Breaking News

Laxminews 24x7

ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಚಾಲನೆ

ಬೆಂಗಳೂರು : ಬಿಬಿಎಂಪಿ ಹಮ್ಮಿಕೊಂಡಿರುವ ‘ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಗೋವಿಂದರಾಜ ನಗರದ ಕಾವೇರಿಪುರ ವಾರ್ಡ್‍ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಶ್ರೀ ವಿ ಸೋಮಣ್ಣ ಅವರು, ಈ ಕಾರ್ಯಕ್ರಮದಡಿಯಲ್ಲಿ ವೈದ್ಯರು ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಅಲ್ಲದೇ, ಕೋವಿಡ್ ಸೋಂಕಿನ ನಿಯಂತ್ರಣದ ಬಗ್ಗೆ ಸಲಹೆ ನೀಡಲಿದ್ದಾರೆ. ಪ್ರತಿ …

Read More »

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ಆರೋಗ್ಯ ಸಂಜೀವಿನಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ಯೋಜನೆ ಜಾರಿಗೆ ತರಲಾಗುತ್ತಿದೆ. ನಿಯಮಗಳನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ದೇಶಕರಿಗೆ ಸರ್ಕಾರ ಆದೇಶಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳು, ಅನುದಾನ ಪಡೆಯುವ ಆರೋಗ್ಯ ಸಂಸ್ಥೆ ಮತ್ತು ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು, ಆಯುಷ್ ಇಲಾಖೆಗೆ …

Read More »

ಮಹಿಳೆಯರಿಗೆ ಗುಡ್ ನ್ಯೂಸ್: 30 ಸಾವಿರ ರೂ. ಪ್ರೋತ್ಸಾಹಧನಕ್ಕೆ ವಿವಿಧ ಯೋಜನೆಯಡಿ ಅರ್ಜಿ

ಬೀದರ: 2021-22ನೇ ಸಾಲಿನ ಚೇತನಾ, ಧನಶ್ರೀ, ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಪ್ರೋತ್ಸಾಹಧನ ಪಡೆಯಲು ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚೇತನಾ ಯೋಜನೆ ಚೇತನಾ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಧನಶ್ರೀ ಯೋಜನೆ ಧನಶ್ರೀ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಅದೇ ರೀತಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು …

Read More »

ಬಾಲಕಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ

ಕೊಚ್ಚಿ: ತಂದೆಯ ಜತೆಗೆ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ತೆರಳಲು ಅಪ್ರಾಪ್ತ ವಯಸ್ಕ ಬಾಲಕಿಗೆ ಕೇರಳ ಹೈಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ. ಕಳೆದ ವರ್ಷ ಇದೇ ಮಾದರಿಯ ಪ್ರಕರಣದಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸಿ ಇದೇ ತೆರನಾದ ತೀರ್ಪು ನೀಡಿತ್ತು. ಜತೆಗೆ ಕೇರಳ ಸರಕಾರ ಲಸಿಕೆ ಪಡೆದವರ ಜತೆಗೆ ದೇಗುಲಗಳಿಗೆ ಭೇಟಿ ನೀಡಬಹುದು ಎಂಬ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯ ಪ್ರವೇಶಕ್ಕೆ ಅನುಮತಿ ನೀಡಿದೆ. ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ ನೀಡಬೇಕು …

Read More »

ಚಿಕ್ಕಮಗಳೂರು: ಪುರುಷರನ್ನು ಸೆಳೆದು ವಿಡಿಯೋ ಮಾಡ್ತಿದ್ದ 6 ಮಹಿಳೆಯರು ಸೇರಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಚಿಕ್ಕಮಗಳೂರು: ಹನಿಟ್ರ್ಯಾಪ್ ನಡೆಸುತ್ತಿದ್ದ 6 ಮಹಿಳೆಯರು ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಪುರುಷರನ್ನು ಸೆಳೆದು ಮಹಿಳೆಯರು ವಿಡಿಯೋ ಚಿತ್ರೀಕರಿಸುತ್ತಿದ್ದರು. ನಂತರ ಪುರುಷರು ಪೊಲೀಸರ ಸೋಗಿನಲ್ಲಿ ಭೇಟಿ ನೀಡಿ ನಾವು ಕೇಳಿದಷ್ಟು ಹಣ ಕೊಟ್ಟರೆ ದಾಖಲಿಸುವುದಿಲ್ಲ. ಕೊಡದಿದ್ದರೆ ಕೇಸ್ ದಾಖಲಿಸುವುದಾಗಿ ಹೇಳಿ ಹಣ ಪಡೆದು ಬಿಟ್ಟು ಕಳಿಸುವ ನಾಟಕವಾಡುತ್ತಿದ್ದರು. ನಂತರ ಕರೆ ಮಾಡಿ ಹಣ ನೀಡುವಂತೆ ಒತ್ತಡ ಹೇರುತ್ತಿದ್ದರು. ಹಣ ಕೊಡದಿದ್ದರೆ …

Read More »

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಕ್ಕಳ ಆರೋಗ್ಯತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿ, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ …

Read More »

ಕೊರೋನಾದಿಂದ ಚೇತರಿಸಿಕೊಂಡವರಿಗೆ ಶಾಕ್; ಶ್ವಾಸಕೋಶಕ್ಕೆ ಹಾನಿಯಾಗಿರಬಹುದು, ಟಿಬಿ ಪರೀಕ್ಷೆಗೆ ಸಲಹೆ

ಬೆಂಗಳೂರು: ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದವರು ಟಿಬಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆಗಸ್ಟ್ 31 ರವರೆಗೆ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದ್ದು, ವಿಧಾನಸೌಧದಲ್ಲಿ ಚಾಲನೆ ನೀಡಿದ ಸಚಿವರು, ಕೊರೋನಾ ಸೋಂಕಿನಿಂದ ಗುಣಮುಖರಾದವರು ಕ್ಷಯರೋಗ ಪತ್ತೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸೋಂಕಿನಿಂದ ಶ್ವಾಸಕೋಶಕ್ಕೆ ಹಾನಿಯಾಗಿರಬಹುದು. ರಾಜ್ಯದಲ್ಲಿ 28 ಲಕ್ಷಕ್ಕೂ ಅಧಿಕ ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಅವರಲ್ಲಿ ಶ್ವಾಸಕೋಶಕ್ಕೆ ಹಾನಿ ಉಂಟಾಗಿರುವ ಸಾಧ್ಯತೆಯಿರುತ್ತದೆ. ಕ್ಷಯರೋಗ ಶ್ವಾಸಕೋಶಕ್ಕೆ ಹಾನಿ …

Read More »

ಗೋವಾದಲ್ಲಿ ಜಾರಿಗೆ ತಂದ ‘ಹರ್ ಘರ್ ನಲ್’ ಯೋಜನೆ ಸಂಪೂರ್ಣ ವಿಫಲ : ಮಹಾದೇವ್ ನಾಯ್ಕ ವಾಗ್ದಾಳಿ

ಪಣಜಿ: ಮುಂಬರುವ ಐದು ವರ್ಷಗಳಲ್ಲಿ ಗೋವಾ ರಾಜ್ಯದಲ್ಲಿನ ಪ್ರತಿಯೊಂದು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆಯೇ…? ಎಂಬುದನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರಿಂದ ಖಚಿತಪಡಿಸಿಕೊಳ್ಳಲು ಸಾಧ್ಯವೇ..? ಮಳೆಗಾಲದಲ್ಲಂತೂ ಗೋವಾ ರಾಜ್ಯದ ಜನರು ಕೊಳಕು ಕುಡಿಯುವ ನೀರಿನ ಪೂರೈಕೆಯಿಂದ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಾವಂತ್ ರವರ ಹರ್ ಘರ್ ನಲ್ ಯೋಜನೆ ಸಂಪೂರ್ಣ ವಿಫಲವಾಗಿದ್ದು, ಜನರು ಕುಡಿಯುವ ನೀರಿಗಾಗಿ ಬಾವಿಗಳನ್ನು ಅವಲಂಭಿಸಿರುವಂತಾಗಿದೆ ಎಂದು ಆಮ್ ಆದ್ಮಿ ನಾಯಕ ಮಹಾದೇವ್ ನಾಯ್ಕ ವಾಗ್ದಾಳಿ …

Read More »

ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಆನಂದ್ ಸಿಂಗ್ ಗೆ ಟಾಂಗ್ ನೀಡಿದ ಗೋವಿಂದ ಕಾರಜೋಳ

ಕೊಪ್ಪಳ: ತುಂಗಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಘಳಿಗೆಯಲ್ಲಿ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು. ಡ್ಯಾಂ ಜಲಾಶಯದ ತಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿ, ತುಂಗಭದ್ರಾ ಎಲ್ಲೆಡೆಯೂ ಮಳೆ ಚೆನ್ನಾಗಿ ಆಗುತ್ತಿವೆ. ಹಾಗಾಗಿ ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಅವಧಿ ಮೊದಲೇ ತುಂಬಿದೆ. ಇದರಿಂದ ಲಕ್ಷಾಂತರ ರೈತರು ಖುಷಿಯಲ್ಲಿದ್ದಾರೆ. ಹಾಗಾಗಿ ಎಲ್ಲ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುತ್ತಿದೆ ಎಂದರು. ಆಲಮಟ್ಟಿ …

Read More »

ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು-ನೀರು ಬಿಡಲು ಬಿಜೆಪಿ ತೀರ್ಮಾನ!

ಬೆಂಗಳೂರು: ಪಕ್ಷ ಸಂಘಟನೆ ಬಲಪಡಿಸುವುದು, ಗುಂಪುಗಾರಿಕೆ, ಜಾತಿಯತೆ ಆರ್ಭಟ ತಡೆಯುವ ಉದ್ದೇಶದಿಂದ ಇನ್ನು ಮುಂದೆ ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು- ನೀರು ಬಿಡಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರ ಕಾಲದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿತ್ತು. ಪಕ್ಷದ ಸಂಘಟನೆ ಗಿಂತಲೂ ಹೆಚ್ಚಾಗಿ, ಯಡಿಯೂರಪ್ಪ ಅವರನ್ನು ನಿಯಂತ್ರಣ ಮಾಡುವ ಉದ್ದೇಶವೇ ಇದರಲ್ಲಿ ಅಡಗಿತ್ತು ಎಂಬುದು ಬಿಜೆಪಿಯ ಮೂಲಗಳಿಂದಲೇ ಸ್ಪಷ್ಟವಾಗಿದೆ. ಯಡಿಯೂರಪ್ಪ ಅವರ …

Read More »