), ಗೀತಮ್ಮ (50) ಮತ್ತು ಶಿವಾನಿ (11) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರೆಲ್ಲರೂ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದವರು ಎನ್ನಲಾಗಿದೆ.

Read More »