ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕ ನಡೆಯದ ಕಾರಣ ನಾವು ಅಧಿಕಾರಕ್ಕೆ ಬರುವಾಗಲೇ 2.64 ಲಕ್ಷ ಉದ್ಯೋಗ ಖಾಲಿಯಿದ್ದವು. ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ನಡೆಸಲಾಗಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್ ಮಾಡಿ ತಮ್ಮ ಸರ್ಕಾರವನ್ನು ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. …
Read More »ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಶಿವಮೊಗ್ಗ: ಶಿವಮೊಗ್ಗದಲ್ಲಿನಡೆದ ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ …
Read More »ಕೊಂಡಸಕೊಪ್ಪದಲ್ಲಿ ಸಂಭ್ರಮವೋ ಸಂಭ್ರಮ: ಲಕ್ಷ್ಮೀ ಹೆಬ್ಬಾಳಕರ್ ಗೆ ಅದ್ಧೂರಿ ಸ್ವಾಗತದ ನಡುವೆ ಶಿವಾಜಿ ಮಹಾರಾಜರ ಮೂರ್ತಿ ಲೋಕಾರ್ಪಣೆ
ಬೆಳಗಾವಿ : ಕೊಂಡಸಕೊಪ್ಪ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಅವರ ಭವ್ಯ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮವು ಅಪಾರ ಸಂಭ್ರಮ, ಭಕ್ತಿ ಹಾಗೂ ಅದ್ಧೂರಿತನದ ನಡುವೆ ಜರುಗಿತು. ಇಡೀ ಗ್ರಾಮ ಹಬ್ಬದ ವಾತಾವರಣದಲ್ಲಿ ತೇಲಿದರೆ, ರಸ್ತೆಗಳನ್ನು ಅಲಂಕರಿಸಿದ ಧ್ವಜ-ಫ್ಲೆಕ್ಸ್‌ಗಳು ಹಾಗೂ ಜನರ ಹರ್ಷೋದ್ಘಾರ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ವಂತ ಖರ್ಚಿನಲ್ಲಿ ಮೂರ್ತಿಯನ್ನು ನಿರ್ಮಾಣ ಮಾಡಿಸಿರುವುದು ಗ್ರಾಮಸ್ಥರಲ್ಲಿ ಇನ್ನಷ್ಟು ಗೌರವಭಾವ …
Read More »ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರು ಪತ್ರ ಬರೆದಿರೋದು ಬಂಡಾಯದ ಸೂಚನೆ ಅಂತ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆಯಲಿರೋ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಆಹ್ವಾನ ನೀಡಿದರು. ಈ ವೇಳೆ ಶಾಸಕರ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸ್ಥಾನ ಕೊಡಿ ಅಂತ ಪತ್ರ ಬರೆಯೋ ಪದ್ಧತಿ ಇರಲಿಲ್ಲ. ನಾನು ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. 6-7 ಜನ ಸಿಎಂರನ್ನ …
Read More »ಶಿವಮೊಗ್ಗದಲ್ಲಿ ಸಂಕೇತ್ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ
ಬೆಂಗಳೂರು: ಶಿವಮೊಗ್ಗದಲ್ಲಿ ಅನ್ಯ ಕೋಮಿನ ಹುಡುಗರಿಂದ ಸಂಕೇತ್ ಕೊಲೆ (Sanketh Murder) ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಸರ್ಕಾರವನ್ನ ಬಿಜೆಪಿ ನಾಯಕ ಸಿಟಿ ರವಿ (CT Ravi) ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, 10ನೇ ತರಗತಿ ಓದುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಯಾವುದೇ ಕಾರಣ ಇಲ್ಲದೇ ಹತ್ಯೆ ಮಾಡಿದ್ದಾರೆ. 10ನೇ ಕ್ಲಾಸ್ ವಿಶೇಷ ತರಗತಿ ಮುಗಿಸಿಕೊಂಡು ಬರುತ್ತಿದ್ದಾಗ ಕೊಂದಿದ್ದಾರೆ. ಭಟ್ಕಳ, ಬಾಗಲಕೋಟೆ ಯಲ್ಲಿ ಇಂತಹ ಗಲಾಟೆಗಳು …
Read More »7 ಲಕ್ಷ ಸಾಲ ಮಾಡಿ ಏರ್ ಆಂಬುಲೆನ್ಸ್ ಬುಕ್ : ಒಬ್ಬನನ್ನು ಉಳಿಸಲು ಹೋಗಿ ಸತ್ತಿದ್ದು ಏಳು ಜನ
ಒಬ್ಬರನ್ನು ಉಳಿಸುವುದಕ್ಕೆ ಹೊರಟ ಪ್ರಯಾಣವೊಂದು 7 ಜನರ ಸಾವಿನೊಂದಿಗೆ ಅಂತ್ಯವಾಗಿದೆ. ಹೌದು ನಿನ್ನೆ ಸಂಜೆ ನಡೆದ ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತಕ್ಕೂ ಮೊದಲು ಕುಟುಂಬವೊಂದು ತಮ್ಮ ಕುಟುಂಬದ ಬಹಳ ಅಮೂಲ್ಯವಾದ ವ್ಯಕ್ತಿಯ ಜೀವ ಉಳಿಸುವುದಕ್ಕೆ ವಿದೇಶದಲ್ಲೂ ಚಿಕಿತ್ಸೆ ನೀಡುವುದಕ್ಕೆ ಬಯಸಿ ಏಳು ಲಕ್ಷ ಸಾಲ ಮಾಡಿ ಏರ್ ಆಂಬುಲೆನ್ಸ್ ಬುಕ್ ಮಾಡಿತ್ತು. ಆದರೆ ವಿಧಿ ವಿಪರ್ಯಾಸವೋ ಏನೋ ಒಬ್ಬರ ಉಳಿಸಲು ಜಾರ್ಖಂಡ್‌ನಿಂದ ಆರಂಭಿಸಿದ ಈ ಪ್ರಯಾಣವೂ 7 ಜನರ ಸಾವಿನಲ್ಲಿ …
Read More »ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ
ಕಲಬುರಗಿ: ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ರಾಜ್ಯ ಸರ್ಕಾರದಲ್ಲಿ ಕಳೆದೊಂದು ವರ್ಷದಲ್ಲಿ ಬರೀ ಗೊಂದಲ ಇದೆ. ಸಿಎಂ ಸಿದ್ದರಾಮಯ್ಯ ಅನುಭವಸ್ಥರು. ಆದಷ್ಟು ಬೇಗ ಗೊಂದಲ ಬಗೆಹರಿಸಿ ಅಭಿವೃದ್ಧಿಯತ್ತ ಚಿತ್ತ ಹರಿಸಬೇಕು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 31 ಹೊಸ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಪತ್ರ ವಿಚಾರ ಪತ್ರ ಬರೆದಿದ್ದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ …
Read More »9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ
ವಿಜಯಪುರ: ಸಾಮಾನ್ಯವಾಗಿ ಅತ್ತೆ, ಸೊಸೆ ಅಂದ್ರೆ ಹಾವು, ಮುಂಗುಸಿ ಥರ ಅಂತಾರೆ. ಆದರೆ 9 ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೊಸೆಗೆ ಅತ್ತೆ ಕಿಡ್ನಿ ದಾನ ಮಾಡಿ ಮಾದರಿಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೂಲತಃ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಳೂರು ಗ್ರಾಮದವರಾದ ಶಾಂತಾಬಾಯಿ, ಮಗ ಪ್ರಕಾಶನ ಹೆಂಡತಿ ಬಸಮ್ಮಗೆ ತಮ್ಮ ಒಂದು ಕಿಡ್ನಿ ನೀಡಿದ್ದಾರೆ. ಸೊಸೆ ಬಸಮ್ಮ ಎರಡೂ ಕಿಡ್ನಿ ಫೇಲ್ ಆಗಿ ಕಳೆದ 9 ತಿಂಗಳಿಂದ ಬಳಲುತ್ತಿದ್ದರು. …
Read More »ಸತೀಶ್ ಜಾರಕಿಹೋಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್
ಬೆಂಗಳೂರು: ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಆದರೆ ಸಚಿವ ಸ್ಥಾನ ಕೊಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ತಿಳಿಸಿದ್ದಾರೆ. ಮೊದಲ ಬಾರಿ ಗೆದ್ದ ಕಾಂಗ್ರೆಸ್ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೊದಲ ಬಾರಿ ಗೆದ್ದಿರೋರು ಮಂತ್ರಿ ಸ್ಥಾನ ಕೇಳೋದು ತಪ್ಪೇನು ಅಲ್ಲ. ಇದರಲ್ಲಿ ಯಾವುದೇ ಗೊಂದಲ, ಬಂಡಾಯ ಇಲ್ಲ. ಎಲ್ಲರಿಗೂ …
Read More »ಬಾರದ ಅನುದಾನ; ಸಂಸದರ ರಾಜೀನಾಮೆಗೆ ಒತ್ತಾಯ
ಚಿತ್ರದುರ್ಗ: ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ₹ 5,300 ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಲ್ಲೆಯ ಸಂಸದ ಗೋವಿಂದ ಕಾರಜೋಳ ಅವರು ಕೂಡ ಅನುದಾನ ತರುವಲ್ಲಿ ಸೋತಿದ್ದಾರೆ. ಹೀಗಾಗಿ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಆರೂ ತಾಲ್ಲೂಕುಗಳಿಂದ ಬಂದಿದ್ದ …
Read More »
Laxmi News 24×7