Breaking News
Home / Laxminews 24x7 (page 2887)

Laxminews 24x7

ರೈತ ಇದ್ರೆನೇ ದೇಶ- ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಬೆಂಬಲ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್‍ಗೆ ರಾಜ್ಯಾದ ಹಲವೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸ್ಯಾಂಡಲ್‍ವುಡ್ ಹ್ಯಾಟಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಬೆಂಬಲ ಸೂಚಿಸಿದ್ದಾರೆ. ಸಂಬಂಧ ಟ್ವೀಟ್ ಮಾಡಿರುವ ಶಿವಣ್ಣ, ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಬರೆದುಕೊಂಡಿದ್ದಾರೆ. …

Read More »

ಐನಾಪುರ: ನೇಣು ಹಾಕಿಕೊಂಡು ಅಕ್ಕ, ತಂಗಿ ಆತ್ಮಹತ್ಯೆ

ಚಿಂಚೋಳಿ: ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ಅಕ್ಕ, ತಂಗಿ ಇಬ್ಬರೂ ಏಕಕಾಲಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಶ್ವರ್ಯ ವಿಶ್ವನಾಥ ಸುತಾರ (20) ಹಾಗೂ ಸಾರಿಕಾ ವಿಶ್ವನಾಥ ಸುತಾರ (17) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕುಟುಂಬದ ಮುಖ್ಯಸ್ಥ ವಿಶ್ವನಾಥ ಸುತಾರ ಅವರು ಐನಾಪುರ ಗ್ರಾಮದಲ್ಲಿಯೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಅವರಿಗೆ ಒಟ್ಟು ಐವರವು ಹೆಣ್ಣುಮಕ್ಕಳಿದ್ದರು. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಆದರೆ, …

Read More »

ಭಾರತ್ ಬಂದ್; ಬೆಳಗಾವಿಯಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ

ಬೆಳಗಾವಿ : ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ಉಂಟಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.     ಬಸ್ …

Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ.   ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …

Read More »

ರೈತರಿಗೆ ಬೆಂಬಲ; ದಿಲ್ಲಿ ಸಿಎಂ ಕೇಜ್ರಿವಾಲ್ ಗೆ ಗೃಹ ಬಂಧನ: ಆಪ್ ಆರೋಪ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಪೆÇಲೀಸರು ಗೃಹ ಬಂಧನದಲ್ಲಿರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರ ಸೌರಭ್ ಭಾರದ್ವಾಜ್, ದೆಹಲಿ ಪೆÇಲೀಸರು ಕೇಜ್ರೀವಾಲ್ ಅವರನ್ನು ಗೃಹಬಂಧನದಲ್ಲಿ ಇರಿಸಿದೆ. ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೆÇಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಂಗ್ಯೂ ಬಾರ್ಡರ್ ನಲ್ಲಿ ರೈತರನ್ನು ಭೇಟಿ ಮಾಡಿದ ನಂತರ ಗೃಹ ಬಂಧನದಲ್ಲಿರಿಸಲಾಗಿದೆ. ಅವರ ನಿವಾಸಕ್ಕೆ ತೆರಳಲು …

Read More »

ಅನ್ನದಾತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ

ಪುಣೆ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್ ಬಂದ್’ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಅಹಮದ್‍ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ …

Read More »

ಭಾರತ್ ಬಂದ್ : ಗೋಕಾಕನಲ್ಲಿ ಸಹಜ ಸ್ಥಿತಿ

    ಗೋಕಾಕ : ರೈತರು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದೆ. ಆದರೆ ಗೋಕಾಕ ತಾಲ್ಲೂಕಿನಲ್ಲಿ ಪ್ರತಿಭಟನೆ ಬಿಸಿ ತಟ್ಟಿಲ್ಲ. ಎಂದಿನಂತೆ ಜನಜೀವನ ಸಹಜ ಸ್ಥಿತಿಯಲ್ಲಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಲಾಗಿದೆ. ಆದರೆ ಜನರು ದಿನನಿತ್ಯದಂತೆ ಅಂಗಡಿ, ವ್ಯಾಪಾರ ವಹಿವಾಟು ನಡೆಸಿರುವುದು ಕಂಡು ಬಂದಿದೆ. ಇನ್ನೂ ಕೆಎಸ್ ಆರ್ ಟಿಸಿ …

Read More »

ಭಾರತ್ ಬಂದ್ ಕರೆಗೆ ಬೆಂಬಲ: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಭಾರತ್ ಬಂದ್ ಕರೆಗೆ ಬೆಂಬಲ ಕೋರಿ ನಗರದ ಹಲವೆಡೆ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳ ಮುಖಂಡರು ಬೈಕ್ ರ್‍ಯಾಲಿ ನಡೆಸುತ್ತಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಶಾಸಕ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಇತರ ಶಾಸಕರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ. ಶಿವಾಜಿನಗರ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಮತ್ತು …

Read More »

ಮಗು ಸೇರಿ ಮೇಘನಾ ರಾಜ್‍ಗೆ ಕೊರೋನ ಪಾಸಿಟಿವ್!

ಬೆಂಗಳೂರು : ಹಿರಿಯ ನಟಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಸುಂದರ್ ರಾಜ್, ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ಭೂಸುಧಾರಣೆ ಕಾಯ್ದೆ ತಿದ್ದುಪಡಿ: ಪರಿಷತ್‍ನಲ್ಲಿ ಕೋಲಾಹಲ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮಂಡಿಸಿದ ಪರಿಷ್ಕøತ ಮಸೂದೆ ವಿಧಾನ ಪರಿಷತ್‍ನಲ್ಲಿ ಮತ್ತೆ ಕೋಲಾಹಲಕ್ಕೆ ಕಾರಣವಾಯಿತು. ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮಸೂದೆಗೆ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದರು. …

Read More »