Breaking News
Home / Laxminews 24x7 (page 2883)

Laxminews 24x7

ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೇನೆ, ಎಂದು ಹೇಳಿ ಮೋಸ ಮಾಡುತ್ತಿದ್ದ ವಂಚಕನನ್ನು ಬಂಧಿಸಿರುವ ಪೊಲೀಸರು

ಹುಬ್ಬಳ್ಳಿ: ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೇನೆ, ಕಲರ್ ಪಾಲೀಷ್ ಮಾಡುತ್ತೇನೆ ಎಂದು ಹೇಳಿ ಮೋಸ ಮಾಡುತ್ತಿದ್ದ ವಂಚಕನನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸುನಿಲ್ ಪತ್ತಾರ ಎಂದು ಗುರುತಿಸಲಾಗಿದೆ. ಈತ ನನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸುನಿಲ್ ಪತ್ತಾರ ಸಾರ್ವಜನರಿಕರನ್ನು ನಂಬಿಸಿ ಬಂಗಾರಕ್ಕೆ ಹಾಲ್ ಮಾರ್ಕ್ ಹಾಕಿ ಕೊಡುತ್ತೇನೆ. ಕಲರ್ ಪಾಲೀಷ್ ಮಾಡುತ್ತೇನೆ ಅಂತ ಮೋಸ ಮಾಡುತ್ತಿದ್ದ. ವಂಚಕನ ಬಗ್ಗೆ ಸಾರ್ವಜನಿಕರು ದೂರು …

Read More »

ಯಾವ ಮುಖ್ಯಮಂತ್ರಿಯೂ ಐದು ವರ್ಷ ಪೂರೈಸಿಲ್ಲ. ಆದರೆ, ನಾನು ಐದು ವರ್ಷ ಪೂರೈಸಿದ್ನಲ್ಲ ಅದು ಇವರಿಗೆಲ್ಲ ಹೊಟ್ಟೆ ಉರಿ.

ಮೈಸೂರು: ನಾನು ಕಳೆದ ಚುನಾವಣೆಯಲ್ಲಿ ಅಷ್ಟೊಂದು ಕೆಟ್ಟದಾಗಿ ಸೋಲ್ತಿನಿ ಅಂತ ಅಂದುಕೊಂಡಿರಲಿಲ್ಲ ಎಂದು ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆ ಸೋಲಿನ ಕುರಿತು ಕಾಂಗ್ರೆಸ್ ಜನಾಧಿಕಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಳ್ಳಿಗಳಿಗೆ ಹೋದಾಗ ಜನರೆಲ್ಲ ಪ್ರೀತಿ ತೋರಿಸಿದರು. ಆದರೆ, ನನ್ನ ಸೋಲಿಗೆ ನಮ್ಮ ಪಕ್ಷದವರು ಕೂಡ ಕಾರಣರಾದರು ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷ ಅಂದರೆ ತಾಯಿ ಇದ್ದ …

Read More »

ಸಿದ್ದರಾಮಯ್ಯನವರು ಗೋಸುಂಬೆ ರೀತಿ ಆಡಬಾರದು.: ಸಿ.ಟಿ.ರವಿ

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಈಗ ಏಕೆ ತಾಜ್ ವೆಸ್ಟ್ ಎಂಡ್ ಕಥೆ ತೆಗೆಯುತ್ತಿದ್ದಾರೆ, ತಾಜ್ ವೆಸ್ಟ್ ಎಂಡ್ ಅಡ್ರೆಸ್ ಗೊತ್ತಾದ ಮೇಲೆ ತಾನೇ ಲೋಕಸಭೆ ಚುನಾವಣೆ ಒಟ್ಟಿಗೆ ಮಾಡಿದ್ದು, ಅಧಿಕಾರ ಹಂಚಿಕೊಂಡು ತನ್ನವರನ್ನ ಮಂತ್ರಿ ಮಾಡುವಾಗ ವೆಸ್ಟ್ ಎಂಡ್ ಅಡ್ರೆಸ್ ಗೊತ್ತಿರಲಿಲ್ವಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಹಳೇ …

Read More »

ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ಅವರ ವಿವಾಹ ಬೆಳಗಾವಿಯಲ್ಲಿ ನಡೆಯಿತು.

ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ಅವರ ವಿವಾಹವು ಹುಬ್ಬಳ್ಳಿಯ ದಿ.ವಿಶ್ವಪ್ರಕಾಶ ಉಳ್ಳಾಗಡ್ಡಿಮಠ ಅವರ ಪುತ್ರ ರಜತ್ ಜೊತೆ ಬೆಳಗಾವಿಯಲ್ಲಿ ನಡೆಯಿತು. ಇಲ್ಲಿಯ ಸಂಕಮ್ ಹೊಟೆಲ್ ಸಭಾಂಗಣದಲ್ಲಿ ವಿವಾಹ ಪೂರ್ವ ಕಾರ್ಯಕ್ರಮ ಹಾಗೂ ವಿವಾಹ ಕಾರ್ಯಕ್ರಮಗಳು ಒಟ್ಟೂ 3 ದಿನಗಳ ಕಾಲ ನಡೆಯಿತು. ಕೊರೋನಾ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಆಮಂತ್ರಣ ನೀಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಚಿತ್ರನಟ ವಿಜಯರಾಘವೇಂದ್ರ ಸೇರಿದಂತೆ …

Read More »

ಏಳು ದಿನಗಳೊಳಗೆ ಜನನ ಮರಣ ಪ್ರಮಾಣ ಪತ್ರ ಲಭ್ಯ: ಜಿಲ್ಲಾಧಿಕಾರಿ

ಮಂಡ್ಯ (ಕರ್ನಾಟಕ ವಾರ್ತೆ):- ಜನನ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣಪತ್ರವನ್ನು ಸಕಾಲ ಸೇವೆಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಸಾರ್ವಜನಿಕರು ಇ-ಜನ್ಮ ವೆಬ್‍ಸೈಟ್‍ಗೆ ಲಾಗ್‍ಇನ್ ಆಗಿ 07 ದಿನಗಳೊಳಗೆ ಮಕ್ಕಳ ಜನನ ಪ್ರಮಾಣ ಪತ್ರ ಅಥವಾ ತಮ್ಮ ಸಂಬಂಧಿಕರ ಮರಣ ಪ್ರಮಾಣಪತ್ರವನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ.ವಿ ವೆಂಕಟೇಶ್ ರವರು ತಿಳಿಸಿದರು. ಮಂಡ್ಯ ಜಿಲ್ಲೆಯ ಸಕಾಲ ಸಪ್ತಾಹ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಮತ್ತು ಸಾಂಖ್ಯಿಕ ಇಲಾಖೆÀಯ ವತಿಯಿಂದ …

Read More »

ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪಣ ತೊಡೋಣ’’:

ಇಂದು ಸಿ.ಎಫ್.ಟಿ.ಎಫ್.ಕೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ, ಡ್ರಗ್ಸ್, ಮದ್ಯಪಾನ ಮುಕ್ತ ಕರ್ನಾಟಕ ಜನಜಾಗೃತಿ ಕಾರ್ಯಕ್ರಮದಲ್ಲಿ, ಗೂಗಲ್ ಮೀಟ್ ಮೂಲಕ ಭಾಗವಹಿಸಿ, ಮಾತನಾಡಲಾಯಿತು. ಇತ್ತೀಚಿನ ದಿನಮಾನಗಳಲ್ಲಿ ಮಕ್ಕಳು ಡ್ರಗ್ಸ್ , ಮದ್ಯಪಾನ ಹೀಗೆ ಹಲವು ದುಶ್ಚಟಗಳಿಗೆ ಬಲಿಯಾಗುತ್ತಿರುವ ನಡುವೆ ಸಮಾಜದಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿರುವ ಸಿ.ಎಫ್.ಟಿ.ಎಫ್.ಕೆ ಸಂಸ್ಥೆಯ ಕಾರ್ಯ ಶ್ಲಾಘನೀಯ. ನಮ್ಮ ಇಲಾಖೆಯ ರೀತಿ ಸಿ.ಎಫ್.ಟಿ.ಎಫ್.ಕೆ ಸಂಸ್ಥೆ ಕೂಡ ಸಮಾಜದಲ್ಲಿ ಧೂಮಪಾನ, ಡ್ರಗ್ಸ್, ಮದ್ಯಪಾನದಂತಹ ಕೆಟ್ಟ ಚಟಗಳಿಂದ ಜನರನ್ನು ದೂರವಿರಿಸಲು ಶ್ರಮವಹಿಸುತ್ತಿದೆ. …

Read More »

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ

ಹಾವೇರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು. ಸಮ್ಮೇಳನ ಮಾಡುವುದು ಅಂದರೆ ಸುಲಭದ ಕೆಲಸವಲ್ಲ. ಪ್ರತಿಯೊಬ್ಬರು ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ಮಾತ್ರ ಸಮ್ಮೇಳನ ಯಶಸ್ವಿ ಆಗುತ್ತದೆ. ಒಳಗೊಳಗೆ ಕಿತ್ತಾಟ, ವೈಮನಸ್ಸು ಇಟ್ಟುಕೊಂಡು ಸಮ್ಮೇಳನ ಮಾಡುವುದಾದರೆ ಬೇಡ. ಅಂತಹ ಸಮ್ಮೇಳನ ಮಾಡಿ ಜಿಲ್ಲೆಗೆ ಕೆಟ್ಟ ಹೆಸರು ತರುವುದು ಬೇಡ. ಊಟಕ್ಕೆ ಸೀಮಿತವಾದ ಸಮ್ಮೇಳನ ಮಾಡುವ ಬದಲು ಹೊಸತನದ ಸಮ್ಮೇಳನ ಮಾಡೋಣ. ಅಧಿಕಾರಿಗಳು, …

Read More »

ಅಖಿಲ ಭಾರತ ಮಾಧ್ವ ಮಹಾಮಂಡಲ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭ

ಧಾರವಾಡದಲ್ಲಿ ಇಂದು ಅಖಿಲ ಭಾರತ ಮಾಧ್ವ ಮಹಾಮಂಡಲ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವಾದವನ್ನು ಪಡೆಯಲಾಯಿತು.   ಪೇಜಾವರ ಮಠಾಧೀಶರಾದ ಪ್ರಾಥಃಸ್ಮರಣೀಯ, ಯತಿಕುಲ ಚಕ್ರವರ್ತಿ, ಪದ್ಮವಿಭೂಷಣ ಪುರಸ್ಕೃತ ಪರಮಪೂಜ್ಯ ಶ್ರೀ ಶ್ರೀ ವಿಶ್ವೇಶ್ವ ತೀರ್ಥ ಶ್ರೀಪಾದಂಗಳವರು ಶ್ರೀಮನ್ ಮಧ್ವಾಚಾರ್ಯರ ಸಿದ್ಧಾಂತ ಪ್ರಚಾರಕ್ಕೆಂದೇ ಸ್ಥಾಪಿಸಿದ ಸಂಸ್ಥೆ ಅಖಿಲ ಭಾರತ ಮಾಧ್ವ ಮಹಾಮಂಡಲ. ಶ್ರೀಗಳವರು ಕರ್ನಾಟಕದ ಅನೇಕ ಕಡೆ ಮಂಡಲದ ಶಾಖೆಗಳನ್ನು …

Read More »

13 ಕಡೆ ಎಸಿಬಿ ದಾಳಿ, ಅಧಿಕಾರಿಗಳಿಗೆ ಶಾಕ್..!

ಬೆಂಗಳೂರು, ಡಿ.18- ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಆಧರಿಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಂಡ ಇಂದು ಮೈಸೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಯಾದ್ಯಂತ 13 ಸ್ಥಳಗಳಲ್ಲಿ ದಾಳಿ ನಡೆಸಿದೆ. ಬಲೆಗೆ ಬಿದ್ದಿರುವ ಅಧಿಕಾರಿಗಳನ್ನು ಮೈಸೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರಸ್ವಾಮಿ, ಹಾಸನದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಎಂಜಿನಿಯರ್ ವಿ.ಎಸ್. ಅಶ್ವಿನಿ ಹಾಗೂ ಬೆಳಗಾವಿಯ ಲೋಕೋಪ ಯೋಗಿ ಬಂದರು ಮತ್ತು ಒಳನಾಡು …

Read More »

ಕರ್ನಾಟಕ ರಾಜ್ಯ ವೀರಶೈವ -ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಅವರನ್ನು ಹುಕ್ಕೇರಿ ಹಿರೇಮಠದಿಂದ ಬೆಂಗಳೂರು ಮಹಾನಗರದಲ್ಲಿ ಸತ್ಕರಿಸಲಾಯಿತು.

ಬೆಂಗಳೂರು – ಕರ್ನಾಟಕ ರಾಜ್ಯ ವೀರಶೈವ -ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಅವರನ್ನು ಹುಕ್ಕೇರಿ ಹಿರೇಮಠದಿಂದ ಬೆಂಗಳೂರು ಮಹಾನಗರದಲ್ಲಿ ಸತ್ಕರಿಸಲಾಯಿತು.   ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಇವರನ್ನು ಬೆಂಗಳೂರು ಮಹಾನಗರದಲ್ಲಿ ಹುಕ್ಕೇರಿ ಹಿರೇಮಠದ ವತಿಯಿಂದ ಶ್ರೀ ಷ ಬ್ರ ಡಾಕ್ಟರ್ ಮಲಯ ಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಶಿವಗಂಗಾ ಕ್ಷೇತ್ರ ಇವರ ದಿವ್ಯಸಾನಿಧ್ಯದಲ್ಲಿ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಠ ಹುಕ್ಕೇರಿ …

Read More »