ಗೋಕಾಕ: ಇಲ್ಲಿನ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಶುಭ ಕೋರಿ, ಆಶೀರ್ವಾದ ಪಡೆದರು. ಪ್ರಿಯಾಂಕಾ ಅವರು ಜನ್ಮದಿನದ ಅಂಗವಾಗಿ ಸ್ವಾಮೀಜಿಗಳನ್ನು ಸತ್ಕರಿಸಿ, ಗೌರವ ಸಲ್ಲಿಸಿದರು. ಸ್ವಾಮೀಜಿಗಳು ಕೂಡ ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಮುಖಂಡರಾದ ವಿವೇಕ ಜತ್ತಿ, ಶಿವಾನಂದ ಕಿಲಾರಿ, ಪಾಂಡು ರಂಗಸುಬೆ ಸೇರಿ ಇನ್ನಿತರರು …
Read More »ಗಾಳಿಪಟದ ದಾರದಿಂದ ವ್ಯಕ್ತಿಗೆ ಗಾಯ, ನೆಲಕ್ಕೆ ಚಿಮ್ಮಿದ ನೆತ್ತರು
ಗದಗ: ಗಾಳಿಪಟದ ದಾರ ಸಿಲುಕಿ ವ್ಯಕ್ತಿಯೋರ್ವನ ಕೈ ಬೆರಳು ಹಾಗೂ ಕುತ್ತಿಗೆಗೆ ಗಾಯವಾದ ಘಟನೆ ನಗರದ ಟಾಂಗಾ ಕೂಟ ಬಳಿ ನಡೆದಿದೆ. ಕಾರಹುಣ್ಣಿಮೆ ನಿಮಿತ್ತ ಮಕ್ಕಳು, ಯುವಕರು ಗಾಳಿಪಟ ಹಾರಿಸುವುದೇ ಒಂದು ಸಂಭ್ರಮ. ಇಂದು ಸಾಕಷ್ಟು ಬ್ರಹತ್ ಗಾತ್ರದ ಬಣ್ಣ ಬಣ್ಣದ ಪಟಗಳು ಬಾನಂಗಳದಲ್ಲಿ ಹಾರಾಡುತ್ತವೆ. ಅನೇಕ ಪಟಗಳು ಹರಿದು ಎಲ್ಲಂದರಲ್ಲಿ ಬಿದ್ದು ಸಾಕಷ್ಟು ಅವಾಂತರ ಸೃಷ್ಟಿಸುತ್ತಿವೆ. ಇಂದು ಸಹ ಗಾಳಿಪಟವೊಂದು ಹರಿದು ವೇಗವಾಗಿ ಬಂದಿದೆ. ಅದನ್ನು ಗಮನಿಸದ ಬೈಕ್ …
Read More »ಮಳೆ ಬಿಡುವು: ತಗ್ಗಿದ ಜಲಾಶಯಗಳ ಒಳಹರಿವು
ಶಿವಮೊಗ್ಗ: ಜಿಲ್ಲೆಯಲ್ಲಿ ಮೂರು ದಿನದಿಂದ ಮಳೆ ಕ್ಷೀಣಿಸಿದ್ದು, ಜಲಾಶಯಗಳ ಒಳಹರಿವು ಪ್ರಮಾಣವೂ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯುಸೆಕ್‍ಗೆ ಇಳಿಕೆಯಾಗಿದೆ. ಜಲಾಶಯ ಈಗಾಗಲೇ ಭರ್ತಿ ಆಗಿರುವುದರಿಂದ, ಒಳ ಹರಿವಿನ ಪ್ರಮಾಣದಷ್ಟೇ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಭದ್ರಾ ಜಲಾಶಯಕ್ಕೆ ಪ್ರಸ್ತುತ 9,581 ಕ್ಯುಸೆಕ್ ಒಳಹರಿವು ಇದೆ. ಹಾಗಾಗಿ, ಜಲಾಶಯದ ನೀರಿನ ಮಟ್ಟ 152.6 ಅಡಿಗೆ ಏರಿಕೆಯಾಗಿದೆ. ಲಿಂಗನಮಕ್ಕಿ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಜಲಾಶಯಕ್ಕೆ 10,827 ಕ್ಯುಸೆಕ್ …
Read More »ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಪಕ್ಕಾ : ಕುಮಟಳ್ಳಿ
ಅಥಣಿ: ರಮೇಶ್ ಜಾರಕಿಹೊಳಿ ಅವರು ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು ಆರೋಪ ಮುಕ್ತರಾದ ಮೆಲೆ ಸಚಿವ ಸ್ಥಾನ ಪಕ್ಕಾ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು. ಅವರು ತಾಲೂಕಿನ ಭರಮಖೋಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಒಬ್ಬ ನಾಯಕರು. ಭಾರತೀಯ ಜನತಾಪಕ್ಷದಲ್ಲಿ ಅವರಿಗೆ ಅಪಾರ ಗೌರವವಿದೆ. ಕೆಟ್ಟಗಳಿಗೆಯಲ್ಲಿ ಪ್ರಕರಣದ ತನಿಖೆ ನಡೆದಿದೆ. ಈ ಪ್ರಕರಣದಿಂದಾಗಿ ರಮೇಶ …
Read More »ಮಾಜಿ ಕರ್ಪೊರೇಟರ್ ರೇಖಾ ಕದಿರೇಶ್ ಕೊಲೆ -ಜಮೀರ್ ಆಪ್ತನತ್ತ ಬೆಟ್ಟು ಮಾಡಿದ ಎನ್.ಆರ್.ರಮೇಶ್
ಬೆಂಗಳೂರು: ನಗರದ ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಚಾಮರಾಜಪೇಟೆ ಶಾಸಕ ಜಮೀರ್ ಆಪ್ತ ಎಂದೇ ಗುರುತಿಸಿಕೊಂಡಿರುವ ಅತೂಶ್ ಎಂಬಾನತ್ತ ಬೆಟ್ಟು ಮಾಡಿ ಅರೋಪ ಮಾಡಿದ್ದಾರೆ. ಕೊಲೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಎನ್.ಆರ್.ರಮೇಶ್ ಅವರು, ರೇಖಾ ಕಳೆದ ಎರಡು ವರ್ಷದ ಹಿಂದೆ ಪತಿ ಕಳೆದು ಕೊಂಡಿದ್ದರು. ಅದು ಆದಾ ನಂತರ ಸಹ ರೇಖಾ ಸಾರ್ವಜನಿಕವಾಗಿ ಬಹಳ ಕೆಲಸ …
Read More »ದೂರವಾಣಿ ಕದ್ದಾಲಿಕೆ ಆರೋಪ ಸಂಕಷ್ಟ; ಬಿಜೆಪಿ ಶಾಸಕ ಅರವಿಂದ ಬೆಲ್ಲದ್ಗೆ ಶೇಷಾದ್ರಿಪುರಂ ಎಸಿಪಿ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಸಕ್ರಿಯವಾಗಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ದಿಢೀರನೆ ದೂರವಾಣಿ ಕದ್ದಾಲಿಕೆ ಆರೋಪ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ, ದೂರವಾಣಿ ಕದ್ದಾಲಿಕೆ ಆರೋಪ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆಯೂ ಆಲೋಚನೆ ನಡೆಸಿದ್ದಾರೆ. ಆದರೆ ಪ್ರಕರಣ ರಾಜಕೀಯವಾಗಿ ಸೂಕ್ಷವಾಗಿರುವುದರಿಂದ ತನಿಖಾ ಸಂಸ್ಥೆಗಳು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡುಕೊಳ್ಳಲು ನಿರ್ಧರಿಸಿವೆ. ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ …
Read More »ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜು ಆರಂಭ
ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಕೋವಿಡ್ ಲಸಿಕೆ ಕೊಟ್ಟ ಬಳಿಕವೇ ಮೊದಲ ಹಂತದಲ್ಲಿ ಕಾಲೇಜು ಹಾಗೂ ನಂತರ ಹಂತದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. ಈ ಬಗ್ಗೆ ಪೋಷಕರಿಗಾಗಲಿ, ವಿದ್ಯಾರ್ಥಿಗಳಿಗಾಗಲಿ ಯಾವುದೇ ಗೊಂದಲ, ಆತಂಕ ಬೇಡ ಎಂದು ಸ್ಪಷ್ಟಪಶಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆಯೇ ಲಸಿಕೆ ನೀಡಿದ ಬಳಿಕವೇ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಟ್ವಿಟರ್ …
Read More »ರಾಜಧಾನಿಯಲ್ಲಿ ರೌಡಿಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಸದ್ದು ಮಾಡುತ್ತಿವೆ.
ಬೆಂಗಳೂರು, ಜೂನ್.24: ರಾಜಧಾನಿಯಲ್ಲಿ ರೌಡಿಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಸದ್ದು ಮಾಡುತ್ತಿವೆ. ಭೂಗತ ಪಾತಕಿ ರಶೀದ್ ಮಲ್ಬಾರಿಯ ಸಹಚರನ ಹತ್ಯೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಗೋವಿಂದಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹಮದ್ ಸಲೀಂ ಗುಂಡೇಟು ತಿಂದ ಆರೊಪಿ. ಭೂಗತ ಪಾತಕಿ ರಶೀದ್ ಮಲ್ಬಾರಿ ಸಹಚರ ಕಲೀಂ ಆಲಿ ಮಹಿಳೆ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ವಿಚಾರ ತಿಳಿದ ಮಮಹದ್ ಸಲೀಂ ಕೆಲ ದಿನಗಳ …
Read More »: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತೆ :B.S.Y.
ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ರೈಲಿನ ಮೂಲಕವೇ ದ್ವಿಪಥ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ನಗರ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದೇನೆ. ಈ ಹಿಂದೆ ಅವರ ಪತಿಯನ್ನೂ ಇದೇ ರೀತಿ ಬರ್ಬರವಾಗಿ ಹತ್ಯೆ …
Read More »1 ರೂಪಾಯಿ ನಾಣ್ಯ ಮಾರಾಟಕ್ಕಿಟ್ಟು ₹1 ಲಕ್ಷ ಕಳೆದುಕೊಂಡ ಶಿಕ್ಷಕಿ
ಬೆಂಗಳೂರು: 1 ರೂಪಾಯಿ ನಾಣ್ಯವನ್ನು ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಶಿಕ್ಷಕಿಯೊಬ್ಬರು 1 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೆ ಒಳಗಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆ ವಿಪ್ರೋ ಗೇಟ್ನ 38 ವರ್ಷದ ಶಿಕ್ಷಕಿ ವಂಚನೆಗೊಳಗಾಗಿದ್ದಾರೆ. ಒಂದು ಕೋಟಿ ರೂಪಾಯಿ ಕೊಡುತ್ತೇನೆಂದು ನಂಬಿಸಿದ್ದ ವಂಚಕ, 1 ಲಕ್ಷ ರೂಪಾಯಿಯನ್ನು ತನ್ನ ಖಾತೆಗೆ ಹಾಕಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಡೆದಿದ್ದೇನು..? ಜೂ.15 ರಂದು ಓಎಲ್‌ಎಕ್ಸ್ ನಲ್ಲಿ ಶಿಕ್ಷಕಿ ಓಎಲ್ಎಕ್ಸ್ನಲ್ಲಿ 1947ರ …
Read More »
Laxmi News 24×7