ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಗ್ಯದಲ್ಲಿ ಹೆಚ್ಚಿನ ವ್ಯತ್ಯಾಸವೇನು ಆಗಿಲ್ಲ. ಆತಂಕ ಪಡುವ ಅಗತ್ಯ ಇಲ್ಲ. ಹವಾಮಾನದ ಬದಲಾವಣೆಯಿಂದ ಅಸ್ವಸ್ಥರಾಗಿದ್ದು, ಆರೋಗ್ಯದ ಮೇಲೆ ವೈದ್ಯರ ತಂಡ ನಿಗಾ ಇಟ್ಟಿದ್ದಾರೆ ಎನ್ನಲಾಗಿದೆ. ಮಗ ರಾಹುಲ್ ಗಾಂಧಿ ಹಾಗೂ ಮಗಳು ಪ್ರಿಯಾಂಕಾ ಗಾಂಧಿ ತಾಯಿಯ ಆರೋಗ್ಯ ಕಾಳಜಿ ವಹಿಸಿದ್ದಾರೆ. ಈ ಹಿಂದೆಯೂ …
Read More »ಪ್ಯಾನ್‌ಗೆ ನೇಣು ಬಿಗಿದು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್: ಪ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. …
Read More »ಪೆಟ್ರೊಲ್ ಬಂಕ್ ನಲ್ಲಿ ಮಾರಾಮಾರಿ: ಬಿಸಿ ಮುಟ್ಟಿಸಿದ ಪೊಲೀಸರು
ಬೆಳಗಾವಿಯಲ್ಲಿ ಪೆಟ್ರೋಲ್, ಡೀಸಲ್ ಕೊರತೆ ಉಂಟಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿ ಸುದ್ದಿ ಹರಡಾಡಿದ ಪರಿಣಾಮ ಎಲ್ಲಾ ಬಂಕ್ ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ವಾಹನ ಸವಾರರು ಮುಗಿಬಿದಿದ್ದರು. ಈ ವೇಳೆ ಹೋಡೆದಾಡಿಕೊಂಡ ಯುವಕರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಗಾವಿ ನಗರದ ರಾಮದೇವ ಹೋಟೆಲ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಮುಂದೆ ಪೆಟ್ರೋಲ್ ಬಂಕ್‌ಗಳ ಬಳಿ ಇಂತಹ …
Read More »ಮಹಿಳೆಗೆ ನರಕಯಾತನೆ : 12 ವರ್ಷ ಬಳಿಕ ವೈದ್ಯನ ಕರಾಳ ಮುಖ ಬಯಲು ಮಾಡಿದ ಪತ್ನಿ
ಮೈಸೂರು: ಪ್ರೀತಿಯ ನಾಟಕವಾಡಿ, ಆತ್ಮತ್ಯೆಯ ಬೆದರಿಕೆ ಹಾಕಿ, ಅಮಾಯಕ ಹೆಣ್ಮಕ್ಕಳ ಬದುಕನ್ನು ನರಕವಾಗಿಸ್ತಿದ್ದ ಕಾಮುಕ ವೈದ್ಯನ ಕರಾಳ ಮುಖವನ್ನು ಪತ್ನಿಯೇ ಬಟಾಬಯಲು ಮಾಡಿದ್ದಾರೆ. ಡಾ. ವಿನಯ್ ಕುಮಾರ್ ಎಸ್. ವಿರುದ್ಧ ಪತ್ನಿ ಯಶೋಧಾ (ಹೆಸರು ಬದಲಾಯಿಸಲಾಗಿದೆ) ಗಂಭೀರ ಆರೋಪಗಳನ್ನ ಮಾಡಿದ್ದಾರೆ. ಕಳೆದ 12 ವರ್ಷಗಳಿಂದ ನೆನಪಿನ ಶಕ್ತಿಯೇ ಇಲ್ಲದೆ ‘ಜೀವಂತ ಶವ’ವಾಗಿ ಬದುಕಿದ್ದ ಸೀನಿಯರ್ ವೈದ್ಯೆ ಡಾ. ನಾಗಶ್ರೀ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಬೆನ್ನಲ್ಲೇ ಈ ‘ಸೈಕೋ’ ವೈದ್ಯನ ಒಂದೊಂದೇ ಕ್ರೂರ …
Read More »ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF
ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಆರ್‌ಸಿಬಿ ತಂಡದ ಜೊತೆ ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ. ರನ್ ಮಿಷಿನ್ ವಿರಾಟ್ ಕೊಹ್ಲಿ ಸೇರಿ ಮೂರು ಆಟಗಾರರ ಭಾವಚಿತ್ರ ಬಳಸಲು 1 ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಬರೋಬ್ಬರಿ 4.80 ಕೋಟಿ ರೂ. ಕೆಎಂಎಫ್ ವೆಚ್ಚ ಮಾಡಿದೆ. ಆರ್‌ಸಿಬಿಗೆ ಕನ್ನಡಿಗರ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಅಧಿಕೃತ ಡೈರಿ ಪಾರ್ಟ್ನರ್ ಆಗಿದೆ. ಅತಿ ಹೆಚ್ಚಿನ ಫ್ಯಾನ್ಸ್ ಗಳನ್ನ ಹೊಂದಿರುವ ಆರ್‌ಸಿಬಿ ತಂಡಕ್ಕೆ ಹೆಮ್ಮೆಯ ನಂದಿನಿ …
Read More »ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ – ಹತ್ಯೆಗೆ ಯತ್ನ
ಕಾರವಾರ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಕೋಲದ ಕೇಣಿ ಬಳಿ ಈ ದಾಳಿ ನಡೆದಿದೆ. ಅಂಕೋಲದ ಕೇಣಿ ಬಳಿ ಕಾರಿನಲ್ಲಿ ತೆರಳುತಿದ್ದಾಗ ಗೋವಾ ನೋಂದಣಿಯ ಕಾರಿನಲ್ಲಿ ಬಂದು ಅಡ್ಡಗಟ್ಟಿದ ಕಿಡಿಗೇಡಿಗಳು ರಾಡ್ ನಿಂದ ಹೊಡೆದು ಚಾಕು ಇರಿದಿದ್ದಾರೆ. ಅವರ ತಲೆಗೆ, ಕುತ್ತಿಗೆಗೆ ಪೆಟ್ಟಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಅಂಕೋಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲ …
Read More »ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ
ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ. ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ …
Read More »ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ – ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಸವಾಲ್
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‍ನಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು ಹರಿಬಿಟ್ಟಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಾಂಗ್ರೆಸ್‍ಗೆ ಸವಾಲು ಎಸೆದಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿಂದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು …
Read More »ಹೈಕಮಾಂಡ್ ತೀರ್ಮಾನಿಸೋವರೆಗೂ ನಾನೇ ಸಿಎಂ: ಸಿದ್ದರಾಮಯ್ಯ
ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡೋವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬಜೆಟ್ ಉತ್ತರ ವೇಳೆ ಸದನದಲ್ಲಿ ಡಿಕೆಶಿ ಹೆಸರು ಹಾಗೂ ಸ್ಪೀಕರ್ ಖಾದರ್ ಫೋಟೋ ಸೆಷನ್ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಸಿಎಂಗೆ ಕಾಲೆಳೆಯುತ್ತಿದ್ರು. ವಿಪಕ್ಷಗಳ ಲೇವಡಿಗೆ ಉತ್ತರಿಸಿದ ಸಿಎಂ, ನಮ್ಮಲ್ಲಿ ಎಲ್ಲ ಶಾಸಕರೂ ಅರ್ಹರು, ಯಾರಾದ್ರೂ ಸಿಎಂ ಆದರೂ ನನಗೆ ಖುಷಿಯಾಗುತ್ತದೆ. ಹೈಕಮಾಂಡ್ ಎಲ್ಲಿಯವರೆಗೆ ಇರು ಅಂತಾರೋ, ಅಲ್ಲೀವರೆಗೂ ಖಾದರ್ ಸ್ಪೀಕರ್ ಆಗಿರುತ್ತಾರೆ. ವಿಪಕ್ಷಗಳು …
Read More »25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಜೆಪಿ ನಾಯಕನ ಪುತ್ರ ಅರೆಸ್ಟ್
ಪಣಜಿ: 25 ರಿಂದ 30 ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ದಕ್ಷಿಣ ಗೋವಾ ಪೊಲೀಸರು ಬಿಜೆಪಿ ನಾಯಕನೋರ್ವನ ಪುತ್ರನನ್ನು ಬಂಧಿಸಿದ್ದಾರೆ. ಮಡೆಗಲ್-ಕಾಕೋರಾದ ನಿವಾಸಿ ಮತ್ತು ಕರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಪುತ್ರ ಸೋಹಮ್ ನಾಯಕ್ ಬಂಧಿತ ಆರೋಪಿಯಾಗಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆಯ ವೇಳೆ ಆರೋಪಿ ಕಳೆದ ಮೂರು ವರ್ಷಗಳಿಂದ ಅಪ್ರಾಪ್ತ …
Read More »
Laxmi News 24×7