ಬೆಂಗಳೂರು: ‘ರಾಜ್ಯದಲ್ಲಿರುವ ಲೂಟಿಕೋರ ಬಿಜೆಪಿ ಸರ್ಕಾರದಲ್ಲಿ ಹಣ ದೋಚಲು ಆಡಳಿತ ಪಕ್ಷದವರ ನಡುವೆಯೇ ಕಿತ್ತಾಟ ನಡೆಯುತ್ತಿದೆ. ಜಿದ್ದಿಗೆ ಬಿದ್ದವರಂತೆ ಭ್ರಷ್ಟಾಚಾರದಲ್ಲೂ ಪೈಪೋಟಿಯಲ್ಲಿ ತೊಡಗಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನದ ಅಂಗವಾಗಿ ಅರ್ಚಕರು, ಆಟೊ ಚಾಲಕರು, ಆಶಾ ಕಾರ್ಯಕರ್ತರಿಗೆ ಪಡಿತರ ಕಿಟ್ ವಿತರಿಸಲು ಯುವ ಕಾಂಗ್ರೆಸ್ ವತಿಯಿಂದ ಮಲ್ಲೇಶ್ವರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಆಡಳಿತ ಪಕ್ಷದವರೇ ಸರ್ಕಾರದ ಭ್ರಷ್ಟಾಚಾರದ …
Read More »ವಿಶ್ವ ಅಪ್ಪಂದಿರ ದಿನ: ಅಯ್ಯೋ! ಅಪ್ಪ ಇಲ್ಲವಲ್ಲ…
ತುಮಕೂರು: ‘ಅಯ್ಯೋ… ಅಪ್ಪ ಇಲ್ಲವಲ್ಲ ಎಂಬ ಕೊರಗು ಸದಾ ನೆನಪಿನಲ್ಲಿ ಕಾಡುತ್ತಿದೆ. ವಿಧಿಯಾಟ, ಕೋವಿಡ್ ನಮ್ಮ ತಂದೆಯನ್ನು ಬಲಿಪಡೆಯಿತು’ ಎಂದು ಹೇಳುತ್ತಲೇ ಮೇಘನ ಮಾತು ನಿಲ್ಲಿಸಿದರು. ತುಮಕೂರು ತಾಲ್ಲೂಕಿನ ಮಲ್ಲಸಂದ್ರ ಸಮೀಪದ ಹಬ್ಬತ್ತನಹಳ್ಳಿಯ ಈ ಬಾಲಕಿಯ ಕಣ್ಣೀರು ತಂದೆ, ತಾಯಿಗಳನ್ನು ಕಳೆದುಕೊಂಡ ಹಲವರ ಕಣ್ಣೀರ ಕಥೆಯಾಗಿದೆ. ಗಂಗರಾಜು ಅವರಿಗೆ ಇನ್ನೂ 45 ವರ್ಷ. ದುಡಿಯುವ ವಯಸ್ಸು, ಬದುಕುವ ಛಲ. ಪತ್ನಿ ಚೂಡಾವಣೆ, ಇಬ್ಬರು ಹೆಣ್ಣು ಮಕ್ಕಳ ಸಂಸಾರ. 14 ವರ್ಷದ …
Read More »ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯ
ಬೆಂಗಳೂರು: ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆಯಂಡ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆಯ ನಡೆಗೆ ಖಂಡನೆ ವ್ಯಕ್ತವಾಗಿದೆ. ಸಂಸ್ಥೆಯು ಆನ್‌ಲೈನ್ ಮೂಲಕ ಇದೇ 22ರಿಂದ 6 ವಿದೇಶಿ ಭಾಷೆಗಳು, 6 ದೇಶಿಯ ಭಾಷೆಗಳ ಕಲಿಕಾ ತರಬೇತಿಯನ್ನು ಪ್ರಾರಂಭಿಸುತ್ತಿದೆ. ಇದರಲ್ಲಿ ಸಂಸತ್ತಿನ ಸದಸ್ಯರು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಸಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ವಿದೇಶಿ ಭಾಷೆಗಳಾದ ಫ್ರೆಂಚ್, ಜರ್ಮನ್, ಜಪಾನೀಸ್, …
Read More »ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್
ಪಣಜಿ : ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೆಯೇ ಬಿಜೆಪಿಗೆ ಸೇರಿರುವ 10 ಜನ ಶಾಸಕರಿಗೆ ಮತ್ತೆ ಕಾಂಗ್ರೇಸ್ ಪಕ್ಷಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ಗೋವಾದ ಮಡಗಾಂವ ಹಾಗೂ ಪಣಜಿ ಸಮೀಪದ ಸಂತಾಕ್ರೂಜ್‍ನಲ್ಲಿ ಉಚಿತ ಸಸಿ ವಿತರಿಸಿದ ನಂತರ ಸುದ್ಧಿಗಾರರಿಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು. ಕಾಂಗ್ರೇಸ್ ಪಕ್ಷದಿಂದ ಬಿಜೆಪಿ ಸೇರಿರುವ …
Read More »ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಆಡಳಿತ ಪಕ್ಷದೊಳಗೆ ಭುಗಿಲೆದ್ದಿರುವ ಭಿನ್ನಮತವನ್ನು ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಪ್ರತಿನಿಧಿಯಾಗಿ ಬಂದಿದ್ದ ಅರುಣ್ ಸಿಂಗ್ ಎಂಬ ಬಡಪಾಯಿಯ ಕೆಲಸ ‘ಬಂದ ಪುಟ್ಟಾ..ಹೋದ ಪುಟ್ಟಾ’ ಎಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ, ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ …
Read More »ಸೋಮವಾರದಿಂದ ಬಸ್ ಸಂಚಾರ ಆರಂಭ, ಹೋಟೆಲ್ ಸೇರಿ ಎಲ್ಲಾ ಅಂಗಡಿ ಓಪನ್
ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ. ಶೇ …
Read More »SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತೊಂದು ಮಹತ್ವದ ಮಾಹಿತಿ
ಬೆಂಗಳೂರು: ಕೊರೋನಾ ಕಾರಣದಿಂದಾಗಿ ಈ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಎರಡು ದಿನದಲ್ಲಿ ಆರು ವಿಷಯಗಳಿಗೆ ಪರೀಕ್ಷೆ ನಡೆಯಲಿದ್ದು, ಕನ್ನಡ ಸೇರಿದಂತೆ ಪ್ರಥಮ ಭಾಷೆ ವಿಷಯಗಳ ಗರಿಷ್ಠ ಅಂಕಗಳನ್ನು 125 ಅಂಕಗಳಿಗೆ(25 ಆಂತರಿಕ ಅಂಕಗಳು ಸೇರಿ) ನಿಗದಿ ಮಾಡಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪ್ರತಿ ವಿಷಯಕ್ಕೆ 40 ಅಂಕಗಳು ಮುಂದುವರೆಯಲಿದೆ. ಮೊದಲು ಎಲ್ಲ ವಿಷಯಗಳಿಗೆ 40 ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದ್ದು, ಪ್ರಥಮ …
Read More »ಮಳೆ, ಪ್ರವಾಹದಿಂದ ಹಾನಿ: ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ
ಬೆಂಗಳೂರು: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮಳೆ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ., ಭಾಗಶಃ ಹಾನಿಯಾಗಿರುವ ಮನೆ 1 ಲಕ್ಷ ರೂ., ನೀರು ನುಗ್ಗಿ ಹಾನಿಯಾಗಿದ್ದರೆ 10 ಸಾವಿರ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು …
Read More »ಮಳೆಯಲ್ಲೇ ʼಆನ್ ಲೈನ್ʼ ಕ್ಲಾಸ್ ಅಟೆಂಡ್ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ
ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ ಈ ಚಿತ್ರದಲ್ಲಿ ರಸ್ತೆ ಬದಿಯಲ್ಲಿ ಮಗಳು ಕುಳಿತು ಕ್ಲಾಸ್ ಅಟೆಂಡ್ ಮಾಡುತ್ತಿದ್ದರೆ, ಅಪ್ಪ ಆಕೆಗಾಗಿ ಛತ್ರಿ ಹಿಡಿದಿದ್ದಾರೆ. ಸುಳ್ಯ ತಾಲ್ಲೂಕಿನ ಬಾಳಕ್ಕ ಗ್ರಾಮದಲ್ಲಿ ಸರಿಯಾಗಿ ಮೊಬೈಲ್ ನೆಟ್ವರ್ಕ್ ಸಿಗದೇ ಇರುವ ಕಾರಣ ವಿದ್ಯಾರ್ಥಿಗಳು ಆಗಾಗ ತಂತಮ್ಮ ಮನೆಗಳಿಂದ ಹೊರಗೆ …
Read More »ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್,ಬೆಳಿಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ
ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, …
Read More »
Laxmi News 24×7