Breaking News

Laxminews 24x7

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಗಾಯಗೊಂಡ ಮಹಿಳಾ ಕಾನ್​ಸ್ಟೇಬಲ್​ಗೆ ತುರ್ತು ಸೇವೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಪಘಾತವೊಂದರಲ್ಲಿ ಗಾಯಗೊಂಡ ಮಹಿಳಾ ಪೊಲೀಸ್ ಕಾನ್​ಸ್ಟೇಬಲ್​ಗೆ ತುರ್ತು ಸೇವೆ ಒದಗಿಸಿದ್ದಾರೆ. ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ‌. ಇಂದು ಮಧ್ಯಾಹ್ನ 12.20ರ ಸುಮಾರಿಗೆ ಮುಲ್ಕಿ‌ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ರೇಣುಕಾ ಅವರು ಪೊಲೀಸ್ ಠಾಣೆಯಿಂದ ತಮ್ಮ ದ್ವಿಚಕ್ರ ವಾಹನದಲ್ಲಿ ಊಟಕ್ಕೆ ಮನೆಗೆ ತೆರಳಿದ್ದರು. ಮುಲ್ಕಿಯ ವಿಜಯ್​ ಸನ್ನಿಧಿ ಜಂಕ್ಷನ್ ಬಳಿ ಸ್ಕೂಟರ್ ನಿಯಂತ್ರಣಕ್ಕೆ …

Read More »

‘ಇಂಡಿಯಾ’ಹೆಸರು ಬದಲಿಸಲು ನಟಿ ಕಂಗನಾ ಒತ್ತಾಯ

ಬಾಲಿವುಡ್ ನಟಿ ಕಂಗನಾ ರನೌತ್‌, ಸಿನಿಮಾಗಳಿಗಿಂತ ಸದಾ ವಿವಾದಗಳ ಮೂಲಕವೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇದೀಗ ಇಂಡಿಯಾ ಹೆಸರನ್ನು ಬದಲಿಸಿ ಎಂದು ಒತ್ತಾಯಿಸುವ ಮೂಲಕ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ. ಗುಲಾಮರು ಇಟ್ಟಿರುವ ಇಂಡಿಯಾ ಹೆಸರನ್ನು ಬದಲಾವಣೆ ಮಾಡಿ, ಭಾರತ್‌ ಎಂದು ಮರುನಾಮಕರಣ ಮಾಡಬೇಕು ಎಂದು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂಡಿಯಾ ಎಂಬುದು ಬ್ರಿಟಿಷರ ನೀಡಿದ ಹೆಸರು ಇದನ್ನು ಬದಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ‘ಭಾರತ್‌’ ಅರ್ಥದ ಬಗ್ಗೆ …

Read More »

ಅಜ್ಜನ ಜತೆ ತನ್ನ ಗರ್ಲ್​ಫ್ರೆಂಡ್​ ಸಂಬಂದ ಟಿಕ್‌ ಟಾಕ್‌ ನಲ್ಲಿ ಬಹಿರಂಗ

ಬೆಂಗಳೂರು: ಯಾವುದೋ ವಯಸ್ಸಿನವರ ಜತೆ ಇನ್ನಾವುದೋ ವಯಸ್ಸಿನವರು ಅಕ್ರಮ ಸಂಬಂಧ ಇಟ್ಟುಕೊಳ್ಳುವುದನ್ನು ನೋಡಿರುತ್ತೀರಿ. ಆದರೆ ಈ ಕಥೆ ಕೇಳಿದರೆ ಒಬ್ಬ ವ್ಯಕ್ತಿಯ ಬಗ್ಗೆ ಪಾಪ ಎನಿಸುತ್ತದೆ. ಪ್ರೀತಿಯಿಂದ ಸಾಕಿದ್ದ ಮಗ ಸಂಬಂಧದಲ್ಲಿ ತನಗೆ ಚಿಕ್ಕಪ್ಪ ಆಗಬೇಕು ಎನ್ನುವ ವಿಚಾರ ತಿಳಿದು ನೋವುಂಡಿರುವ ವ್ಯಕ್ತಿಯಯೊಬ್ಬನ ಕಥೆಯಿದು. ವ್ಯಕ್ತಿಯೊಬ್ಬ ಟಿಕ್​ಟಾಕ್​ನಲ್ಲಿ ತನ್ನ ನೋವನ್ನು ತೋಡಿಕೊಂಡಿದ್ದಾನೆ. ಹಲವಾರು ವರ್ಷಗಳಿಂದ ತಾನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇಬ್ಬರೂ ಜತೆಯಲ್ಲೇ ಬದುಕುತ್ತಿದ್ದೇವೆ. ನಮಗೆ ಮುದ್ದಾಗ ಮಗನೂ ಇದ್ದಾನೆ. ಸಾಕಷ್ಟು …

Read More »

ಮೈಸೂರಲ್ಲೂ ಪತ್ತೆಯಾದ ಡೆಲ್ಟ ವೈರಸ್‌ ಪ್ರಕರಣ

ಮೈಸೂರು: ಕೊರೊನಾ ಎರಡನೇ ಅಲೆಯ ಸುಳಿಯಿಂದ ಹೊರಬರಲಾಗದ ಕಂಗೆಟ್ಟಿರುವ ಮೈಸೂರಿನ ಜನತೆ ಇದೀಗ ಮತ್ತೊಂದು ಮಾರಣಾಂತಿಕ ವೈರಾಣುವಿನ ಸುಳಿಗೆ ಸಿಲುಕಿದ್ದಾರೆ. ಕರೋನಾದ ರೂಪಾಂತರ ಡೆಲ್ಟಾ ಪ್ಲಸ್ ನ ಒಂದು ಪ್ರಕರಣ ಮೈಸೂರಿನಲ್ಲಿ ಇರುವುದು ಖಾತ್ರಿಯಾಗಿದೆ.‌ ಈ ಕುರಿತು ಖಾತ್ರಿಪಡಿಸಿರುವ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು, ಮೈಸೂರು ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಸದ್ಯ ಅವರು ಗುಣಮುಖರಾಗಿದ್ದಾರೆ. ಸೋಂಕಿತರ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಅವರ ಬಗ್ಗೆ ಹೆಚ್ಚಿನ ಮಾಹಿತಿ‌ ನೀಡಲು ಸಾಧ್ಯವಿಲ್ಲ …

Read More »

ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ! : ಲಕ್ಷ್ಮಣ ಸವದಿ

ಬೆಂಗಳೂರು: ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ …

Read More »

ರಮೇಶ್ ಜಾರಕಿಹೊಳಿ ಹಾಗೂ ಫ್ರೆಂಡ್ಸ್ ಕಾಂಗ್ರೆಸ್ ಗೆ ಮರು ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧರಿಸುತ್ತೆ: ಸತೀಶ್ ಜಾರಕಿಹೊಳಿ

ಬಾಗಲಕೋಟೆ: ರಮೇಶ್ ಜಾರಕಿಹೊಳಿ ರಾಜೀನಾಮೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಸಹೋದರ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಬಿಜೆಪಿ ನಾಯಕರು ಸ್ಪಷ್ಟಪಡಿಸಬೇಕು. ಇಷ್ಟಕ್ಕೂ ಶಾಸಕ ಸ್ಥಾನಕ್ಕೆ ಯಾಕೆ ರಾಜಿನಾಮೆ ನೀಡುತ್ತಿದ್ದಾರೆ ಎಂಬುದನ್ನು ರಮೇಶ್ ಅವರೇ ಹೇಳಬೇಕು. ಈಗಾಗಲೇ ಹೆಚ್.ವಿಶ್ವನಾಥ್ ಮಾತನಾಡಲು ಶುರು ಮಾಡಿದ್ದಾರೆ. ಬಿಜೆಪಿಯವರು ಮೊದಲು …

Read More »

ರೈತರಿಗೆಸಾಕಷ್ಟು ಪ್ರಮಾಣದಲ್ಲಿ ನಷ್ಟ ಶಾಸಕ ಅನಿಲ ಬೆನಕೆ ಅವರು ಡ್ರೋಣ್ ಮೂಲಕ ಸರ್ವೆ

ಬೆಳಗಾವಿ –  ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಬಳ್ಳಾರಿ ನಾಲೆಯಿಂದ ಸಾಕಷ್ಟು ಪ್ರಮಾಣದಲ್ಲಿ ರೈತರಿಗೆ ಹಾನಿ ಉಂಟಾಗುತ್ತದೆ. ಅದೇ ರೀತಿ ಈ ವರ್ಷವು ಬಳ್ಳಾರಿ ನಾಲೆಯ ನೀರಿನಿಂದ ರೈತರಿಗೆಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಶಾಸಕ ಅನಿಲ ಬೆನಕೆ ಅವರು ಡ್ರೋಣ್ ಮೂಲಕ ಸರ್ವೆ ನಡೆಸಿದರು.           ಕೆಲ ದಿನಗಳ ಹಿಂದೆ ಶಾಸಕ ಅನಿಲ ಬೆನಕೆ ಅವರು, ಅಧಿಕಾರಿಗಳ ಜೊತೆ ಬಳ್ಳಾರಿ ನಾಲೆಯನ್ನು …

Read More »

ಗೋಕಾಕ ಮೂಡಲಗಿ ರಸ್ತೆಯಲ್ಲಿ ಚಹಾ ಪುಡಿ ವ್ಯಾಪಾರಿ ಧಾರುಣ ಸಾವು

ಮೂಡಲಗಿ: ಬಡ ಚಹಾಪುಡಿ ವ್ಯಾಪಾರಿಯೊಬ್ಬ ಮೂಡಲಗಿಯಿಂದ ಗೋಕಾಕಕ್ಕೆ ದ್ವಿಚಕ್ರ ವಾಹನದ ಮೇಲೆ ಹೋಗುವಾಗ ಹಿಂದಿನಿಂದ ಬಂದ ಟಿಪ್ಪರ ಲಾರಿ (MH-10) ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆತನ ರುಂಡವೇ ಬೇರ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲ್ಲೋಳ್ಳಿ ಬಳಿ ನಡೆದಿದೆ. ಶಕೀಲ ಜಮಾದಾರ (೫೦) ಮೃತಪಟ್ಟ ದುರ್ದೈವಿ. ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರು ಟಿಪ್ಪರ್ ಅನ್ನೋ ಬೆನ್ನಟ್ಟಿದ್ದಾರೆ. ಕೂಡಲೇ ಲಾರಿ ಚಾಲಕ ನಾಪತ್ತೆಯಾಗಿದ್ದಾನೆ ಎಂದು ಸ್ಥಳೀಯ ಮೂಲಗಳು ಜನಜೀವಾಳ ಕ್ಕೆ …

Read More »

ಪ್ರವಾಹ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ D.C.M.

ಚಿಕ್ಕೋಡಿ: ಮಳೆಗಾಲ ಶುರುವಾದ ಹಿನ್ನಲೆ ಪ್ರವಾಹ ನಿರ್ವಹಣೆ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಗೋವಿಂದ ಕಾರಜೋಳ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದವಾರ ಸುರಿದ ಮಳೆಗೆ ಜಿಲ್ಲೆಯ ನದಿಗಳು ಉಕ್ಕಿ ಹರಿದ ಪರಿಣಾಮ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಪ್ರಮುಖ ನದಿಗಾಳಾದ ಕೃಷ್ಣಾ, ಮಲಪ್ರಭಾ, ದೂದಗಂಗಾ, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದವು ಸದ್ಯ ಮಳೆಯ ಪ್ರಮಾಣ ತಗ್ಗಿದ್ದು ಮತ್ತೆ ಪರಿಸ್ಥಿತಿ …

Read More »

ಜುಲೈ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನಡೆಯಲಿದ್ದು, ಪರೀಕ್ಷಾ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಜುಲೈ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ಒಪಿ ಬಿಡುಗಡೆ ಮಾಡಿದ್ದಾರೆ. ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು,ಈಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಸಿದ್ಧತೆ ನಡೆಸಬೇಕು ಎಂದು ಸೂಚಿಸಿದ್ದಾರೆ. ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ …

Read More »