Breaking News

Laxminews 24x7

ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ 6 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕುಟುಂಬಸ್ಥರ ಒತ್ತಾಯ

ರಾಯಚೂರು: ಕಳೆದ ವರ್ಷ ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ ಆರು ಮಂದಿಯನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಅವರು ಕುಟುಂಬಸ್ಥರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ನಕ್ಸಲ್‌ಮುಕ್ತ ಕರ್ನಾಟಕವೆಂದು ರಾಜ್ಯ ಸರ್ಕಾರ ಘೋಷಿಸಿ ಒಂದು ವರ್ಷ ಗತಿಸಿದೆ. ಹೀಗಿದ್ದರೂ ಸರ್ಕಾರಕ್ಕೆ ಶರಣಾದ ಮಾನವಿ ತಾಲೂಕಿನ ಮಾರೆಪ್ಪ ಆರೋಲಿ, ಮುಂಡಗಾರು ಲತಾ, ಸುಂದರಿ ಕುತ್ತೂರು, ವನಜಾಕ್ಷಿ ಬಾಳೆಹೊಳೆ, ಕೆ.ವಸಂತ, ಟಿ.ಎನ್.ಜೀಶ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ಮಾರೆಪ್ಪ ಆರೋಲಿ ಅವರ ಪುತ್ರ ಚನ್ನಬಸವ …

Read More »

ಬಾದಾಮಿಗೆ ₹2,000 ಕೋಟಿ ಅನುದಾನ ನೀಡಲಾಗಿದೆ- ಸಿಎಂ

ಬಾಗಲಕೋಟೆ: ಬಾದಾಮಿ ಕ್ಷೇತ್ರಕ್ಕೆ ಕಳೆದೆರಡು ವರ್ಷಗಳಲ್ಲಿ 2,000 ಕೋಟಿ ರೂ. ಅನುದಾನ ನೀಡಲಾಗಿದೆ. ಬಾದಾಮಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸೋಮವಾರ ಬಾದಾಮಿಯ ಇಮ್ಮಡಿ ಪುಲಿಕೇಶಿ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಚಾಲುಕ್ಯ ಉತ್ಸವ -2026 ಉದ್ಘಾಟಿಸಿ ಸಿಎಂ ಮಾತನಾಡಿದರು. ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು …

Read More »

ರಾಸಲೀಲೆಯ ವಿಡಿಯೋ ವೈರಲ್: IPS ಅಧಿಕಾರಿ ಡಾ.ಕೆ.ರಾಮಚಂದ್ರರಾವ್ ಸಸ್ಪೆಂಡ್

ಬೆಂಗಳೂರು: ರಾಸಲೀಲೆಯ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಕೆ.ರಾಮಚಂದ್ರರಾವ್ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ ಸಸ್ಪೆಂಡ್ ಮಾಡಿ ಸೋಮವಾರ ರಾತ್ರಿ ಆದೇಶ ಹೊರಡಿಸಿದೆ. ಸರ್ಕಾರಿ ಕರ್ತವ್ಯದಲ್ಲಿ, ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವೈರಲ್ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿ (ಕೆಎನ್: 1993ರ ಬ್ಯಾಚ್) …

Read More »

ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಚಿವ ಜಮೀರ್ ಅಹ್ಮದ್ ಖಾನ್.

ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಚಿವ ಜಮೀರ್ ಅಹ್ಮದ್ ಖಾನ್. – ಜನವರಿ 24ರಂದು ಹುಬ್ಬಳ್ಳಿ ನಗರದ ಮಂಟೂರ ರಸ್ತೆಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣವಾಗಿರುವ ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.  ನಗರದಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ …

Read More »

ರಾಯಣ್ಣ ವಸ್ತು ಸಂಗ್ರಹಾಲಯವನ್ನು ಮತ್ತು ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದಸಿದ್ದರಾಮಯ್ಯ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ರಾಂತಿವೀರ ಸಂಗೊಳ್ಳಿರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಖಾನಾಪುರ ತಾಲ್ಲೂಕಿನ ನಂದಗಡಕ್ಕೆ ಭೇಟಿ ನೀಡಿ ವೀರಭೂಮಿಯಲ್ಲಿನ ರಾಯಣ್ಣ ವಸ್ತು ಸಂಗ್ರಹಾಲಯವನ್ನು ಮತ್ತು ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು.  ಈ ಸಂದರ್ಭದಲ್ಲಿ ರಾಯಣ್ಣನ ಅಭಿಮಾನಿಗಳು ಮುಖ್ಯಮಂತ್ರಿಗಳ ಹಣೆಗೆ ಭಂಡಾರ ಹಚ್ಚುವ ಮೂಲಕ ಅಭಿಮಾನ ಮೆರೆದರು.‌ ಬಳಿಕ ನಾನಾ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ …

Read More »

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯನಿರತ ಸಹಾಯಕ ಜೈಲರ್ ಮೇಲೆ ಕೈದಿಗಳಿಂದ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಪುಂಡಾಟ ಮುಂದುವರೆದಿದೆ. ಕೈದಿಗಳಿಗೆ ಐಷಾರಾಮಿ ಸೌಲಭ್ಯಗಳು ಲಭ್ಯವಾಗುತ್ತಿರುವ ವಿಡಿಯೋಗಳು ಇತ್ತೀಚಿಗೆ ವೈರಲ್ ಆದ ಬೆನ್ನಲ್ಲೇ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅದಲ್ಲದೆ ನೂತನ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ನೇಮಿಸಲಾಗಿತ್ತು. ಹೀಗಿದ್ದರೂ ಸಹ ಕ್ಷುಲ್ಲಕ ಕಾರಣದಿಂದ ಕೈದಿಗಳು ಕರ್ತವ್ಯನಿರತ ಸಹಾಯಕ ಜೈಲರ್ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜನವರಿ 7ರಂದು ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಪರಪ್ಪನ ಅಗ್ರಹಾರ …

Read More »

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್

ಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ ಮಾಡದಿದ್ದರೆ, ಸಿಎಂಗೆ 85% ಕಮಿಷನ್ ಹೋಗುತ್ತಿದೆ ಅಂತರ್ಥ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಜೊತೆ ಜಂಟಿ ಮಾಧ್ಯಮಗೋಷ್ಟಿ ನಡೆಸಿದ ಅವರು, ಅಬಕಾರಿ ಇಲಾಖೆಗೆ ವರ್ಷದಿಂದ ವರ್ಷಕ್ಕೆ ಕಲೆಕ್ಷನ್ ಟಾರ್ಗೆಟ್ ಕೊಡುತ್ತಿದ್ದರು. ಅದರ ಪರಿಣಾಮ ಸನ್ನದುಗಳು ಅಬಕಾರಿ ಇಲಾಖೆಯಲ್ಲಿ ಹರಾಜು ಆಗುತ್ತಿದೆ. ನಿನ್ನೆ …

Read More »

ಸಾರಿಗೆ ನೌಕರರಿಂದ ಮುಷ್ಕರದ ಘೋಷಣೆ: ಜ. 29 ರಂದು ಬೆಂಗಳೂರು ಚಲೋ

ಬೆಂಗಳೂರು: ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ 29 ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಸರ್ಕಾರದೊಂದಿಗೆ ಪದೇ ಪದೇ ಮಾತುಕತೆ ನಡೆಸಿದರೂ ಯಾವುದೇ ಫಲಿತಾಂಶ ಸಿಗದ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಗಳ ಜಂಟಿ ಕ್ರಿಯಾ …

Read More »

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

ಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ‘ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ’ ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ …

Read More »

350ಕ್ಕೂ ಹೆಚ್ಚು ಯೋಧರು, ಈಗ ಮತ್ತೆ 9 ಯುವಕ-ಯುವತಿಯರು ಸೇನೆಗೆ ಆಯ್ಕೆ: ಇಲ್ಲಿ ಎ ಫಾರ್ ಅಂದ್ರೆ ಆರ್ಮಿ, ಅಪ್ಪಟ ಸೈನಿಕರ ಗ್ರಾಮ!

ಬೆಳಗಾವಿ: ಅದು ಕರ್ನಾಟಕದ ಕಟ್ಟ ಕಡೆಯ ಹಳ್ಳಿ. ಅತೀ ಹೆಚ್ಚು ಸೈನಿಕರನ್ನು ಭಾರತೀಯ ಸೇನೆಗೆ ಕೊಟ್ಟ ಹೆಗ್ಗಳಿಕೆ ಈ ಊರಿಗೆ ಸಲ್ಲುತ್ತದೆ. ಅಲ್ಲಿನ ಮಕ್ಕಳು ಎ ಫಾರ್ ಏನು ಅಂತಾ ಕೇಳಿದ್ರೆ ಆಪಲ್ ಅನ್ನೋದಿಲ್ಲ, ಬದಲಾಗಿ ಎ‌ ಫಾರ್ ಆರ್ಮಿ ಅಂತಾರೆ. ದೇಶಭಕ್ತಿ ಇಲ್ಲಿನ ಮನೆ ಮನಗಳಲ್ಲೂ ಮೇಳೈಸಿದ್ದು, ಏಕಕಾಲಕ್ಕೆ ಈ ಗ್ರಾಮದ 9 ಯುವಕ-ಯುವತಿಯರು ಸೇನೆಗೆ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಧಾರವಾಡದಲ್ಲಿ ಯಾರ ಮನೆ ಮೇಲೆ ಕಲ್ಲು …

Read More »