Breaking News

Laxminews 24x7

ಸೈಲೆಂಟಾಗಿ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹಾದಿ ಹಿಡಿದ್ರಾ ಆನಂದ್ ಸಿಂಗ್​?

ಖಾತೆ ಹಂಚಿಕೆಯಾಗಿ 20 ದಿನಗಳೇ ಕಳೆದ್ರೂ, ಸಚಿವ ಆನಂದ ಸಿಂಗ್ ಮಾತ್ರ ಅಧಿಕೃತವಾಗಿ ಇಲಾಖೆಯ ಚಾರ್ಚ್ ತೆಗೆದುಕೊಳ್ಳದೆ ಹೊಸಪೇಟೆಯಲ್ಲಿ ಬೀಡು ಬಿಟ್ಟು ವೈಲೆಂಟ್​ ಸಚಿವ ಸೈಲೆಂಟ್​ ಆಗಿದ್ದಾರೆ. ಆರಂಭದಲ್ಲಿ ಖಾತೆ ಕ್ಯಾತೆ ತೆಗೆದು ಗದ್ದಲ ಎಬ್ಬಿಸಿದ್ದ ಸಚಿವರು ಸದ್ಯ ಸೈಲೆಂಟ್​ ಆಗಿದ್ದು, ಶಾಸಕ ರಮೇಶ್ ಜಾರಕಿಹೊಳಿ ಹಿಡಿದ ಹಾದಿ ತುಳಿತ್ತಿದ್ದಾರಾ? ಎಂಬ ಅನುಮಾನಗಳು ಶುರುವಾಗಿವೆ. ಸರ್ಕಾರಿ ಕಾರು ಬಳಸದೆ ತಮ್ಮ ಖಾಸಗಿ ಕಾರಿನಲ್ಲಿ ಓಡಾಟ ಮಾಡ್ತಿರೋ ಸಚಿವ ಆನಂದ ಸಿಂಗ್, …

Read More »

ಹಾನಗಲ್​​ ಉಪಚುನಾವಣೆ; ಪ್ರತಿಷ್ಠೆಯಾಗಿ ಸ್ವೀಕರಿಸಿದ ಬೊಮ್ಮಾಯಿ.. ಸೈಲೆಂಟ್​​ ಆದ್ರಾ ಕಾಂಗ್ರೆಸ್ಸಿಗರು?

ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಸಿಎಂ ಬಸವರಾಜ್​​ ಬೊಮ್ಮಾಯಿ ಪ್ರತಿಷ್ಠೆ ಕಣವಾಗಿ ಸ್ವೀಕರಿಸದ್ದೇ ತಡ ಸ್ಥಳೀಯ ಕಾಂಗ್ರೆಸ್​ ನಾಯಕರು ಫುಲ್​​ ಸೈಲೆಂಟ್​​ ಆಗಿದ್ದಾರೆ. ಉಪಚುನಾವಣೆಯಲ್ಲಿ ಹಾನಗಲ್​​​ ಟಿಕೆಟ್​ಗಾಗಿ ಮಾಜಿ ಸಚಿವ ಮನೋಹರ ತಹಶೀಲ್ದಾರ್​​ ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಶ್ರೀನಿವಾಸ ನಡುವೆ ಭಾರೀ ಪೈಪೋಟಿ ನಡೆದಿತ್ತು. ಇಬ್ಬರು ತಮ್ಮ ಬೆಂಬಲಿಗರನ್ನು ಕರೆದುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಮನೆಗಳಿಗೆ …

Read More »

ಟ್ರ್ಯಾಕ್ಟರ್​ ಪಂಕ್ಚರ್​ ಆಗಿ ಪಲ್ಟಿ.. ಕೂದಲೆಳೆ ಅಂತರದಲ್ಲಿ ತಪ್ಪಿತು ಭಾರೀ ಅನಾಹುತ

ಚಿಕ್ಕಮಗಳೂರು: ಓವರ್ ಲೋಡ್ ಆಗಿ ಟ್ರ್ಯಾಕ್ಟರ್ ಹಿಮ್ಮುಖವಾಗಿ ಪಲ್ಟಿ ಹೊಡೆದಿರೋ ಘಟನೆ, ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಬಳಿ ಘಟನೆ ನಡೆದಿದೆ. ಮಾಕೋನಹಳ್ಳಿಯಲ್ಲಿ, ಟಿಂಬರ್ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್, ರಸ್ತೆಯ ಅಪ್ ಹತ್ತುವ ವೇಳೆ ಟೈರ್ ಪಂಚರ್ ಆಗಿ, ಹಿಂಬದಿಗೆ ಹೋಗಿ ಹೋಗಿ ಟ್ರ್ಯಾಕ್ಟರ್​ ಪಲ್ಟಿಯಾಗಿದೆ. ಟ್ರ್ಯಾಕ್ಟರ್​ನಿಂದ ಜಿಗಿದು ಚಾಲಕ ಜೀವ ಉಳಿಸಿಕೊಂಡಿದ್ದಾನೆ. ಆದ್ರೆ, ಟ್ರ್ಯಾಕ್ಟರ್​ಸಂಪೂರ್ಣ ಜಖಂಗೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.

Read More »

ಆಯುಧ ಸ್ವಚ್ಛ ಮಾಡುವ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದು ಪೇದೆ ಸಾವು!

ದಾವಣಗೆರೆ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆಯೊಬ್ಬರು ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಸಶಸ್ತ್ರ ಮೀಸಲು ಪಡೆಯ ಚೇತನ್ (28 ವ) ಸಾವನ್ನಪ್ಪಿದ ಪೊಲೀಸ್ ಕಾನ್ಸ್ ಸ್ಟೇಬಲ್. ದಾವಣಗೆರೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಘಟನೆ ಸಂಭವಿಸಿದೆ. ಬೆಳಗಿನ ತರಬೇತಿ ಮುಗಿಸಿ ಆಯುಧ ಸ್ವಚ್ಛ ಮಾಡಿವ ವೇಳೆ ಈ ಅವಘಡ ನಡೆದಿದೆ. ತೀವ್ರವಾಗಿ ಗಾಯಗೊಂಡ ಚೇತನ್ ಅವರನ್ನು ಸಿಟಿ ಸೆಂಟ್ರಲ್ ಆಸ್ಪತ್ರೆ …

Read More »

ಹೊಸ ಡಿಜಿಟಲೀಕರಣ ನೀತಿ ಹಾಗೂ ಆರ್ ಆಯಂಡ್ ಡಿ ಪಾಲಿಸಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಹೊಸ ಡಿಜಿಟಲೀಕರಣ ನೀತಿಯ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿ ಪಾಲಿಸಿಯನ್ನು ಜಾರಿಗೆ ತರಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, 2021-22ನೇ ಸಾಲಿನ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ಡಿಜಿಟಲೈಸೇಷನ್ ಪಾಲಿಸಿ (ಹೊಸ ಡಿಜಿಟಲೀಕರಣ ನೀತಿ)ಯನ್ನು ಜಾರಿಗೆ ತರಲಿದ್ದೇವೆ. ಬ್ರಾಡ್ಬ್ಯಾಂಡ್ ಹಾಗೂ ಇಂಟರ್ ನೆಟ್ ವ್ಯವಸ್ಥೆಯನ್ನು ಗ್ರಾಹಕರ …

Read More »

ಧಾರವಾಡ: ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿ ಸ್ವಾಗತಿಸಿದ ಜಿಲ್ಲಾಧಿಕಾರಿ

ಹುಬ್ಬಳ್ಳಿ: ‘ಹದಿನೆಂಟು ತಿಂಗಳ ನಂತರ ಶಾಲೆ ಮತ್ತು ಕಾಲೇಜುಗಳು ಪುನರಾರಂಭವಾಗುತ್ತಿವೆ. ವಿದ್ಯಾರ್ಥಿಗಳು ಶುಚಿತ್ವ ಮತ್ತು ಆರೋಗ್ಯ ಸುರಕ್ಷತೆಯ ಕ್ರಮಗಳೊಂದಿಗೆ ಕಲಿಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು. ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9ರಿಂದ 12ನೇ ತರಗತಿಗಳ ಪುನರಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಹೂವು ನೀಡಿ ಸ್ವಾಗತಿಸಿ ಮಾತನಾಡಿದ ಅವರು, ‘ತರಗತಿಗಳ ಪುನರಾರಂಭ ಸಂತೋಷದಾಯಕ. ಭವಿಷ್ಯ ಉಜ್ವಲವಾಗಿಸಿಕೊಳ್ಳಲು ವಿದ್ಯಾರ್ಥಿಗಳು ದೊಡ್ಡ ಗುರಿ ಹೊಂದಿರಬೇಕು. ಆಸಕ್ತಿದಾಯಕ …

Read More »

ಡಿ.ಕೆ. ಶಿವಕುಮಾರ್ ಭೇಟಿಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ

ಬೆಂಗಳೂರು: ಜಿಲ್ಲಾ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಶನಿವಾರ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಬೆಂಗಳೂರಿಗೆ ಆಗಮಿಸಿದ್ದ ವಿನಯ್ ಕುಲಕರ್ಣಿ, ಇಂದು ಸದಾಶಿವ ನಗರದ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು.

Read More »

ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ

ಚಿಕ್ಕೋಡಿ: ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ ಎಂದು ವಿದ್ಯಾರ್ಥಿಗಳಲ್ಲಿ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳಿಂದ ಇಂದಿನಿಂದ ಶಾಲಾ ಕಾಲೇಜುಗಳನ್ನ ಆರಂಭಿಸಲಾಗಿದ್ದು, ಯಾವುದೇ ಭಯ, ಆತಂಕವಿಲ್ಲದೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು. ಇಂದಿನಿಂದ ಶಾಲಾ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಗುಡಸ್ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬುವ ಕಾರ್ಯ ಮಾಡಿದರು. ಕೊರೊನಾ ಕುರಿತು ಸಕಲ ಮುನ್ನೆಚ್ಚರಿಕೆ …

Read More »

ಸಚಿವ ಸ್ಥಾನಕ್ಕಾಗಿ ತೆರೆಮರೆ ಲಾಬಿ ಮತ್ತೆ ಚುರುಕು

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಖಾತೆಗಳ ಹಂಚಿಕೆ ಬಳಿಕ ತಲೆದೋರಿದ ಅಸಮಾಧಾನ ಸರಿಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಸರತ್ತು ನಡೆಸಿದ್ದರೆ, ಸಚಿವ ಸ್ಥಾನಕ್ಕಾಗಿ ತೆರೆಮರೆ ಲಾಬಿ ಮತ್ತೆ ಚುರುಕಾಗಿದೆ. ಖಾಲಿ ಇರುವ ನಾಲ್ಕು ಸ್ಥಾನಗಳ ಪೈಕಿ ಎರಡು ಸ್ಥಾನಗಳು ಪ್ರಬಲರಿಬ್ಬರಿಗೆ ಮೀಸಲಿಟ್ಟರೆ, ಉಳಿದ ಎರಡು ಸ್ಥಾನಗಳಿಗೆ ಎರಡು ಡಜನ್ ಆಕಾಂಕ್ಷಿಗಳನ್ನು ಸಂಭಾಳಿಸುವುದು ಪಕ್ಷದ ವರಿಷ್ಠರು ಹಾಗೂ ಬೊಮ್ಮಾಯಿಗೆ ದೊಡ್ಡ ಸವಾಲಾಗಲಿದೆ. ಪ್ರಾಮಾಣಿಕ ಶಾಸಕರಿಗೆ ಅವಕಾಶ ನೀಡುವ ಉದ್ದೇಶದಿಂದ ಸಿಎಂ ಶೀಘ್ರವೇ ಸಚಿವ …

Read More »

ಪಕ್ಷ ಸಂಘಟನೆಗೆ ಮಮತಾ ಬ್ಯಾನರ್ಜಿಯೇ ಸ್ಫೂರ್ತಿ: ಎಚ್‌.ಡಿ. ಕುಮಾರಸ್ವಾಮಿ

ಹುಬ್ಬಳ್ಳಿ: ‘ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನನಗೆ ಸ್ಫೂರ್ತಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಎಂಸಿಯ ಸುಮಾರು 60ರಿಂದ 70 ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಿತು. ಆದರೂ, ಮಮತಾ ಅವರು ಏಕಾಂಗಿಯಾಗಿ ಹೋರಾಡಿ ಚುನಾವಣೆಯಲ್ಲಿ ಮತ್ತೆ ಗೆದ್ದು ಬಂದರು. ಪಕ್ಷ ಕಟ್ಟಲು ಅವರಿಗಿಂತ ಸ್ಫೂರ್ತಿ ಬೇಕೇ’ ಎಂದರು. …

Read More »