ಲಕ್ನೋ: ಕಾಣಿಕೆ ಹಣ ಕಳ್ಳತನದ ) ಘಟನೆ ಬಳಿಕ ಅಯೋಧ್ಯೆಯ ರಾಮ ಮಂದಿರದ ಆಡಳಿತ ವ್ಯವಸ್ಥೆಯಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೆ ತರಲು ಸಿದ್ಧತೆ ನಡೆದಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿತೇಂದ್ರ ಮಿಶ್ರಾ ಅಧಿಕಾರ ವಹಿಸಿಕೊಂಡ ಬಳಿಕ ದೇವಾಲಯದ ಸಿಬ್ಬಂದಿ ನಿರ್ವಹಣೆ, ಭದ್ರತೆ, ಕಣ್ಗಾವಲು ಹಾಗೂ ಕಾಣಿಕೆ ಹಣದ ಎಣಿಕೆ ವ್ಯವಸ್ಥೆಯಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗುತ್ತಿದೆ. ದೇವಾಲಯದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಸಿಬ್ಬಂದಿಗೂ ಡಿಜಿಟಲ್ ಪ್ರೊಫೈಲ್ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ನೇಮಕಾತಿ, ಹುದ್ದೆ, ಕರ್ತವ್ಯ, …
Read More »ಕಾವೇರಿ ತೀರ್ಥೋದ್ಭವ ಸನ್ನಿಹಿತ – ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ. ಬಿಡುಗಡೆ
ಮಡಿಕೇರಿ: ನಾಡಿನ ಜೀವನದಿ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ಇನ್ನೇನು ಕೇವಲ 15 ದಿನಗಳಷ್ಟೇ ಬಾಕಿ ಉಳಿದಿದೆ. ಇದೀಗ ಭಾಗಮಂಡಲ-ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ. ಇದರ ನಡುವೆ ಇಲ್ಲಿನ ಅಗತ್ಯ ಕೆಲಸ ಕಾರ್ಯಗಳಿಗಾಗಿ ಕಾವೇರಿ ನೀರಾವರಿ ನಿಗಮದ ಮೂಲಕ 2 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 2 ಕೋಟಿ ರೂ. ಅನುದಾನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆಯಾಗಿದ್ದು, ಇದನ್ನು ಜಿಲ್ಲಾಧಿಕಾರಿ ಸೋಮಶೇಖರ್ ಅವರು ಖಚಿತಪಡಿಸಿದ್ದಾರೆ. ತುಲಾ …
Read More »ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟ – ನಾಲ್ವರು ಸಾವು
ಅಮರಾವತಿ: ಖಾಸಗಿ ಔಷಧ ತಯಾರಿಕಾ ಘಟಕದಲ್ಲಿ ನೀರಿನ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಬೆಳಗ್ಗೆ ಸುಮಾರು 8 ಗಂಟೆಗೆ ಸ್ಫೋಟ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಅಧಿಕಾರಿಗಳ ಪ್ರಕಾರ, ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ಮುಂದುವರಿದಿದೆ. ಸತ್ಯವೇಡು …
Read More »ಬಿಜೆಪಿ ನಾಯಕರ ಮೇಲೆ FIR; ಡಿಜಿ-ಐಜಿಪಿ ಭೇಟಿಯಾದ ಬಿಎಸ್‌ವೈ, ಬಿವೈವಿ, ಅಶೋಕ್ ನಿಯೋಗ
ಬೆಂಗಳೂರು: ಫಾರ್ಮ್-7 ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ಜಟಾಪಟಿ ಮುಂದುವರಿದಿದೆ. ರಾಜ್ಯಾದ್ಯಂತ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆ ಡಿಜಿ-ಐಜಿಪಿಯನ್ನು ಬಿಜೆಪಿ ನಿಯೋಗ ಭೇಟಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ದೂರಿನ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಡಿಜಿ-ಐಜಿಪಿ ಸಲೀಂ ಅವರನ್ನು ಭೇಟಿ ಬಿಜೆಪಿ ನಿಯೋಗ ಭೇಟಿಯಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನದಾಸೋಹ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಹಿರೇಹಟ್ಟಿ ಗ್ರಾಮದ ಶ್ರೀ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರು ವಿಠ್ಠಲ ಕೋಳಿ. ಸೋಮಪ್ಪ ಕರೆನ್ನವರ. ಸುರೇಶ …
Read More »ಚಹಾ ಮಾಡಿದ ಬಳಿಕ ಉಳಿದ ಟೀ ಪುಡಿ ಎಸೆಯಬೇಡಿ; ಮನೆಯ ಸ್ವಚ್ಛತೆಗೆ ಹೀಗೆ ಬಳಸಿ
ಬಹುತೇಕ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಚಹಾ ತಯಾರಿಸುವುದು ಸಾಮಾನ್ಯ. ಚಹಾ ಸೋಸಿದ ಬಳಿಕ ಉಳಿಯುವ ಟೀ ಪುಡಿಯನ್ನು ಸಾಮಾನ್ಯವಾಗಿ ಕಸಕ್ಕೆ ಎಸೆಯಲಾಗುತ್ತದೆ. ಆದರೆ ಒಮ್ಮೆ ಬಳಸಿದ ಟೀ ಪುಡಿಯನ್ನು ಕೆಲವು ಸರಳ ವಿಧಾನಗಳ ಮೂಲಕ ಮನೆಯ ಸ್ವಚ್ಛತೆಗೆ ಬಳಸಬಹುದು. ಕನ್ನಡಿ, ಕಿಟಕಿ, ಮರದ ಪೀಠೋಪಕರಣಗಳು ಹಾಗೂ ಅಡುಗೆ ಮನೆಯ ಕೆಲವು ವಸ್ತುಗಳನ್ನು ಸ್ವಚ್ಛಗೊಳಿಸಲು ಇದನ್ನು ಬಳಸಬಹುದು. ಮೊದಲು ಟೀ ಪುಡಿಯನ್ನು ಚೆನ್ನಾಗಿ ತೊಳೆಯಿರಿ ಬಳಸಿದ ಟೀ ಪುಡಿಯನ್ನು ನೇರವಾಗಿ …
Read More »ಒಂದೇ ತಿಂಗಳಲ್ಲಿ 3 ಬಾರಿ ಲಘು ಭೂಕಂಪ: ಬೆಚ್ಚಿಬಿದ್ದ ವಿಜಯಪುರ ಜನ
ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ವಾತಾವರಣ ಮನೆ ಮಾಡಿದೆ. ಕಳೆದ ಹಲವು ವರ್ಷಗಳಿಂದ ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಂಟಾಗುತ್ತಿದ್ದ ಭೂಕಂಪನದ ಅನುಭವ ಇದೀಗ ಮತ್ತೆ ಶುರುವಾಗಿದೆ. ಒಂದೇ ತಿಂಗಳಲ್ಲಿ ಮೂರು ಬಾರಿ ಭೂಮಿ ಕಂಪಿಸಿರುವುದು ರಿಕ್ಟರ್ ಮಾಪನದಲ್ಲಿ ದಾಖಲಾಗಿದ್ದು, ಜನರು ಭಯಗೊಳ್ಳುವಂತೆ ಮಾಡಿದೆ. ಒಂದೇ ತಿಂಗಳಲ್ಲೇ ಮೂರು ಬಾರಿ ಭೂಕಂಪನ ಕಳೆದ ಕೆಲ ವರ್ಷಗಳಿಂದ ವಿಜಯಪುರ ಜಿಲ್ಲೆಯ ತಿಕೋಟಾ, ಕೊಲ್ಹಾರ, ನಿಡಗುಂದಿ, ಬಸವನಬಾಗೇವಾಡಿ ತಾಲೂಕಿನ ಭಾಗಗಳಲ್ಲಿ ಭೂಕಂಪನವಾಗಿರುವ ವರದಿಯಾಗಿದೆ. …
Read More »ಸಂಪುಟ ಸಭೆ ಮುಂದೂಡಿ ಧರಣಿ ನಡೆಸಿದ್ದು ಕರಾಳ ಇತಿಹಾಸ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ
ಹುಬ್ಬಳ್ಳಿ: “ರಾಹುಲ್ ಗಾಂಧಿಯನ್ನು ಸಂಪ್ರೀತಗೊಳಿಸಲು ಮತ್ತು ಸಿಎಂ ಕುರ್ಚಿ ಉಳಿಸಿಕೊಳ್ಳಲು ಡಿಕೆ ಶಿವಕುಮಾರ್ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿಯ ಪ್ರಹಸನ ನಡೆಸಿದ್ದಾರೆ” ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯ ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಹೀಗೆ ಧರಣಿ ನಡೆಸಿರುವುದು ದೇಶದಲ್ಲೇ ಒಂದು ಕರಾಳ ಇತಿಹಾಸವಾಗಿದೆ ಎಂದರು. ಸಿಎಂ ಡಿಕೆಶಿ ಮತ್ತವರ ಸಂಪುಟದ ಸಚಿವರು ಪೂರ್ವಾನುಮತಿ ಪಡೆಯದೆ …
Read More »ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ
ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆಯ ಮೊಹಮ್ಮದ್ ಸಿನಾನ್ (20) ಬಂಧಿತ ಆರೋಪಿ. ಕೃತ್ಯಕ್ಕೆ ಬಳಸಿದ್ದ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೆ.29 ರಂದು ಮಧ್ಯಾಹ್ನ 1:30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದಿದ್ದ ಅಪರಿಚಿತರು, ರಸ್ತೆ ಬದಿಯಲ್ಲಿದ್ದ ಬೀಡಾಡಿ …
Read More »ಭಾರತ – ಪಾಕ್ ಗಡಿಯಲ್ಲಿ ಇಬ್ಬರು ನುಸುಳುಕೋರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಚಂಡೀಗಢ: ಪಂಜಾಬ್‌ನ ತರನ್‌ತಾರನ್ ಜಿಲ್ಲೆಯ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆಗೆ ಯತ್ನಿಸಿದ ಇಬ್ಬರು ನುಸುಳುಕೋರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಗಡಿ ಸಮೀಪದ ರಾಜೋಕೆ ಗ್ರಾಮದ ಬಳಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಇಬ್ಬರು ನುಸುಳುಕೋರರು ಯತ್ನಿಸಿದ್ದರು. ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಶುಕ್ರವಾರ ಮುಂಜಾನೆ ರಾಜೋಕೆ ಪ್ರದೇಶದ ಗಡಿ ಭಾಗದಲ್ಲಿ ಅನುಮಾನಾಸ್ಪದವಾಗಿ ಮೂವರು ಓಡಾಡುತ್ತಿದ್ದರು. ಇದನ್ನು ಗಮನಿಸಿದ BSF ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೆ ಅವರು ಹಿಂದಕ್ಕೆ …
Read More »
Laxmi News 24×7