ಬೆಂಗಳೂರು: ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಭಾಷಣ ಮಾಡಿದರು. ಹೊಸ ಚಿಂತನೆ, ಹೊಸ ದಿಕ್ಸೂಚಿಯೊಂದಿಗೆ ನವಕರ್ನಾಟಕ ನಿರ್ಮಾಣ ಆಗಲಿದೆ. ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ 14 ಅಮೃತ ಯೋಜನೆಗಳನ್ನು ಪ್ರಕಟಿಸಿದರು. ಇದರಲ್ಲಿ ಸ್ಮಾರ್ಟ್ ಸ್ಟಾರ್ಟ್ ಅಪ್, ಅಮೃತ ಶಾಲೆ, ಗ್ರಾ.ಪಂ.ಗಳು, ಗ್ರಾಮೀಣ …
Read More »ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ
ಬೆಂಗಳೂರು: ಡೀಸೆಲ್ ದರ, ಕೊರೋನಾದಿಂದ ಆರ್ಥಿಕ ನಷ್ಟ, ಬಿಡಭಾಗಗಳ ದರ ಹೆಚ್ಚಳವಾಗಿದ್ದರಿಂದ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡಿ ಜನರಿಗೆ ಮಾಡುವುದಿಲ್ಲವೆಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು …
Read More »ಹದಿನೆಂಟು ಹುತಾತ್ಮರ ಪುಣ್ಯಭೂಮಿ ಕೊಗನೂರ
ಶಿರಹಟ್ಟಿ: ದೇಶವನ್ನು ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಲು ಶಿರಹಟ್ಟಿ ತಾಲ್ಲೂಕಿನ ಕೊಗನೂರು ಗ್ರಾಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಹಿಸಿದ ಪಾತ್ರ ಅದ್ಭುತವಾಗಿದ್ದು, ಇದು ಸ್ವಾತಂತ್ರ್ಯ ಯೋಧರ ಗ್ರಾಮವೆಂದೇ ಪ್ರಸಿದ್ಧಿ ಪಡೆದಿದೆ. 1942ರಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ‘ಚಲೇ ಜಾವ್ ಚಳವಳಿ’ಯಲ್ಲಿ ಮೈಲಾರ ಮಹಾದೇವಪ್ಪನವರ ನಾಯಕತ್ವದಲ್ಲಿ ಕೊಗನೂರಿನ 19 ಜನರು ಭಾಗವಹಿಸಿ ದೇಶಪ್ರೇಮ ಮೆರೆದಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಕರ್ನಾಟಕದಿಂದ ಸ್ವಯಂ ಪ್ರೇರಿತರಾಗಿ ಭಾಗವಹಿಸಿದ ಏಕೈಕ ಪ್ರತಿನಿಧಿ ಮೈಲಾರ …
Read More »ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್ ಮಹಿಳಾ ಘಕದಿಂದ ಘೇರಾವ್!
ವಿಜಯಪುರ: ಸ್ವಾತಂತ್ರ್ಯ ಸಂಭ್ರಮದ 75ನೇ ವರ್ಷಾಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಘಟನೆ ನಡೆದಿದೆ. ಧ್ವಜಾರೋಹಣಕ್ಕೆ ಸಚಿವೆ ಜೊಲ್ಲೆ ಆಗಮಿಸುತ್ತಿದ್ದಂತೆ ಘೇರಾವ್ ಹಾಕಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಭ್ರಷ್ಟಾಚಾರ …
Read More »ಸಂಗೊಳ್ಳಿ ರಾಯಣ್ಣ ಜನ್ಮ ದಿನ, ಹುತಾತ್ಮರ ದಿನ ಆಚರಣೆಗೆ ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: ಸ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26ರ ದಿನದಂದು ರಾಜಧಾನಿ ಮತ್ತು ಎಲ್ಲ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಸರ್ಕಾರಿ ಗೌರವ ಸಲ್ಲಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26 ದಿನದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಸರ್ಕಾರದ ಸಕಲ …
Read More »75th Independence Day 2021 Live Updates: ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆ
ನವದೆಹಲಿ, ಆಗಸ್ಟ್ 15: ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ದೇಶಪ್ರೇಮಿಗಳು ಸಜ್ಜಾಗಿದ್ದಾರೆ. ಅಮೃತ ಮಹೋತ್ಸವದ ಘಳಿಗೆಯನ್ನು ಇನ್ನಷ್ಟು ಚಂದವಾಗಿಲಸು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳಿಂದ ದೇಶಾದ್ಯಂತ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಕೊರೊನಾ ಆತಂಕದಿಂದ ಈ ಸ್ವಾತಂತ್ರ್ಯೋತ್ಸವದ ಉತ್ಸಾಹಕ್ಕೆ ಅಲ್ಪ ಮಟ್ಟಿನ ಉತ್ಸಾಹ ಕಡಿಮೆಯಾಗಿದೆ. 74 ನೇ ಸ್ವಾತಂತ್ರ್ಯ ದಿನವನ್ನು ಕೂಡ ಕೊರೊನಾ ನಿಯಮಗಳನ್ನು ಪಾಲಿಸಿಯೇ ಆಚರಿಸಲಾಗಿತ್ತು. ಧ್ವಜಾರೋಹಣವಾದ ಬಳಿಕ ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನದ ಭಾಷಣ ಬೆಳಗ್ಗೆ 7.30ಕ್ಕೆ …
Read More »ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ‘ಅಮೃತ’ ಹೊಸ ಯೋಜನೆಗಳ ಘೋಷಣೆ
ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕೃಷಿ, ರೈತರ ಬದುಕಿನಲ್ಲಿ ಸಂಕಷ್ಟದ ಸಮಯವಾಗಿದೆ. ರೈತರನ್ನು ಕೃಷಿಯನ್ನು ಕೇಂದ್ರವಾಗಿಟ್ಟುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ರೈತ ಏಕಿಷ್ಟು ಪ್ರಾಮುಖ್ಯವೆಂಬುದಕ್ಕೆ ಒಂದು ಮಾತಿದೆ. ರವೀಂದ್ರನಾಥ ಠಾಗೋರ್ ಅವರಿಗೆ ದೇವರು ಎಲ್ಲಿದ್ದಾನೆ ಎಂದು ಒಬ್ಬನು ಪ್ರಶ್ನಿಸಿದ. ರೈತರ ಶ್ರಮದಲ್ಲಿ ಕೂಲಿಕಾರ ಬೆವರಲ್ಲಿ ದೇವರಿದ್ದಾನೆ ಎಂದು ಅವರು ಹೇಳಿದ್ದರು. …
Read More »ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾಷಣದ ವೇಳೆ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಭಾಷಣದ ಪ್ರಮುಖಾಂಶಗಳು ಇಲ್ಲಿವೆ -ದೇಶದ ಎಲ್ಲ ಯೋಜನೆಗಳು ಶೇ 100ರಷ್ಟು ಜನರಿಗೆ ಸಂಪೂರ್ಣ ತಲುಪಬೇಕು. -ಕಠಿಣ ಸಮಯದಲ್ಲಿ ದೇಶದ ಅಸಾಮಾನ್ಯ ಹೋರಾಟ ನಡೆಸಿದೆ. ಕರ್ತವ್ಯದ ಮೂಲಕ ಕೋವಿಡ್ ಎದುರು ಸಮರವನ್ನು ನಡೆಸಿದೆ. ಸಾಕಷ್ಟು ತಾಳ್ಮೆಯಿಂದ …
Read More »ಗಣೇಶ ಮೂರ್ತಿ ತಯಾರಿಕೆಯಿಂದ ಬದುಕು ಕಟ್ಟಿಕೊಂಡಿದ್ದವರು ಬೀದಿ ಪಾಲು
ರಾಯಚೂರು: ಕೊರೊನಾ ಮೂರನೇ ಅಲೆಯ ಆತಂಕ ಹಿನ್ನೆಲೆ ಸರ್ಕಾರ ಸಾಮೂಹಿಕ ಗಣೇಶೋತ್ಸವಕ್ಕೆ ನಿಷೇಧ ಹೇರಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ತಯಾರಿಕೆ , ಮಾರಾಟಕ್ಕಂತೂ ಸಂಪೂರ್ಣ ಬ್ರೇಕ್ ಬಿದ್ದಿದೆ. ಗಣೇಶ ಮೂರ್ತಿಗಳನ್ನು ತಯಾರಿಸಿ, ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ರಾಯಚೂರಿನ ಕೆಲ ಕುಟುಂಬಗಳು ಈಗ ಅಕ್ಷರಶಃ ಬೀದಿಗೆ ಬಂದಿವೆ. ನಗರದ ಲಿಂಗಸುಗೂರು ರಸ್ತೆ ಬಳಿ ಸುಮಾರು ವರ್ಷಗಳಿಂದ ಗಣೇಶ ಮೂರ್ತಿ, ಬೊಂಬೆಗಳನ್ನ ಮಾರಾಟ ಮಾಡಿ ಬದುಕು ಕಟ್ಟಿಕೊಂಡಿರುವ ರಾಜಸ್ಥಾನ ಮೂಲದ …
Read More »ಲಸಿಕೆ ಜೊತೆಗೆ ಆಹಾರ, ಜೀವನ ಪದ್ಧತಿ ಬದಲಿಸಿಕೊಳ್ಳಿ: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಲಸಿಕೆ ಜೊತೆಗೆ ಆಹಾರ ಮತ್ತು ಜೀವನ ಪದ್ಧತಿ ಬದಲಿಸಿಕೊಳ್ಳಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಮಣ್ಣೂರು ಗ್ರಾಮದಲ್ಲಿ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ಕೊರೊನಾ ಹೊಡೆದೋಡಿಸಲು ಲಸಿಕೆ ಹಾಕಿಸಿಕೊಳ್ಳುವ ಜೊತೆಗೆ ಮುಂದಿನ ದಿನಗಳಲ್ಲಿ ನಾವು ನಮ್ಮ ಆಹಾರ ಮತ್ತು ಜೀವನ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುಬೇಕು. ನಿರಂತರವಾಗಿ ರೋಗಗಳ ವಿರುದ್ಧ ಹೋರಾಡುವಂತೆ ನಮ್ಮ ದೇಹವನ್ನು ಸಿದ್ಧಪಡಿಸಿಕೊಳ್ಳಬೇಕು ಎಂದಿದ್ದಾರೆ. ಕೋವಿಡ್ ಲಸಿಕೆ …
Read More »
Laxmi News 24×7