ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಮಹಾವೀರ ನಗರದಲ್ಲಿ ನಡೆಸಿದ ‘ಜನತಾ ದರ್ಬಾರ್’ ಕುರಿತು ನೋಡೋಣ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ನೇರವಾಗಿ ಜನರ ಮನೆಬಾಗಿಲಿಗೆ ತೆರಳುತ್ತಿರುವ ಶಾಸಕರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಶಾಸಕ ಆಸೀಫ್ ಸೇಠ್ ಅವರು ಇಂದು ಮಹಾವೀರ ನಗರ ಪ್ರದೇಶದಲ್ಲಿ ಸಮಗ್ರ ರೌಂಡ್ಸ್ ನಡೆಸಿ, ‘ಜನತಾ ದರ್ಬಾರ್’ ಮೂಲಕ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಮನ್ …
Read More »ಟ್ರ್ಯಾಕ್ಟರ್’ಗಳ ಡಿಜೆ ಅಬ್ಬರಕ್ಕೆ ಸಾರಿಗೆ ಇಲಾಖೆ ಮೌನ: ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿ ಶ್ರೀನಿವಾಸ್ ಪಾಟೀಲ್ ಸತ್ಯಾಗ್ರಹ
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್‌ಗಳಿಗೆ ಅಳವಡಿಸಲಾದ ಕಾನೂನುಬಾಹಿರ ಡಿಜೆ ಸೌಂಡ್ ಸಿಸ್ಟಮ್‌ಗಳು ಈಗ ಜನರ ಪ್ರಾಣಕ್ಕೆ ಸಂಚಕಾರ ತಂದಿವೆ. ಶಾಲಾ ಮಕ್ಕಳ ಶಿಕ್ಷಣ ಮತ್ತು ರೋಗಿಗಳ ನೆಮ್ಮದಿಗೆ ಭಂಗ ತರುತ್ತಿರುವ ಈ ಅಬ್ಬರದ ವಿರುದ್ಧ ಶ್ರೀನಿವಾಸ್ ಪಾಟೀಲ್ ಈಗ ರಣಕಹಳೆ ಊದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಲಾಗಿರುವ ಡಿಜೆ ಸೌಂಡ್ …
Read More »ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ವಾಪಸ್ ಪಡೆಯಬೇಕು – ಆರ್.ಅಶೋಕ್ ಆಗ್ರಹ
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ನೀಡಿರೋ ಸರ್ಕಾರದ ಕ್ರಮವನ್ನ ವಿಪಕ್ಷ ನಾಯಕ ಆರ್. ಅಶೋಕ್ ಖಂಡಿಸಿದ್ದಾರೆ. ಕೂಡಲೇ ಸರ್ಕಾರ ಆದೇಶ ವಾಪಸ್ ಪಡೆಯಬೇಕು ಅಂತ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರ ಜನರ ತೆರಿಗೆ ಹಣವನ್ನ ಕಾಂಗ್ರೆಸ್ ಮೋಜು ಮಸ್ತಿಗೆ ಖರ್ಚು ಮಾಡ್ತಾ ಇದ್ದಾರೆ. ನನಗೆ ಇರೋ ಮಾಹಿತಿ ಇದನ್ನ ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ. ಯಾವ ಆಧಾರದಲ್ಲಿ ಸಂಪುಟ ದರ್ಜೆ ಕೊಟ್ಟಿದ್ದೀರಾ …
Read More »ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ
ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಇಂಡಿ ಕೂಟ ನಿರ್ಧರಿಸಿದೆ. ವಿಪಕ್ಷ ಸಂಸದರು ಪ್ರಧಾನಿ ಮೋದಿ ವಿರುದ್ಧ ಅನಿರೀಕ್ಷಿತ ಕೃತ್ಯ ಎಸಗಲು ಸಂಚು ರೂಪಿಸಿದ ಆರೋಪ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷದವರಿಗೆ ಮಾತನಾಡಲು ಅವಕಾಶ ಕೊಡ್ತಿಲ್ಲ ಅನ್ನೋದು ಇಂಡಿ ಕೂಟದ ಆರೋಪವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಚರ್ಚೆ ನಡೆದಿದೆ. ಇಂಡಿಯಾ ಮೈತ್ರಿಕೂಟದ ಭಾಗವಲ್ಲದ ತೃಣಮೂಲ …
Read More »ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ
ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ ಖಂಡಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮುಖ್ಯಮಂತ್ರಿಗಳು ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕೇವಲ ಒಂದು ಕೋಮಿನ ಜನರನ್ನು ಓಲೈಸುವ ರಾಜಕಾರಣ ಮಾಡುವುದು ಇತರ …
Read More »ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ) ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವಾಗಿ ಉಂಟಾಗಿರುವ ವಿವಾದದ ಬಗ್ಗೆ ಡಿಸಿಎಂ ಸ್ಪಷ್ಟನೆ ನೀಡಿದರು. “ಇಲ್ಲಿ ಯಾವುದೇ ರಾಜಕೀಯವಿಲ್ಲ. ನಮಗೆ ಯಾವುದೇ ರೀತಿಯ ನಿರ್ದೇಶನ ನೀಡುವ ಹಾಗೂ …
Read More »ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರು: ಕೆ.ಆರ್.ಪುರಂನ ಮಂಜುನಾಥ್ ಲೇಔಟ್‍ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ಈ ಅವಘಡದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಪೂರ್ಣಿಮ (46), ವೆಂಕಟೇಶ್ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ಣಿಮಾ ಅವರ ಸ್ಥಿತಿ ಗಂಭೀರವಾಗಿದೆ. ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »ಶ್ರೀ ಸಿದ್ಧಾರೂಢಸ್ವಾಮಿ ರಥೋತ್ಸವ 16ರಂದು
ಹುಬ್ಬಳ್ಳಿ: ಶಿವನ ಅವತಾರಿಯಾದ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿಗಳು ಪ್ರಾರಂಭಿಸಿದ ಶಿವರಾತ್ರಿ ಉತ್ಸವ 123 ವರ್ಷ ಪೂರೈಸಿದ್ದು, 124ನೇ ಶಿವರಾತ್ರಿ ಉತ್ಸವ ಫೆ. 10ರಿಂದ ಆರಂಭಗೊಂಡು ಫೆ. 18ರಂದು ಸಂಪನ್ನಗೊಳ್ಳಲಿದೆ ಎಂದು ಶ್ರೀ ಸಿದ್ಧಾರೂಢಮಠ ಟ್ರಸ್ಟ್ ಕಮಿಟಿ ಚೇರಮನ್ ಚನ್ನವೀರ ಮುಂಗುರವಾಡಿ ಹೇಳಿದರು. ಶ್ರೀ ಸಿದ್ಧಾರೂಢಮಠದ ಸಭಾಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಫೆ. 15ರಂದು ಶ್ರೀಗಳವರ ಪಾಲಕಿ ನಗರದಲ್ಲಿ ಸಂಚರಿಸಿ ರಾತ್ರಿ ಶ್ರೀಮಠಕ್ಕೆ ಬಂದ ನಂತರ ಅಹೋರಾತ್ರಿ ಜಾಗರಣೆ ನಡೆಯಲಿದೆ. 16ರಂದು …
Read More »ಸಾವಿರಾರು ದಾಳಿಗಳ ನಡುವೆ ಹಿಂದೂ ಸಮಾಜ ಅಳಿಸಲು ಸಾಧ್ಯವಾಗಿಲ್ಲ: ನರೇಂದ್ರ ಜೀ
ಗದಗ: ಎರಡು ಸಾವಿರ ವರ್ಷಗಳಿಂದ ಹಿಂದೂಗಳ ಮೇಲೆ ಅನೇಕ ದಾಳಿಗಳು ನಡೆಯುತ್ತಾ ಬಂದಿವೆ. ಆದರೆ, ಇಂದಿಗೂ ನಮ್ಮ ಧರ್ಮ-ಪರಂಪರೆ ಅಳಿಸಲು ಯಾರಿಗೂ ಸಾಧ್ಯವಾಗಿಲ್ಲ ಎಂದು ಉತ್ತರ ಕರ್ನಾಟಕ ಆರ್‌ಎಸ್‌ಎಸ್ ಪ್ರಾಂತ ಪ್ರಚಾರಕ ನರೇಂದ್ರ ಜೀ ಹೇಳಿದರು. ಬೆಟಗೇರಿಯ ರಂಗಪ್ಪಜ್ಜನ ಮಠದ ಹತ್ತಿರದ ಬಯಲು ಜಾಗೆಯಲ್ಲಿ ನಡೆದ ಹಿಂದೂ ಸಮ್ಮೇಳನ ಉದ್ದೇಶಿಸಿ ಮಾತನಾಡಿ, ಹಿಂದೂ ಸಮ್ಮೇಳನ ಅನ್ಯಧರ್ಮದ ವಿರುದ್ದ ಮಾತನಾಡುವುದಲ್ಲ. ಇದು ಭಾರತ ಮಾತೆಯ ಜಾತ್ರೆಯಾಗಿದೆ. ಬೆಟಗೇರಿಯಲ್ಲಿ ನಮ್ಮ ೪೫ ಸಮುದಾಯಗಳು …
Read More »12 ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿಗರ ಗೆಲುವು
ಚಿಂತಾಮಣಿ: ತಾಲೂಕಿನ ವೈಜಕೂರು ರೇಷ್ಮೇ ಬೆಳೆಗಾರರ, ರೈತರ ಸೇವಾ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಒಟ್ಟು 12 ಸ್ಥಾನಗಳಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್ ಬೆಂಬಲಿತ ಕಾಂಗ್ರೆಸ್ ಬೆಂಬಲಿಗರು ಗೆಲುವು ಸಾಧಿಸುವ ಮೂಲಕ ವಿರೋಧ ಪಕ್ಷಕ್ಕೆ ಮುಖಭಂಗ ಮಾಡಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ವನಿತಾ ಫಲಿತಾಂಶ ಘೋಷಿಸಿದರು. ಸಹಕಾರ ಸಂಘದ ಸಾಲಗಾರರ ಕ್ಷೇತ್ರದಲ್ಲಿ 10 ನಿರ್ದೇಶಕರು, ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ, ಠೇವಣೆದಾರರ ಕ್ಷೇತ್ರದಲ್ಲಿ ತಲಾ ಒಂದೊಂದು ನಿರ್ದೇಶಕ ಸ್ಥಾನಗಳಿಗೆ ಭಾನುವಾರ …
Read More »
Laxmi News 24×7