ಮಡಿಕೇರಿ: ಕೊಡಗಿನ ಸುಂಟಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೇಜರ್ ಸರ್ಜರಿಯೇ ಬೇಕಾಗಿದೆ. ಬಡವರ ಪಾಲಿನ ಸಂಜೀವಿನಿಯಾಗಬೇಕಿದ್ದ ಆಸ್ಪತ್ರೆ ಇಂದು ಅವ್ಯವಸ್ಥೆಯ ಸುಳಿಯಲ್ಲಿ ಸಿಲುಕಿದೆ. ವೈದ್ಯರು, ಸಿಬ್ಬಂದಿ ಕೊರತೆ ಜೊತೆಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ರೋಗಿಗಳು ಪರದಾಡುವಂತಾಗಿದೆ. ಇನ್ನೂ ಆಸ್ಪತ್ರೆಯಲ್ಲಿರುವ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಚಾಟ್ ಜಿಪಿಟಿ ಬಳಸಿ ಔಷಧಿ ಬರೆದುಕೊಡ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಈ ಆಸ್ಪತ್ರೆ ಅಪಘಾತಗಳು ಸಂಭವಿಸಿದಾಗಲೂ, ಕಾಡಾನೆಗಳ ಹಾವಳಿಯಿಂದ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ …
Read More »ಇಂದು ಹಾಸನಾಂಬ ದೇವಿ ದರ್ಶನಕ್ಕೆ ಸಿಎಂ ಡಿಕೆಶಿ, ಕೇಂದ್ರ ಸಚಿವ ಹೆಚ್ಡಿಕೆ ಆಗಮನ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಹತ್ತನೇ ದಿನ. ಭಾನುವಾರದ ರಜಾ ದಿನವಾಗಿರುವುದರಿಂದ ದೇವಿಯ ದರ್ಶನ ಪಡೆಯಲು ಭಕ್ತಸಾಗರವೇ ಹರಿದುಬರುತ್ತಿದೆ. ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಇಂದು ದೇವಿಯ ದರ್ಶನ ಪಡೆಯಲಿದ್ದಾರೆ. ದರ್ಶನ ಪಡೆಯಲಿರುವ ಮುಖ್ಯಮಂತ್ರಿ ಡಿಕೆಶಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಹಾಸನಾಂಬ …
Read More »ವಾಹನಗಳ ಎಂಜಿನ್ ಹಾಳಾಗಬಹುದು: ಹೆಚ್ಚಿನ ಪ್ರಮಾಣದ ಎಥೆನಾಲ್ ಬಳಕೆ ಎಫೆಕ್ಟ್ ಬಗ್ಗೆ ತಜ್ಞರು ಹೇಳೋದೇನು?
ಬೆಂಗಳೂರು: ಎಂಜಿನ್ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಮಿಶ್ರಣ ಮಾಡುವುದು ಅಗತ್ಯ. ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಣದಿಂದ ವಾಹನಗಳ ಎಂಜಿನ್ ಹಾಳಾಗಬಹುದು ಎಂದು ಬೆಂಗಳೂರು ವಿವಿಯ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಜಿ.ಕೃಷ್ಣಮೂರ್ತಿ ಹೇಳಿದರು. ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಆರ್ಥಿಕವಾಗಿ ಅನುಕೂಲಕರ. ಎಂಜಿನ್ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಮಿಶ್ರಣ ಮಾಡುವುದು ಅಗತ್ಯ. ಸಾಮಾನ್ಯ ವಾಹನಗಳ ಎಂಜಿನ್ಗಳಿಗೆ ಶೇ.20ರಷ್ಟು ಎಥೆನಾಲ್ ಮಿಶ್ರಣ ಸೂಕ್ತ. ಕೆಲವು ಮಾಡಿಫೈಡ್ ಎಂಜಿನ್ಗಳು ಶೇ.25ರಿಂದ 30ರಷ್ಟು ಎಥೆನಾಲ್ ಮಿಶ್ರಣ …
Read More »ದೀಪಾವಳಿ | ಮೆಜೆಸ್ಟಿಕ್ನಲ್ಲಿ ಜನಸಾಗರ – ಇಂದು KSRTCಯಿಂದ 908 ವಿಶೇಷ ಬಸ್ಗಳ ಸಂಚಾರ
ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರಿನಿಂದ ಊರುಗಳತ್ತ ಜನರು ಹೊರಟಿದ್ದಾರೆ. ಇಂದು ಕೂಡ ಮೆಜೆಸ್ಟಿಕ್ನಲ್ಲಿ ಜನದಟ್ಟಣೆ ಕಂಡುಬಂತು. ಕೆಎಸ್ಆರ್ಟಿಸಿಯಿಂದ 908 ವಿಶೇಷ ಬಸ್ಗಳು ಸಂಚಾರ ನಡೆಸಿವೆ. ನಗರದಿಂದ ಊರುಗಳಿಗೆ ತೆರಳುವವರ ಅನುಕೂಲಕ್ಕಾಗಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್ ಹೊರತುಪಡಿಸಿ ನಗರದ 11 ಸ್ಥಳಗಳಲ್ಲಿ ಬಸ್ಗಳ ಪಿಕಪ್ ಪಾಯಿಂಟ್ ಮಾಡಲಾಗಿದೆ. ಟಿಕೆಟ್ ಕಾಯ್ದಿರಿಸುವ ಕೌಂಟರ್ಗಳನ್ನು ತೆರೆಯಲಾಗಿತ್ತು. ಮಂಗಳೂರಿಗೆ 49, ದಾವಣಗೆರೆಗೆ 42, ಹುಬ್ಬಳ್ಳಿ ಮತ್ತು ಕುಂದಾಪುರಕ್ಕೆ ತಲಾ 35, ಬೆಳಗಾವಿಗೆ …
Read More »ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ಕೊಡಬೇಡಿ: ಮೋದಿಗೆ ಸಿಎಂ ವಿಜಯ್ ಪತ್ರ
ನವದೆಹಲಿ: ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಬೇಡಿ ಎಂದು ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ ಬರೆದಿದ್ದಾರೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಅಧಿಕಾರಿಗಳ ಸ್ಥಳ ಪರಿಶೀಲನೆಗೆ ತಮಿಳುನಾಡು ಸಿಎಂ ವಿಜಯ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಲಾನಯನ ಪ್ರದೇಶದ ಇತರೆ ರಾಜ್ಯಗಳ ಒಪ್ಪಿಗೆ ಇಲ್ಲದೆ ಯೋಜನೆಗೆ ಶಾಸನಬದ್ಧ ಅಥವಾ ಆಡಳಿತಾತ್ಮಕ ಅನುಮತಿ ನೀಡದಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಕೇಂದ್ರ ಅಧಿಕಾರಿಗಳ ಸ್ಥಳ ಪರಿಶೀಲನೆಯಿಂದ ಕಾವೇರಿ ಡೆಲ್ಟಾ ರೈತರಲ್ಲಿ ಆತಂಕ …
Read More »ವಕೀಲ ವೃತ್ತಿಗೆ ಬೌದ್ಧಿಕ ಕೌಶಲ್ಯ, ನಿರಂತರ ಅಧ್ಯಯನ ಅಗತ್ಯ: ಪದ್ಮಾವತಿ ಮಾನೆ
ಬಾಗಲಕೋಟೆ: ವಕೀಲ ವೃತ್ತಿಯು ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಶ್ರೇಷ್ಠ ವೃತ್ತಿಯಾಗಿದ್ದು, ಈ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಬೌದ್ಧಿಕ ಕೌಶಲ್ಯ, ಭಾಷಾ ಪ್ರೌಢಿಮೆ, ಸಂವಹನ ಕಲೆ, ಶ್ರದ್ಧೆ ಹಾಗೂ ನಿರಂತರ ಅಧ್ಯಯನ ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪದ್ಮಾವತಿ ಮಾನೆ ಹೇಳಿದರು. ನಗರದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದಲ್ಲಿ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಸಂಘ, ಎನ್ಎಸ್ಎಸ್, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ …
Read More »ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ವೇಳೆ ಶ್ರೀ ಮರುಳಾರಾಧ್ಯ ಸ್ವಾಮೀಜಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಶ್ಯಾಳ ಗ್ರಾಮದ ಮಠದ ಮರುಳಾರಾಧ್ಯ ಸ್ವಾಮೀಜಿ, ರೈತರ ಸಮಸ್ಯೆ ಪರಿಹಾರದ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರವನ್ನು ಪ್ರಶ್ನಿಸಿ ವಾಗ್ದಾಳಿ ನಡೆಸಿದರು. ಕಬ್ಬು …
Read More »ನಿರ್ಮಾಣ ಹಂತದ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ದುರಂತ: ಒಂದೇ ಕಾರಿನಲ್ಲಿದ್ದ ನಾಲ್ವರು ಯುವಕರು ಸಾವು
ರಾತ್ರಿ ಪ್ರಯಾಣಕ್ಕೆ ಹೊರಟಿದ್ದ ನಾಲ್ವರು ಯುವಕರ ಬದುಕು ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದೆ. ನಿರ್ಮಾಣ ಹಂತದ ಎಕ್ಸ್ಪ್ರೆಸ್ವೇಯಲ್ಲಿ ವೇಗವಾಗಿ ಬಂದ ಕಾರು ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲಿಂಗೇರಿ ತಾಂಡಾದ ಓರ್ವ ಯುವಕ ಹಾಗೂ ಮಲ್ಹಾರ್ ತಾಂಡಾದ ಮೂವರು ನಿವಾಸಿಗಳು ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ಯಾದಗಿರಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಶುಕ್ರವಾರ …
Read More »ಬೆಳಗಾವಿಯಲ್ಲಿ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಕಾರ್ಯಾಚರಣೆ: ಹರಿತವಾದ ಕೊಯ್ತಾ ಸಮೇತ ವ್ಯಕ್ತಿ ಬಂಧನ
ಬೆಳಗಾವಿ: ನಗರದಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಉದ್ದೇಶದಿಂದ ಕಾರ್ಯಾಚರಣೆ ನಡೆಸಿದ ಮಾರ್ಕೆಟ್ ಪೊಲೀಸ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಪೊಲೀಸರು, ಹರಿತವಾದ ಕೊಯ್ತಾ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ನವೆಂಬರ್ 6ರಂದು ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾನೂನುಬಾಹಿರವಾಗಿ ಮಾರಕ ಆಯುಧವನ್ನು ಹೊಂದಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಅಬಿಷೇಕ್ ವಿನೋದ್ ಕೆಂಕರೆ (43) ಎಂದು ಗುರುತಿಸಲಾಗಿದೆ. ಈತ ತನ್ನ ಬಳಿ ಹರಿತವಾದ ಕೊಯ್ತಾವನ್ನು ಯಾವುದೇ ಅಪರಾಧ …
Read More »ಸಂತೆಯಲ್ಲಿ ಬಂಗಾರದ ಸರ ಕಳ್ಳತನ: ಮಹಿಳೆಯನ್ನು ಬಂಧಿಸಿದ ಬೆಳಗಾವಿ ಪೊಲೀಸರು
ಬೆಳಗಾವಿ: ಹಾರೂಗೇರಿ ಸಂತೆಯಲ್ಲಿ ಮಹಿಳೆಯೊಬ್ಬರ ಕೈಚೀಲದಲ್ಲಿದ್ದ ಅಂದಾಜು ₹3.50 ಲಕ್ಷ ಮೌಲ್ಯದ ಬಂಗಾರದ ಸರ ಕಳ್ಳತನ ಮಾಡಿದ ಆರೋಪದ ಮೇಲೆ ಕಾಗವಾಡದ ಮಹಿಳೆಯೊಬ್ಬರನ್ನು ಹಾರೂಗೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಕಳವು ಮಾಡಲಾಗಿದ್ದ ಸಂಪೂರ್ಣ ಬಂಗಾರದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಗವಾಡ ನಿವಾಸಿ ಸುಲೋಚನಾ ಸಿದ್ದಪ್ಪ ಲೋಂಡೆ ಬಂಧಿತ ಆರೋಪಿತೆ. ರಾಯಬಾಗ ತಾಲೂಕಿನ ಹಾರೂಗೇರಿ ಜನತಾ ಪ್ಲಾಟ್ ನಿವಾಸಿ ಶಾಂತವ್ವ ಅಪ್ಪಾಸಾಬ ಮೋರೆ (45) ಅವರು ಅಕ್ಟೋಬರ್ 7ರಂದು ಹಾರೂಗೇರಿ ಸಂತೆಗೆ …
Read More »
Laxmi News 24×7