Breaking News
Home / Laxminews 24x7 (page 2873)

Laxminews 24x7

ಶಕ್ತಿನಗರದಲ್ಲಿರುವ ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್ ನ 4ನೇ ಘಟಕದಲ್ಲಿ ಏಕಾಏಕಿ ಬೆಂಕಿ

ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್ ನ 4ನೇ ಘಟಕದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಮಂಗಳವಾರ ರಾತ್ರಿ ವೇಳೆ ಆರ್‌ಟಿಪಿಎಸ್ ನಲ್ಲಿ ವಿದ್ಯುತ್ ಘಟಕ ಆರಂಭಿಸುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ನಾಲ್ಕು ತಿಂಗಳಿಂದ ವಿದ್ಯುತ್ ಕೇಂದ್ರ ಕಾರ್ಯಸ್ಥಗಿತಗೊಂಡಿದ್ದರಿಂದ ಘಟಕ ಆರಂಭಿಸುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕೆನ್ನಾಲಿಗೆ ವಿದ್ಯುತ್ ಪರಿವರ್ತಕ ಸೇರಿದಂತೆ ಸುಮಾರು 60 ಲಕ್ಷ ರೂ.ಮೌಲ್ಯದ …

Read More »

ಡೆಲ್ಲಿ ಚೊಚ್ಚಲ ಐಪಿಎಲ್ ಆಸೆ ಭಗ್ನ, ದಾಖಲೆ ಬರೆದ ರೋಹಿತ್

ದುಬೈ: ಇಂದು ನಡೆದ ಐಪಿಎಲ್-2020ಯ ಫೈನಲ್ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ ಮುಂಬೈ ತಂಡ ಗೆದ್ದು ಬೀಗಿದೆ. ಈ ಮೂಲಕ ಐದನೇ ಬಾರಿ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಇಂದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡಿತ್ತು. ನಂತರ ನಾಯಕ ಶ್ರೇಯಸ್ ಐಯ್ಯರ್ ಮತ್ತು ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದ ನಿಗದಿತ 20 ಓವರಿನಲ್ಲಿ …

Read More »

ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ

ಬೆಂಗಳೂರು: ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದ್ರೆ ಜೆಡಿಎಸ್‍ನ ಎಪಿ ರಂಗನಾಥ್ 5,107 ಮತ ಗಳಿಸಿದರು. ಆದ್ರೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಹೊತ್ತು ಅಭಿಮಾನಿಗಳು ಸಂಭ್ರಮಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ …

Read More »

ಬಿಜೆಪಿ ಉಪಾಧ್ಯಕ್ಷ, ಸಿಎಂ ಬಿಎಸ್‍ವೈ ಪುತ್ರ ಬಿ.ವೈ.ವಿಜಯೇಂದ್ರ ಬಸವ ಕಲ್ಯಾಣದತ್ತ ಪ್ರಯಾಣ

ಬೆಂಗಳೂರು: ಶಿರಾ ಉಪ ಚುನಾವಣೆಯ ಗೆಲುವಿನ ಬಳಿಕ ಬಿಜೆಪಿ ಉಪಾಧ್ಯಕ್ಷ, ಸಿಎಂ ಬಿಎಸ್‍ವೈ ಪುತ್ರ ಬಿ.ವೈ.ವಿಜಯೇಂದ್ರ ಬಸವ ಕಲ್ಯಾಣದತ್ತ ಪ್ರಯಾಣ ಬೆಳೆಸಲಿದ್ದಾರೆ. ವಿಜಯೇಂದ್ರ, ಪಕ್ಷದ ರಾಜ್ಯಾಧ್ಯಕ್ಷರು ನಳಿನ್ ಕುಮಾರ್ ಕಟೀಲ್ ಆದೇಶದ ಮೇರೆಗೆ ನವೆಂಬರ್ 13ರಂದು ಬಸವ ಕಲ್ಯಾಣಕ್ಕೆ ತೆರಳುತ್ತಿದ್ದೇನೆ. ಅಲ್ಲಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಹೇಳುವ ಮೂಲಕ ಮುಂದಿನ ಗುರಿ ಬಸವ ಕಲ್ಯಾಣ ಅನ್ನೋದನ್ನ ರಿವೀಲ್ ಮಾಡಿದರು. ಶಿರಾದಲ್ಲಿ ಎಲ್ಲರನ್ನ ಒಗ್ಗೂಡಿಸಿಕೊಂಡು ಚುನಾವಣೆಯನ್ನ …

Read More »

ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ. ಕಳೆದ 20 ಗಂಟೆಯಿಂದ ಬೆಂಕಿ ಧಗ ಧಗನೇ ಉರಿಯುತ್ತಿದೆ. ಸ್ಥಳಕ್ಕೆ ನೂರಾರು ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಿಡೀ ಬೆಂಕಿ ನಂದಿಸೋ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದರು. ಬೆಂಕಿ ಅವಘಡದಲ್ಲಿ 2 ರಿಂದ 3 ಕೋಟಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. 7 ವಾಹನಗಳು, 2 ವಿದ್ಯುತ್ ಕಂಬ ನಾಶವಾಗಿವೆ. ಘಟನೆ …

Read More »

ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಕಾಲುವೆಗೆ

ಯಾದಗಿರಿ: ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಜಿಲ್ಲೆಯ ಹುಣಸಗಿ ತಾಲೂಕಿನ ಗುಳಬಾಳ ಗ್ರಾಮದ ಬಳಿ ನಡೆದಿದೆ. ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಒಂದೇ ಕುಟುಂಬದ ಮೂವರು ಜಲ ಸಮಾಧಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಟ್ಟಿ ಗ್ರಾಮದ ಪವನ್ ಬಿರಾದಾರ್ (34), ಪವನ್ ತಂದೆ ಶರಣಗೌಡ ಬಿರಾದಾರ್ (61), ತಾಯಿ ಜಾನಕಿ ಬಿರಾದಾರ್ (55) ಮೃತರು. ಮೃತ ಪವನ್ ಕುಟುಂಬದ ಎರಡು …

Read More »

ಮಳೆಯ ಹನಿಗಳ ಸಿಂಚನದಿಂದಾಗಿ ಜಲಪಾತಗಳು ಮೈದುಂಬಿ ಹರಿಯುತ್ತಿವೆ

ckm falls

ಚಿಕ್ಕಮಗಳೂರು: ನೈಸರ್ಗಿಕ ಸೌಂದರ್ಯದ ಖನಿಯಂತಿರೋ ಕಾಫಿನಾಡಲ್ಲೀಗ ಮುಂಗಾರು ಮಳೆ ಕೊಂಚ ಬಿಡುವು ಪಡೆದಿದೆ. ಆದರೆ ಮಳೆಯ ಹನಿಗಳ ಸಿಂಚನದಿಂದಾಗಿ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಚಂದ್ರದ್ರೋಣ ಪರ್ವತ ಶ್ರೇಣಿಯ ಸೆರಗಲ್ಲಿರೋ ಅಬ್ಬುಗುಡಿಗೆ ಫಾಲ್ಸ್ ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ. ದಟ್ಟಕಾನನದ ನಡುವೆ ಬಂಡೆಗಳ ಮೇಲಿಂದ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತವೀಗ ಅದ್ಭುತ ಲೋಕವನ್ನೇ ಸೃಷ್ಟಿಸಿದೆ. ಈ ಜಲಧಾರೆಯ ಸೊಬಗನ್ನು ಸವಿಯೋಕೆ ಪ್ರವಾಸಿಗರ ದಂಡೀಗ ಕಾಫಿನಾಡಲ್ಲಿ ಮನೆ ಮಾಡಿದೆ. ಹೌದು. ಎಲ್ಲಿ ನೋಡಿದರೂ ಹಚ್ಚ …

Read More »

ಆರ್‌ಆರ್‌ ನಗರದಲ್ಲಿ ಠೇವಣಿ ಕಳೆದುಕೊಂಡ ಜೆಡಿಎಸ್

ಬೆಂಗಳೂರು: ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಜೆಡಿಎಸ್ ಈ ಬಾರಿ ಹೀನಾಯವಾಗಿ ಸೋಲನುಭವಿಸಿದ್ದು, ಠೇವಣಿಯನ್ನು ಕಳೆದುಕೊಂಡಿದೆ. ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್‍ನ ಕುಸುಮಾ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 10,251 ಮತಗಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ. ಕಳೆದ ಬಾರಿ ಜೆಡಿಎಸ್ 60 ಸಾವಿರ ಮತಗಳನ್ನು ಪಡೆದಿತ್ತು. ಆದರೆ ಈ ಬಾರಿ ಇದರ ಅರ್ಧದಷ್ಟು ಮತಗಳನ್ನು ಸಹ ಜೆಡಿಎಸ್ ಅಭ್ಯರ್ಥಿ ಪಡೆದಿಲ್ಲ. ಒಟ್ಟು …

Read More »

ಚೊಚ್ಚಲ ಐಪಿಎಲ್ ಗೆಲ್ಲುವತ್ತ ಡಿಸಿ ಚಿತ್ತ, 5ನೆ ಮುಕುಟ ಮುಡಿಗೇರಿಸಿಕೊಳ್ಳಲು ಮುಂಬೈ ಕಾತರ

ದುಬೈ, ನ.10- ಮರಳುಗಾಡಿನ ದುಬೈ, ಶಾರ್ಜಾ, ಅಬುದಾಬಿಗಳಲ್ಲಿ 52 ದಿನಗಳ ಕಾಲ 8 ತಂಡಗಳು ನಡೆಸಿದ ಸಮರದ ಅಂತಿಮ ಕಾಳಗಕ್ಕೆ ಕ್ಷಣಗಣನೆ ಶುರುವಾಗಿದ್ದು ಐಪಿಎಲ್ ಮುಕುಟವನ್ನು ಗೆದ್ದು ಹುಣ್ಣಿಮೆಯ ನಗೆ ಚೆಲ್ಲಲು ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಾಸ್ ಅಯ್ಯರ್ ನಾಯ ಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿದೆ. #ಇತಿಹಾಸ ನಿರ್ಮಿಸಲು ರೆಡಿ: ಇಂದು ನಡೆಯುವ ಐಪಿಎಲ್‍ನ ಅಂತಿಮ ಪಂದ್ಯದಲ್ಲಿ ಇತಿಹಾಸ ನಿರ್ಮಿಸಲು ಎರಡು …

Read More »

ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದಕಳ್ಳ

ಬೆಂಗಳೂರು, ನ.10- ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕೋಲಾರ ಮೂಲದ ವ್ಯಕ್ತಿಯನ್ನು ಉತ್ತರ ವಿಭಾಗದ ಆರ್‍ಟಿ ನಗರ ಠಾಣೆ ಪೊಲೀಸರು ಬಂಧಿಸಿ 14.1 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಕೋಲಾರದ ವೇಮಗಲ್, ನರಸಾಪುರದ ಸಂತೋಷ್ (36) ಬಂಧಿತ ಆರೋಪಿ. ಈತನಿಂದ 350.3 ಗ್ರಾಂ ತೂಕದ ಚಿನ್ನಾಭರಣ ಮತ್ತು ಎಲ್‍ಇಡಿ ಟಿವಿಯನ್ನು ವಶಪಡಿಸಿಕೊಂಡಿದ್ದಾರೆ. ಮುನೇಶ್ವರ ಬ್ಲಾಕ್‍ನಲ್ಲಿ ವಾಸವಾಗಿರುವ ಮುರಳಿಧರ್ ಎಂಬುವವರು ಲಾಕ್‍ಡೌನ್ …

Read More »