Breaking News
Home / Laxminews 24x7 (page 2860)

Laxminews 24x7

ಬೈಕ್ ಕಳವು ಮಾಡ್ತಿದ್ದಾತನ ಮರಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು!

ಗದಗ: ಬೈಕ್ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗದಗ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಕಳ್ಳನನ್ನು ಕುಮಾರ ನರ್ತಿ ಎಂದು ಗುರುತಿಸಲಾಗಿದ್ದು, ಈತ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ. ಇದೀಗ ಸ್ಥಳೀಯರು ಕಳ್ಳನ ಹಿಡಿದು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಶರಣು ಪಾಟೀಲ್ ಎಂಬವರ ಸ್ಕೂಟಿ ಕಳ್ಳತನ ಮಾಡಿಕೊಂಡು ಪರಾರಿಯಾಗುವ ವೇಳೆ ಕುಮಾರ ಸಿಕ್ಕಿ ಬಿದ್ದಿದ್ದಾನೆ. ಈತ ಮನೆ ಮುಂದೆ ನಿಲ್ಲಿಸಿದ್ದ …

Read More »

ಬೆಳಗಾವಿ, ಗೆಲ್ಲಲು ಸಿಎಂ ‘ಮರಾಠ’ ಅಸ್ತ್ರ :ಸಿಎಂ ಬಿಎಸ್‍ವೈ

ಬೆಂಗಳೂರು: ಶಿರಾ ಉಪ ಚುನಾವಣೆಗೆ ಮುನ್ನ ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚಿಸಿ ಆ ಸಮುದಾಯದ ಮನಗೆದ್ದು, ಕೊನೆಗೆ ಶಿರಾ ಕ್ಷೇತ್ರದಲ್ಲಿ ಗೆಲುವು ಕೂಡ ಸಾಧಿಸಿತ್ತು ಬಿಜೆಪಿ ಸರ್ಕಾರ. ಈಗ ಅಂಥಾದ್ದೇ ಅಸ್ತ್ರವನ್ನು ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಪ್ರಯೋಗಿಸಿದೆ. ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದಾರೆ. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ. …

Read More »

ಕೆಎಎಸ್ ಅಧಿಕಾರಿ ಸುಧಾ ಅವರ ಮತ್ತಷ್ಟು ಅಕ್ರಮ ಆಸ್ತಿ ಪತ್ತೆ

ಬೆಂಗಳೂರು,ನ.14- ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಡಾ.ಜಿ.ಸುಧಾ ಅವರ ಅಕ್ರಮ ಆಸ್ತಿ ಮತ್ತಷ್ಟು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ದೊರೆತಿರುವ ಚಿನ್ನ, ಹಣ ಹಾಗೂ ಆಸ್ತಿ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಪಟ್ಟಿ ಮಾಡಿ ಅವುಗಳನ್ನು ಪರಿಶೀಲಿಸುತ್ತಿದ್ದಾರೆ. ನ.7ರಂದು ಕೆಎಎಸ್ ಅಧಿಕಾರಿ ಸುಧಾ ಅವರ ಮನೆ ಹಾಗೂ ಪರಿಚಯಸ್ಥರ ಮನೆಗಳು ಸೇರಿದಂತೆ ಏಳು ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ದಾಳಿ ಸಂದರ್ಭದಲ್ಲಿ ಆಸ್ತಿಗೆ ಸಂಬಂಧಪಟ್ಟ …

Read More »

ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ

ಚಿಕ್ಕಮಗಳೂರು: ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಮಾಡುವ ಬಹುತೇಕ ಸಾಧ್ಯತೆಗಳಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ ದೇವಿರಮ್ಮನ ದರ್ಶನದ ಬಳಿಕ ಮಾತನಾಡಿದ ಅವರು, ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ತೊಡಗಿಕೊಂಡಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ, ವಿಸ್ತರಣೆ ಮಾಡಲಿದ್ದಾರೆ. ಸಿಎಂ ಮನದಲ್ಲಿ ಪುನರ್ ರಚನೆಯ ಯೋಜನೆ ಇದೆ. …

Read More »

ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ50 ಅಡಿ ಆಳಕ್ಕೆ ಬಿದ್ದಿದೆ.ಮಿನಿ ಬಸ್

ಮುಂಬೈ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಸೇತುವೆ ಮೇಲಿಂದ 50 ಅಡಿ ಆಳಕ್ಕೆ ಬಿದ್ದಿದೆ. ಇಂದು ಬೆಳಗ್ಗೆ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಂಬ್ರಜ್ ಬಳಿ ಅಪಘಾತ ನಡೆದಿದೆ, ಮೂವರು ಪುರುಷರು, ಓರ್ವ ಮಹಿಳೆ ಮತ್ತು ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಬೆಳಗಿನ ಜಾವ …

Read More »

ಮನೆಯ ಚಾವಣಿಯ ಮೇಲೆ 2 ಬ್ಯಾಗ್ ತುಂಬಾ ಕಂತೆ ಕಂತೆ ಹಣ

ಲಕ್ನೋ: ಅಚ್ಚರಿಯ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಮೀರತ್ ನಿವಾಸಿಯಾಗಿರುವ ವರುಣ್ ಶರ್ಮಾ ಮನೆಯ ಚಾವಣಿಯ ಮೇಲೆ 2 ಬ್ಯಾಗ್ ತುಂಬಾ ಕಂತೆ ಕಂತೆ ಹಣ ಸಿಕ್ಕಿದ್ದು, ಕುಟುಂಬಸ್ಥರಿಗೆ ಅನಿರೀಕ್ಷಿತ ಅಚ್ಚರಿ ಮೂಡಿಸಿತ್ತು. ಕೂಡಲೇ ಎಚ್ಚೆತ್ತ ವರುಣ್ ಪೊಲೀಸರಿಗೆ ಹಣ ಸಿಕ್ಕ ಬಗ್ಗೆ ಮಾಹಿತಿ ನೀಡಿದ್ದ ಮನೆಯ ಚಾವಣಿ ಮೇಲೆ ಸಿಕ್ಕ ಬ್ಯಾಗ್‍ನಲ್ಲಿ 40 ಲಕ್ಷ ರೂ. ಹಣ ಇರುವುದನ್ನು ಪೊಲೀಸರು ಖಚಿತಪಡಿಸಿದ್ದು, ಚಿನ್ನಾಭರಣದ ಮೌಲ್ಯಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ …

Read More »

, 8 ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕಾಗಿ ಯಾರ ಹಿಂದೆಯೂ ಹೋಗುವುದಿಲ್ಲ.:ಉಮೇಶ ಕತ್ತಿ

ಬೆಳಗಾವಿ : ನಾನೊಬ್ಬ ನುರಿತ ರಾಜಕಾರಣಿಯಾಗಿದ್ದು, 8 ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕಾಗಿ ಯಾರ ಹಿಂದೆಯೂ ಹೋಗುವುದಿಲ್ಲ. ಸಚಿವ ಸ್ಥಾನ ಸಿಕ್ಕರೆ ಕೆಲಸ ಮಾಡಿ ತೋರಿಸುತ್ತೇನೆ ಎಂದು ಶಾಸಕ  ಉಮೇಶ ಕತ್ತಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಅಧಿಕಾರ ಬೇಕು ಎಂಬ ಮನೋಭಾವ ನಮಗಿಲ್ಲ. ಮಂತ್ರಿಯಾದರೆ ಕೆಲಸ ಮಾಡುತ್ತೇನೆ. ಸಿಗದಿದ್ದರೆ ಶಾಸಕನಾಗಿಯೇ ಮುಂದುವರೆಯುತ್ತೇನೆ ಅಂತ ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮನಸು ಮಾಡಿದರೆ ಸಚಿವ ಸ್ಥಾನ ದೊರೆಯಲಿದೆ. ಅವರು …

Read More »

ಬಾಲಿವುಡ್ ನಟ ಮುಖೇಶ್ ರಿಷಿ ಇದೀಗ ಮತ್ತೆ ಸ್ಯಾಂಡಲ್‍ವುಡ್‍ಗೆ ಕಮ್‍ಬ್ಯಾಕ್ ಆಗಿದ್ದು, ಜೇಮ್ಸ್ ಸಿನಿಮಾದಲ್ಲಿ ನಟಿಸಲಿದ್ದಾರೆ.

ಬೆಂಗಳೂರು: ಯುವರತ್ನ ಸಿನಿಮಾ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿರುವ ನಟ ಪುನೀತ್ ರಾಜ್‍ಕುಮಾರ್. ಇದೀಗ ಜೇಮ್ಸ್ ಚಿತ್ರೀಕರಣದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದು, ಬಳ್ಳಾರಿ ಭಾಗದಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ಹೀಗಾಗಿ ಸಿನಿಮಾ ಕುರಿತು ಹೆಚ್ಚು ಅಪ್‍ಡೇಟ್ ಸಿಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ನಾಯಕಿಯಾಗಿ ಪ್ರಿಯಾ ಆನಂದ್ ಆಯ್ಕೆಯಾಗಿರುವುದು, ಅನು ಪ್ರಭಾಕರ್ ಚಿತ್ರತಂಡ ಸೇರಿರುವುದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ನಟ ಚಿತ್ರ ಸೇರಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬಾಲಿವುಡ್ ನಟರೊಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ಹಲವು ಲೆಜೆಂಡ್ ನಟರ …

Read More »

ಯತ್ನಾಳ್ ಮಾನಸಿಕ ಕಾಯಿಲೆಗೆ ಒಳಗಾಗಿದ್ದಾನೆ: ಆಯನೂರು ಮಂಜುನಾಥ್

ಶಿವಮೊಗ್ಗ: ಪಕ್ಷ ಹಾಗೂ ನಾಯಕತ್ವದ ವಿರುದ್ಧ ಹೇಳಿಕೆ ನೀಡುವ ಯತ್ನಾಳ್ ಮಾತನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಈಗಾಗಿಯೇ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಳ್ಳುವುದು ದೊಡ್ಡ ವಿಷಯವಲ್ಲ ಎಂದು ಎಂಎಲ್‍ಸಿ ಆಯನೂರು ಮಂಜುನಾಥ್ ತಿಳಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಆಯನೂರು ಮಂಜುನಾಥ್ ಅವರು, ಸಾಮಾನ್ಯವಾಗಿ ಕಾಯಿಲೆ ಬಂದ ವ್ಯಕ್ತಿಗೆ ಆಪರೇಷನ್ ಮಾಡುವ ಮೊದಲು ಔಷಧಿ ಕೊಟ್ಟು ನೋಡುತ್ತಾರೆ. ಅದಕ್ಕೆ ರೋಗ ವಾಸಿಯಾಗಲಿಲ್ಲ ಅಂದರೆ ಆಪರೇಷನ್ ಮಾಡುವುದು ಅನಿವಾರ್ಯ ಆಗುತ್ತೆ. …

Read More »

ಶಾಸಕ ಉಮೇಶ್ ಕತ್ತಿ ಡೈಮಂಡ್ ಇದ್ದಂತೆ.:ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ್ ಕತ್ತಿ

ಬೆಳಗಾವಿ: ಶಾಸಕ ಉಮೇಶ್ ಕತ್ತಿ ಡೈಮಂಡ್ ಇದ್ದಂತೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಸಹೋದರ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ನೀಡುವ ಆತ್ಮವಿಶ್ವಾಸ ನನಗಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ್ ಕತ್ತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಕತ್ತಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು 17 ಜನ ಶಾಸಕರು ಹೊರಗಿನಿಂದ ಬಂದವರು ಕಾರಣ. ಹಾಗಾಗಿ ಅವರೆಲ್ಲರಿಗೂ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮೂಲ ಬಿಜೆಪಿಗರು …

Read More »