ಬೆಂಗಳೂರು: ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಮಾರಾಟ ಕೇಸ್‌ಗೆ ಸಂಬಂಧಿಸಿದಂತೆ ನಗರದ ಎರಡು ಕಡೆ ಇಡಿ ಅಧಿಕಾರಿಗಳು (ಜಾರಿ ನಿದೇಶನಾಲಯ) ದಾಳಿ ನಡೆಸಿದ್ದಾರೆ. ಹೈದ್ರಾಬಾದ್ ಎನ್‌ಡಿಪಿಎಸ್ ಕೇಸ್‌ನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೈದ್ರಾಬಾದ್‌ನಲ್ಲಿ 7 ಕಡೆ ದಾಳಿ ನಡೆಸಲಾಗಿದೆ. ಇತ್ತೀಚೆಗೆ ಹೈದ್ರಾಬಾದ್ ಪೊಲೀಸರು ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದರು. ಇತ್ತೀಚೆಗೆ ಥೈಲ್ಯಾಂಡ್‌ನಿಂದ ಹೈದರಾಬಾದ್ ವಿಮಾನ ನಿಲ್ದಾಣದ ಮೂಲಕ ವ್ಯಾಕ್ಯೂಮ್-ಸೀಲ್ಡ್ ಪ್ಯಾಕೇಜ್‌ಗಳಲ್ಲಿ ಭಾರತಕ್ಕೆ ಅಕ್ರಮವಾಗಿ …
Read More »ಕಾಲುವೆ ನೀರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ – ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಇಂಗಳದಾಳದಲ್ಲಿ ನಾರಾಯಣಪುರ ಬಲದಂಡೆ ಕಾಲುವೆ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆಹಾನಿಯಾಗಿದೆ. ಕಾಲುವೆಯಲ್ಲಿ ಹೂಳು ತುಂಬಿ, ಗಿಡಗಂಟೆ ಬೆಳೆದ ಹಿನ್ನೆಲೆ ಜಮೀನುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕಾಲುವೆಗೆ ನೀರು ಹರಿಸುವ ಮುನ್ನ ಜಂಗಲ್ ಕಟ್ ಮಾಡದ ಹಿನ್ನೆಲೆ ಅನಾಹುತ ನಡೆದಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಹತ್ತಿ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ನಾರಾಯಣಪುರ ಬಲದಂಡೆ ಕಾಲುವೆಯ 17ನೇ ಉಪಕಾಲುವೆಯಲ್ಲಿ ಗಿಡ …
Read More »ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಸೈಕೋ ಪತಿ
ಬಾಗಲಕೋಟೆ: ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಅಮಾನವೀಯ ಘಟನೆ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ ಜಿಗಳೂರು (23) ಕೊಲೆಯಾದ ಮಹಿಳೆ. ಆಕೆಯ ಪತಿ ಪ್ರವೀಣ್ ಜಿಗಳೂರು ಹತ್ಯೆಗೈದ ಆರೋಪಿ. ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನದ ಮೇಲೆ ಕಟ್ಟಿಗೆಯಿಂದ ಹಲ್ಲೆಗೈದು ಆಕೆಗೆ ನೇಣು ಬಿಗಿದಿದ್ದ. ಬಳಿಕ ಆಕೆ ಪ್ರಾಣಸಂಕಟದಲ್ಲಿ ಒದ್ದಾಡುವುದನ್ನು ಅತ್ತೆ – ಮಾವನಿಗೆ …
Read More »ತಮಿಳುನಾಡಿಗೆ ನೀರು ಬಿಡಲು ಆದೇಶ; ಸರ್ವಪಕ್ಷ ಸಭೆ ಕರೆಯಲಿ: ಆರ್. ಅಶೋಕ್
ಬೆಂಗಳೂರು : ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಆದೇಶ ಮಾಡಿರೋದು ರಾಜ್ಯ ಸರ್ಕಾರದ ವೈಫಲ್ಯ. ಕೂಡಲೇ ಸರ್ವ ಪಕ್ಷಗಳ ಸಭೆ ಕರೆಯಬೇಕೆಂದು ವಿಪಕ್ಷ ನಾಯಕ ಅಶೋಕ್ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಪರವಾಗಿ ಸರಿಯಾಗಿ ವಾದ ಮಾಡಿಲ್ಲ. ನೀರಾವರಿ ಸಚಿವ ರಾಮಲಿಂಗಾ …
Read More »ಎಸ್‌ಐಆರ್ 3 ತಿಂಗಳು ವಿಸ್ತರಿಸಿ – ದೇವನೂರು, ಗುಹಾ ಸಲ್ಲಿಸಿದ್ದ PIL ವಜಾ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯನ್ನ ಒಂದರಿಂದ ಮೂರು ತಿಂಗಳವರೆಗೆ ವಿಸ್ತರಣೆ ಕೋರಿ ಸಾಹಿತಿ ದೇವನೂರು ಮಹಾದೇವ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಸೇರಿದಂತೆ ಇನ್ನಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ಕೆ.ಎಸ್.ಹೇಮಲತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಎಸ್‌ಐಆರ್ ಅವಧಿ ವಿಸ್ತರಣೆ ಕೇಂದ್ರ ಚುನಾವಣೆ ಆಯೋಗಕ್ಕೆ ಬಿಟ್ಟ ವಿಚಾರ. …
Read More »ಪ್ರಧಾನ್ ಅವರನ್ನು ಹುದ್ದೆಯಿಂದ ತೆಗೆಯುವ ಮೂಲಕ ಪ್ರಧಾನಿಯನ್ನು ಬಚಾವ್ ಮಾಡಿದೆ: ಅಖಿಲೇಶ್ ಯಾದವ್
ನವದೆಹಲಿ: ಸರ್ಕಾರವು ಒಬ್ಬ ‘ಪ್ರಧಾನ್’ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಮೂಲಕ ಸ್ವತಃ ‘ಪ್ರಧಾನ ಮಂತ್ರಿ’ಯವರನ್ನು ಬಚಾವ್ ಮಾಡಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ, ಕನ್ನೌಜ್ ಸಂಸದ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಯುವಜನರ ಒಗ್ಗಟ್ಟು ಮತ್ತು ಮನೋಬಲಕ್ಕೆ ನಾನು ತಲೆಬಾಗುತ್ತೇನೆ. ಯುವಕರ ಆಕ್ರೋಶಕ್ಕೆ ಬೆದರಿ ಸರ್ಕಾರ …
Read More »ಆ.1 ರಿಂದ ವಾಹನಗಳ ಬೆಲೆ ದುಬಾರಿ – ಬಾಡಿಗೆದಾರರಿಗೂ ತಟ್ಟಲಿದೆ ಬೆಲೆ ಏರಿಕೆ ಬಿಸಿ
ನವದೆಹಲಿ: ದಿನಕ್ಕೊಂದು ಬೆಲೆ ಏರಿಕೆ ಬಿಸಿ ಜನ ಸಾಮಾನ್ಯರ ಜೇಬು ಸುಡುತ್ತಿದೆ. ಇದರ ನಡುವೆ ಆ.1ರಿಂದ ಹೊಸ ವಾಹನಗಳ ಬೆಲೆ ಏರಿಕೆಯಾಗುತ್ತಿದೆ. ಇದರ ಜೊತೆಗೆ ಟ್ರಾವೆಲ್ಸ್ ಮಾಲೀಕರ ಅಸೋಸಿಯೇಷನ್‌ಗಳು ಕೂಡ ತಮ್ಮ ಬಾಡಿಗೆಯನ್ನ ಹಚ್ಚಳ ಮಾಡಲು ಮುಂದಾಗಿವೆ. ವಾಹನ ತಯಾರಕ ಕಂಪನಿಗಳು ವಾಹನಗಳ ಬೆಲೆಗಳನ್ನು ಏರಿಕೆ ಮಾಡಲು ಮುಂದಾಗಿವೆ. ಯುದ್ದದಿಂದ ಜಾಗತಿಕ ಮಟ್ಟದಲ್ಲಿ ಆದ ಬದಲಾವಣೆ, ಹಣದುಬ್ಬರ, ಉಕ್ಕು, ಅಲ್ಯೂಮಿನಿಯಂ, ರಬ್ಬರ್, ಪ್ಲಾಸ್ಟಿಕ್, ಎಲೆಕ್ಟ್ರಾನಿಕ್ ಚಿಪ್‌ಗಳು, ಬ್ಯಾಟರಿಗಳು ಹಾಗೂ ಬಿಡಿಭಾಗಗಳ ದರ …
Read More »ಫಾರಿನ್ ಸೀರೆ, ವಜ್ರಾಭರಣದ ಗಿಫ್ಟ್ ಆಸೆ ಮಹಿಳೆಗೆ 1.75 ಕೋಟಿ ನಾಮ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ ಮಾತು ನಂಬಿ ಯಶವಂತಪುರದ ಮಹಿಳೆಯೊಬ್ಬರು ದುಬಾರಿ ಸೀರೆ ಹಾಗೂ ವಜ್ರಾಭರಣದ ಗಿಫ್ಟ್ ಆಸೆಗೆ ಬಿದ್ದು ಬರೋಬ್ಬರಿ 1.75 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸಾಹಿಲ್ ಜುಗ್ಗಲ್ ಎಂಬಾತ ಫೇಸ್‌ಬುಕ್ ಮೂಲಕ ಮಹಿಳೆಗೆ ಪರಿಚಯವಾಗಿದ್ದಾನೆ. ಬಳಿಕ ಇಬ್ಬರೂ ಮೊಬೈಲ್ ನಂಬರ್ ಪಡೆದು ಸಂಪರ್ಕ …
Read More »ಆ.1 ರಂದು ಮೈಸೂರಿಗೆ ಮೋದಿ – 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ, ಸಾಂಸ್ಕೃತಿಕ ಯುವಕೇಂದ್ರ ಉದ್ಘಾಟನೆ
ಮೈಸೂರು: ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದು, ಅಂದು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ. ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ಇಲ್ಲಿ ನೆಲೆಸಿದ್ದರು ಎನ್ನುವ ನೆನಪಿಗಾಗಿ ಸ್ಮಾರಕ ಹಾಗೂ ಯುವ ಜನರಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಯುವ ಕೇಂದ್ರವನ್ನ ನಿರ್ಮಿಸಲಾಗಿದ್ದು, …
Read More »ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ.ವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ (CBI) ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಯವರ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ನಿಯೋಗವು ಒತ್ತಾಯಿಸಿದೆ. ಈ ಹಗರಣವು ಕರ್ನಾಟಕದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ನಂಬಿಕೆಗೆ ದೊಡ್ಡ ಆಘಾತ ನೀಡಿವೆ. ಇಂತಹ ಸಂದರ್ಭದಲ್ಲಿ ಕೆಪಿಎಸ್‍ಸಿಯೇ ತನ್ನ ವಿರುದ್ಧದ ಆರೋಪಗಳನ್ನು ಆಂತರಿಕವಾಗಿ ತನಿಖೆ ನಡೆಸುವುದರಿಂದ ಸತ್ಯ ಹೊರಬರುವುದಿಲ್ಲ. ಸಾರ್ವಜನಿಕರ ವಿಶ್ವಾಸವೂ ಮೂಡುವುದಿಲ್ಲ ಎಂದು …
Read More »
Laxmi News 24×7