Breaking News

Laxminews 24x7

ಮಹಾರಾಷ್ಟ್ರದ ಪಾಂಡುರಂಗ ಸಿಸಿ ತಂಡಕ್ಕೆ ಕ್ರಿಕೆಟ್ ಟ್ರೋಫಿ

ಬೆಳಗಾವಿ: ನಗರದಲ್ಲಿ ಎರಡು ವಾರಗಳಿಂದ ನಡೆದಿದ್ದ ಮುರುಘೇಂದ್ರಗೌಡ ಪಾಟೀಲ ಅಖಿಲ ಭಾರತೀಯ ಟೆನಿಸ್‌ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನಲ್ಲಿ ಭಾನುವಾರ ಅಂತಿಮ ಹಣಾಹಣಿಯಲ್ಲಿ ಮಹಾರಾಷ್ಟ್ರದ ಪಾಂಡುರಂಗ ಸಿಸಿ ತಂಡ ಬೆಳಗಾವಿಯ ಸಾಯಿರಾಜ ವಾರಿಯರ್ಸ್‌ ತಂಡವನ್ನು ಸೋಲಿಸುವ ಮೂಲಕ ಟ್ರೋಫಿ ಮತ್ತು 5 ಲಕ್ಷ ರೂ. ನಗದು ಗೆದ್ದುಕೊಂಡಿದೆ. ನಗರದ ಸರ್ದಾರ್ಸ್‌ ಮೈದಾನದಲ್ಲಿ ಬಿಜೆಪಿ ಮುಖಂಡ ಮುರುಘೇಂದ್ರಗೌಡ ಪಾಟೀಲ ಆಯೋಜಿಸಿದ್ದ ಈ ಪಂದ್ಯಾವಳಿಯಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಒಟ್ಟು 40 ತಂಡ ಭಾಗವಹಿಸಿದ್ದವು. ಸಾಯಿರಾಜ ತಂಡ …

Read More »

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು:ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ  24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ. ಕರ್ನಾಟಕದ ವಿವಿಧ ಒಟ್ಟು 32 ಇಲಾಖೆಯಲ್ಲಿ 24,300 ಹುದ್ದೆಗಳ …

Read More »

ಬಾಕಿ ಬಿಲ್​​ಗೆ ಆಗ್ರಹಿಸಿ ಮಾ.6ರಂದು ಗುತ್ತಿಗೆದಾರರ ಪ್ರತಿಭಟನೆಗೆ ಕರೆ

ತುಮಕೂರು: ಬಾಕಿ ಬಿಲ್​​ ವಿಚಾರವಾಗಿ ರಾಜ್ಯ ಸರ್ಕಾರ ದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಸುಮಾರು 37 ಸಾವಿರ ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಲಾಗಿದೆ. ಈ ಸರ್ಕಾರದ …

Read More »

ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ: ಬಡತನ ಮೆಟ್ಟಿ ಜಡ್ಜ್ ಆದ ಮಗಳು

ಬೆಂಗಳೂರು:  ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ  ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ ಬೆಳೆದು, ಹೂವು ಮಾರುತ್ತಲೇ ಓದಿ, ಇಂದು ನ್ಯಾಯದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಮಾದರಿಯಾಗಿದ್ದಾರೆ. ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ …

Read More »

ಸರ್ಕಾರಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ದಂಗೆ

ಧಾರವಾಡ: ಖಾಲಿ ಇರುವ 2.84 ಲಕ್ಷ ಸರ್ಕಾರಿ  ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಇಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಅಭ್ಯರ್ಥಿಗಳು ಆಗ್ರಹಿಸಿದರು. ಉದ್ಯೋಗ ಬೇಕು ಎಂದು ಭಿತ್ತಿಪತ್ರ ಹಿಡಿದು ಸಾವಿರಾರು ಯವಕರು ಆಗಮಿಸಿದರು. ಈ ವೇಳೆ ಪೊಲೀಸರು-ಪ್ರತಿಭಟನಾಕಾರರ ಮಧ್ಯೆ ತಳ್ಳಾಟ-ನೂಕಾಟ ನಡೆಯಿತು. ಪ್ರತಿಭಟನೆಗೆ ಅನುಮತಿ ನಿಡಲು ಪೊಲೀಸ್ (Police) ಇಲಾಖೆಯಿಂದ …

Read More »

ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌

ಕಾರವಾರ: ಮುರುಡೇಶ್ವರದಲ್ಲಿ ಹಿಂದೂಗಳ  ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಬಾಲಕರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬಂಧಿತ ಏಳು ಬಾಲಕರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಮುರುಡೇಶ್ವರಪೊಲೀಸ್ ಠಾಣೆಯಲ್ಲಿ ಅಪ್ರಾಪ್ತರ ಜೊತೆ  ಬೈಕ್ ನೀಡಿದ ಪೋಷಕರ ವಿರುದ್ಧವೂ ಕೇಸ್‌ ದಾಖಲು ಮಾಡಲಾಗಿದೆ. ಈಗ ಪೊಲೀಸರು ಉದ್ದೇಶಪೂರ್ವಕವಾಗಿ ಹಿಂದೂಗಳ ಮನೆಯ ಮೇಲೆ ಕಲ್ಲುತೂರಾಟ ನಡೆಸಿದ್ದು ಯಾಕೆ ಎನ್ನುವುದರ …

Read More »

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ  ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌  ಪ್ರತಿಭಟನೆ ನಡೆಸಿದೆ. ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆದಿರುವ ಎಬಿವಿಪಿ, ಅಜೀಂ …

Read More »

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

ಬಳ್ಳಾರಿ: ಅಧಿದೇವತೆ ಕನಕ ದುರ್ಗಮ್ಮ ಸಿಡಿ ಬಂಡಿ ರಥೋತ್ಸವ  ಇಂದು ಅದ್ದೂರಿಯಾಗಿ ನೆರವೇರಿತು. ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಶೇಷ ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು. ಮಹಾರಾಷ್ಟ್ರ, ಆಂಧ್ರಪ್ರದೇಶ ತೆಲಂಗಾಣ ಸೇರಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರು ಸಿಡಿ ಬಂಡಿ ರಥೋತ್ಸವದಲ್ಲಿ ಭಾಗಿಯಾಗಿ ಕಣ್ತುಂಬಿಕೊಂಡರು. ಭಕ್ತರು ಸಿಡಿ ಬಂಡಿಗೆ ಬಾಳೆ ಹಣ್ಣಿನ ಜೊತೆಗೆ ಜೀವಂತ ಕೋಳಿ ಎಸೆದರು. ಕನಕದುರ್ಗಮ್ಮ ಸಿಡಿ ಬಂಡಿ ರಥೋತ್ಸವಕ್ಕೆ ಕೋಳಿ …

Read More »

ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

ಬೆಂಗಳೂರು: ಬಿಜೆಪಿ ಸರ್ಕಾರದ  ಅವಧಿಯಲ್ಲಿ ನೇಮಕ ನಡೆಯದ ಕಾರಣ ನಾವು ಅಧಿಕಾರಕ್ಕೆ ಬರುವಾಗಲೇ 2.64 ಲಕ್ಷ ಉದ್ಯೋಗ ಖಾಲಿಯಿದ್ದವು. ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು  ನಡೆಸಲಾಗಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಮಾಡಿ ತಮ್ಮ ಸರ್ಕಾರವನ್ನು ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. …

Read More »

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ: ಶಿವಮೊಗ್ಗದಲ್ಲಿನಡೆದ ಶಾಲಾ ಬಾಲಕನ  ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ …

Read More »